ಒಎಫ್ಸಿ ನಷ್ಟ ತಡೆಗೆ ಸಮಿತಿ ರಚನೆ
Team Udayavani, Aug 14, 2018, 4:46 PM IST
ಬೆಂಗಳೂರು: ನಗರದಲ್ಲಿ ಅನಧಿಕೃತವಾಗಿ ಅಳವಡಿಸಿರುವ ಆಪ್ಟಿಕಲ್ ಫೈಬರ್ ಕೇಬಲ್‌ಗಳಿಂದ (ಒಎಫ್ಸಿ) ಪಾಲಿಕೆಗೆ ಆಗುತ್ತಿರುವ ನಷ್ಟ ತಡೆದು, ಆದಾಯ ಕ್ರೋಢೀಕರಣಕ್ಕಾಗಿ ಸಮಿತಿ ರಚಿಸಲು ಬಿಬಿಎಂಪಿ ತೀರ್ಮಾನಿಸಿದೆ.
ಸೋಮವಾರ ಬಿಬಿಎಂಪಿ ಸಭೆಯಲ್ಲಿ ಪಕ್ಷಾತೀತವಾಗಿ ಪಾಲಿಕೆಯ ಎಲ್ಲ ಸದಸ್ಯರು ಒಎಫ್ಸಿಯಿಂದ ನಾಗರಿಕರಿಗೆ ಆಗುತ್ತಿರುವ ತೊಂದರೆಗಳು ಹಾಗೂ ಪಾಲಿಕೆಗೆ ಆಗುತ್ತಿರುವ ನಷ್ಟದ ಕುರಿತು ವಿಷಯ ಮಂಡಿಸಿದರು. ಆ ಹಿನ್ನೆಲೆಯಲ್ಲಿ ಒಎಫ್ಸಿ ವಿಭಾಗದಿಂದ ಪಾಲಿಕೆಗೆ ಬರಬೇಕಾದ ಆದಾಯ ಸಂಗ್ರಹಿಸಲು ಆಡಳಿತ ಪಕ್ಷ ನಾಯಕ ಸಮ್ಮುಖದಲ್ಲಿ ಸಮಿತಿ ರಚಿಸುವುದಾಗಿ ಮೇಯರ್ ಸಂಪತ್‌ರಾಜ್ ತಿಳಿಸಿದರು.
ಪಾಲಿಕೆಯ ಹಿರಿಯ ಸದಸ್ಯ ಎಂ.ಕೆ.ಗುಣಶೇಖರ್ ಮಾತನಾಡಿ, ಜನಪ್ರತಿನಿಧಿಗಳು ಸ್ಥಳಕ್ಕೆ ತೆರಳಿ ಅನಧಿಕೃತ ಕೇಬಲ್‌ಗಳನ್ನು ತೆರವುಗೊಳಿಸಿದರೆ, ಪಾಲಿಕೆಯ ಅಧಿಕಾರಿಗಳು ಒಎಫ್ಸಿ ಸಂಸ್ಥೆಗಳೊಂದಿಗೆ ಶಾಮೀಲಾಗಿ ಪಾಲಿಕೆಗೆ ನಷ್ಟವುಂಟು ಮಾಡುತ್ತಿದ್ದಾರೆ. ಪಾಲಿಕೆಯ ಸಂಬಳ ಪಡೆದು ಪಾಲಿಕೆಗೆ ಮೋಸ ಮಾಡುವ ಇಂತಹ ನೀಚ ಅಧಿಕಾರಿಗಳು ನಮಗೆ ಬೇಕೇ? ಎಂದು ಆಕ್ರೋಶ ವ್ಯಕ್ತಪಡಿಸಿದರು.
