ಯಾರದೋ ವಸ್ತು ತೋರಿಸಿ ಯಾಮಾರಿಸ್ತಾರೆ!

Team Udayavani, Oct 29, 2018, 12:06 PM IST

yarado.jpg

ಬೆಂಗಳೂರು: ಬ್ಯಾಂಕ್‌ ಖಾತೆಗಳಿಂದ ಹಲವು ಮಾರ್ಗಗಳಲ್ಲಿ ಹಣ ವರ್ಗಾವಣೆ ಮಾಡಿಕೊಳ್ಳುವ ಸೈಬರ್‌ ವಂಚಕರು, ಆನ್‌ಲೈನ್‌ ಮಾರಾಟ ತಾಣಗಳನ್ನು ತಮ್ಮ ವಂಚನೆಗೆ ರಹದಾರಿ ಮಾಡಿಕೊಂಡಿದ್ದಾರೆ!

ಒಎಲ್‌ಎಕ್ಸ್‌, ಕ್ವಿಕ್ಕರ್‌ ಸೇರಿದಂತೆ ಇತರೆ ಆನ್‌ಲೈನ್‌ ಮಾರಾಟ ತಾಣಗಳಲ್ಲಿ ಸಕ್ರಿಯವಾಗಿರುವ ವಂಚಕರು, ಬೇರೊಬ್ಬರ ಒಡೆತನದ ಬೈಕ್‌, ಕಾರು, ಮೊಬೈಲ್‌ ಸೇರಿ ಇನ್ನಿತರೆ ವಸ್ತುಗಳ ಫೋಟೋಗಳನ್ನು ಪ್ರಕಟಿಸಿ ವಾಹನಗಳನ್ನು ಖರೀದಿಸಲು ಆಸಕ್ತಿ ತೋರುವ ಗ್ರಾಹಕರನ್ನು ವಂಚಿಸಿ ಹಣ ದೋಚುತ್ತಿದ್ದಾರೆ.

ಆನ್‌ಲೈನ್‌ ಮಾರಾಟ ತಾಣಗಳಲ್ಲಿ ವಾಹನಗಳು ಅಥವಾ ವಸ್ತುಗಳ ಫೋಟೋ ನೋಡಿ ಖರೀದಿಸಲು ಮುಂದಾಗಿ ಬಳಿಕ ಹಣ ಕಳೆದುಕೊಂಡ ಪೊಲೀಸ್‌ ಸೈಬರ್‌ ಕ್ರೈಂ ಠಾಣೆ ಮೆಟ್ಟಿಲೇರುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದೆ.

ಆನ್‌ಲೈನ್‌ ಮಾರಾಟ ತಾಣದಲ್ಲಿ ಕಾರು, ಬೈಕ್‌ ಫೋಟೋಗಳನ್ನು ಮಾರಾಟಕ್ಕಿಟ್ಟು, ಖರೀದಿಸಲು ಆಸಕ್ತಿ ತೋರಿದವರ ಬಳಿ ಮುಂಗಡ ರೂಪದಲ್ಲಿ ಬ್ಯಾಂಕ್‌ ಖಾತೆಗೆ ಹಣ ಹಾಕಿಸಿಕೊಂಡು ಬಳಿಕ, ಆರೋಪಿ ಫೋನ್‌ ಸ್ವಿಚ್‌ ಆಫ್ ಮಾಡಿಕೊಂಡಿದ್ದಾರೆ ಎಂದು ದೂರುದಾರರು ಅಳಲು ತೋಡಿಕೊಳ್ಳುತ್ತಿದ್ದಾರೆ.

