ನಗರದ ಇಂದಿರಾ ಕ್ಯಾಂಟೀನ್‌ಗೆ ಇಸ್ಕಾನ್ ಜತೆ ಒಪ್ಪಂದವಾಗಿಲ್ಲ
Team Udayavani, Mar 31, 2017, 12:11 PM IST
ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ “ಇಂದಿರಾ’ ಕ್ಯಾಂಟೀನ್‌ಗೆ ಆಹಾರ ಪೂರೈಸಲು ಇಸ್ಕಾನ್ ಜತೆ ಯಾವುದೇ ರೀತಿಯ ಒಪ್ಪಂದ ಮಾಡಿಕೊಂಡಿಲ್ಲ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಯು.ಟಿ.ಖಾದರ್ ಸ್ಪಷ್ಟಪಡಿಸಿದ್ದಾರೆ.
ಸುದ್ದಿಗಾರರ ಜತೆ ಮಾತನಾಡಿದ ಅವರು, “ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿನ 198 ವಾರ್ಡ್‌ಗಳಲ್ಲಿ ಆರಂಭಿಸಲು ಉದ್ದೇಶಿಸಿರುವ “ಇಂದಿರಾ ಕ್ಯಾಂಟೀನ್’ಗಳಿಗೆ ಆಹಾರ ಪೂರೈಸಲು ಇಸ್ಕಾನ್ ಜತೆ ಇನ್ನೂ ಯಾವುದೇ ರೀತಿಯ ಒಪ್ಪಂದವೂ ಮಾಡಿಕೊಂಡಿಲ್ಲ,” ಎಂದು ಹೇಳಿದರು.
“ಕ್ಯಾಂಟೀನ್‌ಗಳಿಗೆ ಆಹಾರ ಪೂರೈಕೆ ಮಾಡುವ ಕುರಿತು ಇಸ್ಕಾನ್ ಜತೆ ಚರ್ಚಿಸಿದ್ದು ನಿಜ. ಆದರೆ, ಅವರು ಒಂದೇ ಕಡೆ ಆಹಾರ ಸಿದ್ಧಪಡಿಸಿ ಎಲ್ಲ 198 ಕ್ಯಾಂಟೀನ್‌ಗಳಿಗೆ ಪೂರೈಸುವುದು ಕಷ್ಟವಾಗುತ್ತದೆ ಎಂದು ತಿಳಿಸಿದರು. ಜತೆಗೆ ಇಸ್ಕಾನ್‌ನವರು ಆಹಾರದಲ್ಲಿ ಈರುಳ್ಳಿ ಹಾಗೂ ಬೆಳ್ಳುಳ್ಳಿಯನ್ನು ಬಳಕೆ ಮಾಡುವುದಿಲ್ಲ.
ಹೀಗಾಗಿ, ಅವರ ಜತೆ ಒಪ್ಪಂದ ಬೇಡ ಎಂದು ಶಾಸಕರು ಸಲಹೆ ನೀಡಿದ್ದಾರೆ. ಗ್ರಾಮೀಣ ಪ್ರದೇಶದಿಂದ ನಗರಕ್ಕೆ ಬರುವ ವಿದ್ಯಾರ್ಥಿಗಳು, ಕೂಲಿ ಕೆಲಸ ಮಾಡುವವರು, ರಿûಾ ಚಾಲಕರು, ದುಡಿಯುವ ವರ್ಗದವರಿಗೆ ರಿಯಾಯಿತಿ ದರದಲ್ಲಿ ಆಹಾರ ನೀಡುವ ಉದ್ದೇಶದಿಂದ ಈ ಕ್ಯಾಂಟೀನ್‌ಗಳನ್ನು ಆರಂಭಿಸಲಾಗುತ್ತಿದೆ,” ಎಂದು ತಿಳಿಸಿದರು.
“ಬೆಂಗಳೂರಿನಲ್ಲಿರುವ ಎಲ್ಲ ವಿಧಾನಸಭಾ ಕ್ಷೇತ್ರಗಳಲ್ಲೂ ತಲಾ ಒಂದು ಕ್ಯಾಂಟೀನ್ ಗಳನ್ನು ಆರಂಭಿಸಿ, ಆಯಾ ಕ್ಷೇತ್ರಗಳಲ್ಲಿರುವ ವಾರ್ಡ್‌ಗಳಿಗೆ ಅಲ್ಲಿಂದಲೆ ಆಹಾರ ಪೂರೈಸಲು ನಿರ್ಧರಿಸಲಾಗಿದೆ. ತಮಿಳುನಾಡಿಗಿಂತ ನಮ್ಮ ರಾಜ್ಯದಲ್ಲಿ ಗುಣಮಟ್ಟದ ಆಹಾರವನ್ನು ಈ ಕ್ಯಾಂಟೀನ್‌ಗಳಲ್ಲಿ ಪೂರೈಕೆ ಮಾಡಲಾಗುವುದು,” ಎಂದರು.
