ನಗರ ಸ್ಥಳೀಯ ಸಂಸ್ಥೆಗಳ ಸೇವೆಗಳಿನ್ನು ಆನ್‌ಲೈನ್‌

Team Udayavani, Sep 2, 2018, 6:00 AM IST

online.jpg

ಬೆಂಗಳೂರು: ಮುಂದಿನ ವರ್ಷದ ಜನವರಿ 1ರಿಂದ ಬಿಬಿಎಂಪಿ ಸೇರಿದಂತೆ ರಾಜ್ಯದ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳಲ್ಲಿ ನಾಗರಿಕರಿಗೆ ನೀಡುವ ಸೇವೆಗಳು ಆನ್‌ಲೈನ್‌ನಲ್ಲಿ ಲಭ್ಯವಾಗಲಿದೆ.

ಕಳೆದ ಫೆಬ್ರವರಿಯಲ್ಲಿ ಅಂದು ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು ಮಂಡಿಸಿದ್ದ 2018-19ನೇ ಸಾಲಿನ ಬಜೆಟ್‌ನಲ್ಲಿ ಈ ಕುರಿತು ಘೋಷಣೆ ಮಾಡಲಾಗಿತ್ತು. ಅದರಂತೆ ಸರ್ಕಾರಿ ಆದೇಶ ಹೊರಡಿಸಲಾಗಿದ್ದು, 2019ರ ಜ.1ರಿಂದ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಆಸಿ ¤ ತೆರಿಗೆ, ವಹಿ-ನಕಲು (ಖಾತಾ), ಕಟ್ಟಡ ನಕ್ಷೆ ಅನುಮೋದನೆ, ನೀರು ಮತು ¤ ವಿದ್ಯುತ್‌ ಸಂಪರ್ಕ, ರಸ್ತೆ ತುಂಡರಿಸುವುದು ಸೇರಿದಂತೆ ನಾಗರಿಕ ಸೇವೆಗಳು ಆನ್‌ಲೈನ್‌ ಮೂಲಕ ಸಿಗಲಿವೆ.

ಈ ನಿಟ್ಟಿನಲ್ಲಿ ತಂತ್ರಾಂಶ ಅಭಿವೃದ್ಧಿಪಡಿಸುವ ಕಾರ್ಯವನ್ನು ಈಗಾಗಲೇ ಬಹುತೇಕ ಪೂರ್ಣಗೊಳಿಸಲಾಗಿದೆ. 2019ರ ಜ.1ರಿಂದ ಈ ಎಲ್ಲಾ ಸೇವೆಗಳನ್ನು ಆನ್‌ಲೈನ್‌ ಮೂಲಕವೇ ಒದಗಿಸುವುದು ಕಡ್ಡಾಯವಾಗಿದೆ. ಅದಕ್ಕಾಗಿ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಈಗಾಗಲೇ ಅಭಿವೃದ್ಧಿಪಡಿಸಿರುವ ಕಟ್ಟಡ ಪರವಾನಗಿ ಮತ್ತು ಲೇಔಟ್‌ ಅನುಮೋದನಾ ವ್ಯವಸ್ಥೆಗಳನ್ನು ಗ್ರಾಹಕೀಕರಣಗೊಳಿಸಿ (ಕಸ್ಟಮೈಸೇಷನ್‌) ಬಳಸಿಕೊಳ್ಳಲು ಕೂಡ ಅನುಮತಿ ನೀಡಲಾಗಿದೆ.

