ನಗರದ 4 ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆ ಕಸರತ್ತು


Team Udayavani, Jan 26, 2019, 4:43 AM IST

cogress.jpg

ಬೆಂಗಳೂರು: ನಗರದ ವ್ಯಾಪ್ತಿಗೆ ಬರುವ ನಾಲ್ಕು ಲೋಕಸಭಾ ಕ್ಷೇತ್ರಗಳನ್ನು ಗೆಲ್ಲಲು ಕಾಂಗ್ರೆಸ್‌ ಕಾರ್ಯತಂತ್ರ ಹೆಣೆದಿದ್ದು, ನಾಲ್ಕೂ ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆ ಕುರಿತಂತೆ ಬೆಂಗಳೂರು ಉಸ್ತುವಾರಿ ಕಾರ್ಯದರ್ಶಿ ಯಶೋಮತಿ ಠಾಕೂರ್‌ ಶುಕ್ರವಾರ ಜಿಲ್ಲಾ ಮುಖಂಡರು ಹಾಗೂ ಶಾಸಕರ ಅಭಿಪ್ರಾಯ ಸಂಗ್ರಹಿಸಿದ್ದಾರೆ.

ಪ್ರಮುಖವಾಗಿ ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿಯನ್ನು ಎದುರಿಸಲು ಮೃದು ಹಿಂದುತ್ವ ಅನುಸರಿಸಲು ಕೆಲವು ಮುಖಂಡರು ಸಭೆ ಯಲ್ಲಿ ಸಲಹೆ ನೀಡಿದ್ದಾರೆ ಎಂದು ತಿಳಿದು ಬಂದಿದೆ. ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದಲ್ಲಿ ಪ್ರತಿ ಬಾರಿಯೂ ಅಲ್ಪ ಸಂಖ್ಯಾತ ಸಮುದಾಯದವರಿಗೆ ಟಿಕೆಟ್ ನೀಡುವುದರಿಂದ ಬಿಜೆಪಿ ಹಿಂದುತ್ವದ ಅಸ್ತ್ರ ಪ್ರಯೋಗಿಸಿ ಚುನಾವಣೆಯನ್ನು ಗೆಲ್ಲುತ್ತಿದೆ. ಹೀಗಾಗಿ, ನಾವು ಸ್ವಲ್ಪ ಸಾಫ್ಟ್ ಆಗಬೇಕು ಎಂಬ ಅಭಿಪ್ರಾಯ ವ್ಯಕ್ತವಾಯಿತು.

ಹಾಲಿ ಸಂಸದ ಪಿ.ಸಿ.ಮೋಹನ್‌ ಕ್ಷೇತ್ರದಲ್ಲಿ ಅಷ್ಟೊಂದು ಪ್ರಭಾವಿಯಾಗಿಲ್ಲ. ಕ್ಷೇತ್ರದ 22 ಲಕ್ಷ ಮತದಾರರಲ್ಲಿ 5 ಲಕ್ಷ ಅಲ್ಪಸಂಖ್ಯಾತ ಸಮುದಾಯ ದವರಿದ್ದು, ಇತರೆ ಸಮುದಾಯದವರು ಹದಿನೈದು ಲಕ್ಷಕ್ಕೂ ಹೆಚ್ಚು ಇದ್ದಾರೆ. ಹೀಗಾಗಿ, ಬಿಜೆಪಿ ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದಲ್ಲಿ ಹಿಂದೂ ಅಸ್ತ್ರ ಪ್ರಯೋಗ ಮಾಡುತ್ತಿರುವುದರಿಂದ ಕಾಂಗ್ರೆಸ್‌ನಿಂದಲೂ ಹಿಂದೂ ಅಭ್ಯರ್ಥಿಯನ್ನು ಕಣಕ್ಕಿಳಿಸಿದರೆ, ಸರಳವಾಗಿ ಗೆಲುವು ಸಾಧಿಸಬಹುದು ಎಂದು ಜಿಲ್ಲಾ ಮುಖಂಡರು ಅಭಿಪ್ರಾಯವಾಗಿದೆ ಎನ್ನಲಾಗಿದೆ.

ಆಕಾಂಕ್ಷಿಗಳು: ಬೆಂಗಳೂರು ಕೇಂದ್ರ ಕ್ಷೇತ್ರಕ್ಕೆ ಎಂಟು ಜನ ಟಿಕೆಟ್ ಆಕಾಂಕ್ಷಿಗಳಿದ್ದು ಮಾಜಿ ಸಚಿವ ರೋಷನ್‌ ಬೇಗ್‌, ವಿಧಾನ ಪರಿಷತ್‌ ಸದಸ್ಯ ರಿಜ್ವಾನ್‌ ಅರ್ಷದ್‌, ಮಾಜಿ ಸಂಸದ ಸಾಂಗ್ಲಿಯಾನ, ಮಾಜಿ ಸಚಿವ ಜೆ. ಅಲೆಗ್ಸಾಂಡರ್‌, ಎಐಸಿಸಿ ಕಾರ್ಯದರ್ಶಿ ಸಲೀಂ ಅಹಮದ್‌, ಜಾಫ‌ರ್‌ ಷರೀಫ್ ಮೊಮ್ಮಗ ರೆಹಮಾನ್‌ ಷರೀಫ್, ಎಸ್‌.ಎಸ್‌. ಪ್ರಕಾಶಂ ಟಿಕೆಟ್ ಆಕಾಂಕ್ಷಿಗಳಾಗಿದ್ದಾರೆ. ರಾಜ್ಯಸಭಾ ಸದಸ್ಯ ಬಿ.ಕೆ. ಹರಿಪ್ರಸಾದ್‌ ಅವರೂ ಕೇಂದ್ರ ಕ್ಷೇತ್ರದಿಂದ ಟಿಕೆಟ್ ಬಯಸಿದ್ದಾರೆ.

