Crime: ಸೆಕ್ಯೂರಿಟಿ ಗಾರ್ಡ್ ಕೊಲೆ; ಆಕಸ್ಮಿಕ ಸಾವು ಎಂದು ಭಾವಿಸಿದ್ದ ಪೊಲೀಸರು
Team Udayavani, Jan 12, 2024, 12:38 PM IST
ಬೆಂಗಳೂರು: ಎಚ್‌ಎಸ್‌ಆರ್ ಲೇಔಟ್‌ನ ಎರಡನೇ ಸೆಕ್ಟರ್‌ನಲ್ಲಿ ಮನೆಯೊಂದರ ಸೆಕ್ಯೂರಿಟಿ ಗಾರ್ಡ್ ಕೊಲೆಯಾಗಿದ್ದು, ಈ ಸಂಬಂಧ ಎಚ್‌ಎಸ್‌ಆರ್ ಲೇಔಟ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಆಂಧ್ರಪ್ರದೇಶ ಮೂಲದ ವೆಂಕಟರಮಣ ನಾಯಕ್ (35) ಕೊಲೆಯಾದವರು.
ಆಂಧ್ರಪ್ರದೇಶ ಮೂಲದ ವೆಂಕಟರಮಣ ನಾಯಕ್ ಮತ್ತು ಪತ್ನಿ ನಂದಿನಿ ಹಲವು ವರ್ಷಗಳಿಂದ ಬೆಂಗಳೂರಿನಲ್ಲೇ ವಾಸವಾಗಿದ್ದಾರೆ. ದಂಪತಿ ಎಚ್‌ಎಸ್‌ಆರ್ ಲೇಔಟ್‌ನ ಸೆಕ್ಟರ್ 2ರಲ್ಲಿರುವ ಮನೆಯೊಂದರಲ್ಲಿ ಮನೆಗೆಲಸ ಮಾಡಿಕೊಂಡು ಜೀವನ ನಡೆಸುತ್ತಿದ್ದಾರೆ. ಅದೇ ಮನೆ ಮಾಲೀಕರು, ಕಟ್ಟಡದ ಕೆಳಭಾಗದಲ್ಲಿರುವ ಮನೆಯನ್ನು ದಂಪತಿ ಮತ್ತು ಇಬ್ಬರು ಮಕ್ಕಳ ವಾಸಕ್ಕೆ ಬಿಟ್ಟುಕೊಟ್ಟಿದ್ದಾರೆ. ವೆಂಕಟರಮಣ ನಾಯಕ್ ಬೆಳಗ್ಗೆ ಗೃಹೋಪಯೋಗಿ ಶೋ ರೂಮ್‌ವೊಂದರಲ್ಲಿ ಕೆಲಸ ಮಾಡುತ್ತಿದ್ದು, ರಾತ್ರಿ ತಾವು ವಾಸವಾಗಿರುವ ಮನೆಯ ಸೆಕ್ಯೂರಿಟಿ ಗಾರ್ಡ್ ಆಗಿಯೂ ಕೆಲಸ ಮಾಡುತ್ತಿದ್ದರು. ಮಂಗಳವಾರ ರಾತ್ರಿ ಬಾತ್ ರೂಮ್ ಬಾಗಿಲು ಬಳಿ ಬಿದ್ದು ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ.
ಮರು ದಿನ ಬೆಳಗ್ಗೆ ಅದನ್ನು ಗಮನಿಸಿದ ಪತ್ನಿ ನಂದಿನಿ ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಪೊಲೀಸರಿಗೆ ಮೇಲ್ನೋಟಕ್ಕೆ ಆಕಸ್ಮಿಕ ಘಟನೆ ಎಂದು ಕಂಡರೂ, ಬಳಿಕ ಪ್ರಾಥಮಿಕ ತನಿಖೆ ನಡೆಸಿದಾಗ ಕೊಲೆ ಎಂಬುದು ಗೊತ್ತಾಗಿದೆ. ಹೀಗಾಗಿ ಕೊಲೆ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದರು.
ಮತ್ತೂಂದೆಡೆ ವೆಂಕಟರಮಣ ನಾಯಕ್ ಪತ್ನಿ ನಂದಿನಿ ಮೊಬೈಲ್‌ಗೆ ಒಂದೇ ನಂಬರ್‌ನಿಂದ ಹಲವು ಬಾರಿ ಕರೆ ಬಂದಿದ್ದು, ಅನುಮಾನಕ್ಕೆ ಎಡೆ ಮಾಡಿಕೊಟ್ಟಿದೆ. ಈ ಹಿನ್ನೆಲೆಯಲ್ಲಿ ಎಲ್ಲಾ ಆಯಾಮಗಳಲ್ಲಿ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಚಲಿಸುತ್ತಿದ್ದ ರೈಲಿಗೆ ಸಿಲುಕಿ ಇಬ್ಬರು ಯುವಕರು ಸಾವು
Fraud Case: ಡಿಕೆಸು ಹೆಸರಿನಲ್ಲಿ 8.4 ಕೋಟಿ ರೂ. ವಂಚನೆ; ಆರೋಪಿಗಳಿಗೆ ನೋಟಿಸ್
Arrested: ಸ್ನೇಹಿತನ ಹತ್ಯೆಗೈದಿದ್ದ ಆರೋಪಿ ಬಂಧನ
Toll fee: ಹೆಬ್ಬಾಳ-ಸಿಲ್ಕ್ ಬೋರ್ಡ್ ಸುರಂಗ ರಸ್ತೆ: ಕೇವಲ 18 ಕಿ.ಮೀ.ಗೆ 288 ರೂ. ಸುಂಕ?
Bengaluru: ಕ್ಯಾಬ್ ಡಿಕ್ಕಿ;ಬುಲೆಟ್‌ನಲ್ಲಿ ತೆರಳುತ್ತಿದ್ದ ಸಾಫ್ಟ್ವೇರ್ ಎಂಜಿನಿಯರ್ ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Belagavi: ಅಧಿವೇಶನ ಶತಮಾನೋತ್ಸವದಲ್ಲಿ ನಕಲಿ ಗಾಂಧಿಗಳೇ ಹೆಚ್ಚು: ಎಚ್‌ಡಿಕೆ ವ್ಯಂಗ್ಯ
Belagavi Congress Session: ಗಾಂಧೀಜಿ ಪರಂಪರೆ ಮುಂದುವರಿಸಲು ಬದ್ಧರಾಗಬೇಕು: ಸೋನಿಯಾ
Udupi: ಗೀತಾರ್ಥ ಚಿಂತನೆ 137: ಮನೆಗೆ ಬೆಂಕಿ ಬಿದ್ದರೆ ದುಃಖ ಬೆಂಕಿಗಾಗಿಯಲ್ಲ!
Christmas, ವರ್ಷಾಂತ್ಯ ಸಂಭ್ರಮ; ಬೀಚ್‌ಗಳಿಗೆ ಜೀವಕಳೆ
Captain Brijesh Chowta: ಪಿಎಂ-ವಿಶ್ವಕರ್ಮ ಯೋಜನೆ ಯಶಸ್ವಿ ಅನುಷ್ಠಾನಕ್ಕೆ ಸೂಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.