ಭದ್ರತೆ ನೆರಳಲ್ಲಿ ಪರಪ್ಪನ ಅಗ್ರಹಾರ
Team Udayavani, Feb 15, 2017, 11:44 AM IST
ಬೆಂಗಳೂರು: ಆದಾಯಕ್ಕಿಂತ ಹೆಚ್ಚಿನ ಆಸ್ತಿಗಳಿಸಿದ ಪ್ರಕರಣದಲ್ಲಿ ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ವಿ.ಕೆ.ಶಶಿಕಲಾ ಸೇರಿ ಮೂವರಿಗೆ ಸುಪ್ರೀಂ ಕೋರ್ಟ್ ನಾಲ್ಕು ವರ್ಷ ಶಿಕ್ಷೆ ವಿಧಿಸಿರುವ ಹಿನ್ನೆಲೆಯಲ್ಲಿ ಮೂವರು ಪರಪ್ಪನ ಅಗ್ರಹಾರ ವಿಶೇಷ ನ್ಯಾಯಾಲಯದ ಎದುರು ಬುಧವಾರ ಹಾಜರಾಗುವ ಸಾಧ್ಯತೆಯಿದೆ.
ಈ ಹಿನ್ನೆಲೆಯಲ್ಲಿ ಮುಂಜಾಗೃತ ಕ್ರಮವಾಗಿ ಕೇಂದ್ರ ಕಾರಾಗೃಹ ಹಾಗೂ ಸುತ್ತ-ಮುತ್ತಲಿನ ಪ್ರದೇಶದಲ್ಲಿ ಭದ್ರತೆ ಕಲ್ಪಿಸಲಾಗಿದೆ. ಸುಪ್ರೀಂ ಕೋರ್ಟ್ ತೀರ್ಪು ಹಿನ್ನೆಲೆಯಲ್ಲಿ ಶಶಿಕಲಾ, ಅವರ ಸ್ನೇಹಿತೆ ಇಳವರಸಿ, ಜಯಲಲಿತಾ ದತ್ತುಪುತ್ರ ಸುಧಾಕರನ್ ವಿಶೇಷ ಕೋರ್ಟ್‌ನ ನ್ಯಾಯಾಧೀಶರ ಎದುರು ಶರಣಾಗ ಬೇಕಿದೆ. ಬಳಿಕ ಕೋರ್ಟ್‌ನ ನಿಯಮಗಳು ಮುಗಿದ ಬಳಿಕ ಮೂವರನ್ನು ಪರಪ್ಪನ ಅಗ್ರಹಾರ ಕಾರಗೃಹಕ್ಕೆ ರವಾನಿಸಲಾಗುತ್ತದೆ.
ಮುಂಜಾಗೃತ ಕ್ರಮವಾಗಿ ಆಗ್ನೇಯ ವಿಭಾಗ ಡಿಸಿಪಿ ಬೋರಲಿಂಗಯ್ಯ ನೇತೃತ್ವದಲ್ಲಿ ಭದ್ರತೆ ಕ್ರಮ ಕೈಗೊಂಡಿದ್ದು, ಕಾರಾಗೃಹಕ್ಕೆ ಕರೆತರುವಾಗ ಯಾವುದೇ ಭದ್ರತಾ ಲೋಪವಾಗದಂತೆ ಮುನ್ನಚ್ಚರಿಕೆ ತೆಗೆದುಕೊಳ್ಳಲಾಗಿದೆ. ಈ ಸಂಬಂಧ ನಗರ ಪೊಲೀಸ್ ಆಯುಕ್ತ ಪ್ರವೀಣ್ ಸೂದ್ ಅವರು ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿದ್ದಾರೆ.
ಕೇಂದ್ರ ಕಾರಾಗೃಹದ ಬಳಿ ಒಂದು ಕೆಎಸ್‌ಆರ್‌ಪಿ ತುಕಡಿ ಹಾಗೂ ಹೊಸೂರು ಚೆಕ್‌ಪೋಸ್ಟ್ ಬಳಿ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸ್ ಸಿಬ್ಬಂದಿಯನ್ನು ಭದ್ರತೆಗೆ ನಿಯೋಜಿಸಲಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು “ಉದಯವಾಣಿ’ಗೆ ತಿಳಿಸಿದ್ದಾರೆ.
