ವಿದ್ಯಾರ್ಥಿ ವೇತನವಿನ್ನು ನೇರ ಬ್ಯಾಂಕ್ ಖಾತೆಗೆ ಜಮಾ
Team Udayavani, Sep 6, 2018, 6:25 AM IST
ಬೆಂಗಳೂರು: ಸಮಾಜ ಕಲ್ಯಾಣ, ಪರಿಶಿಷ್ಟ ಪಂಗಡಗಳ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವ್ಯಾಪ್ತಿಗೆ ಬರುವ ವಿದ್ಯಾರ್ಥಿ ವೇತನಕ್ಕೆ ಆನ್‌ಲೈನ್ ಮೂಲಕ ಅರ್ಜಿ ಪಡೆದು ನೇರವಾಗಿ ವಿದ್ಯಾರ್ಥಿಗಳ ಬ್ಯಾಂಕ್ ಖಾತೆಗೆ ಹಣ ಪಾವತಿಸುವ “ಕರ್ನಾಟಕ ವಿದ್ಯಾರ್ಥಿ ವೇತನ ತಂತ್ರಾಂಶ’ಕ್ಕೆ ಬುಧವಾರ ಚಾಲನೆ ನೀಡಲಾಗಿದೆ.
ಗೃಹಕಚೇರಿ ಕೃಷ್ಣಾದಲ್ಲಿ ನೂತನ ವೆಬ್‌ಸೈಟ್ sp.karnataka.gov.inಗೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಚಾಲನೆ ನೀಡಿದರು.
ಇನ್ನು ಒಂದು ತಿಂಗಳಲ್ಲಿ ಮೂರೂ ಇಲಾಖೆಗಳ ವ್ಯಾಪ್ತಿಗೆ ಬರುವ ಎಲ್ಲಾ ವಿದ್ಯಾರ್ಥಿಗಳಿಗೆ ಆನ್ ಲೈನ್ ಮೂಲಕವೇ ವಿದ್ಯಾರ್ಥಿ ವೇತನವನ್ನು ಅವರ ಬ್ಯಾಂಕ್ ಖಾತೆಗೆ ನೇರವಾಗಿ ವರ್ಗಾವಣೆ ಮಾಡುವ ಗುರಿ ಹೊಂದಲಾಗಿದೆ ಎಂದು ಸಿಎಂ ಹೇಳಿದರು.
ದೇಶದಲ್ಲೇ ಅತಿ ದೊಡ್ಡ ಮತ್ತು ನೂತನ ವೆಬ್ ಪೋರ್ಟಲ್ ಇದಾಗಿದ್ದು, ನಾಲ್ಕೂ ಇಲಾಖೆಗಳ ವಿದ್ಯಾರ್ಥಿ ವೇತನಕ್ಕೆ ಈ ಪೋರ್ಟಲ್ ಮೂಲಕವೇ ಅರ್ಜಿ ಸಲ್ಲಿಸಬೇಕು. ಒಂದನೇ ತರಗತಿಯಿಂದ ಹಿಡಿದು ಮೆಟ್ರಿಕ್ ಪೂರ್ವ ಮತ್ತು ನಂತರದ ಎಲ್ಲಾ ವಿದ್ಯಾರ್ಥಿಗಳು ಈ ವ್ಯವಸ್ಥೆಯಲ್ಲೇ ಅರ್ಜಿ ಸಲ್ಲಿಸಬೇಕಾಗುತ್ತದೆ. ಕನ್ನಡ, ಆಂಗ್ಲದಲ್ಲಿ ಅರ್ಜಿ ಸಲ್ಲಿಕೆಗೆ ಅವಕಾಶವಿರುತ್ತದೆ.
ಈವರೆಗೆ ಮೂರೂ ಇಲಾಖೆಗಳು ತಮ್ಮ ವ್ಯಾಪ್ತಿಗೆ ಸಂಬಂಧಿಸಿದ ವಿದ್ಯಾರ್ಥಿ ವೇತನ ವಿತರಿಸಲು ಪ್ರತ್ಯೇಕ ವ್ಯವಸ್ಥೆ ಹೊಂದಿದ್ದವು. ವಿದ್ಯಾರ್ಥಿಗಳ ಪರವಾಗಿ ಶಾಲಾ ಶಿಕ್ಷಕರು ಇಲಾಖಾ ತಂತ್ರಾಂಶದಲ್ಲಿ ಅರ್ಜಿ ಸಲ್ಲಿಸಿದ ನಂತರ ಅದರ ಪ್ರತಿಯನ್ನು ಪೂರಕ ದಾಖಲೆಗಳೊಂದಿಗೆ ತಾಲೂಕು ಕಚೇರಿಗೆ ಸಲ್ಲಿಸಬೇಕಿತ್ತು. ಅಧಿಕಾರಿಗಳು ದಾಖಲೆಗಳನ್ನು ಪರಿಶೀಲಿಸಿ ಮಂಜೂರಾತಿ ನೀಡುತ್ತಿದ್ದರು. ಇದರಿಂದ ವಿದ್ಯಾರ್ಥಿ ವೇತನ ವಿಳಂಬವಾಗುತ್ತಿತ್ತು. ಜೊತೆಗೆ ದುರುಪಯೋಗಕ್ಕೂ ಕಾರಣವಾಗಿತ್ತು.
