ಶಾಲಾ ಶುಲ್ಕಕ್ಕಿಟ್ಟಿದ್ದ ಹಣ ದರೋಡೆ ಮಾಡಿದ್ದವರ ಸೆರೆ  

Team Udayavani, May 29, 2023, 2:37 PM IST

ಶಾಲಾ ಶುಲ್ಕಕ್ಕಿಟ್ಟಿದ್ದ ಹಣ ದರೋಡೆ ಮಾಡಿದ್ದವರ ಸೆರೆ  

ಬೆಂಗಳೂರು: ಆಟೋ ಚಾಲಕನ ಮನೆಗೆ ನುಗ್ಗಿ ಮಗನ ಶಾಲಾ ಶುಲ್ಕಕ್ಕೆಂದು ಇಟ್ಟಿದ್ದ ಸಾವಿರಾರು ರೂ. ನಗದು, ಚಿನ್ನಾಭರಣ ದೋಚಿದ್ದ ಮೂವರು ಆರೋಪಿಗಳು ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರ ಬಲೆಗೆ ಬಿದ್ದಿದ್ದಾರೆ.

ಕಾಮಾಕ್ಷಿಪಾಳ್ಯದ ತೋಟದ ರಸ್ತೆ ಸಣ್ಣಕ್ಕಿಬೈಲು ನಿವಾಸಿ ಪ್ರೀತನ್‌ ಅಲಿಯಾಸ್‌ ಅಪ್ಪು(21), ರಜತ್‌(22) ಮತ್ತು ವಿಜಯ್‌ ಕುಮಾರ್‌ (19) ಬಂಧಿತರು. ತಲೆಮರೆಸಿಕೊಂಡಿರುವ ಟೆಕ್ಕಿ ಪ್ರವೀಣ್‌, ಅಫ್ತಾಭ್‌, ಭರತ್‌, ಮನೋಜ್‌ ಎಂಬವರು ತಲೆಮರೆಸಿಕೊಂಡಿದ್ದು, ಶೋಧ ಕಾರ್ಯ ನಡೆಯುತ್ತಿದೆ. ಬಂಧಿತ ಆರೋಪಿಗಳಿಂದ ಸಾವಿರಾರು ರೂ. ನಗದು, ಚಿನ್ನಾಭರಣ ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ಹೇಳಿದರು.

ಆರೋಪಿಗಳು ಮೇ 26ರಂದು ಕಾಮಾಕ್ಷಿಪಾಳ್ಯ ನಿವಾಸಿ ಆಟೋ ಚಾಲಕ ನಾಗೇಶ್‌ ಎಂಬವರ ಮನೆಗೆ ನುಗ್ಗಿ ದರೋಡೆ ಮಾಡಿದ್ದರು. ಆರೋಪಿಗಳ ಪೈಕಿ ಪ್ರೀತನ್‌ ಅಲಿಯಾಸ್‌ ಅಪ್ಪು ನಾಗೇಶ್‌ ಪರಿಚಯಸ್ಥನಾಗಿದ್ದು, ಅವರ ಮನೆ ಮೇಲಿನ ಮನೆಯಲ್ಲಿ ವಾಸವಾಗಿದ್ದಾನೆ. ನಾಗೇಶ್‌ ಪತ್ನಿ ಇಲ್ಲದಾಗ ಪ್ರೀತನ್‌ ಇಲ್ಲಿಯೇ ಮಲಗುತ್ತಿದ್ದ. ಆಗ ಮನೆಯಲ್ಲಿರುವ ಚಿನ್ನಾಭರಣ ಹಾಗೂ 2ನೇ ತರಗತಿ ಓದುತ್ತಿರುವ ಮಗನ ಶಾಲಾ ಶುಲ್ಕ ಪಾವತಿಗಾಗಿ 40 ಸಾವಿರ ರೂ. ತಂದಿದ್ದೇನೆ ಎಂದು ಹೇಳಿಕೊಂಡಿದ್ದರು. ಈ ವಿಚಾರ ತಿಳಿದ ಪ್ರೀತನ್‌, ನಗರದ ಪ್ರತಿಷ್ಠಿತ ಸಾಫ್ಟ್ವೇರ್‌ ಕಂಪನಿಯಲ್ಲಿ ಟೆಕ್ಕಿ ಆಗಿರುವ ಪ್ರವೀಣ್‌ಗೆ ಹೇಳಿಕೊಂಡಿದ್ದ. ಬಳಿಕ ಪ್ರವೀಣ್‌, ಇತರೆ ಆರೋಪಿಗಳ ಜತೆ ಹಂಚಿಕೊಂಡು ಮೇ 25ರಂದು ರಾತ್ರಿ ಎಲ್ಲರೂ ಕಂಠಪೂರ್ತಿ ಮದ್ಯ ಸೇವಿಸಿದ್ದರು. ಈ ವೇಳೆಯೇ ನಾಗೇಶ್‌ ಮನೆಯ ದರೋಡೆಗೆ ಸಂಚು ರೂಪಿಸಿದ್ದರು ಎಂದು ಪೊಲೀಸರು ಹೇಳಿದರು.

