ವಿಧಾನಸಭೆ ಕಾರ್ಯದರ್ಶಿಯ ಆರ್ಥಿಕ ಅಧಿಕಾರಕ್ಕೆ ಕತ್ತರಿ
Team Udayavani, Aug 14, 2018, 6:50 AM IST
ಬೆಂಗಳೂರು: ವಿಧಾನಸಭೆ ಸಚಿವಾಲಯದಲ್ಲಿ ಖರೀದಿ ಮತ್ತು ನಿರ್ಮಾಣದಲ್ಲಿ ಅವ್ಯವಹಾರ ನಡೆದಿದೆ ಎಂಬ ಆರೋಪದ ಬೆನ್ನಲ್ಲೇ ವಿಧಾನಸಭೆ ಕಾರ್ಯದರ್ಶಿಗಳಿಗೆ ಇರುವ ಆರ್ಥಿಕ ಅಧಿಕಾರಕ್ಕೆ (ಹಣ ವೆಚ್ಚ ಮಾಡುವ ಅಧಿಕಾರ) ವಿಧಾನಸಭಾಧ್ಯಕ್ಷರು ಕಡಿವಾಣ ಹಾಕಿದ್ದಾರೆ.
ವಿಧಾನಸಭಾಧ್ಯಕ್ಷರ ಆದೇಶದಂತೆ ವಿಧಾನಸಭೆ ಕಾರ್ಯದರ್ಶಿ, ಅಧೀನ ಕಾರ್ಯದರ್ಶಿ, ಉಪ ಕಾರ್ಯದರ್ಶಿ ಮತ್ತು ಜಂಟಿ ಕಾರ್ಯದರ್ಶಿಗಳಿಗೆ ಹಣ ಮಂಜೂರು ಮಾಡುವ ಆರ್ಥಿಕ ಅಧಿಕಾರವನ್ನು ಹಿಂಪಡೆದು ವಿಧಾನಸಭೆ ಸಚಿವಾಲಯದ ಅಧೀನ ಕಾರ್ಯದರ್ಶಿಗಳು ಆದೇಶ ಹೊರಡಿಸಿದ್ದಾರೆ. ಇದರ ಜತೆಗೆ ಸಭಾಧ್ಯಕ್ಷರಿಗೆ ಇದ್ದ ಹಣ ಮಂಜೂರಾತಿ ಅಧಿಕಾರವನ್ನೂ ಹಿಂಪಡೆಯಲಾಗಿದೆ.
ಅಲ್ಲದೆ, ಇನ್ನುಮುಂದೆ ವಿಧಾನಸಭೆ ಸಚಿವಾಲಯದಲ್ಲಿ (ಶಾಸಕರ ಭವನವೂ ಸೇರಿ) ವ್ಯವಹರಿಸಲಾಗುವ ಎಲ್ಲಾ ವಹಿವಾಟುಗಳಿಗೆ ಸಂಬಂಧಿಸಿದಂತೆ ಯಾವ ಕಾರಣಕ್ಕೆ ಹಣ ವೆಚ್ಚ ಮಾಡಲಾಗಿದೆ ಎಂಬ ಬಗ್ಗೆ ಸ್ಪಷ್ಟ ವಿವರಣೆಯೊಂಗಿಹೆ ವಿಧಾನಸಭಾಧ್ಯಕ್ಷರಿಂದ ಅನುಮೋದನೆ ಪಡೆದು ಮೊತ್ತ ಪಾವತಿಸಬೇಕು ಎಂದೂ ಆದೇಶದಲ್ಲಿ ತಿಳಿಸಲಾಗಿದೆ.
ಏನಿದು ವಿವಾದ?:
ವಿಧಾನಸಭೆ ಸಚಿವಾಲಯದ ಆಡಳಿತ ಸುಧಾರಣೆ ಮತ್ತು ಆಡಳಿತ ಹಿತದೃಷ್ಟಿಯಿಂದ ಸಭಾಧ್ಯಕ್ಷರನ್ನೊಳಗೊಂಡಂತೆ ವಿಧಾನಸಭೆ ಕಾರ್ಯದರ್ಶಿಯಿಂದ ಹಿಡಿದು ಅಧೀನ ಕಾರ್ಯದರ್ಶಿ ಹಂತದವರೆಗೆ ನಿರ್ದಿಷ್ಟು ಮೊತ್ತವನ್ನು ಮಂಜೂರು ಮಾಡಲು 2018ರ ಫೆ. 21ರಂದು ಆದೇಶ ಹೊರಡಿಸಲಾಗಿತ್ತು.
ಅದರಂತೆ ವಿಧಾನಸಭಾಧ್ಯಕ್ಷರು 1 ಲಕ್ಷ ರೂ.ಗಿಂತ ಮೇಲ್ಪಟ್ಟ ಮೊತ್ತಕ್ಕೆ, ವಿಧಾನಸಭೆ ಕಾರ್ಯದರ್ಶಿ 1 ಲಕ್ಷ ರೂ.ವರೆಗೆ, ಜಂಟಿ ಕಾರ್ಯದರ್ಶಿ 75 ಸಾವಿರ ರೂ.ವರೆಗೆ, ಉಪ ಕಾರ್ಯದರ್ಶಿ 50 ಸಾವಿರ ರೂ.ವರೆಗೆ ಹಾಗೂ ಅಧೀನ ಕಾರ್ಯದರ್ಶಿ 25 ಸಾವಿರ ರೂ.ವರೆಗೆ ಹಣ ಮಂಜೂರಾತಿ ಮಾಡುವ ಅಧಿಕಾರ ನೀಡಲಾಗಿತ್ತು.
