ವಿದ್ಯಾರ್ಥಿಗಳಿಗೆ ಸೇತುಬಂಧ ಹೊಸ ಅನುಭವ

ದೂರದರ್ಶನದ ಶೈಕ್ಷಣಿಕ ಕಾರ್ಯಕ್ರಮಕ್ಕೆ ಮೆಚ್ಚುಗೆ

Team Udayavani, Jul 21, 2020, 7:04 AM IST

ವಿದ್ಯಾರ್ಥಿಗಳಿಗೆ ಸೇತುಬಂಧ ಹೊಸ ಅನುಭವ

ಬೆಂಗಳೂರು: ಖಾಸಗಿ ಶಿಕ್ಷಣ ಸಂಸ್ಥೆಗಳು ಮಕ್ಕಳಿಗೆ ಆನ್‌ಲೈನ್‌ ತರಗತಿ ನೀಡಿದರೆ, ಸರ್ಕಾರವು ಸರ್ಕಾರಿ ಶಾಲಾ ಮಕ್ಕಳಿಗೆ ಅತ್ಯಂತ ಅಚ್ಚುಕಟ್ಟಾದ ವ್ಯವಸ್ಥೆಯಲ್ಲಿ ದೂರದರ್ಶನದ ಮೂಲಕ ಶಿಕ್ಷಣ ನೀಡುತ್ತಿರುವುದು ಎಲ್ಲರ ಮೆಚ್ಚುಗೆಗೆ ಗಳಿಸಿದೆ.

ರಾಜ್ಯ ಪಠ್ಯಕ್ರಮದ 8, 9 ಹಾಗೂ 10ನೇ ತರಗತಿಯ ಮಕ್ಕಳಿಗೆ ಏಕಕಾಲದಲಿ ಟಿವಿ ಮೂಲಕ ವಿವಿಧ ತರಗತಿ ಗಳನ್ನು ಬೋಧಿ  ಸುವ ಸೇತುಬಂಧ ಕಾರ್ಯಕ್ರಮ ಸೋಮವಾರದಿಂದ ಆರಂಭಗೊಂಡಿದ್ದು, ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಪಾಲಕ, ಪೋಷಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಸೋಮವಾರ ಬೆಳಗ್ಗೆಯಿಂದಲೇ ವಿದ್ಯಾರ್ಥಿಗಳು ಮನೆಯ ಟಿ.ವಿ. ಎದುರು ಕುಳಿತು, ಪಾಠ ಕೇಳುತ್ತಾ, ಸೂಕ್ತ ನೋಟ್ಸ್‌ ಕೂಡ ಮಾಡಿಕೊಂಡಿದ್ದರು. ಶಾಲೆಯ ತರಗತಿ ಕೊಠಡಿಯಲ್ಲಿ ವಿಷಯವಾರು ಪುಸ್ತಕದೊಂದಿಗೆ ಶಿಕ್ಷಕರ ಬೋಧನೆ ಕೇಳಲು ಸಜ್ಜಾಗಿ ಕುಳಿತುಕೊಳ್ಳುವಂತೆ ಮಕ್ಕಳು ಮನೆಯಲ್ಲಿ ಟಿವಿ ಮುಂದೆ ಕುಳಿತು, ವಿಷಯವಾರು ಬೋಧನೆಯನ್ನು ಆಲಿಸಿದ್ದಾರೆ. ಅನೇಕ ಕಡೆಗಳಲ್ಲಿ ಮಕ್ಕಳು ಸಾಮಾಜಿಕ ಅಂತರ ಕಾಯ್ದುಕೊಂಡು ಒಂದೇ ಮನೆಯಲ್ಲಿ ಕುಳಿತುಕೊಂಡಿದ್ದಾರೆ. ಇನ್ನು ಕೆಲವುಕಡೆಗಳಲ್ಲಿ ಶಿಕ್ಷಕರು ಮಕ್ಕಳೊಂದಿಗೆ ಕುಳಿತು ಟಿವಿಯಲ್ಲಿ ಬರುತ್ತಿದ್ದ ಪಾಠವನ್ನು ಆಲಿಸಿದ್ದಾರೆ ಹಾಗೂ ಮಕ್ಕಳಲ್ಲಿ ಎದ್ದಿದ್ದ ಸಂಶಯವನ್ನು ಬಗೆಹರಿಸಿದ್ದಾರೆ.