ನಗರಾಭಿವೃದ್ಧಿ ಸಚಿವರು, ಸರ್ಕಾರ ಮುಖ್ಯ ಕಾರ್ಯದರ್ಶಿಗಳು, ಹೆಚ್ಚುವರಿ ಮುಖ್ಯಕಾರ್ಯದರ್ಶಿಗಳು ಒಎಫ್ಸಿ ಸಂಸ್ಥೆಗಳ ಸಂಸ್ಥೆಗಳೊಂದಿಗೆ ಹಲವಾರು ಬಾರಿ ಸಭೆ ನಡೆಸಿದ್ದು, ಸಭೆಗಳಲ್ಲಿ ಏಜೆನ್ಸಿಗಳು 15 ದಿನಗಳಲ್ಲಿ ತಾವು ಹೊಂದಿರುವ ಕೇಬಲ್ ಮಾಹಿತಿ ನೀಡುವುದಾಗಿ ಒಪ್ಪಿಕೊಂಡಿದ್ದಾರೆ. ಆದರೆ, ಈವರೆಗೆ ಮಾಹಿತಿ ಘೋಷಣೆ ಮಾಡಿಕೊಂಡಿಲ್ಲ. ಇದೀಗ ನಮಗೆ ಪಾಲಿಕೆ ಅವಕಾಶ ನೀಡುತ್ತಿಲ್ಲವೆಂದು ಹೇಳಲು ಸಂಸ್ಥೆಗಳಿಗೆ ನಾಚಿಕೆಯಾಗಬೇಕು ಎಂದು ತರಾಟೆಗೆ ತೆಗೆದುಕೊಂಡರು.
ಅದಕ್ಕೆ ದನಿಗೂಡಿಸಿದ ಪ್ರತಿಪಕ್ಷ ನಾಯಕ ಪದ್ಮನಾಭರೆಡ್ಡಿ, ಕೇಂದ್ರ ಸರ್ಕಾರ ಒಂದು ಮೀಟರ್ ಕೇಬಲ್ ಅಳವಡಿಕೆಗೆ 500 ರೂ. ಶುಲ್ಕ ನಿಗದಿಗೊಳಿಸಿದೆ. ಆದರೆ, ಬಿಬಿಎಂಪಿ ಅಧಿಕಾರಿಗಳು 300 ರೂ. ಮಾತ್ರ ಪಡೆಯುತ್ತಿದ್ದಾರೆ. ಒಎಫ್ಸಿ ಸಂಸ್ಥೆಗಳು ಪ್ರತಿ ತಿಂಗಳು ಸಾವಿರಾರು ಕೋಟಿ ಆದಾಯ ಪಡೆಯುತ್ತಿದ್ದಾರೆ. ಆದರೆ, ಪಾಲಿಕೆಗೆ ಸಮರ್ಪಕವಾಗಿ ಶುಲ್ಕ ಪಾವತಿಸಲು ಮುಂದಾಗುತ್ತಿಲ್ಲ. ಹೀಗಾಗಿ ಅಂತಹವರ ವಿರುದ್ಧ ಕ್ರಮಕ್ಕೆ
ಮುಂದಾಗಬೇಕು ಎಂದು ಒತ್ತಾಯಿಸಿದರು.
“ಏರೋ ಇಂಡಿಯಾ’ ಸ್ಥಳಾಂತರಿಸದಂತೆ ನಿರ್ಣಯ
ಹತ್ತಾರು ವರ್ಷಗಳಿಂದ ಬೆಂಗಳೂರಿನಲ್ಲಿ ನಡೆಸಿಕೊಂಡು ಬಂದಿರುವ “ಏರೋ ಇಂಡಿಯಾ’ ವೈಮಾನಿಕ ಪ್ರದರ್ಶನವನ್ನು ಬೆಂಗಳೂರಿನಿಂದ ಲಖೊ°àಗೆ ಸ್ಥಳಾಂತರಿಸದಂತೆ ಪ್ರಧಾನ ಮಂತ್ರಿಗಳು ಹಾಗೂ ರಕ್ಷಣಾ ಸಚಿವರನ್ನು ಕೋರುವಂತೆ ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲು ಕೌನ್ಸಿಲ್ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಯಿತು.
ಸಭೆಯ ಆರಂಭದಲ್ಲಿಯೇ ವಿಷಯ ಪ್ರಸ್ತಾಪಿಸಿದ ಮೇಯರ್ ಸಂಪತ್‌ರಾಜ್, ಪ್ರತಿಷ್ಠಿನ ಏರೋ ಇಂಡಿಯಾ ಬೆಂಗಳೂರಿನ ಹೆಮ್ಮೆಯಾಗಿದೆ. ಬೇರೆಡೆಗೆ ಸ್ಥಳಾಂತರ ಮಾಡದಂತೆ ನಿಮ್ಮ ಸಂಸದರಲ್ಲಿ ಮನವಿ ಮಾಡುವಂತೆ ಬಿಜೆಪಿ ಪಾಲಿಕೆ ಸದಸ್ಯರನ್ನು ಕೋರಿದರು. ಜತೆಗೆ ಈ ಕುರಿತಂತೆ ಪಾಲಿಕೆಯಿಂದ ನಿರ್ಣಯ ಕೈಗೊಳ್ಳಲಾಗುವುದು ಎಂದು ಹೇಳಿದರು.
