![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
Team Udayavani, Jan 6, 2023, 4:00 PM IST
ಬೆಂಗಳೂರು: ನಗರದ ಖಾಸಗಿ ಶಾಲೆಯೊಂದರಲ್ಲಿ ಶುಕ್ರವಾರ ಬಾಂಬ್ ಸ್ಫೋಟಿಸುವ ಬಗ್ಗೆ ಇಮೇಲ್ ಬಂದಿದ್ದು, ಪೊಲೀಸರು ಮತ್ತು ಶಾಲಾ ಅಧಿಕಾರಿಗಳನ್ನು ಬೆಚ್ಚಿ ಬೀಳಿಸುವಂತೆ ಮಾಡಿದೆ.
ಬಸವೇಶ್ವರನಗರದಲ್ಲಿರುವ ಶಾಲೆಗೆ ಬಾಂಬ್ ಇಟ್ಟಿರುವ ಬಗ್ಗೆ ಇಮೇಲ್ ಬಂದಿತ್ತು. ಶಾಲೆಯ ಆಡಳಿತ ಮಂಡಳಿ ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಬಾಂಬ್ ನಿಷ್ಕ್ರಿಯ ದಳ ಹಾಗೂ ಸ್ನಿಫರ್ ಡಾಗ್ ಸ್ಕ್ವಾಡ್‌ನೊಂದಿಗೆ ಪೊಲೀಸರು ಧಾವಿಸಿದ್ದಾರೆ. ವಿದ್ಯಾರ್ಥಿಗಳನ್ನು ತರಗತಿಯಿಂದ ಹೊರಗೆ ಕರೆದೊಯ್ದು ಸುರಕ್ಷಿತ ಸ್ಥಳದಲ್ಲಿ ಇರಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ ಮತ್ತು ಇಡೀ ಆವರಣವನ್ನು ಸುತ್ತುವರಿಯಲಾಗಿದೆ ಎಂದು ಹೇಳಿದರು.
“ವಿದ್ಯಾರ್ಥಿಗಳನ್ನು ಸುರಕ್ಷಿತ ಸ್ಥಳದಲ್ಲಿ ಇರಿಸಿ ಬಾಂಬ್ ನಿಷ್ಕ್ರಿಯ ದಳ ಹಾಗೂ ಶ್ವಾನ ದಳ ಕರ್ತವ್ಯ ನಿರ್ವಹಿಸುತ್ತಿದೆ. ಸದ್ಯಕ್ಕೆ ಆತಂಕ ಪಡುವ ಅಗತ್ಯವಿಲ್ಲ. ಎಲ್ಲವೂ ಸುರಕ್ಷಿತವಾಗಿದೆ. ನಮ್ಮ ಪೊಲೀಸರು ಅದನ್ನು ನೋಡಿಕೊಳ್ಳುತ್ತಿದ್ದಾರೆ ಎಂದು ಪೊಲೀಸ್ ಅಧಿಕಾರಿ ಹೇಳಿದರು.
ಘಟನೆಯ ಬಗ್ಗೆ ತಿಳಿದ ಪೋಷಕರು ಕೂಡ ತಮ್ಮ ಮಕ್ಕಳ ಸುರಕ್ಷತೆಯ ಬಗ್ಗೆ ಚಿಂತಿತರಾಗಿ ಶಾಲೆಗೆ ಧಾವಿಸಿದರು.
You seem to have an Ad Blocker on.
To continue reading, please turn it off or whitelist Udayavani.