ಆನ್‌ಲೈನ್‌ ವ್ಯವಸ್ಥೆಗಿಂತ ಟಿ.ವಿ. ಮಾಧ್ಯಮದಲ್ಲಿ ಅತ್ಯಂತ ಪರಿಣಾಮಕಾರಿಯಾಗಿ ಮಕ್ಕಳಿಗೆ ಬೋಧನೆ ಮಾಡಬಹುದು ಎಂಬುದನ್ನು ಸೇತುಬಂಧ ಕಾರ್ಯಕ್ರಮ ತೋರಿಸಿಕೊಟ್ಟಿದೆ. ಒಂದೇ ದಿನದಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಈ ವ್ಯವಸ್ಥೆಯಡಿ ಪಾಠ ಕೇಳಿದ್ದಾರೆ. ಮೊಬೈಲ್‌, ಲ್ಯಾಪ್‌ಟಾಪ್‌ ಕೂಡ ಬಳಸಿಲ್ಲ. ಮನೆಯಲ್ಲಿರುವ ಇರುವ ಟಿವಿಯ ಮುಂದೆ ಕುಳಿತು ಪೂರ್ಣ ಪಾಠ ವನ್ನು ಆಲಿಸಿದ್ದಾರೆ ಎಂದು ಪ್ರೌಢಶಾಲೆಯ ಹಿರಿಯ ಶಿಕ್ಷಕರಾದ ಮಂಜುನಾಥ್‌ ಮಾಹಿತಿ ನೀಡಿದರು.

ಟಿ.ವಿ. ಇಲ್ಲದ ಮನೆಯ ಮಕ್ಕಳು ಪಕ್ಷದ ಮನೆಗೆ ಹೋಗಿ, ಸಹಪಾಠಿ ವಿದ್ಯಾರ್ಥಿಯೊಂದಿಗೆ ತರಗತಿ ಯಲ್ಲಿ ಭಾಗಿಯಾಗಿದ್ದಾರೆ. ಅನೇಕ ಕಡೆಗಳಲ್ಲಿ ಮಕ್ಕಳು ಪಾಠವನ್ನು ಗಂಭೀರವಾಗಿ ಕೇಳುತ್ತಿದ್ದಾರೋ ಅಥವಾ ಇಲ್ಲವೋ ಎಂಬುದನ್ನು ಪಾಲಕ, ಪೋಷಕರೇ ಗಮನಿಸುತ್ತಿದ್ದರು. ವಿದ್ಯಾರ್ಥಿಗಳಿಗೆ ಮತ್ತು ನಮಗೆ ಒಂದು ರೀತಿಯ ಹೊಸ ಅನುಭವ ನೀಡಿದೆ ಎಂದು ಮುಖ್ಯಶಿಕ್ಷಕರೊಬ್ಬರು ವಿವರ ನೀಡಿದರು.

8ರಿಂದ 10ನೇ ತರಗತಿಗಳ ಕಲಿಕೆಯ ನಿರಂತರತೆಗಾಗಿ ಸಾರ್ವಜನಿಕ ಶಿಕ್ಷಣ ಇಲಾಖೆ ಸೇತು ಬಂಧ ಕಾರ್ಯಕ್ರಮ ಅನುಷ್ಠಾನ ಮಾಡಿದೆ. ಮೊದಲ ದಿನದ ತರಗತಿಗಳು ಸೋಮವಾರ ನಡೆದಿದೆ. ವಿದ್ಯಾರ್ಥಿ ಗಳಿಗೆ ತರಗತಿ ಕೊಠಡಿಯ ಅನುಭವ ಸಿಗದೇ ಇದ್ದರೂ, ಕಲಿಕೆ ಹಾಗೂ ಬೋಧನಾ ವಿಧಾನದ ವಿಶಿಷ್ಟ ಅನುಭವನ್ನು ವಿದ್ಯಾರ್ಥಿಗಳಿಗೆ ನೀಡುತ್ತಿದ್ದೇವೆ ಎಂದು ರಾಜ್ಯ ಶಿಕ್ಷಣ ಸಂಶೋಧನೆ ಹಾಗೂ ತರಬೇತಿ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು ಹೇಳಿದರು.

ಮಕ್ಕಳು ಅತ್ಯಂತ ಸುಲಭವಾಗಿ ಅರ್ಥೈಸಿಕೊಳ್ಳಬಹುದಾದ ಸರಳ ವಿಧಾನದಲ್ಲೇ ಬೋಧನೆಯಿದೆ. ಪಾಠದ ಮಧ್ಯದಲ್ಲಿ ಏನೇ ಸಂಶಯಗಳು ಎದುರಾ ದರೂ ಅದನ್ನು ಪ್ರತ್ಯೇಕವಾಗಿ ಬರೆದಿಟ್ಟುಕೊಂಡು ತರಗತಿ ಮುಗಿದ ನಂತರ ವಿದ್ಯಾರ್ಥಿಗಳು ಸಂಬಂಧ  ಪಟ್ಟ ಶಾಲೆಯ ಶಿಕ್ಷಕರೊಂದಿಗೆ ದೂರವಾಣಿ ಮೂಲಕ ಮಾತನಾಡಿ ಬಗೆಹರಿಸಿಕೊಳ್ಳುವ ವ್ಯವಸ್ಥೆಯಿದೆ. ಶಿಕ್ಷಕರು ಕೂಡ ವಿದ್ಯಾರ್ಥಿಗಳ ಮನೆಗೆ ಭೇಟಿ ನೀಡಲಿದ್ದಾರೆ ಎಂದು ಶಿಕ್ಷಣ ಇಲಾಖೆಯ ಅಧಿಕಾರಿ ವಿವರಿಸಿದರು.

