ಶಾಲೆ ದುರವಸ್ಥೆ ಬಗ್ಗೆ ಲೋಕಾದಲ್ಲಿ ಸ್ವಯಂ ಪ್ರೇರಿತ ದೂರು ದಾಖಲು
Team Udayavani, Jun 26, 2017, 11:25 AM IST
ಬೆಂಗಳೂರು: ಮಾಗಡಿ ರಸ್ತೆಯ ಮಾಚೋಹಳ್ಳಿಯಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಕಟ್ಟಡ ಕುಸಿದು ಬೀಳುವ ಹಂತದಲ್ಲಿದ್ದರೂ ಸೂಕ್ತ ಕ್ರಮಕ್ಕೆ ಮುಂದಾಗದ ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ನಗರ ಜಿಲ್ಲಾ ಪಂಚಾಯ್ತಿ ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ನ್ಯಾ.ಪಿ.ವಿಶ್ವನಾಥ ಶೆಟ್ಟಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಶಾಲೆಯ ದುರವಸ್ಥೆ ಕುರಿತು ಲೋಕಾಯುಕ್ತರು ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದ್ದಾರೆ. ಉತ್ತಮ ಶಿಕ್ಷಣದ ಕನಸು ಕಟ್ಟಿಕೊಂಡು ಶಾಲೆಗೆ ದಾಖಲಾಗಿರುವ ಮಕ್ಕಳು ಕುಸಿದು ಬೀಳುವ ಹಂತದಲ್ಲಿರುವ ಕಟ್ಟಡದ ಕೊಠಡಿಗಳಲ್ಲಿ ಪಾಠ ಕೇಳುವ ದುಸ್ಥಿತಿಯಿರುವುದು ಬೇಸರದ ಸಂಗತಿ.
ಇದರಿಂದ 110 ಮಕ್ಕಳ ಜೀವಕ್ಕೆ ಅಪಾಯವಿರುವುದು ಮೇಲ್ನೋಟಕ್ಕೆ ಕಂಡು ಬರುತ್ತಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ. ಈ ನಿಟ್ಟಿನಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರು, ಆಡಳಿತವಿಭಾಗ, ಬೆಂಗಳೂರು ಜಿಲ್ಲಾ ಶಿಕ್ಷಣ ಆಯುಕ್ತರು, ಉತ್ತರ ಭಾಗದ ಕ್ಷೇತ್ರ ಶಿಕ್ಷಣಾಧಿಕಾರಿ, ಶಾಲೆಯ ಮುಖ್ಯೋಪಾಧ್ಯಯರು ಹಾಗೂ
ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗೆ ನೋಟೀಸ್ ಜಾರಿಗೊಳಿಸಿರುವ ಲೋಕಾಯುಕ್ತರು, ಶಿಥಿಲಾವಸ್ಥೆಯಲ್ಲಿರುವ ಶಾಲಾ ಕೊಠಡಿಗಳ ದುರಸ್ಥಿಗೆ ಮುಂದಾಗಿ ಮುಂದಿನ 10 ದಿನಗಳಲ್ಲಿ ವರದಿ ನೀಡುವಂತೆ ಆದೇಶಿಸಿದ್ದಾರೆ. ಜತೆಗೆ ಸ್ವಯಂಪ್ರೇರಿತ ದೂರಿನ ವಿಚಾರಣೆಯನ್ನು ಜುಲೈ 4ರಂದು ನಡೆಸುವುದಾಗಿಯೂ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Hosanagar: ಶೈಕ್ಷಣಿಕ ಪ್ರವಾಸಕ್ಕೆ ತೆರಳುತ್ತಿದ್ದ ಬಸ್ ಅಪಘಾತ: 29 ಮಂದಿಗೆ ಗಾಯ
ಸವದತ್ತಿ:ರೈಲು ಮಾರ್ಗ- ಸವದತ್ತಿಗೇ ಜಾಸ್ತಿ ಲಾಭ! ಆರ್ಥಿಕ ಅಭಿವೃದ್ಧಿಗೆ ನೆರವು…
Putturu: ಠಾಣೆ ಮುಂಭಾಗದಲ್ಲಿ ಜನರ ಆಕ್ರೋಶ; ಶಾಸಕ ಅಶೋಕ್ ಕುಮಾರ್ ರೈ ಭೇಟಿ
Explained:ಈ ವರ್ಷ ಸೌದಿ ಅರೇಬಿಯಾ 100ಕ್ಕೂ ಅಧಿಕ ವಿದೇಶಿಯರನ್ನು ನೇಣಿಗೇರಿಸಲು ಕಾರಣ ಏನು!
ಹೋಮ್ ವರ್ಕ್ ಮಾಡದ್ದಕ್ಕೆ ಥಳಿಸಿದ ಶಿಕ್ಷಕ; ಕಣ್ಣ ದೃಷ್ಟಿಯನ್ನೇ ಕಳೆದುಕೊಂಡ ವಿದ್ಯಾರ್ಥಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.