ತಂತ್ರಾಂಶ ಅಭಿವೃದ್ಧಿ ಪ್ರಕ್ರಿಯೆ ಪೂರ್ಣ:
ನಾಗರಿಕ ಸೇವೆಗಳನ್ನು ಆನ್‌ಲೈನ್‌ ಮೂಲಕ ಕಲ್ಪಿಸಲು ಈಗಾಗಲೇ ತಂತ್ರಾಂಶ ಅಭಿವೃದ್ಧಿ ಪ್ರಕ್ರಿಯೆ ಪೂರ್ಣಗೊಂಡಿದೆ. ನಗರ ಸ್ಥಳೀಯ ಸಂಸ್ಥೆಗಳ ಕಚೇರಿ ಕಾರ್ಯಚಟುವಟಿಕೆಗಳ ಸ್ವಯಂಚಾಲಿತ ನಿರ್ವಹಣೆಗಾಗಿ ಆನ್‌ಲೈನ್‌ ಉದ್ಯಮ ಸಂಪನ್ಮೂಲ ಯೋಜನೆ ಅಭಿವೃದ್ಧಿಪಡಿಸಲು, ಕಟ್ಟಡ ಮತ್ತು ನಿವೇಶನಗಳ ಅನುಮೋದನಾ ಪ್ರಕ್ರಿಯೆಯ ಸ್ವಯಂಚಾಲಿತ ನಿರ್ವಹಣೆಗಾಗಿ ಆನ್‌ಲೈನ್‌ ತಂತ್ರಾಂಶ ಅಭಿವೃದ್ಧಿಪಡಿಸಲು ಅನುಮೋದನೆ ನೀಡಲಾಗಿದೆ. ಅದರಂತೆ ಕರ್ನಾಟಕ ಮುನ್ಸಿಪಲ್‌ ಸೊಸೈಟಿ ಮೂಲಕ ರಾಜ್ಯದ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕಟ್ಟಡ ಪರವಾನಗಿ ಮತ್ತು ಲೇಔಟ್‌ ಅನುಮೋದನಾ ವ್ಯವಸ್ಥೆ ತಂತ್ರಾಂಶವನ್ನು ಈಗಾಗಲೇ ಅಭಿವೃದ್ಧಿಪಡಿಸಲಾಗಿದೆ.ಬಿಬಿಎಂಪಿ ವ್ಯಾಪ್ತಿಯಲ್ಲಿ ಈಗಾಗಲೇ ಎಂಟು ವಲಯ ಕಚೇರಿಗಳಲ್ಲಿ ಕಟ್ಟಡ ನಕ್ಷೆ ಮಂಜೂರಾತಿಯನ್ನು ಆನ್‌ಲೈನ್‌ ಮೂಲಕ ನೀಡಲು ಕ್ರಮ ಕೈಗೊಂಡು ಸಾರ್ವಜನಿಕ ಬಳಕೆಗೆ ಮುಕ್ತಗೊಳಿಸಲಾಗಿದೆ.

ಅನುಕೂಲವೇನು?:
ನಗರ ಸ್ಥಳೀಯ ಸಂಸ್ಥೆಗಳಲ್ಲಿ ಲೇಔಟ್‌ ಅಥವಾ ಕಟ್ಟಡ ನಿರ್ಮಾಣ ಮಾಡಬೇಕಾದರೆ ಖಾತೆ, ಕಟ್ಟಡ ನಕ್ಷೆ ಅನುಮೋದನೆ, ವಿದ್ಯುತ್‌ ಸಂಪರ್ಕ ಮತ್ತು ನೀರಿನ ಸಂಪರ್ಕಕ್ಕಾಗಿ ರಸ್ತೆ ತುಂಡರಿಸುವುದು ಸೇರಿ ವಿವಿಧ ಸೇವೆಗಳಿಗೆ ಬೇರೆ ಬೇರೆ ಇಲಾಖೆಗಳಿಗೆ ಅರ್ಜಿ ಸಲ್ಲಿಸಬೇಕಿತ್ತು. ನಕ್ಷೆ ಮಂಜೂರಾದರೂ ಅನುಮತಿ ತಡವಾಗುತ್ತಿತ್ತು. ಸಾರ್ವಜನಿಕರು ಕಚೇರಿಯಿಂದ ಕಚೇರಿಗೆ ಅಲೆಯಬೇಕಿತ್ತು. ಆನ್‌ಲೈನ್‌ ವ್ಯವಸ್ಥೆ ಜಾರಿಯಿಂದ ಒಮ್ಮೆ ಅರ್ಜಿ ಸಲ್ಲಿಸಿದರೆ ಸಾಕು. ಆಯಾ ನಗರ ಸ್ಥಳೀಯ ಸಂಸ್ಥೆಗಳೇ ಎಲ್ಲಾ ಕೆಲಸಗಳಿಗೆ ಸಂಬಂಧಿಸಿದ ಇಲಾಖೆಗಳಿಂದ ನಿರಾಕ್ಷೇಪಣಾ ಪತ್ರ ಅಥವಾ ಅನುಮತಿ ಪತ್ರ ಪಡೆದು, ಕೆಲವೇ ದಿನಗಳಲ್ಲಿ ಒದಗಿಸುತ್ತದೆ. ಇದಕ್ಕೆ 30ರಿಂದ 45 ದಿನ ನಿಗದಿಪಡಿಸಲಾಗುತ್ತದೆ.

