ದುಸ್ಥಿತಿ ವಾಹನಗಳ ಎತ್ತಂಗಡಿ

Team Udayavani, Jun 14, 2019, 12:30 PM IST

bng-tdy-3..

ಸಂಚಾರ ಪೊಲೀಸ್‌ ಅಧಿಕಾರಿಗಳೊಂದಿಗೆ ಬಿಂಗೀಪುರ ಲ್ಯಾಂಡ್‌ಫೀಲ್ ಪ್ರದೇಶವನ್ನು ಮೇಯರ್‌ ಗಂಗಾಂಬಿಕೆ ಪರಿಶೀಲಿಸಿದರು.

ಬೆಂಗಳೂರು: ನಗರದ ಸಂಚಾರಿ ಪೊಲೀಸ್‌ ಠಾಣೆಗಳ ಮುಂದೆ ನಿಲುಗಡೆ ಮಾಡಿರುವ ವಾಹನಗಳನ್ನು ಬೊಮ್ಮನಹಳ್ಳಿ ವಲಯದ ಬಿಂಗೀಪುರ ಲ್ಯಾಂಡ್‌ಫಿಲ್ ಪ್ರದೇಶಕ್ಕೆ ಸ್ಥಳಾಂತರ ಮಾಡುವ ಕುರಿತು ಸಂಚಾರ ಪೊಲೀಸ್‌ ಅಧಿಕಾರಿಗಳೊಂದಿಗೆ ಚರ್ಚಿಸಲಾಗುವುದು ಎಂದು ಮೇಯರ್‌ ಗಂಗಾಂಬಿಕೆ ಹೇಳಿದರು.

ಬಿಂಗೀಪುರ ಲ್ಯಾಂಡ್‌ಫೀಲ್ ಪ್ರದೇಶದಲ್ಲಿ ಸಂಚಾರ ಪೊಲೀಸರಿಗೆ 10 ಎಕರೆ ಜಾಗವನ್ನು ನಿಗದಿಗೊಳಿಸಲಾಗಿದೆ. ಅದರಂತೆ ಗುರುವಾರ ಸಂಚಾರ ಪೊಲೀಸ್‌ ಅಧಿಕಾರಿ ಗಳೊಂದಿಗೆ ಸ್ಥಳ ಪರಿಶೀಲಿಸಿದ ಅವರು, ಈಗಾಗಲೇ ಭೂಮಿಯನ್ನು ಸಮತಟ್ಟುಗೊಳಿಸುವ ಕಾಮಗಾರಿ ಬಹುತೇಕ ಪೂರ್ಣಗೊಂಡಿದೆ. ಆ ಹಿನ್ನೆಲೆಯಲ್ಲಿ ಠಾಣೆಗಳ ಮುಂದಿರುವ ವಾಹನಗಳನ್ನು ಸ್ಥಳಾಂತರಿಸಲು ಚರ್ಚಿಸಲಾಗುವುದು ಎಂದರು.

ಸುಮಾರು 23 ಎಕರೆ ಪ್ರದೇಶವಿರುವ ಬಿಂಗೀಪುರ ಲ್ಯಾಂಡ್‌ಫಿಲ್ನಲ್ಲಿ ಪಾಲಿಕೆಯಿಂದ ಈಗಾಗಲೇ 4.50 ಎಕರೆ ಪ್ರದೇಶದಲ್ಲಿ ಟ್ರೀ ಪಾರ್ಕ್‌ ಅಭಿವೃದ್ಧಿಪಡಿಸಲಾಗಿದ್ದು, 2 ಎಕರೆ ಜಾಗವನ್ನು ಗೋಶಾಲೆ ನಿರ್ಮಿಸಲು ಕಾಯ್ದಿರಿ ಸಲಾಗಿದೆ. ಅದೇ ರೀತಿ 10 ಎಕರೆ ಜಾಗದಲ್ಲಿ ಅನುಪಯುಕ್ತ ಹಾಗೂ ಸೀಜ್‌ ಮಾಡಿದ ವಾಹನಗಳನ್ನು ನಿಲುಗಡೆ ಮಾಡಲು ಸಂಚಾರ ಪೋಲಿಸರಿಗೆ ಅವಕಾಶ ನೀಡಲಾಗಿದೆ ಎಂದು ಹೇಳಿದರು.