ವಿಶೇಷ ಭದ್ರತೆ ಇಲ್ಲ: ಈ ಹಿಂದೆ ಜಯಲಲಿತಾ ಅವರಿಗೆ ವಿಶೇಷ ಕೋರ್ಟ್ ಜೈಲು ಶಿಕ್ಷೆ ವಿಧಿಸಿದ್ದ ವೇಳೆ ಅವರು 2014ರಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿ 21 ದಿನ ಸೆರೆಮನೆ ವಾಸ ಅನುಭವಿಸಿದ್ದರು. ಮುಖ್ಯಮಂತ್ರಿ ಹಾಗೂ ಪ್ರಭಾವಿ ರಾಜಕಾರಣಿಯಾಗಿದ್ದ ಅವರಿಗೆ ಪ್ರಾಣ ಬೆದರಿಕೆ ಇದ್ದ ಕಾರಣ “ಝಡ್ ಪ್ಲಸ್’ ಭದ್ರತೆ ಇತ್ತು.
ಹೀಗಾಗಿ, ಭಾರೀ ಪೊಲೀಸ್ ಭದ್ರತೆ ಕಲ್ಪಿಸಲಾಗಿತ್ತು. ಶಶಿಕಲಾ ಅವರಿಗೆ ಅಷ್ಟು ಭದ್ರತೆ ಕೊಡಲಾಗದು. ಆದರೆ ಅವರು ಇಲ್ಲಿ ಇರುವ ಕಾರಣ ಮುಂಜಾಗ್ರತಾ ಕ್ರಮವಾಗಿ ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ಕಾರಾಗೃಹದ ಬಳಿ ಭದ್ರತೆ ಕಲ್ಪಿಸಲಾಗುವುದು ಎಂದು ಅಧಿಕಾರಿಯೊಬ್ಬರು ತಿಳಿಸಿದರು.
ಭದ್ರತೆಯಲ್ಲಿ ದಾಖಲೆ: ಜಯಲಲಿತಾ ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಪ್ರಕರಣದ ತೀರ್ಪು ಪ್ರಕರಣಟವಾದಾಗ ಶಾಂತಿ- ಸುವ್ಯವಸ್ಥೆ ಮತ್ತು ಭದ್ರತೆಗಾಗಿ ಪರಪ್ಪನ ಅಗ್ರಹಾರ ಸುತ್ತಮುತ್ತ ಐದು ಸಾವಿರ ಪೊಲೀಸರು ಭದ್ರತೆಗೆ ನಿಯೋಜನೆಗೊಂಡಿದ್ರು. ಈ ಬೆಳವಣಿಗೆ ಭದ್ರತೆ ವಿಚಾರದಲ್ಲಿ ಹೊಸ ಇತಿಹಾಸವನ್ನೇ ಸೃಷ್ಟಿಸಿತ್ತು.
ಯಡಿಯೂರಪ್ಪ ವಿರುದ್ಧದ ಡಿನೋಟಿಕೇಷನ್ ಪ್ರಕರಣದ ತೀರ್ಪು ಪ್ರಕಟವಾಗಿದ್ದ ವೇಳೆ ಒದಗಿಸಿದ್ದ ಭದ್ರತೆ ಇದುವರೆಗಿನ ಅತಿ ಹೆಚ್ಚಿನ ಭದ್ರತೆಯ ತೀರ್ಪಾಗಿತ್ತು. ಆದರೆ, ಜಯಲಲಿತಾ ಪ್ರಕರಣದಲ್ಲಿ ಸುಮಾರು ಐದು ಸಾವಿರ ಪೊಲೀಸ್ ಸರ್ಪಗಾವಲಿನ ನಡುವೆ ತೀರ್ಪು ಪ್ರಕಟಗೊಂಡು ಹೊಸ ಇತಿಹಾಸ ಬರೆದಿತ್ತು.
