ಹೆತ್ತವರ ಪ್ರತ್ಯೇಕ ಜೀವನ: ಬೇಸತ್ತ ಬಾಲಕ ಆತ್ಮಹತ್ಯೆ
Team Udayavani, Aug 30, 2017, 11:29 AM IST
ಬೆಂಗಳೂರು: ವೈಯಕ್ತಿಕ ಕಾರಣಕ್ಕೆ ತಂದೆ ಮತ್ತು ತಾಯಿ ಪ್ರತ್ಯೇಕವಾಗಿ ಜೀವನ ನಡೆಸುತ್ತಿದ್ದರಿಂದ ಖನ್ನತೆಗೆ ಒಳಗಾಗಿದ್ದ ಬಾಲಕನೊಬ್ಬ ಡೆತ್‌ನೋಟ್ ಬರೆದಿಟ್ಟು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸಂಪಂಗಿರಾಮನಗರದಲ್ಲಿ ಸೋಮವಾರ ಸಂಜೆ ನಡೆದಿದೆ.
ವಿನಾಯಕ ಶಾಲೆಯಲ್ಲಿ 8ನೇ ತರಗತಿ ಓದುತ್ತಿದ್ದ ಪ್ರವೀಣ್ ರಾಜ್ (13) ಆತ್ಮಹತ್ಯೆ ಮಾಡಿಕೊಂಡ ಬಾಲಕ. ತಾಯಿಯೊಂದಿಗೆ ವಾಸವಾಗಿದ್ದ ಈತ ಮನೆಯಲ್ಲಿ ಯಾರೂ ಇಲ್ಲದ ವೇಳೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರವೀಣ್‌ರಾಜ್ ತಂದೆ ಆನಂದ್ ಭದ್ರತಾ ಸಿಬ್ಬಂದಿಯಾಗಿದ್ದು, ತಾಯಿ ದೀಪಾ ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡುತ್ತಾರೆ. ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ದಂಪತಿ ನಡುವೆ ಆಗಾಗ್ಗೆ ಜಗಳ ನಡೆಯುತ್ತಿತ್ತು. ಈ ಹಿನ್ನೆಲೆಯಲ್ಲಿ ಕಳೆದ ಕೆಲ ವರ್ಷಗಳಿಂದ ಪ್ರತ್ಯೇಕವಾಗಿ ಜೀವನ ನಡೆಸುತ್ತಿದ್ದರು. ಇದರಿಂದ ಪ್ರವೀಣ್‌ರಾಜ್ ಮಾನಸಿಕ ಖನ್ನತೆಗೊಳಗಾಗಿದ್ದ. ಮನೆಯಲ್ಲಿ ಚಿಕ್ಕಮಗುವಿನಂತೆ ವರ್ತಿಸುತ್ತಿದ್ದ.
ತಂದೆಯಿಂದ ದೂರವಾಗಿದ್ದ ಪ್ರವೀಣ್‌ರಾಜ್ ತಾಯಿ ದೀಪಾ ಮತ್ತು ಮಾವ ಸುರೇಶ್ ಜತೆ ಸಂಪಂಗಿರಾಮನಗರದಲ್ಲಿ ವಾಸವಾಗಿದ್ದ. ಒಟ್ಟಿಗೆ ಜೀವನ ನಡೆಸುವಂತೆ ಪೋಷಕರಿಗೆ ಮನವಿ ಮಾಡಿಕೊಂಡಿದ್ದ. ಆದರೆ, ಇದಕ್ಕೆ ಅಪ್ಪ-ಅಮ್ಮ ಇಬ್ಬರೂ ಸರಿಯಾದ ಸ್ಪಂದಿಸಿರಲಿಲ್ಲ. ಇದರಿಂದ ನೊಂದಿದ್ದ ಪ್ರವೀಣ್ ಮಾನಸಿಕ ಖನ್ನತೆಗೊಳಗಾಗಿದ್ದ.