ಅರ್ಜಿ ತಿರಸ್ಕೃತವಾದರೆ ಮತ್ತೆ ಅರ್ಜಿ ಸಲ್ಲಿಸಬೇಕಾಗುತ್ತದೆ. ಅರ್ಜಿ ಇತ್ಯರ್ಥವಾಗದೇ ಇದ್ದರೆ ಅಥವಾ ಇಲಾಖೆಯಿಂದ ಯಾವುದೇ ಪ್ರತಿಕ್ರಿಯೆ ಬಾರದೇ ಇದ್ದರೆ ಅದನ್ನೇ ಅನುಮತಿ ಎಂದು ಪರಿಗಣಿಸಿ ಕಟ್ಟಡ ನಿರ್ಮಾಣ ಸೇರಿದಂತೆ ಇತರೆ ಸೇವೆಗಳನ್ನು ಪಡೆದುಕೊಳ್ಳಲು ಅರ್ಜಿದಾರರು ಅರ್ಹರಾಗುತ್ತಾರೆ.

ಯಾವ ಸೇವೆಗಳು ಆನ್‌ಲೈನ್‌ನಲ್ಲಿ ಲಭ್ಯ?
2019ರ ಜ.1ರಿಂದ ಆಸಿ ¤ ತೆರಿಗೆ, ವಹಿ-ನಕಲು (ಖಾತಾ), ಕಟ್ಟಡ ನಕ್ಷೆ ಅನುಮೋದನೆ, ನೀರು ಮತು ¤ ವಿದ್ಯುತ್‌ ಸಂಪರ್ಕ, ರಸ್ತೆ ತುಂಡರಿಸುವುದು ಸೇರಿ ನಗರ ಸ್ಥಳೀಯ ಸಂಸ್ಥೆಯಿಂದ ಒದಗಿಸಲಾಗುವ ನಾಗರಿಕ ಸೇವೆಗಳು.

ಟಾಪ್ ನ್ಯೂಸ್

Labor Card: ಅವಿಭಜಿತ ದ.ಕ. ಜಿಲ್ಲೆ: 1,286 ಕಾರ್ಮಿಕರ ಕಾರ್ಡ್‌ ಅಮಾನತು

Labor Card: ಅವಿಭಜಿತ ದ.ಕ. ಜಿಲ್ಲೆ: 1,286 ಕಾರ್ಮಿಕರ ಕಾರ್ಡ್‌ ಅಮಾನತು

Udupi: ಮರಳುಗಾರಿಕೆ ಆರಂಭವಾದರೂ ಅಕ್ರಮ ದಂಧೆ ಅವ್ಯಾಹತ

Udupi: ಮರಳುಗಾರಿಕೆ ಆರಂಭವಾದರೂ ಅಕ್ರಮ ದಂಧೆ ಅವ್ಯಾಹತ

Jasprit-Bumra

ICC World Rankings: ಟೆಸ್ಟ್‌ ಬೌಲಿಂಗ್‌ ರ್‍ಯಾಂಕಿಂಗ್‌ ಬುಮ್ರಾ ಮರಳಿ ನಂ.1

horoscope-new-3

Daily Horoscope: ವೆಚ್ಚಗಳು ಎಣಿಸದೆ ಬಂದರೂ ಅಪವ್ಯಯ ಇಲ್ಲ, ಎಲ್ಲದರಲ್ಲೂ ಎಚ್ಚರವಿರಲಿ

virat-sachin-Dhoni

Brand Value: ಬಾಲಿವುಡ್‌ ತಾರೆಯರನ್ನು ಮೀರಿಸಿದ ಕ್ರಿಕೆಟಿಗರ ಬ್ರ್ಯಾಂಡ್‌ ಮೌಲ್ಯ!

Panth–Iyer

IPL Auction: 27 ಕೋ. ರೂ. ಒಡೆಯ ರಿಷಭ್‌ ಪಂತ್‌ಗೆ ಸಿಗುವುದು 18.90 ಕೋಟಿ ಮಾತ್ರ!

