ಮಹಿಳಾ ಸುರಕ್ಷತೆ, ಸಬಲೀಕರಣಕ್ಕೆ ಪ್ರತ್ಯೇಕ ನೀತಿ
Team Udayavani, Sep 15, 2017, 11:49 AM IST
ಬೆಂಗಳೂರು: ಹೆಣ್ಣು ಮಕ್ಕಳ ಶಿಕ್ಷಣ, ಸುರಕ್ಷತೆ ಮತ್ತು ಸಬಲೀಕರಣಕ್ಕಾಗಿ ಪ್ರತ್ಯೇಕ ನೀತಿ ರೂಪಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಉಮಾಶ್ರೀ ತಿಳಿಸಿದ್ದಾರೆ. ವಿಕಾಸಸೌಧದಲ್ಲಿ ಗುರುವಾರ ಆಯೋಜಿಸಿದ್ದ “ಮಕ್ಕಳ ಹಕ್ಕುಗಳ ಕುರಿತ ಶಾಸಕರ ಪ್ರಾದೇಶಿಕ ಸಮ್ಮೇಳನದಲ್ಲಿ ಭಾಗವಹಿಸಿ ಮಾತನಾಡಿದರು.
ಹೆಣ್ಣು ಕುಟುಂಬದ ಕಣ್ಣು. ಹೆಣ್ಣು ಶಿಕ್ಷಣ ಪಡೆದು ಸ್ವಾವಲಂಬಿಯಾದರೆ ಇಡೀ ಕುಟುಂಬ ಆರ್ಥಿಕವಾಗಿಯೂ ಸದೃಢವಾಗಿರುತ್ತದೆ. ಈ ನಿಟ್ಟಿನಲ್ಲಿ ಹೆಣ್ಣು ಮಕ್ಕಳ ಶಿಕ್ಷಣ, ಸುರಕ್ಷತೆ, ಸಬಲೀಕರಣಕ್ಕಾಗಿ ಪ್ರತ್ಯೇಕ ನೀತಿ ರೂಪಿಸಲು ಸರ್ಕಾರ ಚಿಂತನೆ ನಡೆಸಿದೆ ಎಂದು ಹೇಳಿದರು.
ರಾಜ್ಯ ಸರ್ಕಾರ ಹೆಣ್ಣು ಮಕ್ಕಳ ಶಿಕ್ಷಣಕ್ಕಾಗಿ ಸಾಕಷ್ಟು ಹಣ ವೆಚ್ಚ ಮಾಡುತ್ತಿದೆ. ವಿಕಲಚೇತನ ತಾಯಂದಿರಿಗೆ ಮಾಸಿಕ ಎರಡು ಸಾವಿರ ರೂ. ಪರಿಹಾರ ನೀಡಲಾಗುತ್ತಿದೆ. ಬಾಲ್ಯ ವಿವಾಹ ತಡೆಯಲು ಪರಿಣಾಮಕಾರಿ ತಿದ್ದುಪಡಿ ಕಾಯ್ದೆ ತಂದಿದ್ದು ಅದಕ್ಕೆ ರಾಷ್ಟ್ರಪತಿ ಅವರ ಅಂಕಿತ ಸಿಕ್ಕಿದೆ. ಈ ತಿದ್ದುಪಡಿ ಕಾಯ್ದೆ ಜಾರಿಯಾದರೆ ಬಾಲ್ಯ ವಿವಾಹ ಅಪರಾಧಕ್ಕಾಗಿ ಗರಿಷ್ಠ ಎರಡು ವರ್ಷ ಶಿಕ್ಷೆಯಾಗಲಿದೆ.