ಯಾರೊಂದಿಗೂ ಸೇರುತ್ತಿರಲಿಲ್ಲ. ಶಾಲೆಯಲ್ಲೂ ಯಾರೊಂದಿಗೂ ಹೆಚ್ಚು ಬೆರೆಯುತ್ತಿರಲಿಲ್ಲ. ಸದಾ ಒಂಟಿಯಾಗಿಯೇ ಇರುತ್ತಿದ್ದ. ಈ ಹಿನ್ನೆಲೆಯಲ್ಲಿ ಮನೆಯಲ್ಲಿದ್ದ ತಾಯಿಯ ಸೀರೆಯಲ್ಲೇ ಪ್ರವೀಣ್‌ರಾಜ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಅಧಿಕಾರಿಯೊಬ್ಬರು “ಉದಯವಾಣಿ’ಗೆ ವಿವರಿಸಿದರು.
ಪತ್ನಿ ಸೋದರನ ಮೇಲೆ ಹಲ್ಲೆ
ಮೃತ ಪ್ರವೀಣ್‌ರಾಜ್ ದೇಹವನ್ನು ಮರಣೋತ್ತರ ಪರೀಕ್ಷೆಗೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಇಡಲಾಗಿತ್ತು. ಈ ವೇಳೆ ಸ್ಥಳಕ್ಕೆ ಬಂದ ತಂದೆ ಆನಂದ್, ತನ್ನ ಮಗ ಸಾಯಲು ಭಾಮೈದ ಸುರೇಶ್ ಕಾರಣ. ಈತನ ಕಿರುಕುಳದಿಂದಲೇ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಆರೋಪಿಸಿ ಮನಬಂದಂತೆ ಥಳಿಸಿದ್ದು, ಸುರೇಶ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆದರೆ, ಈ ಬಗ್ಗೆ ಎಲ್ಲಿಯೂ ದೂರು ದಾಖಲಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ಐ ವಿಲ್ ಕಮ್ ಬ್ಯಾಕ್!
ಸೋಮವಾರ ಬೆಳಗ್ಗೆ ತಾಯಿ ಮತ್ತು ಮಾವ ಎಂದಿನಂತೆ ಕೆಲಸಕ್ಕೆ ತೆರಳಿದ್ದಾರೆ. ಈ ವೇಳೆ ಪ್ರವೀಣ್ ರಾಜ್, ಡೆತ್‌ನೋಟ್ ಬರೆದಿಟ್ಟಿದ್ದು, “ಐ ಯಾಮ್ ವೇರಿ ವೇರಿ ಸಾರಿ.. ಐ ವಿಲ್ ಕಮ್ ಬ್ಯಾಕ್’ ಎಂದು ಡೆತ್‌ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸಂಜೆ ತಾಯಿ ಕೆಲಸ ಮುಗಿಸಿಕೊಂಡು ಮನೆಗೆ ಬಂದಾಗ ಘಟನೆ ಬೆಳಕಿಗೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಕರಣ ಸಂಪಂಗಿರಾಮನಗರ ಠಾಣೆಯಲ್ಲಿ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಟಿಬೆಟ್ ನಲ್ಲಿ ಪ್ರಬಲ ಭೂಕಂಪ… ಕನಿಷ್ಠ 53 ಮಂದಿ ಮೃತ್ಯು, 60ಕ್ಕೂ ಹೆಚ್ಚು ಮಂದಿ ಗಾಯ
Updated: ಕೆನಡಾ ಮುಂದಿನ ಪ್ರಧಾನಿ ರೇಸ್ ನಲ್ಲಿ ಭಾರತೀಯ ಮೂಲದ ಅನಿತಾ ಸೇರಿ ಹಲವರ ಪೈಪೋಟಿ!
UP: ಪತಿ, ಆರು ಮಕ್ಕಳನ್ನು ಬಿಟ್ಟು ಭಿಕ್ಷುಕನ ಜತೆ ಓಡಿಹೋದ ಮಹಿಳೆ
Mangaluru: ಆಕಸ್ಮಿಕ ಗುಂಡು ತಗುಲಿ ವ್ಯಕ್ತಿಗೆ ಗಾಯ… ವಾಮಂಜೂರಿನಲ್ಲಿ ಘಟನೆ
Bengaluru: ಎಂಬಿಎ ವಿದ್ಯಾರ್ಥಿ 3ನೇ ಮಹಡಿಯಿಂದ ಬಿದ್ದು ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.