ನಗರದ ಪೊಲೀಸ್‌ ಠಾಣೆಗಳ ಮುಂಭಾಗ ಹಾಗೂ ಪಾದಚಾರಿ ಮಾರ್ಗದಲ್ಲಿ ವಾಹನಗಳನ್ನು ನಿಲುಗಡೆ ಮಾಡಿರುವುದರಿಂದ ಸಾರ್ವಜನಿಕರೊಂದಿಗೆ ತೊಂದರೆ ಯಾಗುತ್ತಿದ್ದು, ದಟ್ಟಣೆಗೂ ಕಾರಣವಾಗಿದೆ. ಆ ಹಿನ್ನೆಲೆಯಲ್ಲಿ ಕೂಡಲೇ ಠಾಣೆಗಳ ಮುಂಭಾಗದಲ್ಲಿ ದುಸ್ಥಿತಿ ಯಲ್ಲಿರುವ ವಾಹನಗಳನ್ನು ಬಿಂಗೀಪುರಕ್ಕೆ ಸ್ಥಳಾಂತರ ಮಾಡುವಂತೆ ಸಂಚಾರ ಪೊಲೀಸ್‌ ಹಿರಿಯ ಅಧಿಕಾರಿ ಗಳನ್ನು ಕೋರಲಾಗುವುದು ಎಂದು ಗಂಗಾಂಬಿಕೆ ತಿಳಿಸಿದರು. ಉಪಮೇಯರ್‌ ಭದ್ರೇಗೌಡ ಸೇರಿದಂತೆ ಸಂಚಾರ ಪೊಲೀಸ್‌ ಪಾಲಿಕೆಯ ಅಧಿಕಾರಿಗಳಿದ್ದರು.

10 ಲಕ್ಷ ಪರಿಹಾರ, ಉದ್ಯೋಗ ಕೊಡಿ:

ನಾಗವಾರ ಮುಖ್ಯರಸ್ತೆ ಕಾಡುಗೊಂಡನಹಳ್ಳಿ ಬಳಿ ಹಳೇ ಬಾವಿಗೆ ಬಿದ್ದು ಮೃತಪಟ್ಟಿದ್ದ ಇಬ್ಬರಿಗೆ ತಲಾ 10 ಲಕ್ಷ ರೂ. ಪರಿಹಾರ ಹಾಗೂ ಕುಟುಂಬದವರಿಗೆ ಸರ್ಕಾರಿ ಉದ್ಯೋಗ ನೀಡುವಂತೆ ರಾಷ್ಟ್ರೀಯ ಸಫಾಯಿ ಕರ್ಮಚಾರಿ ಆಯೋಗದ ಸದಸ್ಯ ಜಗದೀಶ್‌ ಹಿರೇಮಣಿ ಪಾಲಿಕೆಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಕಳೆದ ಏ.27 ರಂದು ಕಾಡುಗೊಂಡನಹಳ್ಳಿ ಹತ್ತಿರದ ಅಂಗಡಿಯೊಂದರಲ್ಲಿ ಹಳೇ ಬಾವಿ ಸ್ವಚ್ಛಗೊಳಿಸಲು ಬಂದಿದ್ದ ಅಫ್ತಾಬ್‌ ಎಂಬ ಕಾರ್ಮಿಕ ಬಾವಿಗೆ ಬಿದ್ದಿದ್ದ. ಆತನನ್ನು ಕಾಪಾಡಲು ಗಫ‌ೂರ್‌ ಎಂಬಾತನೂ ಆಯತಪ್ಪಿ ಬಾವಿಯೊಳಗೆ ಬಿದ್ದಿದ್ದು, ಇಬ್ಬರೂ ಮೃತಪಟ್ಟಿದ್ದರು. ಹಿರೇಮಣಿ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದರು. ಸಾರಕ್ಕಿ ವಾರ್ಡ್‌ ಪೌರಕಾರ್ಮಿಕ ರಾದ ಅಂಡಾಳಮ್ಮ ಎಂಬುವವರು ಏ.29 ರಂದು ಹೃದಯಾಘಾತ ದಿಂದ ಮೃತಪಟ್ಟಿದ್ದರು. ಈ ಸಂಬಂಧ ಕುಮಾರ ಕೃಪಾ ಅತಿಥಿ ಗೃಹದಲ್ಲಿ ಅಂಡಾಳಮ್ಮ ಮಗ ದಕ್ಷಿಣಾ ಮೂರ್ತಿಗೆ 10 ಲಕ್ಷ ರೂ. ಚೆಕ್‌ವಿತರಿಸಿದರು.

