ಬಿ.ಬಿ.ಶಿವಪ್ಪ ಇನ್ನಿಲ್ಲ ; ಕಳಚಿದ ಬಿಜೆಪಿಯ ಹಿರಿಯ ಕೊಂಡಿ
Team Udayavani, Aug 1, 2017, 6:15 AM IST
ಬೆಂಗಳೂರು: ಬಿಜೆಪಿಯ ಹಿರಿಯ ಮುಖಂಡ ಹಾಗೂ ಸಜ್ಜನ ರಾಜಕಾರಣಿ ಬಿ.ಬಿ.ಶಿವಪ್ಪ (89) ಅವರು ನಿಧನರಾಗಿದ್ದು, ಭಾರತೀಯ ಜನತಾಪಕ್ಷದ ಹಿರಿಯ ಕೊಂಡಿಯೊಂದು ಕಳಚಿದೆ.
ವಯೋಸಹಜ ಅನಾರೋಗ್ಯಕ್ಕೆ ತುತ್ತಾಗಿ ನಗರದ ಸುಗುಣ ಆಸ್ಪತ್ರೆಗೆ ದಾಖಲಾಗಿದ್ದ ಅವರು ಬಹು ಅಂಗಾಂಗ ವೈಫಲ್ಯದಿಂದ ಸೋಮವಾರಬೆಳಗ್ಗೆ 11.15 ಕ್ಕೆ ಕೊನೆಯುಸಿರೆಳೆದರು. ಪತ್ನಿ ಸುಶೀಲ, ಪುತ್ರರಾದ ಪ್ರದೀಪ್, ಪ್ರತಾಪ್, ಸುಧೀರ ಸೇರಿ ಅಪಾರ ಅಭಿಮಾನಿಗಳನ್ನು ಶಿವಪ್ಪ ಅಗಲಿದ್ದಾರೆ.
ಮಂಗಳವಾರ ಹಾಸನ ಜಿಲ್ಲೆ ಸಕಲೇಶಪುರದ ಕುಂಬರಹಳ್ಳಿ ಎಸ್ಟೇಟ್‌ನಲ್ಲಿಪಾರ್ಥಿವ ಶರೀರದ ಅಂತ್ಯಕ್ರಿಯೆ ನಡೆಯಲಿದೆ.
ನಿಧನದ ಸುದ್ದಿ ತಿಳಿಯುತ್ತಿದ್ದಂತೆ ವಿವಿಧ ಪಕ್ಷದ ಮುಖಂಡರು, ಶಿವಪ್ಪ ಅವರ ಒಡನಾ ಡಿಗಳು ಆಸ್ಪತ್ರೆಗೆ ಧಾವಿಸಿ ಅಂತಿಮ ದರ್ಶನ ಪಡೆದು ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು.
ಹದಿನೈದು ದಿನಗಳಿಂದ ಆಸ್ಪತ್ರೆಯಲ್ಲಿದ್ದ ಶಿವಪ್ಪ ಅವರ ಬಯಕೆ ತಮ್ಮ ಜೀವನದ ಕೊನೆಯುಸಿರಲ್ಲಿ ಹುಟ್ಟೂರಿನಲ್ಲೇ ಕಳೆಯಬೇಕು
ಎಂಬುದಾಗಿತ್ತು. ಆದರೆ, ದಿನದಿಂದ ದಿನಕ್ಕೆ ಆರೋಗ್ಯ ಏರುಪೇರಾಗುತ್ತಿದ್ದ ಕಾರಣ ವೈದ್ಯರು ಒಪ್ಪಿರಲಿಲ್ಲ. ಆದರೆ, ಸೋಮವಾರ ಬೆಳಗ್ಗೆ ಹುಟ್ಟೂರಿಗೆ ಕರೆದೊಯ್ಯಲು ಕುಟುಂಬಸ್ಥರು ಅನುಮತಿ ಕೇಳಿದ್ದರು. ಆದರೆ ವಿಧಿ ಇದಕ್ಕೆ ಅವಕಾಶವನ್ನೇ ನೀಡಲಿಲ್ಲ. ಸಾವಿನಲ್ಲೂ ಮಾನವೀಯತೆ ಮೆರೆದ ಶಿವಪ್ಪ ಅವರು ತಮ್ಮ ಕಣ್ಣುಗಳನ್ನು ದಾನ ಮಾಡಿದ್ದಾರೆ.
ಶಿವಪ್ಪ ನಿಧನದ ಸುದ್ದಿ ಕೇಳಿ ತೀವ್ರ ಆಘಾತವಾಗಿದೆ. ಕರ್ನಾಟಕದಲ್ಲಿ ಬಿಜೆಪಿ ಕಟ್ಟಿ ಬೆಳೆಸಿದ ನಾಯಕರು ಅವರು. 5 ದಶಕಗಳ ಕಾಲ ಬಿಜೆಪಿಯಲ್ಲಿ ಸಕ್ರಿಯರಾಗಿದ್ದ ಅವರ ಸೇವೆ, ಮಾರ್ಗ ದರ್ಶನವನ್ನು ಪಕ್ಷ ಸದಾ ಸ್ಮರಿಸುತ್ತದೆ.
– ಬಿ.ಎಸ್.ಯಡಿಯೂರಪ್ಪ,ಬಿಜೆಪಿ ರಾಜ್ಯಾಧ್ಯಕ್ಷ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli: ಮನೆ ದರೋಡೆಗೆ ಯತ್ನಿಸಿದ ದರೋಡಕೋರನ ಕಾಲಿಗೆ ಗುಂಡೇಟು
Davangere: ಉತ್ತಮ ಹಿಂಗಾರು: ಬಂಪರ್ ಇಳುವರಿ ನಿರೀಕ್ಷೆಯಲ್ಲಿ ಬೆಳೆಗಾರರು
Honey Trap; ಗುತ್ತಿಗೆದಾರನನ್ನು ಟೀಗೆ ಕರೆದು ಖೆಡ್ಡಾಕ್ಕೆ ಕೆಡವಿದಳು!
RTO; ಫಿಟ್‌ನೆಸ್ ಸರ್ಟಿಫಿಕೇಟ್‌ಗಿನ್ನು ಆರ್‌ಟಿಒ ಬೇಕಿಲ್ಲ!
High Court: ತೃತೀಯ ಲಿಂಗಿಗಳ ಜನನ, ಮರಣ ಪ್ರಮಾಣ ಪತ್ರದಲ್ಲಿ ಮಾರ್ಪಾಡು ಮಾಡಿ; ಹೈಕೋರ್ಟ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.