ಜಿಂಕೆ ಕೊಂಬು ಮಾರಾಟ: ಇಬ್ಬರ ಬಂಧನ
Team Udayavani, Nov 19, 2021, 11:48 AM IST
ಬೆಂಗಳೂರು: ಜಿಂಕೆ ಕೊಂಬುಗಳನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರನ್ನು ಸಿ.ಕೆ. ಅಚ್ಚುಕಟ್ಟು ಠಾಣೆ ಪೊಲೀಸರು ಬಂಧಿಸಿದ್ದಾರೆ.
ಕೊಳ್ಳೆಗಾಲದ ಸಿಂಗನಲ್ಲೂರಿನ ಮಾದಯ್ಯ (35), ಕನಕಪುರದ ತಿಮ್ಮಸಂದ್ರದ ರಮೇಶ್ (38) ಬಂಧಿತರು. ಆರೋಪಿಗಳಿಂದ 9 ಜತೆ ಜಿಂಕೆ ಕೊಂಬುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ಹೇಳಿದರು.
ಆರೋಪಿಗಳು ಬನಶಂಕರಿ 3ನೇ ಹಂತದ ಶ್ರೀಕಂಠೇಶ್ವರ ದೇವಸ್ಥಾನದ ಹಿಂಭಾಗದ ರಸ್ತೆ ಸಿ.ಕೆ.ಅಚ್ಚುಕಟ್ಟು ಬಸ್ ನಿಲ್ದಾಣದ ಹಿಂಭಾಗ ಜಿಂಕೆ ಕೊಂಬುಗಳನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದರು.
ಇದನ್ನೂ ಓದಿ:- ಮಂಗಳೂರು ವಿಮಾನ ನಿಲ್ದಾಣದಲ್ಲಿ ಲಕ್ಷಾಂತರ ರೂ. ಮೌಲ್ಯದ ಚಿನ್ನ ವಶ
ಈ ವೇಳೆ ಸ್ಥಳೀಯರೊಬ್ಬರು, ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಖಚಿತ ಮಾಹಿತಿ ಆಧಾರಿಸಿ ದಾಳಿ ನಡೆಸಿದ ಪೊಲೀಸರು ಇಬ್ಬರನ್ನು ಬಂಧಿಸಿ, ಚೀಲದಲ್ಲಿದ್ದ 9 ಜತೆ (18) ಜಿಂಕೆ ಕೊಂಬುಗಳನ್ನು ವಶಪಡಿಸಿಕೊಂಡಿದ್ದಾರೆ. ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Adalat: ಲೋಕ್ ಅದಾಲತ್‌ನಲ್ಲಿ 38.8 ಲಕ್ಷ ವ್ಯಾಜ್ಯ ಇತ್ಯರ್ಥ
Bengaluru: ಒಬಾಮಾ ಭೇಟಿ ವೇಳೆ ಸ್ಫೋಟ ಸಂಚು: ಡಿ.23ಕ್ಕೆ ಶಿಕ್ಷೆ ಪ್ರಕಟ
Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ
BSY: ಬಿಎಸ್‌ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್‌ಪಿಪಿ
IPS officer D. Roopa: ಸಿಂಧೂರಿ ಮೇಲೆ ಮಾನನಷ್ಟ ಪ್ರಕರಣ ದಾಖಲಿಸಿದ ರೂಪಾ
MUST WATCH
ಹೊಸ ಸೇರ್ಪಡೆ
Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು
Kadur: ದೇಗುಲ ಕಂಪೌಂಡ್ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ
Kaup: ಸಮಸ್ಯೆಗೆ ದೂರು ನೀಡಲು 1912ಗೆ ಕರೆ ಮಾಡಿ
Shirva: ಹೊಂಡ ಗುಂಡಿ, ಧೂಳುಮಯ ಕೋಡು-ಪಂಜಿಮಾರು ರಸ್ತೆ
BBK11: ಮಂಜು ಅವರದ್ದು ಚೀಪ್ ಮೆಂಟಲಿಟಿ ಎಂದ ರಜತ್; ಭವ್ಯ – ಮೋಕ್ಷಿತಾ ವಾಗ್ವಾದ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.