ಟಾಪ್ ನ್ಯೂಸ್

Kambala: ಡಿ.28-29ರಂದು 8ನೇ ವರ್ಷದ “ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Ullala: ಗ್ಯಾಸ್‌ ಸಿಲಿಂಡರ್‌ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ

Ullala: ಗ್ಯಾಸ್‌ ಸಿಲಿಂಡರ್‌ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ

Actress: ರೊಮ್ಯಾನ್ಸ್‌ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್

Actress: ರೊಮ್ಯಾನ್ಸ್‌ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್

INDvAUS: ಬ್ಯಾನ್‌ ತಪ್ಪಿಸಿಕೊಂಡ ವಿರಾಟ್‌ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ

INDvAUS: ಬ್ಯಾನ್‌ ತಪ್ಪಿಸಿಕೊಂಡ ವಿರಾಟ್‌ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ

Belagavi: ಪಿಒಕೆ ಬಗ್ಗೆ ಕಾಂಗ್ರೆಸ್‌ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್

Belagavi: ಪಿಒಕೆ ಬಗ್ಗೆ ಕಾಂಗ್ರೆಸ್‌ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್

ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ

ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಚಲಿಸುತ್ತಿದ್ದ ರೈಲಿಗೆ ಸಿಲುಕಿ ಇಬ್ಬರು ಯುವಕರು ಸಾವು

Bengaluru: ಚಲಿಸುತ್ತಿದ್ದ ರೈಲಿಗೆ ಸಿಲುಕಿ ಇಬ್ಬರು ಯುವಕರು ಸಾವು

Fraud Case: ಡಿಕೆಸು ಹೆಸರಿನಲ್ಲಿ 8.4 ಕೋಟಿ ರೂ. ವಂಚನೆ; ಆರೋಪಿಗಳಿಗೆ ನೋಟಿಸ್‌

Fraud Case: ಡಿಕೆಸು ಹೆಸರಿನಲ್ಲಿ 8.4 ಕೋಟಿ ರೂ. ವಂಚನೆ; ಆರೋಪಿಗಳಿಗೆ ನೋಟಿಸ್‌

Arrested: ಸ್ನೇಹಿತನ ಹತ್ಯೆಗೈದಿದ್ದ ಆರೋಪಿ ಬಂಧನ

Arrested: ಸ್ನೇಹಿತನ ಹತ್ಯೆಗೈದಿದ್ದ ಆರೋಪಿ ಬಂಧನ

Toll fee: ಹೆಬ್ಬಾಳ-ಸಿಲ್ಕ್ ಬೋರ್ಡ್‌ ಸುರಂಗ ರಸ್ತೆ: ಕೇವಲ 18 ಕಿ.ಮೀ.ಗೆ 288 ರೂ. ಸುಂಕ?

Toll fee: ಹೆಬ್ಬಾಳ-ಸಿಲ್ಕ್ ಬೋರ್ಡ್‌ ಸುರಂಗ ರಸ್ತೆ: ಕೇವಲ 18 ಕಿ.ಮೀ.ಗೆ 288 ರೂ. ಸುಂಕ?

3

Bengaluru: ಕ್ಯಾಬ್‌ ಡಿಕ್ಕಿ;ಬುಲೆಟ್‌ನಲ್ಲಿ ತೆರಳುತ್ತಿದ್ದ ಸಾಫ್ಟ್ವೇರ್‌ ಎಂಜಿನಿಯರ್‌ ಸಾವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Kambala: ಡಿ.28-29ರಂದು 8ನೇ ವರ್ಷದ “ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Ullala: ಗ್ಯಾಸ್‌ ಸಿಲಿಂಡರ್‌ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ

Ullala: ಗ್ಯಾಸ್‌ ಸಿಲಿಂಡರ್‌ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ

Actress: ರೊಮ್ಯಾನ್ಸ್‌ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್

Actress: ರೊಮ್ಯಾನ್ಸ್‌ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್

Nyamathi: ಕಾಡುಪ್ರಾಣಿಗಳಿಗೆ ಇರಿಸಿದ್ದ 32 ನಾಡ ಬಾಂಬ್‌ ಗಳು ಪತ್ತೆ

Nyamathi: ಕಾಡುಪ್ರಾಣಿಗಳಿಗೆ ಇರಿಸಿದ್ದ 32 ನಾಡ ಬಾಂಬ್‌ ಗಳು ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.