ನಟ ಉಪೇಂದ್ರ ಹೊಸ ಪಕ್ಷ “ಯುಪಿಪಿ’
Team Udayavani, Sep 19, 2018, 6:00 AM IST
ಬೆಂಗಳೂರು: ನಟ ಉಪೇಂದ್ರ “ಉತ್ತಮ ಪ್ರಜಾಕೀಯ ಪಕ್ಷ (ಯುಪಿಪಿ) ಎಂಬ ನೂತನ ರಾಜಕೀಯ ಪಕ್ಷ ಸ್ಥಾಪಿಸಿದ್ದಾರೆ. ಮುಂಬರುವ ಲೋಕಸಭಾ ಚುನಾವಣೆಯನ್ನು ಗುರಿಯಾಗಿಸಿ ಕೊಂಡು ತಮ್ಮ ಹೊಸ ಪಕ್ಷವು ಕಾರ್ಯ ನಿರ್ವಹಿಸಲಿದೆ ಎಂದು ಉಪೇಂದ್ರ ಹೇಳಿದ್ದಾರೆ.
ಉಪೇಂದ್ರ ಅವರ ಹುಟ್ಟುಹಬ್ಬದ ಅಂಗವಾಗಿ ಮಂಗಳವಾರ ಹೊಸ ಪಕ್ಷ ಅಧಿಕೃತವಾಗಿ ಉದ್ಘಾಟಿಸಲಾಯಿತು. ಮಾಜಿ ಲೋಕಾಯುಕ್ತ ಸಂತೋಷ್ ಹೆಗ್ಡೆ ಸೇರಿ ಹಲವು ಗಣ್ಯರು ಈ ಸಂದರ್ಭದಲ್ಲಿ ಹಾಜರಿದ್ದು ಶುಭ ಕೋರಿದರು. ಕಳೆದ ವರ್ಷ ಉಪೇಂದ್ರ ಅವರು ಕರ್ನಾಟಕ ಪ್ರಜ್ಞಾವಂತ ಜನತಾ ಪಕ್ಷ (ಕೆಪಿಜೆಪಿ) ಪಕ್ಷದಿಂದ ರಾಜಕೀಯ ಪ್ರವೇಶ ಮಾಡಿ, ವಿಧಾನಸಭೆ ಚುನಾವಣೆಯಲ್ಲಿ ಪಕ್ಷವು ಸ್ಪರ್ಧಿಸಲಿದೆ ಎಂದು ಘೋಷಿಸಿದ್ದರು. ಆದರೆ, ಅದಾಗಿ ಕೆಲವು ತಿಂಗಳುಗಳಲ್ಲೇ ಆಂತರಿಕ ಭಿನ್ನಾಭಿಪ್ರಾಯದಿಂದ ಕೆಪಿಜೆಪಿಯಿಂದ ಹೊರಬಂದು ಹೊಸ ಪಕ್ಷ ಸ್ಥಾಪಿಸುವುದಾಗಿ ಹೇಳಿದ್ದರು. ವಿಧಾನಸಭಾ ಚುನಾವಣೆ ಪ್ರಕ್ರಿಯೆಯಿಂದ ದೂರವೇ ಉಳಿದಿದ್ದ ಉಪೇಂದ್ರ, ಕೊನೆಗೆ ಉತ್ತಮ ಪ್ರಜಾಕೀಯ ಪಕ್ಷ (ಯುಪಿಪಿ) ಎಂಬ ನೂತನ ರಾಜಕೀಯ
ಪಕ್ಷವನ್ನು ಸ್ಥಾಪಿಸಿದ್ದಾರೆ. ಈ ಸಂದರ್ಭದಲ್ಲಿ ಮಾತನಾಡಿದ ಉಪೇಂದ್ರ, ನಮ್ಮ ಪಕ್ಷ ಸೇರಬಯಸುವವರು ತಮ್ಮ ಕ್ಷೇತ್ರಗಳ ಸಮಸ್ಯೆಗಳು, ಅವುಗಳನ್ನು ಬಗೆಹರಿಸುವ ವಿಧಾನಗಳು, ತಗಲುವ ವೆಚ್ಚದ ಬಗ್ಗೆ ವಿಡಿಯೋ ಮಾಡಿ ಯುಪಿಪಿ ವೆಬ್‌ಸೈಟ್‌ಗೆ ಕಳುಹಿಸಬೇಕು. ನಮಗೆ ಬಂದ ಮಾಹಿತಿ ಯನ್ನು ಪಕ್ಷದ ಕಾರ್ಯಕರ್ತರ ಜತೆಗೆ ಚರ್ಚಿಸಿ, ಅಭ್ಯರ್ಥಿ ಗಳನ್ನು ಲಿಖೀತ ಪರೀಕ್ಷೆ ಮೂಲಕ ಆಯ್ಕೆ ಮಾಡಲಾಗುತ್ತದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimoga: ರಸ್ತೆ ಬದಿಯಲ್ಲಿ ನವಜಾತ ಶಿಶು ಬಿಟ್ಟು ಹೋದ ತಾಯಿ!; ಆರೈಕೆ ಮಾಡಿದ ಸ್ಥಳೀಯರು
Udupi: 2024ನೇ ಸಾಲಿನ ಪಾರ್ತಿಸುಬ್ಬ ಪ್ರಶಸ್ತಿಗೆ ಮಾಂಬಾಡಿ ಸುಬ್ರಹ್ಮಣ್ಯ ಭಟ್ ಆಯ್ಕೆ
RenukaswamyCase: ದರ್ಶನ್ ಸೇರಿ ಎಲ್ಲಾ ಆರೋಪಿಗಳು ಕೋರ್ಟ್‌ಗೆ ಹಾಜರು; ವಿಚಾರಣೆ ಮುಂದೂಡಿಕೆ
Belagavi: ಕಾರಿನಲ್ಲಿ ಹೋಗುತ್ತಿದ್ದ ರಿಯಲ್ ಎಸ್ಟೇಟ್ ಉದ್ಯಮಿ ಮೇಲೆ ಗುಂಡಿನ ದಾಳಿ
Elephant: ಬೆಳಗಾವಿಯ ಖಾನಾಪುರದಲ್ಲಿ ಸೆರೆ ಹಿಡಿದ ಗಂಡಾನೆ ಸಕ್ರೆಬೈಲು ಆನೆ ಬಿಡಾರಕ್ಕೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.