ಅಗ್ನಿ ಶ್ರೀಧರ್ ಗೆ 15 ದಿನಗಳ ನಿರೀಕ್ಷಣಾ ಜಾಮೀನು ಮಂಜೂರು
Team Udayavani, Feb 10, 2017, 6:14 PM IST
ಬೆಂಗಳೂರು: ಬಂಧನ ಭೀತಿಯಲ್ಲಿದ್ದ ಅಗ್ನಿಶ್ರೀಧರ್ ಗೆ ಸೆಷನ್ಸ್ ನ್ಯಾಯಾಲಯ 15 ದಿನಗಳ ಮಧ್ಯಂತರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಇದರಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಶ್ರೀಧರ್ ಗೆ ತಾತ್ಕಾಲಿಕ ರಿಲೀಫ್ ಸಿಕ್ಕಂತಾಗಿದೆ.
ರೌಡಿಗಳಿಗೆ ಆಶ್ರಯ ನೀಡಿದ್ದ ಮಾಹಿತಿ ಮೇರೆಗೆ ಇತ್ತೀಚೆಗೆ ಪೊಲೀಸರು ಅಗ್ನಿ ಶ್ರೀಧರ್ ಮನೆ ಮೇಲೆ ದಾಳಿ ನಡೆಸಿದ್ದರು. ಈ ಸಂದರ್ಭ ಮನೆಯಲ್ಲಿ ಅಕ್ರಮ ಶಸ್ತ್ರಾಸ್ತ್ರ, ವಿದೇಶಿ ಮದ್ಯ ದೊರಕಿತ್ತು.
ಆದರೆ ಅಂದು ಮನೆಯಲ್ಲಿ ಅಗ್ನಿ ಶ್ರೀಧರ್ ಅತಿಯಾದ ರಕ್ತದೊತ್ತಡದಿಂದ ಕುಸಿದು ಬಿದ್ದಿದ್ದರಿಂದ ಆಸ್ಪತ್ರೆಗೆ ದಾಖಲಿಸಿದ್ದರು. ಬಳಿಕ ಶ್ರೀಧರ್ ಆಪ್ತ, ಬಲಗೈ ಬಂಟ ಬಚ್ಚನ್ ಸೇರಿದಂತೆ 7 ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು.
ಸಾಗರ್ ಆಸ್ಪತ್ರೆಯ ಸ್ಪೆಶಲ್ ವಾರ್ಡ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಶ್ರೀಧರ್, ಬಂಧನದ ಭೀತಿ ಹಿನ್ನೆಲೆಯಲ್ಲಿ ಶುಕ್ರವಾರ ಖ್ಯಾತ ಹಿರಿಯ ವಕೀಲ ಹನುಮಂತರಾಯ ಅವರ ಮೂಲಕ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದು, ವಿಚಾರಣೆ ನಡೆಸಿದ ಸೆಷನ್ಸ್ ಕೋರ್ಟ್ 15 ದಿನಗಳ ನಿರೀಕ್ಷಣಾ ಜಾಮೀನು ಮಂಜೂರು ಮಾಡಿ ಆದೇಶ ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Mangaluru Lit Fest: ಯಾವುದೇ ಉತ್ಸವ ಯಾಂತ್ರಿಕವಾದರೆ ಹೊಸತನ ಮೂಡಲ್ಲ: ಎಸ್.ಎಲ್ ಭೈರಪ್ಪ
Kannada: ಮಾತೃಭಾಷಾ ಹೊಳಪು
Kannada: ಕನ್ನಡ ಎನೆ ಕುಣಿದಾಡುವುದೆನ್ನೆದೆ… ಕನ್ನಡ ಎನೆ ಕಿವಿ ನಿಮಿರುವುದು…
Belagavi: ಗಾಂಜಾ ವಿಚಾರಕ್ಕೆ ಒಡಹುಟ್ಟಿದವರ ಗಲಾಟೆ; ಓರ್ವ ಸಾವು, ಮತ್ತೋರ್ವ ಗಂಭೀರ
Mudhol: ಪ್ರಯಾಣಿಕರ ಉಪಯೋಗಕ್ಕೆ ಬಾರದ ತಂಗುದಾಣ… ಅಂಗಡಿ ಮುಂಗಟ್ಟಿನಿಂದ ಕಣ್ಮರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.