ರಾಜ್ಯಸಭೆಗೆ ಶಿವರಾಜ್ ಪಾಟೀಲ್ ಹೆಸರು: ಕೈ ನಾಯಕರಿಂದ ಆಕ್ಷೇಪ
Team Udayavani, Mar 3, 2018, 6:40 AM IST
ಬೆಂಗಳೂರು: ನಾಲ್ವರು ಸಂಸದರ ನಿವೃತ್ತಿಯಿಂದ ಖಾಲಿಯಾಗಲಿರುವ ರಾಜ್ಯಸಭಾ ಸ್ಥಾನಕ್ಕೆ ರಾಜ್ಯ ವಿಧಾನಸಭಾ ಕೋಟಾದಿಂದ ಆಯ್ಕೆಯಾಗಲು ಕಾಂಗ್ರೆಸ್ನಲ್ಲಿ ಭಾರೀ ಪೈಪೋಟಿ ಆರಂಭವಾಗಿದೆ. ಜಾತಿ ಲೆಕ್ಕಾಚಾರದಲ್ಲಿ ದಲಿತರು, ಲಿಂಗಾಯತರು ಹಾಗೂ ಅಲ್ಪ ಸಂಖ್ಯಾತ ನಾಯಕರ ನಡುವೆ ಸ್ಪರ್ಧೆ ಏರ್ಪಟ್ಟಿದ್ದು, ದೆಹಲಿ ಮಟ್ಟದಲ್ಲಿ ತಮ್ಮದೇ ಆದ ಪ್ರಭಾವ ಬಳಸುತ್ತಿದ್ದಾರೆ.
ಲಿಂಗಾಯತ ಕೋಟಾದಡಿ ಕೇಂದ್ರದ ಮಾಜಿ ಗೃಹ ಸಚಿವ ಶಿವರಾಜ್ ಪಾಟೀಲ್ ಹೆಸರು ಹೊಸದಾಗಿ ಕೇಳಿ ಬರುತ್ತಿದೆ. ಅವರನ್ನು ಆಯ್ಕೆ ಮಾಡಿದರೆ ಚುನಾವಣೆಯಲ್ಲಿ ಲಿಂಗಾಯತ ಸಮುದಾಯವನ್ನು ಸೆಳೆಯಲು ಮತ್ತಷ್ಟು ಅನುಕೂಲವಾಗಲಿದೆ ಎಂಬ ಲೆಕ್ಕಾಚಾರವೂ ಇದೆ.
ಆದರೆ, ಈಗಾಗಲೇ ಹೊರರಾಜ್ಯದ ಲೋಕಸಭಾ ಮಾಜಿ ಸ್ಪೀಕರ್ ಮೀರಾಕುಮಾರಿ ಹೆಸರು ಬಲವಾಗಿ ಕೇಳಿ ಬರುತ್ತಿರುವುದರಿಂದ ರಾಜ್ಯದ ಆಕಾಂಕ್ಷಿಗಳು ಪ್ರಾದೇಶಿಕತೆಯ ಬಳಸಲು ಮುಂದಾಗಿದ್ದಾರೆ.
ಹೊರಗಿನವರನ್ನು ರಾಜ್ಯಸಭೆಗೆ ಕಳುಹಿಸುವುದರಿಂದ ರಾಜ್ಯಕ್ಕೆ ಅನ್ಯಾಯವಾಗುತ್ತದೆ ಎಂಬ ವಾದ ಮಂಡಿಸಲು ಮುಂದಾಗಿದ್ದಾರೆ. ಶಿವರಾಜ್ ಪಾಟೀಲ್ ಹೆಸರು ಪ್ರಸ್ತಾಪವಾಗುತ್ತಿರುವಂತೆ ರಾಣಿ ಸತೀಶ್ ಈಗಾಗಲೇ ವಿರೋಧ ವ್ಯಕ್ತಪಡಿಸಿದ್ದಾರೆ ಎನ್ನಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
New year 2025: ಬೆಳಗಾವಿ- ನಿರೀಕ್ಷೆಗಳು ನೂರಾರು..ಬೇಡಿಕೆಗಳು ಬೆಟ್ಟದಷ್ಟು..!
Hiriyadka: ಪಂಚಾಯತ್ ಸಿಬ್ಬಂದಿಗಳಿಲ್ಲದೆ ಬಾಗಿಲು ಮುಚ್ಚಿದ ಬೈರಂಪಳ್ಳಿ ಗ್ರಾಮ ಪಂಚಾಯತ್
New year : ಬಾಗಲಕೋಟೆ ಜಿಲ್ಲೇಲಿ ಅಭಿವೃದ್ಧಿ ಬಾಗಿಲು ತೆರೆಯಲಿ-ಸ್ಥಳಾಂತರವಾಗಬೇಕಿದೆ ಐಹೊಳೆ!
Belthangady: ಖಾಸಗಿ ಕಟ್ಟಡದ ಅವ್ಯವಸ್ಥೆ ವಿರುದ್ಧ ಸದಸ್ಯರು ಗರಂ
New Year 2025:ಹಳೆ ವ್ಯಕ್ತಿಗೆ ಹೊಸ ವರ್ಷ….ಹಳೆ ವರ್ಷದಲ್ಲಿ ಕಲಿತ ಎಲ್ಲಾ ಅನುಭವ ಪಾಠವಾಗಲಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.