ಧರೆಗುರುಳಿದ ಮರಗಳಿಗೆ ಸಸ್ಯಕಾಶಿಯಲ್ಲಿ ಶಿಲ್ಪರೂಪ


Team Udayavani, Jan 24, 2018, 11:58 AM IST

lal-tree.jpg

ಬೆಂಗಳೂರು: ಸಸ್ಯಕಾಶಿ ಲಾಲ್‌ಬಾಗ್‌ನಲ್ಲಿ ಇದೇನಿದು ಉಳಿಯ ಸದ್ದು ಎಂದು ಇಣುಕಿ ನೋಡಿದರೆ ಧರೆಗುರುಳಿರುವ ನೂರಾರು ವರ್ಷಗಳ ಹಳೆಯ ಮರಗಳು ಶಿಲ್ಪ ಕಲಾಕೃತಿಯಾಗಿ ಅರಳುತ್ತಿದ್ದವು!

ಹೌದು. ಹಗಲು ರಾತ್ರಿಯ ಪರಿವೆಯೇ ಇಲ್ಲದೇ ಶಿಲ್ಪಿಗಳು, ಹೇಗೆಂದರೆ ಹಾಗೆ ಬೆಳೆದು ಒಣಗಿರುವ ಮರಗಳಿಗೆ ಹೊಸ ರೂಪ ಕೊಡುವ ಕಾಯಕದಲ್ಲಿ ತೊಡಗಿಕೊಂಡಿದ್ದಾರೆ. ಕೆಲವು ಕಿರಿಯ ಕಲಾವಿದರು ಹಿರಿಯರ ಜತೆ ಸಾಥ್‌ ನೀಡಿದ್ದು, ಬೃಹದಾಕಾರದ ಶಿಲ್ಪಗಳು ರೂಪಗೊಳ್ಳುತ್ತಿವೆ.

ಲಾಲ್‌ಬಾಗ್‌ ಆಡಳಿತ ಹಾಗೂ ಕರ್ನಾಟಕ ಶಿಲ್ಪಕಲಾ ಅಕಾಡೆಮಿ ಜಂಟಿಯಾಗಿ ಶಿಲ್ಪಕಲಾ ಶಿಬಿರ ಆಯೋಜಿಸಿದೆ. ಕರ್ನಾಟಕ ಸೇರಿ ಬೇರೆ ರಾಜ್ಯಗಳ 60ಕ್ಕೂ ಹೆಚ್ಚು ಕಲಾವಿದರು  ಈ ಶಿಬಿರದಲ್ಲಿ ಪಾಲ್ಗೊಂಡಿದ್ದಾರೆ. 200 ರಿಂದ 300 ವರ್ಷ ಹಳೆಯದಾಗಿ, ನೆಲಕ್ಕುರುಳಿರುವ ಹಲಸು, ಮಾವು, ನೀಲಗಿರಿ, ನೇರಳೆ ಮರಗಳನ್ನೇ ಕೆತ್ತನೆಯ ಕೆಲಸಕ್ಕೆ ಉಪಯೋಗಿಸಿಕೊಂಡಿದ್ದಾರೆ.

ಈಗಾಗಲೇ 60%ರಿಂದ 70%ರಷ್ಟು ಕೆತ್ತನೆ ಕೆಲಸಗಳು ಪೂರ್ಣಗೊಂಡಿವೆ. ಇದೇ ತಿಂಗಳು 12ರಂದು ಆರಂಭವಾದ ಶಿಬಿರ 27ಕ್ಕೆ ಸಂಪನ್ನಗೊಳ್ಳಲಿದ್ದು, ಅಷ್ಟರೊಳಗೆ ಪೂರ್ಣಗೊಳಿಸುವ ತರಾತುರಿಯಲ್ಲಿ ಕಲಾವಿದರಿದ್ದಾರೆ.

