ಯುವಕನ ಮೇಲೆ ಲೈಂಗಿಕ ದೌರ್ಜನ್ಯ
Team Udayavani, Jun 1, 2018, 11:55 AM IST
ಬೆಂಗಳೂರು: ಆಟೋ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ವಿಲಕ್ಷಣ ಘಟನೆ ನಗರದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಆರೋಪಿಯನ್ನು ಚೆನ್ನಮ್ಮನಕೆರೆ ಅಚ್ಚುಕಟ್ಟು ಠಾಣೆ ಪೊಲೀಸರು ಬಂಧಿಸಿದ್ದಾರೆ.
ಇಟ್ಟಮಡು ನಿವಾಸಿ ರಾಜೇಶ್ ಅಲಿಯಾಸ್ ಹುಲಿ (30) ಬಂಧಿತ. ಆರೋಪಿ ಆಟೋ ಚಾಲಕ ರಾಜೇಶ್ ಮೇ 23ರ ರಾತ್ರಿ 8 ಗಂಟೆಗೆ ನಾಯಂಡಹಳ್ಳಿ ಬಸ್ ನಿಲ್ದಾಣದಲ್ಲಿ ಪ್ರಯಾಣಿಕರಿಗೆ ಕಾಯುತ್ತಿದ್ದ. ಈ ವೇಳೆ 19 ವರ್ಷದ ಯುವಕನೊಬ್ಬ ಬಸವನಗುಡಿಗೆ ಹೋಗಲು ನಾಯಂಡಹಳ್ಳಿಯಿಂದ ರಾಜೇಶನ ಆಟೋ ಹತ್ತಿದ್ದ.
ಯುವಕನನ್ನು ಹತ್ತಿಸಿಕೊಂಡ ಆರೋಪಿ, “ಮಾರ್ಗ ಮಧ್ಯೆ ನನ್ನ ಮನೆ ಇದೆ. ಬಟ್ಟೆ ಬದಲಿಸಿ ಬರುತ್ತೇನೆ’ ಎಂದು ಹೇಳಿದ್ದಾನೆ. ಬಳಿಕ ಮನೆ ಮುಂದೆ ಆಟೋ ನಿಲ್ಲಿಸಿ ಮಹಡಿ ಮೇಲಿದ್ದ ಮನೆಗೆ ಹೋದ ರಾಜೇಶ್, ಒಂದೆರಡು ನಿಮಿಷ ಬಿಟ್ಟು ಸಹಾಯ ಬೇಕಿದೆ ಎಂದು ಯುವಕನನ್ನು ಮೇಲಕ್ಕೆ ಕರೆಸಿಕೊಂಡಿದ್ದಾನೆ. ಯುವಕ ಮನೆ ಒಳಗೆ ಬಂದ ಬಳಿಕ ಬಾಗಿಲು ಹಾಕಿಕೊಂಡು ಪ್ರಾಣ ಬೆದರಿಕೆಯೊಡ್ಡಿದ್ದಾನೆ.
ನಂತರ ಬಾಯಿಗೆ ಬಟ್ಟೆ ಕಟ್ಟಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಷ್ಟೇ ಅಲ್ಲದೆ, ಈ ಕೃತ್ಯವನ್ನು ವಿಡಿಯೋ ಕೂಡ ಮಾಡಿದ್ದಾನೆ. ಘಟನೆಯನ್ನು ಹೊರಗಡೆ ಬಾಯಿಬಿಟ್ಟರೆ ವಿಡಿಯೋವನ್ನು ಯೂಟ್ಯೂಬ್‌ನಲ್ಲಿ ಹಾಕುವುದಾಗಿ ಬೆದರಿಕೆಯೊಡಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿ ವಿರುದ್ಧ ಪ್ರಕರಣ ದಾಖಲಿಸಿ ನ್ಯಾಯಾಲಯದ ಮುಂದೆ ಹಾಜರುಪಡಿಸಿದ ನಂತರ, ನ್ಯಾಯಾಂಗ ವಶಕ್ಕೆ ಒಪ್ಪಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Brutal: ಪತ್ನಿ, ಇಬ್ಬರು ಮಕ್ಕಳನ್ನು ಮಚ್ಚಿನಿಂದ ಕೊಚ್ಚಿ ಕೊಂದ ಪತಿ!
Naxals Surrender: ಮುಖ್ಯಮಂತ್ರಿ ಸಮ್ಮುಖ ಶಸ್ತ್ರಾಸ್ತ್ರ ತ್ಯಜಿಸಿ ಶರಣಾದ 6 ನಕ್ಸಲರು
Bengaluru: ಪಾಲುದಾರನ ಕಿರುಕುಳ: ಉದ್ಯಮಿ ಆತ್ಮಹತ್ಯೆ
Atul Subhash Case: ಮೊಮ್ಮಗನನ್ನು ಟೆಕಿ ಅತುಲ್ ತಾಯಿಯ ಸುಪರ್ದಿಗೆ ವಹಿಸಲು ಸುಪ್ರೀಂ ನಕಾರ
illegal Investigation: ಬಿಬಿಎಂಪಿ ಮುಖ್ಯ ಎಂಜಿನಿಯರ್ ಕಚೇರಿ ಮೇಲೆ ಇ.ಡಿ. ದಾಳಿ
MUST WATCH
ಹೊಸ ಸೇರ್ಪಡೆ
Wrong Spelling: ಅಪಹರಣದ ಪತ್ರದಲ್ಲಿ ಅಕ್ಷರ ತಪ್ಪು ಬರೆದು ಸಿಕ್ಕಿಬಿದ್ದ ಭೂಪ!
Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ
ಚಂದ್ರಯಾನ, ಗಗನಯಾನ: ಇಸ್ರೋದ ಮಹತ್ವದ ಪ್ಲಾನ್: ವಿ.ನಾರಾಯಣನ್
Los Angeles wildfires: ಕ್ಯಾಲಿಫೋರ್ನಿಯಾದಲ್ಲಿ ಕಾಳ್ಗಿಚ್ಚು… ಐವರು ಸಾವು
Naxal Activity Calm: ಪಶ್ಚಿಮ ಘಟ್ಟದ ಕಾನನದಲ್ಲಿ ನಕ್ಸಲ್ ನಿಶ್ಶಬ್ದ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.