ಸೇತುಬಂಧ ಕಾರ್ಯಕ್ರಮಕ್ಕೆ ಮೊದಲ ದಿನವೇ ನಿರೀಕ್ಷೆಗೂ ಮೀರಿದ ಪ್ರತಿಕ್ರಿಯೆ ಬಂದಿದೆ. ದೂರದರ್ಶನದ ಪ್ರಸಾರವಾದ ತರಗತಿಗಳನ್ನು ಮಕ್ಕಳ ಅನುಕೂಲಕ್ಕಾಗಿ ಯೂಟ್ಯೂಬ್‌ ಚಾನಲ್‌ಗ‌ಳಲ್ಲೂ ಅಪ್‌ಲೋಡ್‌ ಮಾಡಿದ್ದೇವೆ. ಈಗ ಇಂಗ್ಲಿಷ್‌ ಮಾಧ್ಯಮ ತರಗತಿಗಳ ಬೇಡಿಕೆಯು ಹೆಚ್ಚುತ್ತಿದೆ. ಹೀಗಾಗಿ ಈ ನಿಟ್ಟಿನಲ್ಲೂ ಕ್ರಮ ತೆಗೆದುಕೊಳ್ಳುತ್ತಿದ್ದೇವೆ. ಗ್ರಾಮೀಣ ಭಾಗದ ಪ್ರತಿ ವಿದ್ಯಾರ್ಥಿಯನ್ನು ತಲುಪುವುದು ನಮ್ಮ ಉದ್ದೇಶವಾಗಿದೆ. ಎಂ.ಆರ್‌.ಮಾರುತಿ, ನಿರ್ದೇಶಕ, ಡಿಎಸ್‌ಇಆರ್‌ಟಿ

ಟಾಪ್ ನ್ಯೂಸ್

Christmas, ವರ್ಷಾಂತ್ಯ ಸಂಭ್ರಮ; ಬೀಚ್‌ಗಳಿಗೆ ಜೀವಕಳೆ

Christmas, ವರ್ಷಾಂತ್ಯ ಸಂಭ್ರಮ; ಬೀಚ್‌ಗಳಿಗೆ ಜೀವಕಳೆ

Captain Brijesh Chowta: ಪಿಎಂ-ವಿಶ್ವಕರ್ಮ ಯೋಜನೆ ಯಶಸ್ವಿ ಅನುಷ್ಠಾನಕ್ಕೆ ಸೂಚನೆ

Captain Brijesh Chowta: ಪಿಎಂ-ವಿಶ್ವಕರ್ಮ ಯೋಜನೆ ಯಶಸ್ವಿ ಅನುಷ್ಠಾನಕ್ಕೆ ಸೂಚನೆ

Kundapura: “ಅವರು ಪ್ರತೀ ದಿನ ಫೋನ್‌ ಮಾಡುತ್ತಿದ್ದರು… ಅಂದು ನನ್ನ ಕರೆಗೆ ಉತ್ತರಿಸಲಿಲ್ಲ’

Kundapura: “ಅವರು ಪ್ರತೀ ದಿನ ಫೋನ್‌ ಮಾಡುತ್ತಿದ್ದರು… ಅಂದು ನನ್ನ ಕರೆಗೆ ಉತ್ತರಿಸಲಿಲ್ಲ’

Pushpa 2: 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ

Pushpa 2film : 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ

Uttar Pradesh: ಸಂಭಲ್‌ನ ಪ್ರಾಚೀನ ಬಾವಿಯ ಉತ್ಖನನ, ನವೀಕರಣಕ್ಕೆ ಚಾಲನೆ

Uttar Pradesh: ಸಂಭಲ್‌ನ ಪ್ರಾಚೀನ ಬಾವಿಯ ಉತ್ಖನನ, ನವೀಕರಣಕ್ಕೆ ಚಾಲನೆ

Uttarakhand ಹೈಕೋರ್ಟ್‌ ಸಿ.ಜೆ. ಆಗಿ ನರೇಂದ್ರ ಪ್ರಮಾಣ ವಚನ ಸ್ವೀಕಾರ

Uttarakhand ಹೈಕೋರ್ಟ್‌ ಸಿ.ಜೆ. ಆಗಿ ನರೇಂದ್ರ ಪ್ರಮಾಣ ವಚನ ಸ್ವೀಕಾರ

PM Modi: ತಂತ್ರಜ್ಞಾನವನ್ನು ಅರಿತು ಅಳವಡಿಸಿಕೊಳ್ಳಬೇಕು: ಯವಜನಕ್ಕೆ ಮೋದಿ ಕರೆ

PM Modi: ತಂತ್ರಜ್ಞಾನವನ್ನು ಅರಿತು ಅಳವಡಿಸಿಕೊಳ್ಳಬೇಕು: ಯವಜನಕ್ಕೆ ಮೋದಿ ಕರೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಚಲಿಸುತ್ತಿದ್ದ ರೈಲಿಗೆ ಸಿಲುಕಿ ಇಬ್ಬರು ಯುವಕರು ಸಾವು