ಸಂಚು ರೂಪಿಸಿ ದರೋಡೆ: ಮತ್ತೂಂದೆಡೆ ನಾಗೇಶ್‌ ಪತ್ನಿ ಮತ್ತು ಮಗ ಊರಿಗೆ ತೆರಳಿದ ದಿನವೇ ಕಳವು ಮಾಡಬೇಕು. ಆಗ ಮಾತ್ರ ಹಣ ಸಿಗುತ್ತದೆ ಎಂದು ನಿರ್ಧರಿಸಿದ್ದ ಆರೋಪಿಗಳು, ಮೇ 26ರಂದು ನಾಗೇಶ್‌ ಪತ್ನಿ ಊರಿಗೆ ತೆರಳಿರುವ ವಿಚಾರ ಪ್ರೀತನ್‌ನಿಂದ ತಿಳಿದುಕೊಂಡಿದ್ದರು. ಅದೇ ದಿನ ಪ್ರೀತನ್‌, ತಾನು ನಾಗೇಶ್‌ ಮನೆಯಲ್ಲಿ ಹೋಗಿ ಮಲಗುತ್ತೇನೆ. ನೀವುಗಳು ಬಂದು ದಾಳಿ ನಡೆಸಿ, ದರೋಡೆ ಮಾಡಿ ಎಂದು ಸಲಹೆ ಕೊಟ್ಟಿದ್ದ. ಇತರೆ ಎಲ್ಲ ಆರೋಪಿಗಳು ಮುಸುಕುಧಾರಿಗಳಾಗಿ ಬಂದಿದ್ದು, ಮೂವರು ನಾಗೇಶ್‌ ಮನೆಗೆ ನುಗ್ಗಿದ್ದಾರೆ. ಇತರೆ ಮೂವರು ಆರೋಪಿಗಳು ರಸ್ತೆಯಲ್ಲಿ ನಿಂತು ಯಾರಾದರೂ ಬರುತ್ತಿದ್ದಾರೆಯೇ ಎಂದು ಗಮನಿಸಿದ ಮಾಹಿತಿ ನೀಡುತ್ತಿದ್ದರು. ಮನೆಯೊಳಗೆ ನುಗ್ಗಿದ್ದ ಆರೋಪಿಗಳು ನಾಗೇಶ್‌ ಮತ್ತು ಪ್ರೀತನ್‌ಗೆ ಮಾರಕಾಸ್ತ್ರ ತೋರಿಸಿ 30 ಗ್ರಾಂ ಚಿನ್ನಾಭರಣ, 35 ಸಾವಿರ ರೂ. ನಗದು ದರೋಡೆ ಮಾಡಿ ಪರಾರಿಯಾಗಿದ್ದರು ಎಂದು ಪೊಲೀಸರು ಹೇಳಿದರು.

