ಪತ್ರಕರ್ತ ರವಿ ಬೆಳಗೆರೆಗೆ ಐಸಿಯುನಲ್ಲಿ ಚಿಕಿತ್ಸೆ
Team Udayavani, Dec 15, 2017, 6:00 AM IST
ಬೆಂಗಳೂರು: ಸುಪಾರಿ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಹಾಯ್ ಬೆಂಗಳೂರು ವಾರ ಪತ್ರಿಕೆಯ ಸಂಪಾದಕ ರವಿಬೆಳಗೆರೆಗೆ ಗುರುವಾರ ಬಿಡುಗಡೆ ಭಾಗ್ಯವಿಲ್ಲ.
ಪ್ರಕರಣ ಸಂಬಂಧ ಬುಧವಾರ ವಿಚಾರಣೆ ನಡೆಸಿದ ನ್ಯಾಯಾಲಯ ಆರೋಪಿಗೆ ಷರತ್ತು ಬದ್ಧ ಮಧ್ಯಂತರ ಜಾಮೀನು ನೀಡಿದ್ದರೂ ಇದುವರೆಗೂ ಜೈಲಿನ ಅಧಿಕಾರಿಗಳಿಗೆ ನ್ಯಾಯಾಲಯದಿಂದ ಅಧಿಕೃತವಾಗಿ ಮಾಹಿತಿ ರವಾನೆಯಾಗದ ಹಿನ್ನೆಲೆಯಲ್ಲಿ ಜೈಲಿನ ಸಿಬ್ಬಂದಿ ಸುಪರ್ದಿಯಲ್ಲೇ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಲಾಗಿದೆ.
ಮಧುಮೇಹ, ರಕ್ತದೊತ್ತಡ ಹಾಗೂ ಹೃದಯ ಸಂಬಂಧಿ ಕಾಯಿಲೆಯಿಂದ ತೀವ್ರ ಅಸ್ವಸ್ಥಗೊಂಡಿರುವ ರವಿ ಬೆಳಗೆರೆ ಜಯದೇವ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಗುರುವಾರ ಬೆಳಗ್ಗೆ ರವಿಬೆಳಗೆರೆ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ತುರ್ತುನಿಗಾ ಘಟಕದಲ್ಲಿ ಚಿಕಿತ್ಸೆ ಕೊಡಲಾಗಿದ್ದು, ವೈದ್ಯರಾದ ಡಾ.ಆಶಾ ಮತ್ತು ನಾಗೇಶ್ ಚಿಕಿತ್ಸೆ ನೀಡುತ್ತಿದ್ದಾರೆ. ಇದೇ ವೇಳೆ ಇಬ್ಬರು ಪೇದೆಗಳನ್ನು ಭದ್ರತೆಗಾಗಿ ನಿಯೋಜಿಸಲಾಗಿದೆ.
ಈ ಮಧ್ಯೆ ಪ್ರಕರಣ ಸಂಬಂಧ ಪತ್ರಕರ್ತ ಸುನಿಲ್ ಹೆಗ್ಗರವಳ್ಳಿ ಗುರುವಾರ ಮೆಯೋ ಹಾಲ್‌ನಲ್ಲಿರುವ ನ್ಯಾಯಾಲಯಕ್ಕೆ ಹಾಜರಾಗಿ ತಮ್ಮ ಹೇಳಿಕೆ ದಾಖಲಿಸಿದ್ದಾರೆ. ಸಿಆರ್‌ಪಿಸಿ 164ರ ಪ್ರಕಾರ ನ್ಯಾ.ಗೋಪಾಲಕೃಷ್ಣ ಭಟ್ ಅವರ ಎದುರು ಹೇಳಿಕೆ ದಾಖಲಿಸಿದ್ದಾರೆ.
ಈ ಕುರಿತು ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಸುನಿಲ್ ಹೆಗ್ಗರವಳ್ಳಿ, ರವಿಬೆಳಗೆರೆ ಮತ್ತು ನಿಮ್ಮ ನಡುವೆ ಎಷ್ಟು ವರ್ಷದ ಪರಿಚಯ ಹಾಗೂ ನಿಮಗೆ ಸುಪಾರಿ ನೀಡಲು ಕಾರಣವೇನು ಎಂಬಂತೆ ಇತರೆ ಪ್ರಮುಖ ಪ್ರಶ್ನೆಗಳನ್ನು ನ್ಯಾಯಾಧೀಶರು ಕೇಳಿದ್ದಾರೆ. ಅದಕ್ಕೆ ಸೂಕ್ತ ಉತ್ತರ ನೀಡಲಾಗಿದೆ ಎಂದಷ್ಟೇ ತಿಳಿಸಿದ್ದಾರೆ.
