ಪತ್ರಕರ್ತೆ ಗೌರಿ ಲಂಕೇಶ್‌ ಹತ್ಯೆ: ಬೈಕ್‌ನಲ್ಲಿ ಬಂದವರಿಂದ ದುಷ್ಕೃತ್ಯ

Team Udayavani, Sep 6, 2017, 7:25 AM IST

Lankesh-5-8.jpg

ಬೆಂಗಳೂರು: ಪತ್ರಕರ್ತೆ ಹಾಗೂ ಚಿಂತಕಿ ಗೌರಿ ಲಂಕೇಶ್‌ ಅವರನ್ನು ದುಷ್ಕರ್ಮಿಗಳು ಗುಂಡಿಟ್ಟು ಹತ್ಯೆ ಮಾಡಿರುವ ಘಟನೆ ಮಂಗಳವಾರ ರಾತ್ರಿ ನಡೆದಿದೆ. ನಗರದ ರಾಜರಾಜೇಶ್ವರಿ ನಗರದಲ್ಲಿ ರಾತ್ರಿ 7.45ರ ವೇಳೆ ಹೊರಗೆ ಹೋಗಿದ್ದ ಗೌರಿ ಲಂಕೇಶ್‌, ಕಾರಿನಿಂದ ಇಳಿದು ಮನೆ ಬೀಗ ತೆಗೆಯಲು ಮುಂದಾಗುತ್ತಿದ್ದಂತೆ, ಬೈಕ್‌ನಲ್ಲಿ ಬಂದ ಮೂವರು ದುಷ್ಕರ್ಮಿಗಳು ದಿಢೀರ್‌ ದಾಳಿ ನಡೆಸಿದ್ದಾರೆ. ಎದೆ, ಹಣೆ ಹಾಗೂ ಹೃದಯ ಭಾಗಕ್ಕೆ ಏಳು ಸುತ್ತು ಗುಂಡು ಹಾರಿಸಿ ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಈಗಾಗಲೇ ತನಿಖೆಗೆ ಆದೇಶಿಸಿದ್ದಾಗಿ ತಿಳಿಸಿದ್ದಾರೆ.

ಗುಂಡಿನ ದಾಳಿಯಿಂದ ತೀವ್ರ ಗಾಯಗೊಂಡ ಗೌರಿ ಲಂಕೇಶ್‌ ಸ್ಥಳದಲ್ಲೇ ಕುಸಿದು ಬಿದ್ದಿದ್ದರು. ರಕ್ತದ ಮಡುವಿನಲ್ಲಿ ಬಿದ್ದಿದ್ದ ಅವರನ್ನು ಆಸ್ಪತ್ರೆಗೆ ಸಾಗಿಸುವ ಯತ್ನ ನಡೆಯಿತಾದರೂ ಅಷ್ಟರಲ್ಲಿ ಪ್ರಾಣ ಬಿಟ್ಟಿದ್ದರು. ದುಷ್ಕರ್ಮಿಗಳು ಹತ್ತಿರದಿಂದಲೇ ಗುಂಡು ಹಾರಿಸಿದ್ದು, ಎದೆ ಭಾಗಕ್ಕೆ ಎರಡು, ಹಣೆಗೆ ಒಂದು ಗುಂಡು ತಗುಲಿವೆ. ಉಳಿದ ನಾಲ್ಕು ಗುಂಡುಗಳು ಮನೆಯ ಗೋಡೆಗೆ ತಾಗಿವೆ. ದುಷ್ಕರ್ಮಿಗಳು ಮಧ್ಯಾಹ್ನದಿಂದಲೇ ರಾಜರಾಜೇಶ್ವರಿ ನಗರ ಸುತ್ತಮುತ್ತ ಓಡಾಡಿಕೊಂಡು, ಗೌರಿ ಲಂಕೇಶ್‌ ಅವರ ಚಲನವಲನ ಗಮನಿಸಿ, ಅವರ ಆಗಮನಕ್ಕಾಗಿ ಕಾದು ಕುಳಿತಿದ್ದರು ಎಂದು ಹೇಳಲಾಗುತ್ತಿದೆ. ಘಟನೆಗೆ ಸ್ಪಷ್ಟ ಕಾರಣ ತಿಳಿದು ಬಂದಿಲ್ಲ. ಆದರೆ, ಪ್ರಗತಿಪರ ಸಂಘಟನೆಗಳು, ಚಿಂತಕ ಡಾ| ಕಲಬುರ್ಗಿ ಅವರ ಹತ್ಯೆ ಮಾದರಿಯಲ್ಲೇ ಗೌರಿ ಲಂಕೇಶ್‌ ಅವರನ್ನು ಹತ್ಯೆ ಮಾಡಲಾಗಿದೆ ಎಂದು ಆರೋಪಿಸಿವೆ.