ನಿರ್ಣಯ ಕೈಗೊಂಡ ನಂತರ ಮಾತನಾಡಿದ ಪದ್ಮನಾಭರೆಡ್ಡಿ, ಏರೋ ಇಂಡಿಯಾ ಸ್ಥಳಾಂತರಿಸದಂತೆ ನಿಮ್ಮ ಪಕ್ಷದ ನಾಯಕರು ಆರೋಪಿಸಿದ್ದಾರೆ. ಅದಕ್ಕೆ ಪೂರಕವೆಂಬಂತೆ ನೀವು ನಿರ್ಣಯ ಕೈಗೊಂಡಿದ್ದು, ಇದೊಂದು ರಾಜಕೀಯ ಪ್ರೇರಿತ ನಿರ್ಣಯವಾಗಿದೆ ಎಂದು ಆರೋಪಿಸಿದರು.
ಅದಕ್ಕೆ ಪ್ರತಿಕ್ರಿಯಿಸಿದ ಆಡಳಿತ ಪಕ್ಷ ನಾಯಕ ಎಂ.ಶಿವರಾಜು, ಹಾಗಾದರೆ ಬೆಂಗಳೂರಿನಲ್ಲಿ ಏರೋ ಇಂಡಿಯಾ ನಡೆಯಲು ಬಿಜೆಪಿಯ ಸಹಮತವಿಲ್ಲವೇ? ಎಂದು ತರಾಟೆಗೆ ತೆಗೆದುಕೊಂಡರು. ಅದಕ್ಕೆ ದನಿಗೂಡಿಸಿದ ಮೇಯರ್, ಬಿಜೆಪಿ ಪಾಲಿಕೆ ಸದಸ್ಯರು ಎದ್ದು ನಿಂತು ಬೆಂಗಳೂರಿನಲ್ಲಿಯೇ ಏರೋ ಇಂಡಿಯಾ ನಡೆಸಬೇಕೆಂದು ಒತ್ತಾಯಿಸಬಹುದು ಎಂದು ಭಾವಿಸಿದ್ದೆ. ಆದರೆ, ನೀವು ನಿರ್ಣಯವನ್ನು ರಾಜಕೀಯ ಪ್ರೇರಿತ ಎನ್ನುತ್ತಿದ್ದೀರಾ ಎಂದು ಮಾರ್ಮಿಕವಾಗಿ ಟಾಂಗ್ ನೀಡಿದರು.
ಇನ್ಸುಲೇಟರ್ ಅಳವಡಿಸಿ: ಪಾಲಿಕೆಯ ಎಲ್ಲ ಶಾಲಾ-ಕಾಲೇಜುಗಳಲ್ಲಿ ಹೆಣ್ಣು ಮಕ್ಕಳ ಅನುಕೂಲಕ್ಕಾಗಿ ಸ್ಯಾನಿಟರಿ ಪ್ಯಾಡ್ ಎನ್ಸುಲೇಟರ್ ಗಳನ್ನು ಅಳವಡಿಸಲು ಆದ್ಯತೆಯ ಮೇಲೆ ಕ್ರಮಕೈಗೊಳ್ಳಬೇಕು ಎಂದು ಬಿಜೆಪಿ ಸದಸ್ಯ ದ್ವಾರಕನಾಥ್ ಒತ್ತಾಯಿಸಿದರು.
ದಾಖಲೆ ಸಭೆಗಳನ್ನು ನಡೆಸಿದ್ದೀರಾ: ಪ್ರತಿ ತಿಂಗಳು ಚುಕ್ಕೆ ಗುರುತಿನ ಪ್ರಶ್ನೆ ನಡೆಸಿದ್ದರೆ ಅಧಿಕಾರಿಗಳು ನಿಮ್ಮ ಹಿಡಿತದಲ್ಲಿರುತ್ತಿದ್ದರು ಎಂಬ ಪದ್ಮನಾಭರೆಡ್ಡಿ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಮೇಯರ್, ನಾಲ್ಕು ತಿಂಗಳು ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿತ್ತು. ಇನ್ನೆರಡು ತಿಂಗಳು
ಮಳೆಯಿಂದ ಹೆಚ್ಚಿನ ಅನಾಹುತಗಳು ಸಂಭವಿಸಿದವು ಎಂದರು. ಈ ವೇಳೆ ಮಾತನಾಡಿದ ಉಮೇಶ್ ಶೆಟ್ಟಿ, ಆದರೂ ಪಾಲಿಕೆಯಲ್ಲಿ ಹೆಚ್ಚಿನ ಸಭೆ ನಡೆಸಿದ ಎಂಬ ಮೇಯರ್ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದೀರಾಲ್ವಾ ಎಂದು ಕಿಚಾಯಿಸಿದರು.