ರವಿ ಬೆಳಗೆರೆ ವಿರುದ್ಧ ಬಾಡಿ ವಾರಂಟ್ ಜಾರಿ
ಸಾಗರ: ಪತ್ರಕರ್ತ ರವಿ ಬೆಳಗೆರೆ ಅವರಿಗೆ ಶಿವಮೊಗ್ಗ ಜಿಲ್ಲೆಯ ಸಾಗರದಿಂದಲೂ ಸಂಕಷ್ಟ ಎದುರಾಗಿದ್ದು, ಇಲ್ಲಿನ ನ್ಯಾಯಾಲಯ ಅವರ ವಿರುದ್ಧ ಬಾಡಿ ವಾರೆಂಟ್ ಜಾರಿಗೊಳಿಸಿದೆ. 2009ರಲ್ಲಿ ಬೆಳಗೆರೆ ತಮ್ಮ ಪತ್ರಿಕೆಯಲ್ಲಿ ಬರೆದ ಲೇಖನವೊಂದಕ್ಕೆ ಸಂಬಂ ಧಿಸಿದಂತೆ ನಗರದ ದಸಂಸ ಲಿಂಗರಾಜ್ ಅದೇ ವರ್ಷ ಇಲ್ಲಿನ ಹೆಚ್ಚುವರಿ ಜೆಎಂಎಫ್ ನ್ಯಾಯಾಲಯದಲ್ಲಿ ದೂರು ಸಲ್ಲಿಸಿದ್ದರು. ಈ ಪ್ರಕರಣದ ವಿಚಾರಣೆಗೆ ಬೆಳಗೆರೆ ಗೈರುಹಾಜರಾಗಿದ್ದರು. ನೊಟೀಸ್ ನೀಡಿದ್ದರೂ ಹಾಜರಾಗದ್ದರಿಂದ ಬೆಳಗೆರೆ ವಿರುದ್ಧ ಕ್ರಮಕ್ಕೆ ಅರ್ಜಿದಾರರು ಮನವಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ ನ್ಯಾಯಾಲಯ ಡಿ. 12ರಂದು ಬಾಡಿ ವಾರಂಟ್ ಜಾರಿ ಮಾಡಿದೆ.
ಈಗಾಗಲೇ ಪ್ರಕರಣವೊಂದರ ಆರೋಪ ಹೊತ್ತು ಬೆಂಗಳೂರಿನ ಜೈಲಿನಲ್ಲಿರುವ ಬೆಳಗೆರೆಯವರನ್ನು ಸುಪರ್ದಿಗೆ ತೆಗೆದುಕೊಳ್ಳಬಹುದು ಎಂದು ನ್ಯಾಯಾಲಯ ಸ್ಥಳೀಯ ಪೊಲೀಸರಿಗೆ ಆದೇಶಿಸಿತ್ತು. ರವಿ ಬೆಳಗೆರೆ ಪರ ವಕೀಲರು ಆಕ್ಷೇಪಣಾ ಅರ್ಜಿ ಸಲ್ಲಿಸಿದ್ದು, ಬೆಳಗೆರೆ ಅವರಿಗೆ ಆರೋಗ್ಯ ಸರಿ ಇಲ್ಲದ ಹಿನ್ನೆಲೆಯಲ್ಲಿ ಬಾಡಿ ವಾರಂಟ್‌ನ್ನು ರದ್ದುಗೊಳಿಸಬೇಕು ಎಂದು ವಿನಂತಿಸಿದ್ದಾರೆ. ಇದರ ವಿಚಾರಣೆ ನಡೆಯಬೇಕಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Naxalite: ಮುಂಡಗಾರು ಲತಾ ಸೇರಿ ಆರು ನಕ್ಸಲರು ಶೀಘ್ರ ಮುಖ್ಯವಾಹಿನಿಗೆ: ಪ್ರಕ್ರಿಯೆ ಚುರುಕು
Davanagere: ವಿಪಕ್ಷಗಳು ಆಧಾರವಿಲ್ಲದೆ ಆರೋಪ ಮಾಡಬಾರದು: ಸಿಎಂ ಸಿದ್ದರಾಮಯ್ಯ
Davanagere: ಯುವಜನೋತ್ಸವಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ
Private Bus fare: ಶೀಘ್ರದಲ್ಲೇ ಖಾಸಗಿ ಬಸ್ ಪ್ರಯಾಣ ದರವೂ ಏರಿಕೆ?
Minimum Temperature: ಬೆಂಗಳೂರಿನಲ್ಲಿ ಶೀಘ್ರ 11 ಡಿಗ್ರಿ ತಾಪ?: 12 ವರ್ಷದಲ್ಲೇ ದಾಖಲೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.