ಈ ಮಧ್ಯೆ ಗೌರಿ ಲಂಕೇಶ್‌ ಅವರ ಹತ್ಯೆಯನ್ನು ಪಶ್ಚಿಮ ವಿಭಾಗದ ಡಿಸಿಪಿ ಅನುಚೇತ್‌ ಸ್ಪಷ್ಟಪಡಿಸಿದ್ದು, ನಗರದಲ್ಲಿ ನಾಕಾಬಂಧಿ ಮಾಡಿ ಆರೋಪಿಗಳ ಪತ್ತೆಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ. ಘಟನೆ ಹಿನ್ನೆಲೆಯಲ್ಲಿ ರಾಜರಾಜೇಶ್ವರಿ ನಗರ ಸುತ್ತಮುತ್ತಲಿನ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ಬಿಗಿ ಪೊಲೀಸ್‌ ಬಂದೋಬಸ್ತ್ ನಿಯೋಜಿಸಲಾಗಿದೆ. ಹಿರಿಯ ಪೊಲೀಸ್‌ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಆರೋಪಿಗಳ ಪತ್ತೆಗೆ ವಿಶೇಷ ತಂಡ ರಚಿಸಲಾಗಿದೆ. ರಾಜರಾಜೇಶ್ವರಿ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಗೌರಿ ಲಂಕೇಶ್‌ ನಿವಾಸದ ಸುತ್ತುಮುತ್ತಲ ಮನೆ ಹಾಗೂ ರಸ್ತೆಗಳಲ್ಲಿ ಅಳವಡಿಸಿದ್ದ ಸಿಸಿ ಟಿವಿ ಕೆಮರಾ ಮಾಹಿತಿ ಪಡೆಯಲು ಸೂಚನೆ ನೀಡಲಾಗಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾಂಗ್ರೆಸ್‌ ಕಾರ್ಯಾಧ್ಯಕ್ಷ ದಿನೇಶ್‌ ಗುಂಡೂರಾವ್‌, ವಿಪಕ್ಷ ನಾಯಕರಾದ ಜಗದೀಶ್‌ ಶೆಟ್ಟರ್‌, ಈಶ್ವರಪ್ಪ, ಸಾಹಿತಿಗಳಾದ ಡಾ| ಚಂದ್ರಶೇಖರ ಪಾಟೀಲ್‌, ಎಸ್‌. ಜಿ. ಸಿದ್ದರಾಮಯ್ಯ, ಕೆ. ಮರಳುಸಿದ್ದಪ್ಪ, ಬಂಜಗೆರೆ ಜಯಪ್ರಕಾಶ್‌, ಕೆ. ನೀಳಾ, ನರೇಂದ್ರ ನಾಯಕ್‌ ಸಹಿತ ಹಲವರು ಗೌರಿ ಲಂಕೇಶ್‌ ಹತ್ಯೆ ಖಂಡಿಸಿದ್ದು, ಇದು ಹೇಯ ಕೃತ್ಯ ಎಂದು ಹೇಳಿದ್ದಾರೆ.

ಲಂಕೇಶ್‌ ಪುತ್ರಿ
ಹಿರಿಯ ಪತ್ರಕರ್ತ ದಿ| ಲಂಕೇಶ್‌ ಅವರ ಪುತ್ರಿಯಾದ ಗೌರಿ ಲಂಕೇಶ್‌ ಪ್ರಗತಿಪರ ಚಳವಳಿಗಳಲ್ಲಿ ಸಕ್ರೀಯವಾಗಿ ಪಾಲ್ಗೊಳ್ಳುತ್ತಿದ್ದರು. ಜತೆಗೆ ನಕ್ಸಲೀಯ ಚಟುವಟಿಕೆಗಳಿಂದ ದೂರವಾಗಿ ಸಮಾಜದ ಮುಖ್ಯವಾಹಿನಿಗೆ ಬರಲು ಬಯಸಿದ ನೂರ್‌ ಶ್ರೀಧರ್‌ ಹಾಗೂ ಸಿರಿಮನೆ ನಾಗರಾಜ್‌ ಸಹಿತ ಹಲವರ ಪರ ಸರಕಾರದ ಜತೆ ಮಾತು ಕತೆ ನಡೆಸಿ ಶರಣಾಗತಿ ಮಾಡಿಸಿದ್ದರು. ಲಂಕೇಶ್‌ ಅವರ ನಿಧನದ ಅನಂತರ ತಮ್ಮದೇ ಸಂಪಾದಕತ್ವದ ಗೌರಿ ಲಂಕೇಶ್‌ ಪತ್ರಿಕೆ ಆರಂಭಿಸಿದ್ದರು.