ಜತೆಗೆ ನಿಧಿಗಾಗಿ ಮಕ್ಕಳನ್ನು ಬಲಿ ನೀಡುವುದು, ಹರಕೆ ನೆಪದಲ್ಲಿ ಮಕ್ಕಳನ್ನು ಕೆಳಕ್ಕೆ ಬಿಸಾಡುವುದು ಸೇರಿ ಅಮಾನವೀಯ ಆಚರಣೆಗಳು ನಿಲ್ಲಲಿವೆ. ಹೆಣ್ಣು ಮಕ್ಕಳನ್ನು ವೇಶ್ಯವಾಟಿಕೆಗೆ ದೂಡುವಂತಹ ಅನಿಷ್ಟಗಳನ್ನು ತಡೆಯಲು ಪ್ರಬಲವಾದ ಕಾಯ್ದೆ ಅಗತ್ಯವಿದೆ. ಮಹಾರಾಷ್ಟ್ರ ಮಾದರಿಯಲ್ಲಿ ಮೌಡ್ಯ ನಿಷೇಧ ಕಾಯ್ದೆ ಜಾರಿಗೆ ತರಲು ನಮ್ಮ ಸರ್ಕಾರ ಬದ್ಧವಾಗಿದೆ. ಆದರೆ, ಕೇಂದ್ರ ಸರ್ಕಾರವೇ ದೇಶಾದ್ಯಂತ ಮೌಡ್ಯ ನಿಷೇಧ ಕಾಯ್ದೆ ಜಾರಿಗೆ ತರುವುದು ಸೂಕ್ತ ಎಂದು ಅಭಿಪ್ರಾಯಪಟ್ಟರು.
ಕೇಂದ್ರ ಸರ್ಕಾರ ದತ್ತು ಸ್ವೀಕಾರ ನಿಯಮಗಳನ್ನು ಸರಳೀಕರಣ ಮಾಡಿದೆ. ಇದರಿಂದ ಸಾಕಷ್ಟು ಅನಾಥ ಮಕ್ಕಳಿಗೆ ಜೀವನ ಸಿಕ್ಕಂತಾಗುತ್ತಿದೆ. ಇದಕ್ಕೆ ಪೂರಕವಾಗಿ ರಾಜ್ಯ ಸರ್ಕಾರ ತೊಟ್ಟಿಲು ಯೋಜನೆ ಜಾರಿಗೆ ತಂದಿದೆ. ಹೋಂ ಸ್ಟೇಗಳಲ್ಲಿ ಮಕ್ಕಳಿಗೆ ಜಾನಪದ ಅಕಾಡೆಮಿಯಿಂದ ಜಾನಪದ ಕಲೆಯ ಬಗ್ಗೆ, ಸಾಹಿತ್ಯದ ಬಗ್ಗೆ ತರಬೇತಿ ನೀಡಲಾಗುತ್ತಿದೆ ಎಂದು ತಿಳಿಸಿದರು.
ಕಾನೂನು ಸಂಸದೀಯ ವ್ಯವಹಾರಗಳ ಸಚಿವ ಟಿ.ಬಿ.ಜಯಚಂದ್ರ ಮಾತನಾಡಿ , ಮಕ್ಕಳ ಹಕ್ಕುಗಳಿಗೆ ಸಂಬಂಧಿಸಿದಂತೆ 14ಕ್ಕೂ ಹೆಚ್ಚು ಕಾನೂನುಗಳಿವೆ. ಅವು ಪರಿಣಾಮಕಾರಿಯಾಗಿ ಜಾರಿಯಾಗುತ್ತಿಲ್ಲ. ಎಲ್ಲವನ್ನೂ ಕ್ರೂಢೀಕರಿಸಿ ಸಮರ್ಥವಾದ ಏಕರೂಪ ಕಾನೂನು ಮಾಡುವ ಅಗತ್ಯವಿದೆ ಎಂದು ತಿಳಿಸಿದರು.