ಜಯಲಲಿತಾ ಇದ್ದ ಕೊಠಡಿಗೆ ಶಶಿಕಲಾ
ಶಶಿಕಲಾ ಸೇರಿ ಮೂವರನ್ನು ಕಾರಾಗೃಹಕ್ಕೆ ಒಪ್ಪಿಸುವ ಬಗ್ಗೆ ನಮಗೆ ಯಾವುದೇ ಮಾಹಿತಿ ಬಂದಿಲ್ಲ. ಆದರೂ ನಾವು ನಮ್ಮ ಸಿದ್ಧತೆ ಮಾಡಿಕೊಂಡಿದ್ದೇವೆ ಎಂದು ಕೇಂದ್ರ ಕಾರಗೃಹದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಇನ್ನು ಈ ಹಿಂದೆ ಜಯಲಲಿತಾ ಅವರಿದ್ದ ಕೊಠಡಿಯಲ್ಲೇ ಶಶಿಕಲಾ ಹಾಗೂ ಇಳವರಸಿಯನ್ನು ಇಡುವ ಸಾಧ್ಯತೆ ಇದೆ. ಜಯಲಲಿತಾ ಸಾಕುಮಗ ಸುಧಾಕರ್ ಅವರನ್ನು 2ನೇ ಮಹಡಿಯಲ್ಲಿರುವ ವಿಐಪಿ ಸೆಲ್‌ನಲ್ಲಿ ಇರಿಲಾಗುತ್ತದೆ ಎಂದು ಕೇಂದ್ರ ಕಾರಾಗೃಹದ ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಇಬ್ಬರು ಮಕ್ಕಳಿಗೆ ವಿಷವುಣಿಸಿ ಕೊಂದು ಟೆಕಿ ದಂಪತಿ ಆತ್ಮಹ*ತ್ಯೆ!
Arrested: ಮಾದಕವಸ್ತು ದಂಧೆ ಪ್ರಕರಣದಲ್ಲಿ ಭಾಗಿಯಾಗಿದ್ದ ರೌಡಿಶೀಟರ್ ಬಂಧನ
Bengaluru: ಸೆಂಟ್ರಿಂಗ್ ಮರ ಬಿದ್ದು ಬಾಲಕಿ ಸಾವು: ಎಂಜಿನಿಯರ್ ವಶಕ್ಕೆ
Actor Darshan: ಮೈಸೂರಿಗೆ ತೆರಳಲು ದರ್ಶನ್‌ಗೆ ನೀಡಿದ್ದ 2 ವಾರಗಳ ಗಡುವು ಅಂತ್ಯ
Bengaluru: ಯುವತಿ ಜೊತೆ ಅಸಭ್ಯ ವರ್ತನೆ: ಮ್ಯಾನೇಜರ್, ಮತ್ತಿಬ್ಬರ ಮೇಲೆ ಕೇಸ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Bird Flu: ಹಕ್ಕಿ ಜ್ವರಕ್ಕೆ 3 ಹುಲಿ, 1 ಚಿರತೆ ಸಾ*ವು… ಪ್ರಾಣಿಗಳಿಗೆ ಕ್ವಾರಂಟೈನ್
540 ಅಡಿ ಆಳದ ಬೋರ್ವೆಲ್ಗೆ ಬಿದ್ದ ಯುವತಿ: ಯುವಕನ ಜತೆ ಮನಸ್ತಾಪದಿಂದ ಆತ್ಮಹತ್ಯೆಗೆ ಯತ್ನ?
Delhi Assembly Election: ದೆಹಲಿ ವಿಧಾನಸಭೆ ಚುನಾವಣೆಗೆ ಇಂದು ದಿನಾಂಕ ನಿಗದಿ
ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು
ಏಕಕಾಲದಲ್ಲಿ ಭಾರತ ಸೇರಿ 3 ದೇಶಗಳಲ್ಲಿ ಕಂಪಿಸಿದ ಭೂಮಿ… ಟಿಬೆಟ್‌ನಲ್ಲಿ 7.1 ತೀವ್ರತೆ ಭೂಕಂಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.