Bengaluru: ಚಲಿಸುತ್ತಿದ್ದ ರೈಲಿಗೆ ಸಿಲುಕಿ ಇಬ್ಬರು ಯುವಕರು ಸಾವು

Fraud Case: ಡಿಕೆಸು ಹೆಸರಿನಲ್ಲಿ 8.4 ಕೋಟಿ ರೂ. ವಂಚನೆ; ಆರೋಪಿಗಳಿಗೆ ನೋಟಿಸ್‌

Fraud Case: ಡಿಕೆಸು ಹೆಸರಿನಲ್ಲಿ 8.4 ಕೋಟಿ ರೂ. ವಂಚನೆ; ಆರೋಪಿಗಳಿಗೆ ನೋಟಿಸ್‌

Arrested: ಸ್ನೇಹಿತನ ಹತ್ಯೆಗೈದಿದ್ದ ಆರೋಪಿ ಬಂಧನ

Arrested: ಸ್ನೇಹಿತನ ಹತ್ಯೆಗೈದಿದ್ದ ಆರೋಪಿ ಬಂಧನ

Toll fee: ಹೆಬ್ಬಾಳ-ಸಿಲ್ಕ್ ಬೋರ್ಡ್‌ ಸುರಂಗ ರಸ್ತೆ: ಕೇವಲ 18 ಕಿ.ಮೀ.ಗೆ 288 ರೂ. ಸುಂಕ?

Toll fee: ಹೆಬ್ಬಾಳ-ಸಿಲ್ಕ್ ಬೋರ್ಡ್‌ ಸುರಂಗ ರಸ್ತೆ: ಕೇವಲ 18 ಕಿ.ಮೀ.ಗೆ 288 ರೂ. ಸುಂಕ?

3

Bengaluru: ಕ್ಯಾಬ್‌ ಡಿಕ್ಕಿ;ಬುಲೆಟ್‌ನಲ್ಲಿ ತೆರಳುತ್ತಿದ್ದ ಸಾಫ್ಟ್ವೇರ್‌ ಎಂಜಿನಿಯರ್‌ ಸಾವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Christmas, ವರ್ಷಾಂತ್ಯ ಸಂಭ್ರಮ; ಬೀಚ್‌ಗಳಿಗೆ ಜೀವಕಳೆ

Christmas, ವರ್ಷಾಂತ್ಯ ಸಂಭ್ರಮ; ಬೀಚ್‌ಗಳಿಗೆ ಜೀವಕಳೆ

Captain Brijesh Chowta: ಪಿಎಂ-ವಿಶ್ವಕರ್ಮ ಯೋಜನೆ ಯಶಸ್ವಿ ಅನುಷ್ಠಾನಕ್ಕೆ ಸೂಚನೆ

Captain Brijesh Chowta: ಪಿಎಂ-ವಿಶ್ವಕರ್ಮ ಯೋಜನೆ ಯಶಸ್ವಿ ಅನುಷ್ಠಾನಕ್ಕೆ ಸೂಚನೆ

Kundapura: “ಅವರು ಪ್ರತೀ ದಿನ ಫೋನ್‌ ಮಾಡುತ್ತಿದ್ದರು… ಅಂದು ನನ್ನ ಕರೆಗೆ ಉತ್ತರಿಸಲಿಲ್ಲ’

Kundapura: “ಅವರು ಪ್ರತೀ ದಿನ ಫೋನ್‌ ಮಾಡುತ್ತಿದ್ದರು… ಅಂದು ನನ್ನ ಕರೆಗೆ ಉತ್ತರಿಸಲಿಲ್ಲ’

Pushpa 2: 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ

Pushpa 2film : 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ

Uttar Pradesh: ಸಂಭಲ್‌ನ ಪ್ರಾಚೀನ ಬಾವಿಯ ಉತ್ಖನನ, ನವೀಕರಣಕ್ಕೆ ಚಾಲನೆ

Uttar Pradesh: ಸಂಭಲ್‌ನ ಪ್ರಾಚೀನ ಬಾವಿಯ ಉತ್ಖನನ, ನವೀಕರಣಕ್ಕೆ ಚಾಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.