ಎಸ್ಸಿ, ಎಸ್ಟಿ ಬಡ್ತಿ: ಸಿದ್ದು ಜತೆ ನೌಕರರ ಚರ್ಚೆ
Team Udayavani, Nov 18, 2018, 6:55 AM IST
ಬೆಂಗಳೂರು :ಎಸ್-ಎಸ್‌ಟಿ ಬಡ್ತಿ ಮೀಸಲಾತಿ ಜಾರಿ ವಿಚಾರಕ್ಕೆ ಸಂಬಂಧಿಸಿದಂತೆ ನೌಕರರ ಸಂಘದ ಪದಾಧಿಕಾರಿಗಳು ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಚರ್ಚಿಸಿದರು.
ರಾಷ್ಟ್ರಪತಿಗಳಿಂದ ಅಂಗೀಕಾರಗೊಂಡ ಎಸ್‌ಸಿ-ಎಸ್ಟಿ ಬಡ್ತಿ ಮೀಸಲಾತಿ ವಿಧೇಯಕವನ್ನು ಕೂಡಲೇ ಜಾರಿ ಮಾಡಬೇಕು. ಬಡ್ತಿ ಮೀಸಲಾತಿ ವಿಧೇಯಕ ಬಗ್ಗೆ ಸಮನ್ವಯ ಸಮಿತಿ ಸಭೆಯಲ್ಲಿ ಚರ್ಚಿಸಿ ವಿಧೇಯಕ ಜಾರಿಗೆ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ನೌಕರರ ಸಂಘದ ಅಧ್ಯಕ್ಷ ಶಿವಶಂಕರ, ಮೀಸಲಾತಿ ವಿಧೇಯಕ ಜಾರಿಗೆ ಸಚಿವ ಎಚ್.ಡಿ.ರೇವಣ್ಣ ಅಡ್ಡಗಾಲು ಹಾಕಿದ್ದಾರೆ. ಅವರ ಇಲಾಖೆಯಲ್ಲಿಯೇ ಎಸ್‌ಸಿ-ಎಸ್‌ಟಿ ನೌಕರರ ಶೋಷಣೆ ನಡೆಯುತ್ತಿದೆ. ಮುಂಬಡ್ತಿ ಇದ್ದಂತ ನೌಕರರಿಗೆ ಹಿಂಬಡ್ತಿ ನೀಡಿ ವೇತನ ಕಡಿತಗೊಳಿಸಲಾಗಿದೆ ಎಂದು ದೂರಿದರು.
ಎಸ್‌ಸಿ-ಎಸ್‌ಟಿ ವಿಧೇಯಕ ಜಾರಿಗೊಳಿಸಲು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರಿಗೆ ಎಚ್.ಡಿ.ರೇವಣ್ಣ ಬಿಡುತ್ತಿಲ್ಲ.ಹೀಗಾಗಿ, ನಾವು ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮನವಿ ಮಾಡಿದ್ದೇವೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು
8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ
Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’
HIGH COURT: ಬಿಎಸ್‌ವೈ ವಿರುದ್ಧದ ಪೋಕ್ಸೋ ಪ್ರಕರಣ: ವಿಚಾರಣೆ ಮುಂದಕ್ಕೆ
BSY ಸಿಎಂ ಸ್ಥಾನ ಕಳೆದುಕೊಳ್ಳಲು ರೇವಣ್ಣ ಕಾರಣ: ಜಿಟಿಡಿ ಆರೋಪ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.