ತನಿಖೆಗೆ ಆದೇಶಿಸಿದ್ದೇನೆ
ಪ್ರಗತಿಪರ ಚಿಂತಕಿಯ ಹತ್ಯೆ ಖಂಡನೀಯ. ಘಟನೆ ಬಗ್ಗೆ ಶೀಘ್ರದಲ್ಲಿಯೇ ಮೂರು ತಂಡಗಳನ್ನು ರಚಿಸಿ ತನಿಖೆ ನಡೆಸಿ ವರದಿ ನೀಡುವಂತೆ ಆದೇಶಿಸಿದ್ದೇನೆ.
– ಸಿದ್ದರಾಮಯ್ಯ

ಹತ್ಯೆ ಖಂಡನೀಯ. ತನಿಖೆ ಅನಂತರ ಯಾವ ಕಾರಣಕ್ಕೆ ಹತ್ಯೆಯಾಗಿದೆಯೋ ಗೊತ್ತಾಗಲಿದೆ. ಸೈದ್ಧಾಂತಿಕ ವಿಚಾರಕ್ಕೋ ಅಥವಾ ವೈಯಕ್ತಿಕ ವಿಚಾರಕ್ಕೋ ಎಂಬುದು ತನಿಖೆಯ ಅನಂತರವಷ್ಟೇ ಗೊತ್ತಾಗಲಿದೆ. ಆರೋಪಿಗಳು ಬೆಂಗಳೂರು ಬಿಟ್ಟು ಹೊರ ಹೋಗಲು ಸಾಧ್ಯವಿಲ್ಲ. ಆದಷ್ಟು ಬೇಗ ಬಂಧಿಸಲಾಗುವುದು.
– ರಾಮಲಿಂಗಾ ರೆಡ್ಡಿ, ಗೃಹ ಸಚಿವ

ಟಾಪ್ ನ್ಯೂಸ್

Mumbai: ಚಲಿಸುತ್ತಿರುವಾಗಲೇ ರಸ್ತೆ ಮಧ್ಯೆ ಹೊತ್ತಿ ಉರಿದ ಲ್ಯಾಂಬೋರ್ಘಿನಿ ಕಾರು!

Mumbai: ಚಲಿಸುತ್ತಿರುವಾಗಲೇ ರಸ್ತೆ ಮಧ್ಯೆ ಹೊತ್ತಿ ಉರಿದ ಲ್ಯಾಂಬೋರ್ಘಿನಿ ಕಾರು!

INDvAUS: ಯುವ ಆಟಗಾರನ ಕೆಣಕಿ ತಪ್ಪು ಮಾಡಿದರೆ ಕೊಹ್ಲಿ? ಶಿಕ್ಷೆ ಗ್ಯಾರಂಟಿ!

INDvAUS: ಯುವ ಆಟಗಾರನ ಕೆಣಕಿ ತಪ್ಪು ಮಾಡಿದರೆ ಕೊಹ್ಲಿ? ಶಿಕ್ಷೆ ಗ್ಯಾರಂಟಿ!

ಪತ್ನಿ ಊರಿನತ್ತ ಪ್ರಯಾಣ ಬೆಳೆಸಿದರೆ… ಸಾವಿನ ಮನೆಯ ಕದ ತಟ್ಟಿದ ಯೋಧ ನಾಗಪ್ಪ ಮರೆಗೊಂಡ

ಪತ್ನಿ ಊರಿನತ್ತ ಪ್ರಯಾಣ ಬೆಳೆಸಿದರೆ… ಸಾವಿನ ಮನೆಯ ಕದ ತಟ್ಟಿದ ಯೋಧ ನಾಗಪ್ಪ ಮರೆಗೊಂಡ

4-soldier

Mahalingpur: ಇಂದು ಮೃತ ಯೋಧ ಮಹೇಶ ಅಂತ್ಯಕ್ರಿಯೆ; ಯೋಧನ ಮನೆಗೆ ಸಚಿವ ತಿಮ್ಮಾಪುರ ಭೇಟಿ

Max Movie: ಸಖತ್‌ ರೆಸ್ಪಾನ್ಸ್‌ ಪಡೆದ ಕಿಚ್ಚನ ʼಮ್ಯಾಕ್ಸ್‌ʼ ಮೊದಲ ದಿನ ಗಳಿಸಿದ್ದೆಷ್ಟು?