ಸಂತಾಪ ಸೂಚನೆ: ಪಾಲಿಕೆ ಸಭೆಯ ಆರಂಭದಲ್ಲಿಯೇ ಇತ್ತೀಚೆಗೆ ನಿಧನರಾದ ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಕರುಣಾನಿಧಿ ಅವರ ಆತ್ಮಕ್ಕೆ ಶಾಂತಿ ಕೋರಿ ಮೌನಾಚರಣೆ ನಡೆಸಿದರು.
ಹೇಳಿಕೆ ಬದಲಿಸಿದ ಮೇಯರ್
ಬೆಂಗಳೂರು: ಗಣೇಶ ಹಬ್ಬದಂದು ಮೂರ್ತಿ ಪ್ರತಿಷ್ಠಾಪಿಸಲು ಪಾಲಿಕೆಗೆ ಶುಲ್ಕ ಪಾವತಿಸಬೇಕು ಎಂದು ಸೋಮವಾರ ಬೆಳಗ್ಗೆ ಹೇಳಿಕೆ ನೀಡಿದ್ದ ಮೇಯರ್ ಸಂಪತ್‌ರಾಜ್ ವಿವಿಧ ಸಂಘಗಳು ಹಾಗೂ ಬಿಬಿಎಂಪಿ ಸದಸ್ಯರಿಂದ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಸಂಜೆ ವೇಳೆಗೆ ತಮ್ಮ ಹೇಳಿಕೆಯನ್ನು ಬದಲಿಸಿದ್ದಾರೆ.
ಗೌರಿ-ಗಣೇಶ ಹಬ್ಬದ ಅಂಗವಾಗಿ ನಗರದ ವಿವಿಧೆಡೆ ಗಣೇಶ ಮೂರ್ತಿ ಪ್ರತಿಷ್ಠಾಪಿಸಲಾಗುತ್ತದೆ. ಆದರೆ, ಈ ಬಾರಿ ಗಣೇಶ ಮೂರ್ತಿಪ್ರತಿಷ್ಠಾಪನೆಗೆ ಬಿಬಿಎಂಪಿಯಿಂದ ಅನುಮತಿ ಪಡೆಯುವ ವೇಳೆ ಮೂರ್ತಿ ಇಡುವ ವಿಸ್ತೀರ್ಣದ ಪ್ರತಿ ಚದರ ಅಡಿಗೆ 10 ರೂ. ಶುಲ್ಕ ಪಾವತಿಸಬೇಕು ಎಂದಿದ್ದರು.
ಈ ನಿರ್ಧಾರಕ್ಕೆ ವಿರೋಧ ವ್ಯಕ್ತವಾದ ನಂತರ ದೊಡ್ಡ ಮಟ್ಟದಲ್ಲಿ ಬಿಬಿಎಂಪಿ ಮೈದಾನಗಳಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಮಾತ್ರ ಶುಲ್ಕ ಪಡೆಯುತ್ತೇವೆ ಎಂದು ಬದಲಿ ಹೇಳಿಕೆ ನೀಡಿ ಜಾರಿಕೊಳ್ಳುವ ಪ್ರಯತ್ನ ಮಾಡಿದರು.
ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಶುಲ್ಕ ವಿಧಿಸಲಾಗುವುದು ಎಂಬ ಮೇಯರ್ ಹೇಳಿಕೆಗೆ ಬಿಬಿಎಂಪಿ ವಿರೋಧ ಪಕ್ಷದ ನಾಯಕ ಪದ್ಮನಾಭರೆಡ್ಡಿ ಅಸಮಧಾನ ವ್ಯಕ್ತಪಡಿಸಿದ್ದು, ಮೇಯರ್ ಸಂಪತ್‌ರಾಜ್ ಹಿಂದೂ ವಿರೋಧಿ ರೀತಿಯಲ್ಲಿ ವರ್ತಿಸುತ್ತಿದ್ದಾರೆ. ಪಾಲಿಕೆ ಬಜೆಟ್‌ನಲ್ಲಿ ದೇವಸ್ಥಾನಗಳ ಅಭಿವೃದ್ಧಿಗೆ ಹಣ ಮೀಸಲಿಟ್ಟಿಲ್ಲ. ಇದೀಗ ಗಣೇಶ ಮೂರ್ತಿ ಪ್ರತಿಷ್ಠಾನಪನೆಗೆ ಶುಲ್ಕ ವಿಧಿಸುವ ಮೂಲಕ ತಾವೊಬ್ಬ ಹಿಂದು ಧರ್ಮ ವಿರೋಧಿ ಎಂಬುದನ್ನು ಸಾಬೀತು ಪಡೆಸುತ್ತಿದ್ದಾರೆ ಎಂದು ದೂರಿದರು. ಇನ್ನು ಮೇಯರ್ ಹೇಳಿಕೆ ವಿರೋಧಿಸಿ ಮಂಗಳವಾರ ಬಿಜೆಪಿ ಸದಸ್ಯರು ಪ್ರತಿಭಟನೆ ನಡೆಸಲಿದ್ದಾರೆ ಎಂದು ತಿಳಿಸಿದರು.
ಪಾಲಿಕೆ ಎದುರು ಧರಣಿ ನಡೆಸುತ್ತೇನೆ: ಸಚಿವರು ಹಾಗೂ ಹಿರಿಯ ಅಧಿಕಾರಿಗಳು 15 ದಿನಗಳಲ್ಲಿ ಮಾಹಿತಿ ನೀಡಿದಂತಹ ಸಂಸ್ಥೆಗಳು ಅಳವಡಿಸಿರುವ ಕೇಬಲ್ ತೆರವುಗೊಳಿಸವಂತೆ ಸೂಚಿಸಿದ್ದಾರೆ. ಆದರೆ, ಏಜೆನ್ಸಿಗಳೊಂದಿಗೆ ಶಾಮೀಲಾಗಿರುವ ಅಧಿಕಾರಿಗಳು ಈವರೆಗೆ ತೆರವು ಕಾರ್ಯಾಚರಣೆ
ನಡೆಸದಿರುವುದು “ಹಣಕಾಸು ಅಪರಾಧ’ವಾಗಿದೆ. ಹೀಗಾಗಿ ಒಎಫ್ಸಿ ಕುರಿತು ಶ್ವೇತ ಪತ್ರ ಹೊರಡಿಸಬೇಕು. ಮುಂದಿನ 15 ದಿನಗಳಲ್ಲಿ ಕ್ರಮಕ್ಕೆ ಮುಂದಾಗದಿದ್ದರೆ ಪಾಲಿಕೆ ಕಟ್ಟಡದ ಎದುರು ಧರಣಿ ನಡೆಸಲಾಗುವುದು ಎಂದು ಗುಣಶೇಖರ್ ಎಚ್ಚರಿಕೆ ನೀಡಿದರು.
ಅದಕ್ಕೆ ಸ್ಪಂದಿಸಿದ ಮೇಯರ್, ಆಡಳಿತ ಪಕ್ಷದ ನಾಯಕರ ನೇತೃತ್ವದಲ್ಲಿ ಎಲ್ಲ ಪಕ್ಷಗಳ ಹಿರಿಯ ಸದಸ್ಯರನ್ನು ಒಳಗೊಂಡ ಸಮಿತಿ ರಚಿಸಲಾಗುವುದು. ಸಮಿತಿಯು ಒಎಫ್ಸಿಯಿಂದ ಆಗುತ್ತಿರುವ ನಷ್ಟ ಹಾಗೂ ಪರಿಹಾರ ಕ್ರಮಗಳ ಕುರಿತು ನೀಡುವ ವರದಿ ಪರಿಶೀಲಿಸಿ ಕ್ರಮಕೈಗೊಳ್ಳಲಾಗುವುದು ಎಂದರು.