250 ಮಂದಿಗಷ್ಟೇ ಊಟ?
“ಚೈನ್ನೆನಲ್ಲಿ ಕಾರ್ಯನಿರ್ವಹಿಸುತ್ತಿರುವ “ಅಮ್ಮಾ ಕ್ಯಾಂಟೀನ್’ನಲ್ಲಿ ಊಟ -ತಿಂಡಿ ಪೂರೈಕೆ 250 ಜನರಿಗೆ ಮಿತಿ ಹೇರಲಾಗಿದೆ. ಅದೇ ರೀತಿ ನಾವು ಮಿತಿಯನ್ನು ನಿಗದಿಗೊಳಿಸಲು ಉದ್ದೇಶಿಸಿದ್ದೇವೆ. ಒಂದು ಕ್ಯಾಂಟೀನ್‌ಗೆ 250 ಜನರನ್ನು ಮಿತಿಗೊಳಿಸಿದರೆ, 198 ಕ್ಯಾಂಟೀನ್‌ಗಳಿಗೆ 49,500 ಮಂದಿ ಬರಬಹುದು ಎಂದು ಅಂದಾಜು ಮಾಡಲಾಗಿದೆ,” ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಯು.ಟಿ ಖಾದರ್ ತಿಳಿಸಿದ್ದಾರೆ.
ಕ್ಯಾಂಟೀನ್‌ಗಳು ಪ್ರಾರಂಭವಾದ ನಂತರ ನಮಗೆ ಗ್ರಾಹಕರ ನಿಖರ ವಿವರ ಲಭ್ಯವಾಗುತ್ತದೆ. ಆರಂಭಿಕವಾಗಿ ರಾಜ್ಯ ಸರ್ಕಾರವು ಈ ಕ್ಯಾಂಟೀನ್‌ಗಳಿಗೆ 100 ಕೋಟಿ ರೂ.ಗಳ ಅನುದಾನವನ್ನು ಒದಗಿಸಿದೆ. ಸದ್ಯದಲ್ಲೇ ಹೋಟೆಲ್ ಮಾಲೀಕರ ಸಂಘ ಹಾಗೂ ಸಂಘ ಸಂಸ್ಥೆಗಳ ಜೊತೆ ಸಭೆ ನಡೆಸಿ ಅಂತಿಮ ರೂಪು-ರೇಷೆ ಸಿದ್ಧಪಡಿಸಲಾಗುವುದು ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Cold Weather: ಬೀದರ್, ವಿಜಯಪುರ ಗಡಗಡ: 5-6 ಡಿ.ಸೆ.ಗೆ ತಾಪಮಾನ ಇಳಿಕೆ?
Danger Spot-1: ಹೊಸೂರು ಮುಖ್ಯರಸ್ತೆ ಸಮೀಪ ನಡೆದಾಡುವುದೂ ಅಪಾಯಕಾರಿ!
BIFF:16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಕಿಶೋರ್ ರಾಯಭಾರಿ
EV ದ್ವಿಚಕ್ರ ವಾಹನ ಮಾರಾಟ: ಏಥರ್ ಸಂಸ್ಥೆ ಪಾಲು ಶೇ.25
Aishwarya Gowda ವಿರುದ್ದ ಬಲವಂತದ ಕ್ರಮ ಬೇಡ: ಪೊಲೀಸರಿಗೆ ಕೋರ್ಟ್ ಸೂಚನೆ
MUST WATCH
ಹೊಸ ಸೇರ್ಪಡೆ
Sachin Panchal Case: ರಾಜು ಕಪನೂರ ಸೇರಿ ಐವರ ಸಿಐಡಿ ವಿಚಾರಣೆ
Podcast;ನಾನು ದೇವರಲ್ಲ,ತಪ್ಪು ಮಾಡಿದ್ದೇನೆ: ಪ್ರಧಾನಿ ಹೇಳಿಕೆ ಡ್ಯಾಮೇಜ್ ಕಂಟ್ರೋಲ್ ಎಂದ ಕೈ
SSLC-PUC Exam: ಪರೀಕ್ಷಾ ವೇಳಾಪಟ್ಟಿ ಪ್ರಕಟ: ವಿದ್ಯಾರ್ಥಿಗಳು ಗಮನಿಸಿ
INDWvsIREW: ಪ್ರತಿಕಾ ರಾವಲ್ ಭರ್ಜರಿ ಬ್ಯಾಟಿಂಗ್; ಐರ್ಲೆಂಡ್ ವಿರುದ್ದ ಸರಣಿ ಶುಭಾರಂಭ
Mega Concert: Black ಮಾರ್ಕೆಟ್ ಟಿಕೆಟ್ ಮಾರಾಟ ತಡೆಗೆ ಮಾರ್ಗಸೂಚಿ ಬೇಕು: ಪಿಐಎಲ್ ವಜಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.