Max Movie: ಸಖತ್‌ ರೆಸ್ಪಾನ್ಸ್‌ ಪಡೆದ ಕಿಚ್ಚನ ʼಮ್ಯಾಕ್ಸ್‌ʼ ಮೊದಲ ದಿನ ಗಳಿಸಿದ್ದೆಷ್ಟು?

MT Vasudevan Nair: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ

Updated: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ

Max movie review

Max movie review: ಮಾಸ್‌ ಮನಸುಗಳಿಗೆ ʼಮ್ಯಾಕ್ಸ್‌ʼ ಅಭಿಷೇಕ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪತ್ನಿ ಊರಿನತ್ತ ಪ್ರಯಾಣ ಬೆಳೆಸಿದರೆ… ಸಾವಿನ ಮನೆಯ ಕದ ತಟ್ಟಿದ ಯೋಧ ನಾಗಪ್ಪ ಮರೆಗೊಂಡ

ಪತ್ನಿ ಊರಿನತ್ತ ಪ್ರಯಾಣ ಬೆಳೆಸಿದರೆ… ಸಾವಿನ ಮನೆಯ ಕದ ತಟ್ಟಿದ ಯೋಧ ನಾಗಪ್ಪ ಮರೆಗೊಂಡ

4-soldier

Mahalingpur: ಇಂದು ಮೃತ ಯೋಧ ಮಹೇಶ ಅಂತ್ಯಕ್ರಿಯೆ; ಯೋಧನ ಮನೆಗೆ ಸಚಿವ ತಿಮ್ಮಾಪುರ ಭೇಟಿ

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು

Basavaraj-horatti

Negotiation: ಸಿ.ಟಿ.ರವಿ – ಸಚಿವೆ ಹೆಬ್ಬಾಳ್ಕರ್‌ ಸಂಧಾನಕ್ಕೆ ಸಭಾಪತಿ ಹೊರಟ್ಟಿ ಪ್ರಯತ್ನ?

BGV-Gandhi-bharatha

Congress Session: ಬೆಳಗಾವಿಯಲ್ಲಿಂದು, ನಾಳೆ ಗಾಂಧಿ ಮಹಾಧಿವೇಶನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Mumbai: ಚಲಿಸುತ್ತಿರುವಾಗಲೇ ರಸ್ತೆ ಮಧ್ಯೆ ಹೊತ್ತಿ ಉರಿದ ಲ್ಯಾಂಬೋರ್ಘಿನಿ ಕಾರು!

Mumbai: ಚಲಿಸುತ್ತಿರುವಾಗಲೇ ರಸ್ತೆ ಮಧ್ಯೆ ಹೊತ್ತಿ ಉರಿದ ಲ್ಯಾಂಬೋರ್ಘಿನಿ ಕಾರು!

Christmas: ಸಿಲಿಕಾನ್‌ ಸಿಟಿಯಲ್ಲಿ ಕಳೆಗಟ್ಟಿದ ಕ್ರಿಸ್‌ಮಸ್‌ ಸಂಭ್ರಮ

Christmas: ಸಿಲಿಕಾನ್‌ ಸಿಟಿಯಲ್ಲಿ ಕಳೆಗಟ್ಟಿದ ಕ್ರಿಸ್‌ಮಸ್‌ ಸಂಭ್ರಮ

INDvAUS: ಯುವ ಆಟಗಾರನ ಕೆಣಕಿ ತಪ್ಪು ಮಾಡಿದರೆ ಕೊಹ್ಲಿ? ಶಿಕ್ಷೆ ಗ್ಯಾರಂಟಿ!

INDvAUS: ಯುವ ಆಟಗಾರನ ಕೆಣಕಿ ತಪ್ಪು ಮಾಡಿದರೆ ಕೊಹ್ಲಿ? ಶಿಕ್ಷೆ ಗ್ಯಾರಂಟಿ!

ಪತ್ನಿ ಊರಿನತ್ತ ಪ್ರಯಾಣ ಬೆಳೆಸಿದರೆ… ಸಾವಿನ ಮನೆಯ ಕದ ತಟ್ಟಿದ ಯೋಧ ನಾಗಪ್ಪ ಮರೆಗೊಂಡ

ಪತ್ನಿ ಊರಿನತ್ತ ಪ್ರಯಾಣ ಬೆಳೆಸಿದರೆ… ಸಾವಿನ ಮನೆಯ ಕದ ತಟ್ಟಿದ ಯೋಧ ನಾಗಪ್ಪ ಮರೆಗೊಂಡ

4-soldier

Mahalingpur: ಇಂದು ಮೃತ ಯೋಧ ಮಹೇಶ ಅಂತ್ಯಕ್ರಿಯೆ; ಯೋಧನ ಮನೆಗೆ ಸಚಿವ ತಿಮ್ಮಾಪುರ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.