ಏನಿದು ಹೊಸ ವ್ಯವಸ್ಥೆ: ಹೊಸ ವ್ಯವಸ್ಥೆಯಡಿ ಅಂತಹ ಯಾವುದೇ ಸಮಸ್ಯೆ ಇಲ್ಲ. ವಿದ್ಯಾರ್ಥಿಗಳಿಗೆ ಅರ್ಜಿ ಸಲ್ಲಿಸಲು ಮೂರು ರೀತಿಯಲ್ಲಿ ಅವಕಾಶ ಮಾಡಿಕೊಡಲಾಗಿದೆ. ಶಾಲೆಗಳ ಮೂಲಕ ಅರ್ಜಿ ಸಲ್ಲಿಸಬಹುದು. ಈ ವೇಳೆ ಶಾಲಾ ಶಿಕ್ಷಕರು ವಿದ್ಯಾರ್ಥಿಗಳ ಪರ ಅರ್ಜಿ ಸಲ್ಲಿಸುತ್ತಾರೆ. ಎರಡನೆಯದಾಗಿ ವಿದ್ಯಾರ್ಥಿಗಳೇ ಮೊಬೈಲ್ ಅಥವಾ ಕಂಪ್ಯೂಟರ್ ಮೂಲಕ ಅರ್ಜಿ ಸಲ್ಲಿಸಬಹುದು. ಮೂರನೆಯದಾಗಿ ಸಾಮಾನ್ಯ ಸೇವಾ ಕೇಂದ್ರಗಳು, ಬಾಪೂಜಿ ಕೇಂದ್ರಗಳಲ್ಲಿಯೂ 20 ರೂ. ಸೇವಾ ಶುಲ್ಕ ನೀಡಿ ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸುವಾಗ ವಿದ್ಯಾರ್ಥಿ ಸಾಧನೆಯ ಟ್ರ್ಯಾಕಿಂಗ್ ವ್ಯವಸ್ಥೆ ಗುರುತಿನ ಚೀಟಿ ಸಂಖ್ಯೆ, ಮೊಬೈಲ್ ಸಂಖ್ಯೆ, ಆಧಾರ್ ಸಂಖ್ಯೆ, ಜಾತಿ ಮತ್ತು ಆದಾಯ ಪ್ರಮಾಣಪತ್ರದ ಆರ್‌ಡಿ ಸಂಖ್ಯೆಗಳನ್ನು ನೀಡಿದರೆ ಸಾಕು. ಎಸ್‌ಎಟಿಎಸ್‌ನಲ್ಲಿರುವ
ವಿದ್ಯಾರ್ಥಿಗಳ ಶೈಕ್ಷಣಿಕ ಮಾಹಿತಿ ಮತ್ತು ಕಂದಾಯ ಇಲಾಖೆ ಅಟಲ್‌ಜಿ ಜನಸ್ನೇಹಿ ಕೇಂದ್ರದ ತಂತ್ರಾಂಶದಿಂದ ಜಾತಿ ಮತ್ತು ಆದಾಯ ಪ್ರಮಾಣ ಪತ್ರವನ್ನು ತಾಂತ್ರಿಕವಾಗಿ ಪಡೆಯಲಾಗುತ್ತದೆ. ನವೀಕರಣ ಅರ್ಜಿದಾರರು ಹಿಂದಿನ ವಿದ್ಯಾರ್ಥಿ ವೇತನದ ನೋಂದಣಿ ಸಂಖ್ಯೆ ನೀಡಬೇಕು. ಅರ್ಜಿ ಸ್ವೀಕೃತವಾದ ನಂತರ ಆಧಾರ್ ಸಂಖ್ಯೆ ಆಧರಿಸಿ ವಿದ್ಯಾರ್ಥಿಗಳ ಬ್ಯಾಂಕ್ ಖಾತೆಗೆ ನೇರ ಹಣ ವರ್ಗಾವಣೆ ಆಗುತ್ತದೆ.
ಸೋರಿಕೆ ತಪ್ಪಿಸುವ ಉದ್ದೇಶ
2017-18ನೇ ಸಾಲಿನಲ್ಲಿ 61.41 ಲಕ್ಷ ಮಕ್ಕಳಿಗೆ 1704 ಕೋಟಿ ರೂ. ವಿದ್ಯಾರ್ಥಿ ವೇತನ ನೀಡಲಾಗಿತ್ತು. ಆದರೆ, ಈ ಯೋಜನೆಯಲ್ಲಿ ಸಾಕಷ್ಟು ಸೋರಿಕೆಯಾಗಿದ್ದು, ಇದನ್ನು ತಪ್ಪಿಸುವ ಉದ್ದೇಶದಿಂದ ಹೊಸ ತಂತ್ರಜ್ಞಾನ ಅಳವಡಿಸಿಕೊಳ್ಳಲಾಗಿದೆ. ಇದೇ ರೀತಿ ಸರ್ಕಾರದ ಎಲ್ಲಾ ಯೋಜನೆಗಳು ನೇರವಾಗಿ ಫಲಾನುಭವಿಗಳಿಗೆ ತಲುಪಿಸಲು ಏಕೀಕೃತ ಮತ್ತು ಆನ್‌ಲೈನ್ ವ್ಯವಸ್ಥೆಯ ಅಗತ್ಯವಿದೆ ಎಂದು ಸಿಎಂ ಕುಮಾರಸ್ವಾಮಿ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bhadravathi:ಬಾಯ್ಲರ್ ಸ್ಫೋ*ಟದಿಂದ ರೈಸ್‌ಮಿಲ್ ಕುಸಿತ:7 ಮಂದಿಗೆ ಗಾಯ
Sringeri; ಅಸ್ಸಾಂ ಕಾರ್ಮಿಕನಿಂದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿ*ಕ ದೌರ್ಜನ್ಯ
Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಬಂಧನ
Belagavi Session ಉದ್ವಿಗ್ನ:ಹೆಬ್ಬಾಳ್ಕರ್ ವಿರುದ್ದ ಅವಾಚ್ಯ ಪದ ಬಳಸಿದರೆ ಸಿ.ಟಿ.ರವಿ?
Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.