ಬಾಲ ಕಾರ್ಮಿಕ ಪದ್ಧತಿ, ಬಾಲ್ಯ ವಿವಾಹ ಪದ್ಧತಿ, ಬಾಲಾಪರಾಧ ಕಾನೂನು , ಮಕ್ಕಳ ಹಕ್ಕುಗಳ ರಕ್ಷಣೆ ಕಾನೂನು ಸೇರಿದಂತೆ ದೇಶದಲ್ಲಿ ಹಲವಾರು ಕಾನೂನುಗಳಿದ್ದರೂ ಕಾಲಮಿತಿಯಲ್ಲಿ ಜಾರಿಯಾಗಿಲ್ಲ. ಇನ್ನು ಕೆಲವು ಕಾನೂನುಗಳು ಈಗಿನ ಕಾಲಮಾನಕ್ಕೆ ಅನುಕೂಲವಾಗಿಲ್ಲ. ಶಿಕ್ಷಣಕ್ಕೆ ಸಂಬಂಧಿಸಿದ ಕಾನೂನು ಕೂಡ ಜಾರಿಯಾಗಿಲ್ಲ. ಹೀಗಾಗಿ, ಏಕರೂಪ ಕಾನೂನು ಅಗತ್ಯವಿದೆ ಎಂದು ಹೇಳಿದರು.
ದೇಶದಲ್ಲಿ ಮೂರನೇ ಒಂದರಷ್ಟು ಮಕ್ಕಳ ಸಂಖ್ಯೆಯಿದೆ. ಆದರೆ, ಬಜೆಟ್‌ನಲ್ಲಿ ಶೇ.10ಕ್ಕಿಂತ ಹೆಚ್ಚು ಹಣ ಖರ್ಚು ಮಾಡುತ್ತಿಲ್ಲ. ಎಲ್ಲ ರಾಜ್ಯಗಳು ಮಕ್ಕಳ ಹಕ್ಕುಗಳ ರಕ್ಷಣೆಗಾಗಿ ಹಣ ಖರ್ಚು ಮಾಡುವ ನಿಟ್ಟಿನಲ್ಲಿ ಪ್ರಯತ್ನಿಸಬೇಕು. ರಾಜ್ಯ ಸರ್ಕಾರ ಕ್ಷೀರಧಾರೆ ಮತ್ತು ಅಂಗನವಾಡಿಯಲ್ಲಿ ಮೊಟ್ಟೆ ನೀಡುವ ಯೋಜನೆಯಿಂದ ಮಕ್ಕಳಲ್ಲಿ ಪೌಷ್ಠಿಕತೆ ವೃದ್ಧಿಯಾಗುತ್ತಿದೆ ಎಂದು ಹೇಳಿದರು.
ವಿಧಾನಪರಿಷತ್ ಸಭಾಪತಿ ಡಿ.ಎಚ್.ಶಂಕರಮೂರ್ತಿಕರ್ನಾಟಕ ಮತ್ತು ತೆಲಂಗಾಣ ಹಾಗೂ ಆಂಧ್ರಪ್ರದೇಶದ ಯುನಿಸೆಫ್ ಮುಖ್ಯಸ್ಥೆ ಮೈತಲ್ ರಸಿಯಾ, ವಿಧಾನಪರಿಷತ್‌ನಲ್ಲಿ ಸರ್ಕಾರದ ಮುಖ್ಯ ಸಚೇತಕ ಐವಾನ್ ಡಿಸೋಜ ಪರಿಷತ್ ಸದಸ್ಯ ಗಣೇಶ್ ಕಾರ್ಣಿಕ್ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Cold Weather: ಬೀದರ್, ವಿಜಯಪುರ ಗಡಗಡ: 5-6 ಡಿ.ಸೆ.ಗೆ ತಾಪಮಾನ ಇಳಿಕೆ?
Danger Spot-1: ಹೊಸೂರು ಮುಖ್ಯರಸ್ತೆ ಸಮೀಪ ನಡೆದಾಡುವುದೂ ಅಪಾಯಕಾರಿ!
BIFF:16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಕಿಶೋರ್ ರಾಯಭಾರಿ
EV ದ್ವಿಚಕ್ರ ವಾಹನ ಮಾರಾಟ: ಏಥರ್ ಸಂಸ್ಥೆ ಪಾಲು ಶೇ.25
Aishwarya Gowda ವಿರುದ್ದ ಬಲವಂತದ ಕ್ರಮ ಬೇಡ: ಪೊಲೀಸರಿಗೆ ಕೋರ್ಟ್ ಸೂಚನೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.