ಈ ರೀತಿಯ ವಂಚನೆಗೊಳಗಾದ ಸಂಬಂಧ ಪ್ರತಿ ನಿತ್ಯ ಕನಿಷ್ಠ ಎರಡು ಪ್ರಕರಣಗಳು ದಾಖಲಾಗುತ್ತಿವೆ. ಆರೋಪಿಗಳು, ವಂಚನೆಗೆ ಬಳಸಿದ ಸಿಮ್‌ ಕಾರ್ಡ್‌ ಹಾಗೂ ಮಾರಾಟ ಜಾಲತಾಣದ ಅಕೌಂಟ್‌ ಬಳಸುವುದಿಲ್ಲ. ಬಹುತೇಕ ನಕಲಿ ಅಕೌಂಟ್‌ಗಳಲ್ಲಿಯೇ ವಂಚನೆ ನಡೆಸಿರುತ್ತಾರೆ ಎಂದು ಹಿರಿಯ ಪೊಲೀಸ್‌ ಅಧಿಕಾರಿಯೊಬ್ಬರು ಮಾಹಿತಿ ನೀಡುತ್ತಾರೆ.

ಬೈಕ್‌ ಮಾರಾಟಕ್ಕಿರುವುದಾಗಿ ಹೇಳಿ ವಂಚನೆ: ಖಾಸಗಿ ಕಂಪನಿ ಉದ್ಯೋಗಿ ಶಂಕರ್‌ ವರೀಶ್‌ ಕಾಮತ್‌ ಎಂಬುವವರು ಬೈಕ್‌ ಖರೀದಿಸುವ ಸಲುವಾಗಿ ಓಎಲ್‌ಎಕ್ಸ್‌ ತಾಣದಲ್ಲಿ ಪರಿಶೀಲನೆ ನಡೆಸುತ್ತಿದ್ದರು. ಈ ವೇಳೆ ಯಮಹಾ ಎಫ್ಝಡ್‌ ಬೈಕ್‌ ಮಾರಾಟದ ಜಾಹೀರಾತು ನೋಡಿ, ಸಂಬಂಧಿಸಿದ ಮೊಬೈಲ್‌ ನಂಬರ್‌ಗೆ ಕರೆ ಮಾಡಿದ್ದರು.

ಈ ವೇಳೆ ಬೈಕ್‌ ನೀಡಲು ಒಪ್ಪಿದ್ದ ಅಪರಿಚಿತ ಸೈಬರ್‌ ವಂಚಕ, ಮುಂಗಡ ಹಣವಾಗಿ 64,450 ರೂ. ತನ್ನ ಖಾತೆಗೆ ಹಾಕಿಸಿಕೊಂಡಿದ್ದಾನೆ. ಬಳಿಕ ತಾನು ನೀಡಿದ್ದ ಬೈಕ್‌ ಜಾಹೀರಾತು ಪೋಸ್ಟ್‌ ತೆಗೆದಿದ್ದಾನೆ. ಜತೆಗೆ, ಆತ ನೀಡಿದ್ದ ಮೊಬೈಲ್‌ ನಂಬರ್‌ ಕೂಡ ಸ್ವಿಚ್‌ ಆಫ್ ಮಾಡಿಕೊಂಡಿದ್ದ. ಹಲವು ಬಾರಿ ಕರೆ ಮಾಡಿದರೂ ಸಂಪರ್ಕ ಸಾಧ್ಯವಾಗಿಲ್ಲ. ಪರಿಣಾಮ ವಂಚನೆಗೊಳಗಾದ ಬಗ್ಗೆ ಅರಿವಾದ ಬಳಿಕ  ಶಂಕರ್‌ ಅವರು ಸೈಬರ್‌ ಠಾಣೆಯಲ್ಲಿ ದೂರು ನೀಡಿದ್ದಾರೆ.