ಬೆಂಗಳೂರು ಉತ್ತರಕ್ಕೆ ಮಾಜಿ ಸಂಸದ ಸಿ.ನಾರಾ ಯಣಸ್ವಾಮಿ, ರಾಜ್ಯಸಭಾ ಸದಸ್ಯ ಪ್ರೊ. ರಾಜೀವ್‌ ಗೌಡ, ವಿಧಾನ ಪರಿಷತ್‌ ಸದಸ್ಯರಾದ ಎಂ. ನಾರಾಯಣಸ್ವಾಮಿ, ಎಚ್.ಎಂ. ರೇವಣ್ಣ, ಚಿಕ್ಕಬಳ್ಳಾ ಪುರ ಶಾಸಕ ಡಾ. ಸುಧಾಕರ್‌, ಜಿಲ್ಲಾಧ್ಯಕ್ಷ ರಾಜ್‌ಕುಮಾರ್‌ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ. ಒಂದು ವೇಳೆ ಪಕ್ಷ ಜೆಡಿಎಸ್‌ಗೆ ಕ್ಷೇತ್ರ ಬಿಟ್ಟುಕೊಟ್ಟರೂ ಎಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡುವಂತೆ ಯಶೋಮತಿ ಠಾಕೂರ್‌ ಸೂಚಿಸಿದ್ದಾರೆ ಎಂದು ತಿಳಿದು ಬಂದಿದೆ.

ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಆಕಾಂಕ್ಷಿಗಳ ಸಂಖ್ಯೆ ಕಡಿಮೆ ಇದ್ದು, ಮಾಜಿ ಶಾಸಕ ಪ್ರಿಯಾ ಕೃಷ್ಣ ಹಾಗೂ ಮಾಜಿ ಶಾಸಕ ಆರ್‌.ವಿ.ದೇವರಾಜ್‌ ಪುತ್ರ ಯುವರಾಜ್‌ ಟಿಕೆಟ್‌ಗೆ ಬೇಡಿಕೆ ಇಟ್ಟಿದ್ದು, ಮಾಜಿ ಸಚಿವ ರಾಮಲಿಂಗಾರೆಡ್ಡಿ ಅವರು ಕೆಲಸ ಮಾಡುವ ಸಂಪೂರ್ಣ ಭರವಸೆ ನೀಡಿದರೆ ಮಾತ್ರ ಸ್ಪರ್ಧೆ ಮಾಡಲು ಸಿದ್ಧ ಎಂದು ಹೇಳಿದ್ದಾರೆ. ಮತ್ತೂಂದೆಡೆ ಕೆಲವು ಮುಖಂಡರು ರಾಮಲಿಂಗಾರೆಡ್ಡಿ ಅಥವಾ ಎಂ.ಕೃಷ್ಣಪ್ಪ ಅವರಲ್ಲಿ ಒಬ್ಬರನ್ನು ಕಣಕ್ಕಿಳಿಸುವುದು ಸೂಕ್ತ ಎಂಬ ಸಲಹೆ ನೀಡಿದರು ಎನ್ನಲಾಗಿದೆ.

ಇನ್ನು ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಅಭ್ಯರ್ಥಿ ಕುರಿತಂತೆ ಪಕ್ಷದ ಮುಖಂಡರು ಹಾಲಿ ಸಂಸದ ಡಿ.ಕೆ. ಸುರೇಶ್‌ ಅವರ ಹೆಸರನ್ನು ಒಮ್ಮತದಿಂದ ಸೂಚಿಸಿದ್ದಾರೆ ಎನ್ನಲಾಗಿದೆ.

