ಶನಿಮಹಾತ್ಮ ದೇವಾಲಯ ತೆರವಿಗೆ ಆದೇಶ
Team Udayavani, Mar 22, 2019, 6:35 AM IST
ಬೆಂಗಳೂರು: ನಗರದ ಕೇಂದ್ರ ರೈಲು ನಿಲ್ದಾಣಕ್ಕೆ ಹೊಂದಿಕೊಂಡಂತೆ ಓಕಳೀಪುರಂ ಜಂಕ್ಷನ್ ಬಳಿ ಇರುವ ಶನಿಮಹಾತ್ಮ ದೇವಾಲಯ ಮೂರು ತಿಂಗಳಲ್ಲಿ ತೆರವುಗೊಳಿಸುವಂತೆ ಹೈಕೋರ್ಟ್ ಬಿಬಿಎಂಪಿಗೆ ಆದೇಶಿಸಿದೆ.
ಈ ಸಂಬಂಧ ಮತ್ತೀಕೆರೆಯ ನಿವಾಸಿ ಕೆ.ಎಸ್.ಸುಬ್ರಮಣ್ಯನ್ ಮತ್ತಿತರರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಎಲ್.ನಾರಾಯಣಸ್ವಾಮಿ ಹಾಗೂ ನ್ಯಾ. ಪಿ.ಎಸ್.ದಿನೇಶ್ ಕುಮಾರ್ ಅವರಿದ್ದ ವಿಭಾಗೀಯ ನ್ಯಾಯಪೀಠ, ದೇವಾಲಯವು ಗ್ರೇಡ್ ಸಪರೇಟರ್ ಕಾಮಗಾರಿಗೆ ಹಾಗೂ ಬಹುಪಥದ ರಸ್ತೆ ಅಭಿವೃದ್ಧಿಗೆ ಅಡ್ಡಿಯಾಗಿದೆ.
ಆದ್ದರಿಂದ ಕಾಲಮಿತಿಯೊಳಗೆ ತೆರವುಗೊಳಿಸಿ, ಕಾಮಗಾರಿ ಮುಂದುವರಿಯಲು ಅವಕಾಶ ಮಾಡಿಕೊಡುವಂತೆ ನಿರ್ದೇಶನ ನೀಡಿತು. ವಿಚಾರಣೆ ವೇಳೆ, ಶನಿ ದೇವಾಲಯವನ್ನು ಹತ್ತಿರದಲ್ಲೇ ಇರುವ ಗಣೇಶ ದೇವಾಲಯದ ಪಕ್ಕಕ್ಕೆ ಸ್ಥಳಾಂತರಿಸಲು ಸಂಬಂಧಪಟ್ಟವರಿಗೆ ಮನವೊಲಿಸುವ ಪ್ರಯತ್ನ ನಡೆಯುತ್ತಿದೆ ಎಂದು ಬಿಬಿಎಂಪಿ ಪರ ವಕೀಲರು ನ್ಯಾಯಪೀಠಕ್ಕೆ ಮಾಹಿತಿ ನೀಡಿದರು.
ಇದೇ ವೇಳೆ, ವಿವಾದಿತ ಪ್ರದೇಶ ರೈಲ್ವೆ ಇಲಾಖೆಗೆ ಸೇರಿದ್ದರೂ ಯೋಜನೆಯ ಸಲುವಾಗಿ ಅದನ್ನು ಬಿಬಿಎಂಪಿಗೆ ಹಸ್ತಾಂತರ ಮಾಡಲಾಗಿದೆ. ಇದಕ್ಕೆ ಬದಲಾಗಿ ಬಿನ್ನಿ ಮಿಲ್ ಬಳಿ 3 ಎಕರೆ ಜಾಗವನ್ನು ಪಡೆದುಕೊಳ್ಳಲಾಗಿದೆ ಎಂದು ರೈಲ್ವೆ ಇಲಾಖೆ ಪರ ವಕೀಲರು ವಿವರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್
Bengaluru: ಮಹಿಳೆಯರಿಗೆ ನೌಕರಿ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ಬಳಕೆ
Driver: ಹೆಚ್ಚು ಪ್ರಯಾಣದ ದರ ನೀಡಲು ಒತ್ತಡ, ಹಲ್ಲೆಗೆ ಯತ್ನ: ಕ್ಯಾಬ್ ಚಾಲಕನ ವಿರುದ್ಧ ದೂರು
Birds: ಸಿಲಿಕಾನ್ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ
Tragic: ಗಂಡನ ಮೇಲೆ ಅನುಮಾನ: ಹೆಂಡತಿ ನೇಣಿಗೆ ಶರಣು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kerala; ಸರಕಾರಿ ಶಾಲೆಯಲ್ಲಿ ಕ್ರಿಸ್ಮಸ್ ಆಚರಣೆಗೆ ಅಡ್ಡಿ,ಗೋದಲಿ ಧ್ವಂಸ: ವ್ಯಾಪಕ ಆಕ್ರೋಶ
Kambli Health: ಮಾಜಿ ಕ್ರಿಕೆಟಿಗ ವಿನೋದ್ ಕಾಂಬ್ಳಿ ಆರೋಗ್ಯ ಸ್ಥಿತಿ ಗಂಭೀರ!
Unlock Raghava Movie: ರಾಘವನ ಮೇಲೆ ಕಣ್ಣಿಟ್ಟ ರಚೆಲ್
Recipe: ಆರೋಗ್ಯಕ್ಕೆ ಅಮೃತ, ರುಚಿಗೆ ಅದ್ಭುತ ಈ ಚಟ್ನಿ!ಒಂದ್ಸಲ ಈ ವಿಧಾನದಲ್ಲಿ ಟ್ರೈ ಮಾಡಿ…
ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸ್ಕರಣ ಘಟಕಕ್ಕೆ ಗ್ರಹಣ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.