50 ದಿಮ್ಮಿಗಳು; 70 ಶಿಲ್ಪಿಗಳು: ಉದ್ಯಾನದಲ್ಲಿ ಬಿದ್ದಿದ್ದ 15 ದೈತ್ಯ ಮರಗಳಿಂದ, 50ಕ್ಕೂ ಹೆಚ್ಚು ಬೃಹತ್‌ ಮರದ ದಿಮ್ಮಿಗಳನ್ನು ಸಂಗ್ರಹಿಸಲಾಗಿದೆ. ಅದರಲ್ಲಿ ಈಗ ಮರ, ಪ್ರಾಣಿ, ಪಕ್ಷಿಗಳು, ನೀರಿನ ಝರಿ ಹೀಗೆ ವಿವಿಧ ಕಲಾಕೃತಿಗಳು ಅರಳಿವೆ. ಬರೋಡಾ, ಕೊಲ್ಕತ್ತ ಹಾಗೂ ಮುಂಬೈನಿಂದ ತಲಾ 15 ಪ್ರಮುಖ ಮತ್ತು ಸಹಾಯಕ ಶಿಲ್ಪಿಗಳು, ತೋಟಗಾರಿಕೆ ಇಲಾಖೆಯಿಂದ 15 ಶಿಲ್ಪಿಗಳು, ಸ್ವಯಂಪ್ರೇರಿತವಾಗಿ 25 ಶಿಲ್ಪಿಗಳು ಪಾಲ್ಗೊಂಡಿದ್ದಾರೆ ಎಂದು ತೋಟಗಾರಿಕೆ ಇಲಾಖೆಯ ಜಂಟಿ ನಿರ್ದೇಶಕ ಡಾ.ಎಂ.ಜಗದೀಶ್‌ ತಿಳಿಸಿದರು. 

ಸಸ್ಯಕಾಶಿಯೇ ಶಿಲ್ಪಕ್ಕೆ ಸ್ಫೂರ್ತಿ: ಬೆಂಗಳೂರು, ಬಿದರ್‌, ಬಿಜಾಪುರ, ಮಂಡ್ಯ, ಮೈಸೂರು, ರಾಮನಗರ ಸೇರಿದಂತೆ ರಾಜ್ಯದ ಇನ್ನೂ ಕೆಲ ಜಿಲ್ಲೆಗಳ ಶಿಲ್ಪ ಕಲಾವಿದರು ಶಿಬಿರದಲ್ಲಿ ಪಾಲ್ಗೊಂಡಿದ್ದಾರೆ. ಅಲ್ಲದೆ, ಪಶ್ಚಿಮಬಂಗಾಳ, ದೆಹಲಿಯ ಕಲಾವಿದರಿಗೂ ಪಾಲ್ಗೊಳ್ಳುವ ಅವಕಾಶ ಮಾಡಿಕೊಡಲಾಗಿದ್ದು, ಈಗಾಗಲೇ ಇವರೆಲ್ಲರೂ ಕಲಾಕೃತಿಗೆ ಅಂತಿಮ ರೂಪ ನೀಡುತ್ತಿದ್ದಾರೆ. ಮಹಿಳಾ ಶಿಲ್ಪಿಗಳೂ ಶಿಬಿರದಲ್ಲಿ ಪಾಲ್ಗೊಂಡು ಸಾಕ್ಷಿಯಾಗುತ್ತಿರುವುದು ಇನ್ನೊಂದು ವಿಶೇಷ.

“ಶಿಬಿರ ಒಂದು ಹೊಸ ಅನುಭವ ನೀಡಿದೆ.ನಾನು ರಚಿಸುತ್ತಿರುವ  ಕಲಾಕೃತಿಯಲ್ಲಿ ಮರವನ್ನೇ ತಾಯಿಯಾಗಿ ಬಿಂಬಿಸಿದ್ದೇನೆ. ಈ ತಾಯಿ ಸದಾಕಾಲ ಪ್ರಾಣಿ, ಪಕ್ಷಿಗಳಿಗೆ ಆಸರೆಯಾಗುತ್ತಾಳೆ. ಗರ್ಭಿಣಿಯಾಗಿ ನೂರಾರು ಸಸ್ಯಗಳಿಗೆ ಜನ್ಮ ನೀಡುತ್ತಾಳೆ. ಪಕ್ಷಿಗಳಿಗಂತೂ ತಾಯಿ ಎನಿಸಿಕೊಂಡ ಮರವೇ ಆಸರೆ.
-ಶರಣ್‌, ರಾಮನಗರ ಕಲಾವಿದ 