ದೂರು ನೀಡುವುದಿಲ್ಲ ಎಂದು ಕೃತ್ಯ: ದೂರುದಾರ ನಾಗೇಶ್‌ ಬಗ್ಗೆ ತಿಳಿದುಕೊಂಡಿದ್ದ ಪ್ರೀತನ್‌, ಒಂದು ವೇಳೆ ದರೋಡೆ, ಕಳ್ಳತನವಾದರೆ ಪೊಲೀಸ್‌ ಠಾಣೆಗೆ ದೂರು ನೀಡುವುದಿಲ್ಲ ಎಂದು ಭಾವಿಸಿದ್ದ. ಅಲ್ಲದೆ, ಮಾತನಾಡುವಾಗಲೂ ಪೊಲೀಸ್‌ ಸಹವಾಸ ಬೇಡವೆಂದು ನಾಗೇಶ್‌ ಹೇಳಿಕೊಂಡಿದ್ದರಂತೆ. ಅದರಂತೆ ಆರೋಪಿಗಳು ಮನೆಗೆ ನುಗ್ಗಿ ದರೋಡೆ ಮಾಡಿದ್ದರು. ಬಳಿಕ ಪ್ರಕರಣ ದಾಖಲಿಸಿಕೊಂಡು ತಾಂತ್ರಿಕ ತನಿಖೆ ನಡೆಸಿ ಆರೋಪಿಗಳನ್ನು ಬಂಧಿಸಲಾಗಿದೆ. ಆರೋಪಿಗಳು ಐಷಾರಾಮಿ ಜೀವನಕ್ಕಾಗಿ ಕೃತ್ಯ ಎಸಗಿದ್ದಾರೆ ಎಂದು ಪೊಲೀಸರು ಹೇಳಿದರು.

ಇನ್‌ಸ್ಪೆಕ್ಟರ್‌ ಲೋಹಿತ್‌ ನೇತೃತ್ವದಲ್ಲಿ ಪಿಎಸ್‌ಐ ಮೂರ್ತಿಧರ್ಮರಾಜ್‌, ಎಎಸ್‌ಐ ಶ್ರೀನಿವಾಸ್‌ ಹಾಗೂ ಸಿಬ್ಬಂದಿ ಕಾರ್ಯಾಚರಣೆ ನಡೆಸಿದ್ದಾರೆ.

ಟಾಪ್ ನ್ಯೂಸ್

Bellary: ತುಕಾರಾಂ ಆಡಳಿತದಲ್ಲಿ ಸಂಡೂರು ಅಭಿವೃದ್ಧಿಯಾಗಿದೆ: ಡಿಕೆ ಶಿವಕುಮಾರ್

Bellary: ತುಕಾರಾಂ ಆಡಳಿತದಲ್ಲಿ ಸಂಡೂರು ಅಭಿವೃದ್ಧಿಯಾಗಿದೆ: ಡಿಕೆ ಶಿವಕುಮಾರ್

13

Kanguva: 10 ಸಾವಿರಕ್ಕೂ ಹೆಚ್ಚಿನ ಸ್ಕ್ರೀನ್‌ನಲ್ಲಿ ಅದ್ಧೂರಿಯಾಗಿ ರಿಲೀಸ್‌ ಆಗಲಿದೆ ʼಕಂಗುವʼ

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

Missing: 3 ದಿನದಿಂದ ಕೆಪಿಸಿ ಭದ್ರತಾ ಸಿಬ್ಬಂದಿ ನಾಪತ್ತೆ… ಮಾಣಿ ಡ್ಯಾಂ ಬಳಿ ಬೈಕ್ ಪತ್ತೆ

Missing: 3 ದಿನದಿಂದ ಕೆಪಿಸಿ ಭದ್ರತಾ ಸಿಬ್ಬಂದಿ ನಾಪತ್ತೆ… ಮಾಣಿ ಡ್ಯಾಂ ಬಳಿ ಬೈಕ್ ಪತ್ತೆ

ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪ: ನ.20ರಂದು ರಾಜ್ಯದಲ್ಲಿ ಮದ್ಯ ಮಾರಾಟ ಬಂದ್‌

Excise: ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪ: ನ.20ರಂದು ರಾಜ್ಯದಲ್ಲಿ ಮದ್ಯ ಮಾರಾಟ ಬಂದ್‌