ಟವರ್‌ಗೆ 5 ಲಕ್ಷ ಶುಲ್ಕ ವಿಧಿಸಿ: ಬಿಬಿಎಂಪಿ ವ್ಯಾಪ್ತಿಯಲ್ಲಿ 6,766 ಅಧಿಕೃತ ಮೊಬೈಲ್ ಟವರ್‌ಗಳಿದ್ದು, ಪಾಲಿಕೆಯಿಂದ ಪ್ರತಿ ಟವರ್‌ಗೆ 50 ಸಾವಿರ ರೂ. ಶುಲ್ಕ ನಿಗದಿಪಡಿಸಲಾಗಿದೆ. ಆದರೆ, ಹಿಮಾಚಲ ಪ್ರದೇಶದಲ್ಲಿ 2006ರಿಂದಲೇ ಟವರ್ ಅಳವಡಿಕೆಗೆ 20 ಸಾವಿರ ರೂ. ಆರಂಭಿಕ ಶುಲ್ಕ ಹಾಗೂ ಮಾಸಿಕ 10 ಸಾವಿರ ಬಾಡಿಗೆ ಪಡೆಯಲಾಗುತ್ತಿದೆ. ಅದೇ ರೀತಿ 2009-10 ರಿಂದ ದೆಹಲಿಯಲ್ಲಿ 5 ಲಕ್ಷ ರೂ. ಟವರ್ ಅಳವಡಿಕೆ ಶುಲ್ಕ
ಪಡೆಯಲಾಗುತ್ತಿದೆ. ಹೀಗಾಗಿ ದೆಹಲಿ ಮಾದರಿಯಲ್ಲಿ ಪ್ರತಿ ಟವರ್‌ಗೆ 5 ಲಕ್ಷ ರೂ. ನಿಗದಿಪಡಿಸಬೇಕು ಎಂದು ವಿಪಕ್ಷ ನಾಯಕ ಪದ್ಮನಾಭರೆಡ್ಡಿ ಒತ್ತಾಯಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಇಬ್ಬರು ಮಕ್ಕಳಿಗೆ ವಿಷವುಣಿಸಿ ಕೊಂದು ಟೆಕಿ ದಂಪತಿ ಆತ್ಮಹ*ತ್ಯೆ!
Arrested: ಮಾದಕವಸ್ತು ದಂಧೆ ಪ್ರಕರಣದಲ್ಲಿ ಭಾಗಿಯಾಗಿದ್ದ ರೌಡಿಶೀಟರ್ ಬಂಧನ
Bengaluru: ಸೆಂಟ್ರಿಂಗ್ ಮರ ಬಿದ್ದು ಬಾಲಕಿ ಸಾವು: ಎಂಜಿನಿಯರ್ ವಶಕ್ಕೆ
Actor Darshan: ಮೈಸೂರಿಗೆ ತೆರಳಲು ದರ್ಶನ್‌ಗೆ ನೀಡಿದ್ದ 2 ವಾರಗಳ ಗಡುವು ಅಂತ್ಯ
Bengaluru: ಯುವತಿ ಜೊತೆ ಅಸಭ್ಯ ವರ್ತನೆ: ಮ್ಯಾನೇಜರ್, ಮತ್ತಿಬ್ಬರ ಮೇಲೆ ಕೇಸ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Bird Flu: ಹಕ್ಕಿ ಜ್ವರಕ್ಕೆ 3 ಹುಲಿ, 1 ಚಿರತೆ ಸಾ*ವು… ಪ್ರಾಣಿಗಳಿಗೆ ಕ್ವಾರಂಟೈನ್
540 ಅಡಿ ಆಳದ ಬೋರ್ವೆಲ್ಗೆ ಬಿದ್ದ ಯುವತಿ: ಯುವಕನ ಜತೆ ಮನಸ್ತಾಪದಿಂದ ಆತ್ಮಹತ್ಯೆಗೆ ಯತ್ನ?
Delhi Assembly Election: ದೆಹಲಿ ವಿಧಾನಸಭೆ ಚುನಾವಣೆಗೆ ಇಂದು ದಿನಾಂಕ ನಿಗದಿ
ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು
ಏಕಕಾಲದಲ್ಲಿ ಭಾರತ ಸೇರಿ 3 ದೇಶಗಳಲ್ಲಿ ಕಂಪಿಸಿದ ಭೂಮಿ… ಟಿಬೆಟ್‌ನಲ್ಲಿ 7.1 ತೀವ್ರತೆ ಭೂಕಂಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.