ಟಾಪ್ ನ್ಯೂಸ್

BGT 2024: ಬುಮ್ರಾ ಬೆಂಕಿ ದಾಳಿಗೆ ನಲುಗಿದ ಆಸೀಸ್:‌ ಭಾರತದ ಹಿಡಿತದಲ್ಲಿ ಪರ್ತ್‌ ಟೆಸ್ಟ್‌

BGT 2024: ಬುಮ್ರಾ ಬೆಂಕಿ ದಾಳಿಗೆ ನಲುಗಿದ ಆಸೀಸ್:‌ ಭಾರತದ ಹಿಡಿತದಲ್ಲಿ ಪರ್ತ್‌ ಟೆಸ್ಟ್‌

15-bng

Bengaluru: ‘ಪೊಲೀಸರ ಹೆಸರಿನ ನಕಲಿ ಕರೆ ಬಗ್ಗೆ ಎಚ್ಚರ ವಹಿಸಿ’

ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ

ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ

Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಘಾತ

Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ

Naxal encounter case: Jayant Gowda’s interrogation, villagers lay siege to the police station

Naxal Encounter Case: ಜಯಂತ್ ಗೌಡ ವಿಚಾರಣೆ, ಠಾಣೆಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು

Goa ಕರಾವಳಿಯಲ್ಲಿ ನೌಕಾಪಡೆಯ ಸಬ್‌ ಮರೈನ್‌ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!

Goa ಕರಾವಳಿಯಲ್ಲಿ ನೌಕಾಪಡೆಯ ಸಬ್‌ ಮರೈನ್‌ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಅನಧಿಕೃತ ಮಳಿಗೆಗಳ ತೆರವು ಕೋರಿ ಅರ್ಜಿ:ಪಾಲಿಕೆಗೆ ಹೈಕೋರ್ಟ್ ನೋಟಿಸ್‌

17-bng

Bengaluru: ವಿಶ್ವನಾಥ್‌ಗೆ ಕೊಲೆ ಬೆದರಿಕೆ: ಆರೋಪಿ ಅರ್ಜಿ ವಜಾ

16-bng

Bengaluru: ಮರಕ್ಕೆ ಬೈಕ್‌ ಡಿಕ್ಕಿ ಹೊಡೆದು ಯುವಕ ಸಾವು

15-bng

Bengaluru: ‘ಪೊಲೀಸರ ಹೆಸರಿನ ನಕಲಿ ಕರೆ ಬಗ್ಗೆ ಎಚ್ಚರ ವಹಿಸಿ’

14-bng

Bengaluru: ಬಟ್ಟೆ ಗುಣಮಟ್ಟ ದೃಢೀಕರಣಕ್ಕೂ ಬಂತು ಸೆನ್ಸರ್‌!

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Bengaluru: ಅನಧಿಕೃತ ಮಳಿಗೆಗಳ ತೆರವು ಕೋರಿ ಅರ್ಜಿ:ಪಾಲಿಕೆಗೆ ಹೈಕೋರ್ಟ್ ನೋಟಿಸ್‌

17-bng

Bengaluru: ವಿಶ್ವನಾಥ್‌ಗೆ ಕೊಲೆ ಬೆದರಿಕೆ: ಆರೋಪಿ ಅರ್ಜಿ ವಜಾ

BGT 2024: ಬುಮ್ರಾ ಬೆಂಕಿ ದಾಳಿಗೆ ನಲುಗಿದ ಆಸೀಸ್:‌ ಭಾರತದ ಹಿಡಿತದಲ್ಲಿ ಪರ್ತ್‌ ಟೆಸ್ಟ್‌

BGT 2024: ಬುಮ್ರಾ ಬೆಂಕಿ ದಾಳಿಗೆ ನಲುಗಿದ ಆಸೀಸ್:‌ ಭಾರತದ ಹಿಡಿತದಲ್ಲಿ ಪರ್ತ್‌ ಟೆಸ್ಟ್‌

16-bng

Bengaluru: ಮರಕ್ಕೆ ಬೈಕ್‌ ಡಿಕ್ಕಿ ಹೊಡೆದು ಯುವಕ ಸಾವು

15-bng

Bengaluru: ‘ಪೊಲೀಸರ ಹೆಸರಿನ ನಕಲಿ ಕರೆ ಬಗ್ಗೆ ಎಚ್ಚರ ವಹಿಸಿ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.