ಹಿರಿಯ ಛಾಯಾಚಿತ್ರಗ್ರಾಹಕ ಪೆರುಮಾಳ್ ಇನ್ನಿಲ್ಲ
Team Udayavani, Feb 9, 2017, 11:52 AM IST
ಬೆಂಗಳೂರು: ಅಂತಾರಾಷ್ಟ್ರೀಯ ಖ್ಯಾತಿಯ, ಪ್ರಸಿದ್ಧ ವನ್ಯಜೀವಿ ಛಾಯಾಚಿತ್ರಗ್ರಾಹಕ ಟಿ.ಎನ್. ಎ. ಪೆರುಮಾಳ್ ಅವರು ಬುಧವಾರ ನಿಧನ ಹೊಂದಿದರು. ಅವರಿಗೆ 85 ವರ್ಷ ವಯಸ್ಸಾಗಿತ್ತು. ಸುಮಾರು ಐವತ್ತು ವರ್ಷಗಳಿಂದ ದೇಶ ವಿದೇಶಗಳ ವನ್ಯಲೋಕವನ್ನು ಕ್ಯಾಮೆರಾ ಕಣ್ಣಿನ ಮೂಲಕ ಜಗತ್ತಿಗೆ ತೆರೆದಿಟ್ಟ ಖ್ಯಾತಿ ಅವರದ್ದು.
ತಂಜಾವೂರು ನಟೇಶಾಚಾರ್ಯ ಅಯ್ಯಂ ಪೆರುಮಾಳ್, ಕಪ್ಪು ಬಿಳುಪಿನ ಛಾಯಾಚಿತ್ರ, ವರ್ಣ ಛಾಯಾಚಿತ್ರದ ಮೂಲಕ ವನ್ಯ ಜೀವಿಗಳ ಬದುಕನ್ನು ತೋರಿಸಿಕೊಟ್ಟಿದ್ದಾರೆ. 1955ರಿಂದ ಛಾಯಾಚಿತ್ರ ಕ್ಷೇತ್ರದಲ್ಲಿ ಅವಿರತವಾಗಿ ತೊಡಗಿಸಿಕೊಂಡಿದ್ದ ಪೆರುಮಾಳ್ ಅವರು “ನೇಚರ್ ಫೋಟೋಗ್ರಫಿ ವಲ್ಡ್ ಕಪ್’ನಲ್ಲಿ ಸತತ ನಾಲ್ಕು ಬಾರಿ ಭಾರತದ ತಂಡವನ್ನು ಮುನ್ನಡೆಸಿದ್ದಲ್ಲದೇ ಪ್ರಶಸ್ತಿ ಗೆದ್ದುಕೊಟ್ಟಿದ್ದರು.
ಪೆರುಮಾಳ್ ಅವರು ಕ್ಲಿಕ್ಕಿಸಿದ 1500ಕ್ಕೂ ಹೆಚ್ಚು ಛಾಯಾಚಿತ್ರಗಳು ರಾಷ್ಟ್ರೀಯ, ಅಂತಾರಾಷ್ಟ್ರೀಯ ಪ್ರದರ್ಶನಗಳಲ್ಲಿ ಮನ್ನಣೆ ಪಡೆದಿದ್ದು 200ಕ್ಕೂ ಹೆಚ್ಚು ಪುರಸ್ಕಾರಗಳನ್ನು ಗಳಿಸಿವೆ. ಕರ್ನಾಟಕ ಲಲಿತ ಕಲಾ ಅಕಾಡೆಮಿ ಪುರಸ್ಕಾರ, ಭಾರತೀಯ ಪತ್ರಿಕಾ ಮಂಡಳಿ ಪ್ರಶಸ್ತಿ, ಇಂಡಿಯನ್ ಇಂಟರ್‌ನ್ಯಾಷನಲ್ ಫೋಟೋಗ್ರಾಫಿಕ್ ಕೌನ್ಸಿಲ್ ಗೌರವ ಫೆಲೋಶಿಪ್, ಬ್ರಿಟನ್‌ನ ರಾಯಲ್ ಫೋಟೋಗ್ರಾಫಿಕ್ ಸೊಸೈಟಿ ಫೆಲೋಶಿಪ್ ಸೇರಿ ಹಲವು ಸಂಮಾನಗಳಿಗೆ ಭಾಜನರಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mudbidri: ಕೊಳಚೆ ನೀರು ಗದ್ದೆಗೆ; ಒಳಚರಂಡಿ ಯೋಜನೆ ಇಲ್ಲದೆ ಸಮಸ್ಯೆ
Oscars 2025: ಹೀನಾಯವಾಗಿ ಸೋತರೂ ʼಆಸ್ಕರ್ʼ ಅರ್ಹತಾ ಸುತ್ತಿನಲ್ಲಿ ಕಾಣಿಸಿಕೊಂಡ ʼಕಂಗುವʼ
Kadaba: ಇದ್ದೂ ಇಲ್ಲವಾದ 108 ಆ್ಯಂಬುಲೆನ್ಸ್ ಸೇವೆ
Karinja: ಅಪಾಯಕಾರಿ ವಿದ್ಯುತ್ ಕಂಬ; ತುಕ್ಕು ಹಿಡಿದ, ಶಕ್ತಿ ಕಳೆದು ಬಾಗಿರುವ ಕಂಬ
ಟಿಬೆಟ್ ನಲ್ಲಿ ಪ್ರಬಲ ಭೂಕಂಪ… ಸಾವಿನ ಸಂಖ್ಯೆ 53ಕ್ಕೆ ಏರಿಕೆ, 60ಕ್ಕೂ ಹೆಚ್ಚು ಮಂದಿ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.