ಟಾಪ್ ನ್ಯೂಸ್

ಚಂದ್ರಯಾನ, ಗಗನಯಾನ: ಇಸ್ರೋದ ಮಹತ್ವದ ಪ್ಲಾನ್‌: ವಿ.ನಾರಾಯಣನ್‌

ಚಂದ್ರಯಾನ, ಗಗನಯಾನ: ಇಸ್ರೋದ ಮಹತ್ವದ ಪ್ಲಾನ್‌: ವಿ.ನಾರಾಯಣನ್‌

Los Angeles wildfires: ಕ್ಯಾಲಿಫೋರ್ನಿಯಾದಲ್ಲಿ ಕಾಳ್ಗಿಚ್ಚು… ಐವರು ಸಾವು

Los Angeles wildfires: ಕ್ಯಾಲಿಫೋರ್ನಿಯಾದಲ್ಲಿ ಕಾಳ್ಗಿಚ್ಚು… ಐವರು ಸಾವು

naxal-file

Naxal Activity Calm: ಪಶ್ಚಿಮ ಘಟ್ಟದ ಕಾನನದಲ್ಲಿ ನಕ್ಸಲ್‌ ನಿಶ್ಶಬ್ದ

purushotham-bilimale

Language Development: ಕನ್ನಡ ಕೆಲಸಕ್ಕೆ ಅಭಿವೃದ್ಧಿ ಪ್ರಾಧಿಕಾರದಲ್ಲಿ ಹಣವೇ ಇಲ್ಲ!

Naxals-CM-Office

Naxals Surrender: ಶರಣಾದ ನಕ್ಸಲರ ಪ್ರಕರಣಗಳಿಗೆ ತ್ವರಿತ ನ್ಯಾಯಾಲಯ: ಸಿಎಂ ಸಿದ್ದರಾಮಯ್ಯ

Sathish-jarakhoili

Dinner Politics: ಊಟ, ಅಜೆಂಡಾ ನಮ್ಮದು, ಬೇರೆಯವರಿಗೆ ಆತಂಕ ಏಕೆ?: ಸತೀಶ್‌ ಜಾರಕಿಹೊಳಿ

Congress-Symbol

CLP Meeting: ಜ.13ರಂದು ಕಾಂಗ್ರೆಸ್‌ ಶಾಸಕಾಂಗ ಪಕ್ಷದ ಸಭೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BNg-Mureder

Brutal: ಪತ್ನಿ, ಇಬ್ಬರು ಮಕ್ಕಳನ್ನು ಮಚ್ಚಿನಿಂದ ಕೊಚ್ಚಿ ಕೊಂದ ಪತಿ!

Naxals-Meet-Cm

Naxals Surrender: ಮುಖ್ಯಮಂತ್ರಿ ಸಮ್ಮುಖ ಶಸ್ತ್ರಾಸ್ತ್ರ ತ್ಯಜಿಸಿ ಶರಣಾದ 6 ನಕ್ಸಲರು

Bengaluru: ಪಾಲುದಾರನ ಕಿರುಕುಳ: ಉದ್ಯಮಿ ಆತ್ಮಹತ್ಯೆ

Bengaluru: ಪಾಲುದಾರನ ಕಿರುಕುಳ: ಉದ್ಯಮಿ ಆತ್ಮಹತ್ಯೆ

3

Atul Subhash Case: ಮೊಮ್ಮಗನನ್ನು ಟೆಕಿ ಅತುಲ್‌ ತಾಯಿಯ ಸುಪರ್ದಿಗೆ ವಹಿಸಲು ಸುಪ್ರೀಂ ನಕಾರ

BBMP-ED

illegal Investigation: ಬಿಬಿಎಂಪಿ ಮುಖ್ಯ ಎಂಜಿನಿಯರ್‌ ಕಚೇರಿ ಮೇಲೆ ಇ.ಡಿ. ದಾಳಿ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

ಚಂದ್ರಯಾನ, ಗಗನಯಾನ: ಇಸ್ರೋದ ಮಹತ್ವದ ಪ್ಲಾನ್‌: ವಿ.ನಾರಾಯಣನ್‌

ಚಂದ್ರಯಾನ, ಗಗನಯಾನ: ಇಸ್ರೋದ ಮಹತ್ವದ ಪ್ಲಾನ್‌: ವಿ.ನಾರಾಯಣನ್‌

Los Angeles wildfires: ಕ್ಯಾಲಿಫೋರ್ನಿಯಾದಲ್ಲಿ ಕಾಳ್ಗಿಚ್ಚು… ಐವರು ಸಾವು

Los Angeles wildfires: ಕ್ಯಾಲಿಫೋರ್ನಿಯಾದಲ್ಲಿ ಕಾಳ್ಗಿಚ್ಚು… ಐವರು ಸಾವು

naxal-file

Naxal Activity Calm: ಪಶ್ಚಿಮ ಘಟ್ಟದ ಕಾನನದಲ್ಲಿ ನಕ್ಸಲ್‌ ನಿಶ್ಶಬ್ದ

purushotham-bilimale

Language Development: ಕನ್ನಡ ಕೆಲಸಕ್ಕೆ ಅಭಿವೃದ್ಧಿ ಪ್ರಾಧಿಕಾರದಲ್ಲಿ ಹಣವೇ ಇಲ್ಲ!

courts

Sullia: ಮಗುವಿಗೆ ಸುಟ್ಟು ಗಾಯ ಮಾಡಿದ್ದ ತಾಯಿ; ಆರೋಪ ಸಾಬೀತು; ಶಿಕ್ಷೆ ಪ್ರಕಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.