DGP: ಮಹಾರಾಷ್ಟ್ರದ ನೂತನ ಡಿಜಿಪಿ ಆಗಿ ಐಪಿಎಸ್ ಅಧಿಕಾರಿ ಸಂಜಯ್ ವರ್ಮಾ ನೇಮಕ

DGP: ಮಹಾರಾಷ್ಟ್ರದ ನೂತನ ಡಿಜಿಪಿ ಆಗಿ ಐಪಿಎಸ್ ಅಧಿಕಾರಿ ಸಂಜಯ್ ವರ್ಮಾ ನೇಮಕ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9

Bengaluru: ಸುರಂಗ ರಸ್ತೆ ಕಾಮಗಾರಿಗೆ ಭಾರತ-ಚೀನಾ ಸಂಬಂಧ ಅಡ್ಡಿ! 

Fraud: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಹೆಸರಲ್ಲಿ ಇಬ್ಬರಿಗೆ 93 ಲಕ್ಷ ರೂ. ವಂಚನೆ

Fraud: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಹೆಸರಲ್ಲಿ ಇಬ್ಬರಿಗೆ 93 ಲಕ್ಷ ರೂ. ವಂಚನೆ

Digital arrest: ವೃದ್ಧೆಗೆ ಡಿಜಿಟಲ್‌ ದಿಗ್ಬಂಧನ ಹಾಕಿ 10.21 ಲ. ರೂ. ಕಿತ್ತ ಸೈಬರ್‌ ವಂಚಕ

Digital arrest: ವೃದ್ಧೆಗೆ ಡಿಜಿಟಲ್‌ ದಿಗ್ಬಂಧನ ಹಾಕಿ 10.21 ಲ. ರೂ. ಕಿತ್ತ ಸೈಬರ್‌ ವಂಚಕ

5

Drunk & Drive Case: ಅತಿ ವೇಗದ ಚಾಲನೆ: 522 ಕೇಸ್‌, 1.29 ಲಕ್ಷ ದಂಡ

Bengaluru: ನಿಲ್ಲದ ಪಟಾಕಿ ಅವಘಡ: ಮತ್ತೆ 10 ಮಂದಿ ಕಣ್ಣಿಗೆ ತೊಂದರೆ

Bengaluru: ನಿಲ್ಲದ ಪಟಾಕಿ ಅವಘಡ: ಮತ್ತೆ 10 ಮಂದಿ ಕಣ್ಣಿಗೆ ತೊಂದರೆ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Bellary: ತುಕಾರಾಂ ಆಡಳಿತದಲ್ಲಿ ಸಂಡೂರು ಅಭಿವೃದ್ಧಿಯಾಗಿದೆ: ಡಿಕೆ ಶಿವಕುಮಾರ್

Bellary: ತುಕಾರಾಂ ಆಡಳಿತದಲ್ಲಿ ಸಂಡೂರು ಅಭಿವೃದ್ಧಿಯಾಗಿದೆ: ಡಿಕೆ ಶಿವಕುಮಾರ್

9

Bunts Hostel, ಕರಂಗಲ್ಪಾಡಿ ಜಂಕ್ಷನ್‌: ಶಾಶ್ವತ ಡಿವೈಡರ್‌ ನಿರ್ಮಾಣ ಕಾಮಗಾರಿ

8

Mangaluru: ರಾತ್ರಿ ಪ್ರಿಪೇಯ್ಡ್  ಆಟೋ ಇಲ್ಲದೆ ಪ್ರಯಾಣಿಕರ ಪರದಾಟ

13

Kanguva: 10 ಸಾವಿರಕ್ಕೂ ಹೆಚ್ಚಿನ ಸ್ಕ್ರೀನ್‌ನಲ್ಲಿ ಅದ್ಧೂರಿಯಾಗಿ ರಿಲೀಸ್‌ ಆಗಲಿದೆ ʼಕಂಗುವʼ

7

Urwa: ಬಾಯ್ದೆರೆದ ಕಾಂಕ್ರೀಟ್‌ ಚೇಂಬರ್‌ಗಳಿಗೆ ಬಿತ್ತು ಮುಚ್ಚಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.