ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ತರಗತಿ ಆರಂಭ
Team Udayavani, May 3, 2018, 6:00 AM IST
ಬೆಂಗಳೂರು: ಉಪನ್ಯಾಸಕರ ತೀವ್ರ ವಿರೋಧದ ನಡುವೆಯೇ ಇಲಾಖೆ 2018-19ನೇ ಸಾಲಿನ ದ್ವಿತೀಯ ಪಿಯುಸಿ
ತರಗತಿಯನ್ನು ಆರಂಭಿಸಿದೆ.ಅದರಂತೆ ಬಹುತೇಕ ಸರ್ಕಾರಿ ಪಿಯು ಕಾಲೇಜಿನ ಉಪನ್ಯಾಸಕರು ಕಾಲೇಜಿಗೆ ಹೋಗಿದ್ದರೂ ತರಗತಿಗಳನ್ನು ತೆಗೆದುಕೊಂಡಿಲ್ಲ.
ಉಪನ್ಯಾಸಕರ ರಜೆಯ ಹಕ್ಕನ್ನು ಇಲಾಖೆ ಕಸಿದುಕೊಂಡಿದೆ. ಹೀಗಾಗಿ ಪಿಯು ಇಲಾಖೆಯನ್ನು ರಜೆ ರಹಿತ ಇಲಾಖೆಯಾಗಿ ಘೋಷಣೆ ಮಾಡಬೇಕು ಎಂದು ಸರ್ಕಾರಿ ಪಿಯು ಕಾಲೇಜು ಉಪನ್ಯಾಸಕರ ಸಂಘದ ಅಧ್ಯಕ್ಷ ತಿಮ್ಮಯ್ಯ ಪುರ್ಲೆ ಹೇಳಿದ್ದಾರೆ.
ದ್ವಿತೀಯ ಪಿಯುಸಿ ಫಲಿತಾಂಶ ಬಂದು ಎರಡು ದಿನವಾಗಿದೆ. ಮೌಲ್ಯಮಾಪನ ಇತ್ತೀಚೆಗಷ್ಟೇ ಮುಗಿದಿದೆ. 2017-18ನೇ
ಸಾಲಿನ ಆಡಳಿತಾತ್ಮಕ ಕೆಲಸ ಇನ್ನೂ ಮುಗಿದಿಲ್ಲ. ಈ ಮಧ್ಯೆ 2018-19ನೇ ಸಾಲಿನ ಶೈಕ್ಷಣಿಕ ವರ್ಷ ಆರಂಭಿಸಿದ್ದಾರೆ. ಉಪನ್ಯಾಸಕರು ಸಾಕಷ್ಟು ವಿರೋಧ ವ್ಯಕ್ತಪಡಿಸಿದ್ದಾರೆ. ಆದರೂ, ಇಲಾಖೆ ತನ್ನ ನಿಲುವು ಸಡಿಲಿಸಿಲ್ಲ. ವಿದ್ಯಾರ್ಥಿಗಳ ಹಿತದೃಷ್ಟಿಯಿಂದಲಾದರೂ ಇಲಾಖೆ ತನ್ನ ನಿರ್ಧಾರದಲ್ಲಿ ಬದಲಾವಣೆ ಮಾಡಿಕೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.
ಭಾನುವಾರದ ತರಗತಿ, ವಿಶೇಷ ತರಗತಿ ಹೀಗೆ ಅನೇಕ ಕಾರಣದಿಂದ ಪಿಯು ಕಾಲೇಜಿನ ಉಪನ್ಯಾಸಕರಿಗೆ 2017-18ನೇ ಸಾಲಿನಲ್ಲಿ ಸರಿಯಾಗಿ ರಜೆ ನೀಡಿಲ್ಲ. ಬೇಸಿಗೆ ರಜೆಯನ್ನೂ ಕಸಿದುಕೊಳ್ಳುವುದು ಸರಿಯಲ್ಲ ಎಂದು ಆಕ್ಷೇಪಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Financial Status: 42,000 ಕೋಟಿ ರೂ. ಸಾಲದ ಸುಳಿಯಲ್ಲಿ ಎಸ್ಕಾಂಗಳು!
Derogatary Term: ಸಿ.ಟಿ.ರವಿ ಪ್ರಕರಣಗಳು ಸಿಐಡಿ ತನಿಖೆಗೆ
A.B.Vajapayee Birth Century: ಸರಳತೆಯ ಸಾಕಾರಮೂರ್ತಿ ನಮ್ಮ ವಾಜಪೇಯಿ
ಮೇಲ್ಮನೆಗೆ ನಾನೇ ಫೈನಲ್, ನನ್ನ ಹಕ್ಕುಚ್ಯುತಿ ಬಗ್ಗೆ ಕಾನೂನು ತಜ್ಞರ ಜತೆ ಸಮಾಲೋಚಿಸಿ ಕ್ರಮ
Belekeri Mining Case: ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಜೈಲು ಶಿಕ್ಷೆಗೆ ಹೈಕೋರ್ಟ್ ತಡೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.