ಡಿಸಿಎಂ ವಿರುದ್ಧ ತಿರುಗಿ ಬಿದ್ದ ಹಿರಿಯ ಶಾಸಕರು
Team Udayavani, Jun 8, 2018, 6:30 AM IST
ಬೆಂಗಳೂರು: ಸಂಪುಟದಲ್ಲಿ ಅವಕಾಶ ತಪ್ಪಿದ ಹಿರಿಯ ಶಾಸಕರು ಉಪ ಮುಖ್ಯಮಂತ್ರಿ ಪರಮೇಶ್ವರ್ ವಿರುದ್ಧ ತಿರುಗಿ ಬಿದ್ದಿದ್ದಾರೆ.
ಹಿಂದಿನ ಕಾಂಗ್ರೆಸ್ ಸರ್ಕಾರದಲ್ಲಿ ಐದು ವರ್ಷ ಸಚಿವರಾಗಿ ಅಧಿಕಾರ ಅನುಭವಿಸಿದವರು ಹಾಗೂ ಪಕ್ಷ ಮತ್ತು
ಸರ್ಕಾರದ ವಿಷಯ ಬಂದಾಗ ಸಿದ್ದರಾಮಯ್ಯ ಪರವಾಗಿ ಮಾತನಾಡಿದ್ದ ಹಿರಿಯ ನಾಯಕರನ್ನು ಜಾಣತನದಿಂದಲೇ
ಸಂಪುಟದಿಂದ ಹೊರಗಿಟ್ಟು, ಹಿಂದಿನ ಸರ್ಕಾರದ ಅವಧಿಯಲ್ಲಿ ತಮಗಾದ ಅವಮಾನಕ್ಕೆ ಪರಮೇಶ್ವರ್ ಪ್ರತಿಕಾರ
ತೀರಿಸಿಕೊಂಡಿದ್ದಾರೆಂಬ ಮಾತುಗಳು ಕಾಂಗ್ರೆಸ್ ವಲಯದಲ್ಲಿ ಕೇಳಿ ಬರುತ್ತಿವೆ.
ಹಿರಿಯ ಶಾಸಕರಾಗಿರುವ ರಾಮಲಿಂಗಾರೆಡ್ಡಿ, ರೋಷನ್ ಬೇಗ್, ಎಚ್.ಕೆ. ಪಾಟೀಲ್, ಶಾಮನೂರು ಶಿವಶಂಕರಪ್ಪ,
ಎಂ.ಬಿ. ಪಾಟೀಲ್ ಹಾಗೂ ಚುನಾವಣೆ ಸಂದರ್ಭದಲ್ಲಿ ಸಿದ್ದರಾಮಯ್ಯ ಪರ ಮಾತನಾಡಿದ್ದ ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಅವರಿಗೆ ಸಚಿವ ಸ್ಥಾನ ಕೈ ತಪ್ಪಲು ಉಪ ಮುಖ್ಯಮಂತ್ರಿ ಪರಮೇಶ್ವರ್ ಕಾರಣ ಎಂಬ ಮಾತುಗಳು ಕೇಳಿ ಬರುತ್ತಿವೆ.
ಹಿಂದಿನ ಸರ್ಕಾರದಲ್ಲಿ ಉಪ ಮುಖ್ಯಮಂತ್ರಿಯಾಗಲು ಪರಮೇಶ್ವರ್ ಪ್ರಯತ್ನ ನಡೆಸಿದಾಗ ಸರ್ಕಾರದಲ್ಲಿ ಉಪ
ಮುಖ್ಯಮಂತ್ರಿ ಸ್ಥಾನ ಅಗತ್ಯವಿಲ್ಲ ಎಂದು ಸಿದ್ದರಾಮಯ್ಯ ಪರವಾಗಿ ಬಲವಾಗಿ ನಿಂತಿದ್ದರು, ಆ ಕಾರಣಕ್ಕಾಗಿ ಈಗ ಅವರನ್ನು ಸಂಪುಟದಿಂದ ದೂರ ಇಡುವಲ್ಲಿ ಪರಮೇಶ್ವರ್ ಯಶಸ್ವಿಯಾಗಿದ್ದಾರೆ. ಹಿರಿಯರನ್ನು ಸಂಪುಟದಿಂದ ಕೈ ಬಿಟ್ಟು ಪಕ್ಷದ ಕೆಲಸಕ್ಕೆ ತೊಡಗಿಸಿಕೊಳ್ಳಲಾಗುವುದು ಎಂದು ಪರಮೇಶ್ವರ್ ಹೇಳಿದಾಗ ಮೊದಲು ಅವರು ಸಚಿವ ಸ್ಥಾನ ಬಿಡಲಿ ಎಂದು ಎಚ್.ಕೆ.ಪಾಟೀಲ್ ಹೇಳಿದ್ದರು. ಹೀಗಾಗಿ, ಎಚ್. ಕೆ.ಪಾಟೀಲ್ ಅವರಿಗೂ ತಪ್ಪಿಸಲಾಗಿದೆ. ಅದೇ ರೀತಿ, ಸಿದ್ದರಾಮಯ್ಯ ಅವರನ್ನು ಬಲವಾಗಿ ಸಮರ್ಥಿಸಿದ್ದ ರಾಮಲಿಂಗಾ ರೆಡ್ಡಿಯವರಿಗೂ ಸಚಿವ ಸ್ಥಾನ ತಪ್ಪಿಸಿದ್ದಾರೆ.
