ಹೆಣ್ಣು ಮಕ್ಕಳ ಸಬಲೀಕರಣಕ್ಕೆ ಪ್ರತ್ಯೇಕ ನೀತಿ: ಉಮಾಶ್ರೀ
Team Udayavani, Sep 15, 2017, 7:05 AM IST
ಬೆಂಗಳೂರು: ಹೆಣ್ಣು ಮಕ್ಕಳ ಶಿಕ್ಷಣ, ಸುರಕ್ಷತೆ ಮತ್ತು ಸಬಲೀಕರಣಕ್ಕಾಗಿ ಪ್ರತ್ಯೇಕ ನೀತಿ ರೂಪಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಉಮಾಶ್ರೀ ತಿಳಿಸಿದ್ದಾರೆ.
ವಿಕಾಸಸೌಧದಲ್ಲಿ ಗುರುವಾರ ಆಯೋಜಿಸಿದ್ದ “ಮಕ್ಕಳ ಹಕ್ಕುಗಳ ಕುರಿತ ಶಾಸಕರ ಪ್ರಾದೇಶಿಕ ಸಮ್ಮೇಳನದಲ್ಲಿ ಮಾತನಾಡಿ, ಹೆಣ್ಣು ಸ್ವಾವಲಂಬಿಯಾದರೆ ಕುಟುಂಬ ಸದೃಢವಾಗುತ್ತದೆ. ಈ ನಿಟ್ಟಿನಲ್ಲಿ ಹೆಣ್ಣು ಮಕ್ಕಳ ಶಿಕ್ಷಣ, ಸುರಕ್ಷತೆ, ಸಬಲೀಕರಣಕ್ಕಾಗಿ ಪ್ರತ್ಯೇಕ ನೀತಿ ರೂಪಿಸಲು ಸರ್ಕಾರ ಚಿಂತನೆ ನಡೆಸಿದೆ ಎಂದರು. ಬಾಲ್ಯ ವಿವಾಹ ತಡೆಗೆ ಪರಿಣಾಮಕಾರಿಯಾಗಲು ತಿದ್ದುಪಡಿ ಮಾಡಲಾಗಿದೆ. ಇದಕ್ಕೆ ರಾಷ್ಟ್ರಪತಿಗಳ ಅಂಕಿತ ಸಿಕ್ಕಿದೆ. ಇದು ಜಾರಿಯಾದರೆ ಬಾಲ್ಯ ವಿವಾಹ ಅಪರಾಧಕ್ಕೆ ಎರಡು ವರ್ಷ ಕಠಿಣ ಸಜೆ ವಿಧಿಸಲಾಗುತ್ತದೆ ಜತೆಗೆ ನಿಧಿಗಾಗಿ ಮಕ್ಕಳ ಬಲಿ, ಹರಕೆ ಅಮಾನವೀಯ ಆಚರಣೆಗಳು ನಿಲ್ಲಲಿವೆ. ಹೆಣ್ಣು ಮಕ್ಕಳನ್ನು ವೇಶ್ಯಾವಾಟಿಕೆಗೆ ದೂಡುವಂತಹ ಅನಿಷ್ಠಗಳನ್ನು ತಡೆಯಲು ಪ್ರಬಲವಾದ ಕಾಯ್ದೆ ಅಗತ್ಯವಿದೆ. ರಾಜ್ಯ ಸರ್ಕಾರ ಮೌಡ್ಯ ನಿಷೇಧಕ್ಕೆ ಬದ್ಧವಾಗಿದೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Guarantee: ಮಹಾರಾಷ್ಟ್ರ ಬಿಜೆಪಿಗರ ಕರ್ನಾಟಕ ಪ್ರವಾಸಕ್ಕೆ ವಿಶೇಷ ವಿಮಾನ: ಡಿ.ಕೆ.ಶಿವಕುಮಾರ್
Waqf Issue: ವಕ್ಫ್ ವಿರುದ್ಧ ಹಿಂದೂಗಳು ಒಗ್ಗೂಡಲಿ: ಪ್ರಮೋದ್ ಮುತಾಲಿಕ್
By Election: ಒಂದುವರೆ ವರ್ಷದಿಂದ ಕಾಂಗ್ರೆಸ್ ಸರಕಾರ 1 ಕಿ.ಮೀ.ರಸ್ತೆ ಮಾಡಿಲ್ಲ: ಬಿಎಸ್‌ವೈ
By Election: ಹಣ ಕೊಟ್ಟರೂ ಸಿಎಂ ಕಾರ್ಯಕ್ರಮಕ್ಕೆ ಜನ ಬರುತ್ತಿಲ್ಲ: ಬಿಎಸ್ ವೈ
Bellary: ಶೀಘ್ರದಲ್ಲೇ ಸಿಎಂ ರಾಜೀನಾಮೆ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.