ಬಸ್ನಲ್ಲಿ ಲೈಂಗಿಕ ಕಿರುಕುಳ: ಟೆಕ್ಕಿ ಸೆರೆ
Team Udayavani, May 12, 2017, 11:37 AM IST
ಬೆಂಗಳೂರು: ಬಿಎಂಟಿಸಿ ವೋಲ್ವೋ ಬಸ್ನಲ್ಲಿ ಲೈಂಗಿಕ ಕಿರುಕುಳ ನೀಡಿದ ಟಿಕ್ಕಿ ವಿರುದ್ಧ ಸಂತ್ರಸ್ತೆ Know your police station ಮೊಬೈಲ್ ಆ್ಯಪ್ನಲ್ಲಿ ದೂರು ನೀಡಿದ್ದು, ಕೂಡಲೇ ಕಾರ್ಯಾಚರಣೆ ನಡೆಸಿದ ಪಿಂಕ್ ಹೊಯ್ಸಳ ಸಿಬ್ಬಂದಿ ವೋಲ್ವೋ ಬಸ್ನ್ನು ಹಿಂಬಾಲಿಸಿ ಕೆಲವೇ ಕ್ಷಣಗಳಲ್ಲಿ ಆರೋಪಿಯನ್ನು ಬಂಧಿಸಿದ್ದಾರೆ.
ಬನಶಂಕರಿಯ ಮಧುಸೂದನ್ (47) ಬಂಧಿತ ಟೆಕ್ಕಿ. ಆಂಧ್ರಪ್ರದೇಶ ಮೂಲದ ಮಧುಸೂದನ್ ನಗರದ ಸಾಫ್ಟ್ ವೇರ್ ಕಂಪನಿಯಲ್ಲಿ ಎಂಜಿನಿಯರ್ ಆಗಿದ್ದು, ಬನಶಂಕರಿ ಯಲ್ಲಿ ನೆಲೆಸಿದ್ದಾನೆ. ಮೆ 10ರಂದು ರಾತ್ರಿ 11 ಗಂಟೆಯಲ್ಲಿ ಬಿಎಂಟಿಸಿ ವೋಲ್ವೋ ಬಸ್ನಲ್ಲಿ ಇಬ್ಲೂರು ವರ್ತುಲ ರಸ್ತೆಯಲ್ಲಿ ಪ್ರಯಾಣಿಸುವಾಗ ಮುಂದಿನ ಸೀಟ್ನಲ್ಲಿ ಕುಳಿತ್ತಿದ್ದ ಯುವತಿ ಜತೆ ಅಸಭ್ಯವಾಗಿ ವರ್ತಿಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಸಂತ್ರಸ್ತೆ Know your police station ಆ್ಯಪ್ ಡೌನ್ಲೋಡ್ ಮಾಡಿಕೊಂಡು ಬೆಳ್ಳಂದೂರು ಪೊಲೀಸರಿಗೆ ದೂರು ನೀಡಿದ್ದಾರೆ. ತಕ್ಷಣ ಪಿಂಕ್ ಹೊಯ್ಸಳ ಸಿಬ್ಬಂದಿ ಮುಖ್ಯಪೇದೆ ಮಹೇಶ್, ಮಹಿಳಾ ಪೇದೆ ಪವಿತ್ರಾಗೆ ದೂರು ರವಾನೆಯಾಗಿದೆ.
ನಂತರ ವೋಲ್ವೋ ಬಸ್ನ್ನು ಹಿಂಬಾಲಿಸಿ ನಿಲ್ಲಿಸಿ ಆರೋಪಿಯನ್ನು ಬಂಧಿಸಿದ್ದಾರೆ. ಈತ ಈ ಹಿಂದೆಯೂ ಕಿರುಕುಳ ಕೊಟ್ಟಿರುವ ಮಾಹಿತಿ ಲಭ್ಯವಾಗಿದೆ. ಫೋಟೋ ಸಹ ತೆಗೆದಿದ್ದ ಎಂದು ಸಂತ್ರಸ್ತೆ ಆರೋಪಿಸಿದ್ದಾಗಿ ಪೊಲೀಸರು ತಿಳಿಸಿದ್ದಾರೆ. ಪ್ರಕರಣ ಬೆಳ್ಳಂದೂರು ಠಾಣೆಯಲ್ಲಿ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
INDvAUS; ಇತಿಹಾಸದಲ್ಲೇ ಮೊದಲ ಬಾರಿಗೆ…: 200 ವಿಕೆಟ್ ನೊಂದಿಗೆ ಹೊಸ ದಾಖಲೆ ಬರೆದ ಬುಮ್ರಾ
Aranthodu: ಉಡುಪಿಗೆ ಭತ್ತದ ಲೋಡ್ ಸಾಗಿಸುತ್ತಿದ್ದ ವೇಳೆ ಲಾರಿಗೆ ಆಕಸ್ಮಿಕ ಬೆಂಕಿ
Anandapura: ಬಸ್ ಹಾಗೂ ಕಾರು ಮುಖಾಮುಖಿ ಡಿಕ್ಕಿ; ಇಬ್ಬರು ಸ್ಥಳದಲ್ಲೇ ಸಾವು
Liquor Sale; ರಾಜ್ಯದಲ್ಲಿ ಒಂದೇ ದಿನ 408 ಕೋಟಿ ರೂ ಮೌಲ್ಯದ ಮದ್ಯ ಮಾರಾಟ ದಾಖಲೆ
S.Korea: ರನ್ ವೇಯಲ್ಲಿ ಸ್ಕಿಡ್ ಆಗಿ ಗೋಡೆಗೆ ಅಪ್ಪಳಿಸಿದ ವಿಮಾನ: ಇಲ್ಲಿದೆ ನೋಡಿ ವಿಡಿಯೋ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.