ಚುನಾವಣೆಗೂ ಮೊದಲು ಪರಮೇಶ್ವರ್ ಕೆಪಿಸಿಸಿ ಅಧ್ಯಕ್ಷರಾಗಿ ಮುಂದುವರಿಯಲು ಪಕ್ಷದ ಕಾರ್ಯಕಾರಿಣಿಯಲ್ಲಿಯೇ ರೋಷನ್ ಬೇಗ್ ಬಹಿರಂಗವಾಗಿ ವಿರೋಧ ಮಾಡಿದ್ದರು. ದಿನೇಶ್ ಗುಂಡೂರಾವ್ ಕೂಡ ಸಿದ್ದರಾಮಯ್ಯ ಅವರೇ ಮುಂದಿನ ಮುಖ್ಯಮಂತ್ರಿ ಎಂದು ಚುನಾವಣೆಗೂ ಮೊದಲೇ ಬಹಿರಂಗವಾಗಿಯೇ ಹೇಳಿದ್ದರು.
ಇದನ್ನೆಲ್ಲ ಮನಸ್ಸಿನಲ್ಲಿಟ್ಟುಕೊಂಡಿದ್ದ ಪರಮೇಶ್ವರ್ ಈ ಬಾರಿ ಜಾಣತನದಿಂದ ಸಿದ್ದರಾಮಯ್ಯ ಆಪ್ತರನ್ನು ಸಂಪುಟದಿಂದ ಹೊರಗಿಡುವ ಕೆಲಸ ಮಾಡಿದ್ದಾರೆ ಎನ್ನಲಾಗಿದೆ.
ಇದೀಗ ಹಿರಿಯ ಶಾಸಕರು ಡಾ.ಜಿ.ಪರಮೇಶ್ವರ್ ಅವರ ವಿರುದ್ಧ ತಿರುಗಿ ಬಿದ್ದಿದ್ದು ಉಪ ಮುಖ್ಯಮಂತ್ರಿಯಾಗಿರುವ
ಅವರು ಕೆಪಿಸಿಸಿ ಅಧ್ಯಕ್ಷ ಸ್ಥಾನ ಬಿಡಲಿ ಎಂದು ಒತ್ತಾಯ ಮಾಡುತ್ತಿದ್ದಾರೆ ಎಂದು ಹೇಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ
Anandapura: ಸಾಲದ ಬಾಧೆ ತಾಳಲಾರದೆ ರೈತ ಆತ್ಮಹ*ತ್ಯೆ
Shimoga; ಕಾಂಗ್ರೆಸ್-ಮುಸ್ಲಿಮರ ವಿರುದ್ದ ಹೇಳಿಕೆ: ಈಶ್ವರಪ್ಪ ವಿರುದ್ದ ಸುಮೋಟೋ ಪ್ರಕರಣ
Thirthahalli: ಶಾಸಕ ಸ್ಥಾನವನ್ನು ಗಿರವಿ ಇಟ್ಟರಾ ಆರಗ ಜ್ಞಾನೇಂದ್ರ ?
Bengaluru: ಮುನಿರತ್ನ ವಿರುದ್ಧ ಹನಿಟ್ರ್ಯಾಪ್ ಕೇಸ್: ಪಿಐ ಸೆರೆ
MUST WATCH
ಹೊಸ ಸೇರ್ಪಡೆ
Manipal KMC Hospital: ಮಲ್ಪೆ ಬೀಚ್‌ನಲ್ಲಿ ಮಧುಮೇಹ ಜಾಗೃತಿ
UK; ಪ್ರಧಾನಿ ದೀಪಾವಳಿ ಪಾರ್ಟಿಯಲ್ಲಿ ಮದ್ಯ, ಮಾಂಸ: ಕೊನೆಗೂ ಕ್ಷಮೆ ಯಾಚನೆ
Kollegala: ಎತ್ತಿನಗಾಡಿಗೆ ಸಾಮ್ರಾಟ್ ಟರ್ಬೇ ವಾಹನ ಡಿಕ್ಕಿ; ಎತ್ತು ಸಾವು
Udupi: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್; ಉಡುಪಿ ಮಹಿಳಾ ವಿಭಾಗ ಆರಂಭ
ಕನಕಗಿರಿ:ಮಂಗಳೂರು ಮೂಲದ ಕುಟುಂಬ-ಸೌಹಾರ್ದತೆಗೆ ಸಾಕ್ಷಿ 4 ದಶಕದ ಸಕ್ಕರೆ ಗೊಂಬೆ ತಯಾರಿಕೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.