ಹೈಕೋರ್ಟ್ ಮೊರೆಹೋದ ಶಶಿಧರ್
Team Udayavani, Apr 14, 2018, 12:01 PM IST
ಬೆಂಗಳೂರು: ರಾಜಕೀಯ ದುರುದ್ದೇಶದಿಂದ ತಮ್ಮನ್ನು ಪೊಲೀಸ್ ಇಲಾಖೆ ಬಂಧಿಸುವ ಸಾಧ್ಯತೆಯಿದ್ದು, ಸೂಕ್ತ ರಕ್ಷಣೆ ಒದಗಿಸುವಂತೆ ಕೋರಿ ಪೊಲೀಸ್ ಮಹಾಸಂಘದ ಅಧ್ಯಕ್ಷ ವಿ.ಶಶಿಧರ್ ಹೈಕೋರ್ಟ್ ಮೊರೆಹೋಗಿದ್ದಾರೆ.
ಶಶಿಧರ್ ವಿರುದ್ಧ ಈ ಹಿಂದೆ ದಾಖಲಾದ ಪ್ರಕರಣಗಳು ಮತ್ತು ಅವರನ್ನು ಬಂಧನಕ್ಕೊಳಪಡಿಸಿದ್ದರ ಬಗ್ಗೆ ನಗರ ಅಪರಾಧ ದಾಖಲೆಗಳ ವಿಭಾಗಕ್ಕೆ ಮಾಹಿತಿ ಸಲ್ಲಿಸುವಂತೆ (ಸಿಸಿಆರ್‌ಬಿ) ನಗರದ ಎಲ್ಲ ಪೊಲೀಸ್ ಠಾಣೆಗಳಿಗೆ ಪೊಲೀಸ್ ಆಯುಕ್ತರು ಏ. 10ರಂದು ಆದೇಶ ಹೊರಡಿಸಿದ್ದರು.
ಈ ಆದೇಶ ಪ್ರಶ್ನಿಸಿ ಶಶಿಧರ್ ಪರ ವಕೀಲರು ಮಧ್ಯಂತರ ಅರ್ಜಿ ಸಲ್ಲಿಸಿದ್ದು, ಪ್ರಕರಣದಲ್ಲಿ ತಮ್ಮನ್ನು ಬಂಧಿಸುವ ಸಾಧ್ಯತೆ ಇದೆ. ಆದ್ದರಿಂದ ಸೂಕ್ತ ರಕ್ಷಣೆ ಒದಗಿಸಬೇಕು ಎಂದು ಕೋರಿದ್ದಾರೆ. ಈ ಅರ್ಜಿ ಏ. 24ಕ್ಕೆ ವಿಚಾರಣೆಗೆ ಬರಲಿದೆ.
ನ್ಯಾಯಾಂಗ ನಿಂದನೆ ನೋಟಿಸ್ ಜಾರಿಯಾದ ಮಾರನೇ ದಿನವೇ ನನ್ನ ವಿರುದ್ಧ ದಾಖಲಾದ ಹಳೆಯ ಪ್ರಕರಣಗಳ ದಾಖಲೆ ಕೋರಿದ್ದು, ಇದು ದುರುದ್ದೇಶಪೂರ್ವಕ ಕ್ರಮ. ಅಲ್ಲದೆ, ಈ ಪ್ರಕರಣದಲ್ಲಿ ನನ್ನನ್ನು ಬಂಧಿಸುವ ಸಾಧ್ಯತೆಯಿದೆ. ಹೀಗಾಗಿ ಕ್ರಮ ತೆಗೆದುಕೊಳ್ಳದಂತೆ ಪೊಲೀಸ್ ಇಲಾಖೆಗೆ ನಿರ್ದೇಶನ ನೀಡಬೇಕು ಎಂದು ಶಶಿಧರ್ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Cold Weather: ಬೀದರ್, ವಿಜಯಪುರ ಗಡಗಡ: 5-6 ಡಿ.ಸೆ.ಗೆ ತಾಪಮಾನ ಇಳಿಕೆ?
Danger Spot-1: ಹೊಸೂರು ಮುಖ್ಯರಸ್ತೆ ಸಮೀಪ ನಡೆದಾಡುವುದೂ ಅಪಾಯಕಾರಿ!
BIFF:16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಕಿಶೋರ್ ರಾಯಭಾರಿ
EV ದ್ವಿಚಕ್ರ ವಾಹನ ಮಾರಾಟ: ಏಥರ್ ಸಂಸ್ಥೆ ಪಾಲು ಶೇ.25
Aishwarya Gowda ವಿರುದ್ದ ಬಲವಂತದ ಕ್ರಮ ಬೇಡ: ಪೊಲೀಸರಿಗೆ ಕೋರ್ಟ್ ಸೂಚನೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.