ಆದರೆ, ಈ ಆದೇಶವು ಸಚಿವಾಲಯದ ಅಧಿಕಾರಿಗಳು ಸರ್ಕಾರದ ಹಣ ದುರುಪಯೋಗಪಡಿಸಿಕೊಳ್ಳಲು ಅವಕಾಶ ಮಾಡಿಕೊಟ್ಟಂತಾಗಿರುವುದರಿಂದ ಬೊಕ್ಕಸಕ್ಕೆ ನಷ್ಟ ಉಂಟಾಗುವ ಸಾಧ್ಯತೆ ಇದೆ. ಆದ್ದರಿಂದ ಸರ್ಕಾರದ ಅನಗತ್ಯ ಆರ್ಥಿಕ ವೆಚ್ಚದಿಂದ ಉಂಟಾಗುವ ಹೊರೆಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಆದೇಶ ಹಿಂಪಡೆಯಲಾಗಿದೆ ಎಂದು ತಿಳಿಸಲಾಗಿದೆ.
ಯಾಕಾಗಿ ಈ ಕ್ರಮ?:
ಇತ್ತೀಚಿನ ದಿನಗಳಲ್ಲಿ ಸಚಿವಾಲಯದ ಕೆಲವು ಖರೀದಿ, ಟೆಂಡರ್‌ಗಳಲ್ಲಿ ಅಕ್ರಮಗಳು ನಡೆದಿರುವ ಬಗ್ಗೆ ಮಾಧ್ಯಮಗಳಲ್ಲಿ ವರದಿಯಾಗಿತ್ತು. ಈ ಬಗ್ಗೆ ರಮೇಶ್‌ಕುಮಾರ್ ಅವರು ವಿಧಾನಸಭಾಧ್ಯಕ್ಷರಾದ ಬಳಿಕ ಪರಿಶೀಲನೆ ನಡೆಸಿದ್ದರು. ಅಲ್ಲದೆ, ಕೆಲವು ಪ್ರಕರಣಗಳ ಬಗ್ಗೆ ಆಂತರಿಕ ತನಿಖೆಗೂ ಆದೇಶಿಸಿದ್ದರು. ಈ ವೇಳೆ ವಿಧಾನಸಭೆ ಕಾರ್ಯದರ್ಶಿಗಳು ಸೇರಿದಂತೆ ಅಧಿಕಾರಿಗಳಿಗೆ ನೀಡಿದ ಆರ್ಥಿಕ ಅಧಿಕಾರದಿಂದ ಈ ಲೋಪಗಳಾಗಿರುವುದು ತಿಳಿದುಬಂದಿತ್ತು. ಈ ಹಿನ್ನೆಲೆಯಲ್ಲಿ ಅಧಿಕಾರಿಗಳಿಗೆ ನೀಡಿರುವ ಅಧಿಕಾರ ವಾಪಸ್ ಪಡೆಯಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Intervention: ಗೃಹ ಇಲಾಖೆಯಲ್ಲಿ ಯಾರ ಹಸ್ತಕ್ಷೇಪವೂ ಇಲ್ಲ: ಸಚಿವ ಪರಮೇಶ್ವರ್
Investment: 9.8 ಸಾವಿರ ಕೋಟಿ ರೂ. 9 ಯೋಜನೆಗೆ ಒಪ್ಪಿಗೆ: ಸಿಎಂ ಸಿದ್ದರಾಮಯ್ಯ
Congress Government: ಸಿದ್ದರಾಮಯ್ಯ ಅವಧಿಯಲ್ಲೇ ದ್ವೇಷದ ರಾಜಕಾರಣ ಬೇಸರ ತಂದಿದೆ: ಸೋಮಣ್ಣ
Session: ಕಾಂಗ್ರೆಸಿಗರ ವೀಡಿಯೋಗೆ ಯಾವ ಬೆಲೆಯೂ ಇಲ್ಲ: ಎಂಎಲ್‌ಸಿ ರವಿಕುಮಾರ್
ಸುಮ್ನೆ ಬ್ಯಾಂಡೇಜ್ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Intervention: ಗೃಹ ಇಲಾಖೆಯಲ್ಲಿ ಯಾರ ಹಸ್ತಕ್ಷೇಪವೂ ಇಲ್ಲ: ಸಚಿವ ಪರಮೇಶ್ವರ್
Encounter: ಉತ್ತರಪ್ರದೇಶದಲ್ಲಿ ಎನ್‌ಕೌಂಟರ್: 3 ಶಂಕಿತ ಖಲಿಸ್ಥಾನಿ ಉಗ್ರರ ಹತ್ಯೆ
Investment: 9.8 ಸಾವಿರ ಕೋಟಿ ರೂ. 9 ಯೋಜನೆಗೆ ಒಪ್ಪಿಗೆ: ಸಿಎಂ ಸಿದ್ದರಾಮಯ್ಯ
Growers Meet: ಕಾಫಿಗೆ ಜಗತ್ತಿನೆಲ್ಲೆಡೆ ಮಾರುಕಟ್ಟೆ ಸೃಷ್ಟಿ ಅಗತ್ಯ: ಪಿಯೂಷ್ ಗೋಯಲ್
Congress Government: ಸಿದ್ದರಾಮಯ್ಯ ಅವಧಿಯಲ್ಲೇ ದ್ವೇಷದ ರಾಜಕಾರಣ ಬೇಸರ ತಂದಿದೆ: ಸೋಮಣ್ಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.