BBMP ಸೇರಿ 11 ಮಸೂದೆ ಮಂಡನೆ? ಡಿ. 9ರ ಬೆಳಗಾವಿ ಅಧಿವೇಶನದಲ್ಲಿ ಮಂಡನೆಗೆ ನಿರ್ಣಯ

BBMP ಸೇರಿ 11 ಮಸೂದೆ ಮಂಡನೆ? ಡಿ. 9ರ ಬೆಳಗಾವಿ ಅಧಿವೇಶನದಲ್ಲಿ ಮಂಡನೆಗೆ ನಿರ್ಣಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BBMP ಸೇರಿ 11 ಮಸೂದೆ ಮಂಡನೆ? ಡಿ. 9ರ ಬೆಳಗಾವಿ ಅಧಿವೇಶನದಲ್ಲಿ ಮಂಡನೆಗೆ ನಿರ್ಣಯ

BBMP ಸೇರಿ 11 ಮಸೂದೆ ಮಂಡನೆ? ಡಿ. 9ರ ಬೆಳಗಾವಿ ಅಧಿವೇಶನದಲ್ಲಿ ಮಂಡನೆಗೆ ನಿರ್ಣಯ

Karnataka Govt,.: ಸಂಪುಟ ಹುತ್ತಕ್ಕೆ ಈಗಲೇ ಕೈಹಾಕಲು ಸಿಎಂ ನಿರಾಸಕ್ತಿ?

Karnataka Govt,.: ಸಂಪುಟ ಹುತ್ತಕ್ಕೆ ಈಗಲೇ ಕೈಹಾಕಲು ಸಿಎಂ ನಿರಾಸಕ್ತಿ?

Karnataka Govt.,: ದಿಲ್ಲಿಯಲ್ಲಿ ಸಂಪುಟ ರಹಸ್ಯ; ಹೈಕಮಾಂಡ್‌ ಭೇಟಿ ಸಾಧ್ಯತೆ

Karnataka Govt.,: ದಿಲ್ಲಿಯಲ್ಲಿ ಸಂಪುಟ ರಹಸ್ಯ; ಹೈಕಮಾಂಡ್‌ ಭೇಟಿ ಸಾಧ್ಯತೆ

DA Hike: ಸರಕಾರಿ ನೌಕರರಿಗೆ ಶೇ. 2 ತುಟ್ಟಿ ಭತ್ಯೆ ಹೆಚ್ಚಳ… ಸಿಎಂಗೆ ಅಭಿನಂದನೆ

DA Hike: ಸರಕಾರಿ ನೌಕರರಿಗೆ ಶೇ. 2 ತುಟ್ಟಿ ಭತ್ಯೆ ಹೆಚ್ಚಳ… ಸಿಎಂಗೆ ಅಭಿನಂದನೆ

ಮಹದಾಯಿ, ಮೇಕೆದಾಟು ಯೋಜನೆ ಅನುಮತಿಗೆ ದಿಲ್ಲಿಯಲ್ಲಿ ಡಿಕೆಶಿ ಲಾಬಿ

DK Shivakumar: ಮಹದಾಯಿ, ಮೇಕೆದಾಟು ಯೋಜನೆ ಅನುಮತಿಗೆ ದಿಲ್ಲಿಯಲ್ಲಿ ಡಿಕೆಶಿ ಲಾಬಿ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Labor Card: ಅವಿಭಜಿತ ದ.ಕ. ಜಿಲ್ಲೆ: 1,286 ಕಾರ್ಮಿಕರ ಕಾರ್ಡ್‌ ಅಮಾನತು

Labor Card: ಅವಿಭಜಿತ ದ.ಕ. ಜಿಲ್ಲೆ: 1,286 ಕಾರ್ಮಿಕರ ಕಾರ್ಡ್‌ ಅಮಾನತು

Udupi: ಮರಳುಗಾರಿಕೆ ಆರಂಭವಾದರೂ ಅಕ್ರಮ ದಂಧೆ ಅವ್ಯಾಹತ

Udupi: ಮರಳುಗಾರಿಕೆ ಆರಂಭವಾದರೂ ಅಕ್ರಮ ದಂಧೆ ಅವ್ಯಾಹತ

Jasprit-Bumra

ICC World Rankings: ಟೆಸ್ಟ್‌ ಬೌಲಿಂಗ್‌ ರ್‍ಯಾಂಕಿಂಗ್‌ ಬುಮ್ರಾ ಮರಳಿ ನಂ.1

horoscope-new-3

Daily Horoscope: ವೆಚ್ಚಗಳು ಎಣಿಸದೆ ಬಂದರೂ ಅಪವ್ಯಯ ಇಲ್ಲ, ಎಲ್ಲದರಲ್ಲೂ ಎಚ್ಚರವಿರಲಿ

1

Udupi: ಪೊಲೀಸ್‌ ಅಧಿಕಾರಿಯೆಂದು ನಂಬಿಸಿ ಮಹಿಳೆಗೆ ಲಕ್ಷಾಂತರ ರೂ. ವಂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.