ಒನ್‌ಫ್ಲಸ್‌ 6 ಮೊಬೈಲ್‌ ಫೋಟೋ  ಹಾಕಿ ವಂಚನೆ!: ಮತ್ತೂಂದು ಪ್ರಕರಣದಲ್ಲಿ ಪ್ರಮೋದ್‌ ಎಂಬುವವರು ಕಡಿಮೆ ಬೆಲೆಗೆ ಮೊಬೈಲ್‌ ಖರೀದಿಸುವ ಸಲುವಾಗಿ ಒಎಲ್‌ಎಕ್ಸ್‌ ಜಾಲತಾಣದಲ್ಲಿ, ಮಾರಟಗಾರನೊಬ್ಬ ಹಾಕಿದ್ದ ಒನ್‌ ಫ್ಲಸ್‌6 ಮೊಬೈಲ್‌ ಖರೀದಿಸಲು ಮುಂದಾಗಿದ್ದರು. ಈ ವೇಳೆ ವಂಚಕ, ಮುಂಗಡವಾಗಿ 20 ಸಾವಿರ ರೂ. ಪಡೆದುಕೊಂಡು ಬಳಿಕ ತನ್ನ ಮೊಬೈಲ್‌ ನಂಬರ್‌ ಸ್ವಿಚ್‌ ಆಫ್ ಮಾಡಿಕೊಂಡಿದ್ದಾನೆ.

ಸಾರ್ವಜನಿಕರು ಎಚ್ಚರ ವಹಿಸಬೇಕು!: ಸೈಬರ್‌ ವಂಚನೆಗೆ ಕಡಿವಾಣ ಹಾಕುವಲ್ಲಿ ಸಾರ್ವಜನಿಕರ ಪಾತ್ರವೂ ಮಹತ್ವದ್ದಾಗಿದೆ. ಆನ್‌ಲೈನ್‌ ಮಾರಾಟ ತಾಣಗಳಲ್ಲಿ ಸಕ್ರಿಯವಾಗಿರುವ ವಂಚಕರು ತಾವು ಪ್ರಕಟಿಸುವ ವಸ್ತುಗಳ ಮಾಲೀಕರು ಆಗಿರುವುದಿಲ್ಲ. ವಸ್ತುಗಳನ್ನು ತಂದುಕೊಟ್ಟ ಬಳಿಕವೇ ಪೂರ್ತಿ ಹಣ ಪಾವತಿಸುವುದಾಗಿ ಸ್ಪಷ್ಟವಾಗಿ ಹೇಳಬೇಕು.

ಸಾಮಾನ್ಯವಾಗಿ ನೀವು ಕಡಿಮೆ ಮುಂಗಡ ಹಣ ನೀಡುವುದಾಗಿ ಹೇಳಿದರೂ ವಂಚಕರು ಒಪ್ಪಿಕೊಳ್ಳುತ್ತಾರೆ. ಜತೆಗೆ, ಪದೇ ಪದೆ ಅವರೇ ಕರೆ ಮಾಡಿ ಮಾರಾಟಕ್ಕಿಟ್ಟ ವಸ್ತುಗಳನ್ನು ತೆಗೆದುಕೊಳ್ಳುವಂತೆ ಒತ್ತಡ ಹೇರುತ್ತಾರೆ. ಈ ರೀತಿಯ ಕೆಲವು ಸೂಕ್ಷ್ಮತೆಗಳನ್ನು ಗಮನಿಸಿ ಎಚ್ಚರದಿಂದಿದ್ದರೆ ವಂಚನೆಯಿಂದ ತಪ್ಪಿಸಿಕೊಳ್ಳಬಹುದು ಎಂದು ಹಿರಿಯ ಪೊಲೀಸ್‌ ಅಧಿಕಾರಿಯೊಬ್ಬರು ಅಭಿಪ್ರಾಯ ವ್ಯಕ್ತಪಡಿಸಿದರು.

* ಮಂಜುನಾಥ ಲಘುಮೇನಹಳ್ಳಿ

ಟಾಪ್ ನ್ಯೂಸ್

Bhopal: ಬಿಜೆಪಿ ಮಾಜಿ ಶಾಸಕ ಸಿಂಗ್‌ ನಿವಾಸದ ಮೇಲೆ ಐಟಿ ದಾಳಿ; ನಗದು, 3 ಮೊಸಳೆ ಪತ್ತೆ!

Bhopal: ಬಿಜೆಪಿ ಮಾಜಿ ಶಾಸಕ ಸಿಂಗ್‌ ನಿವಾಸದ ಮೇಲೆ ಐಟಿ ದಾಳಿ; ನಗದು, 3 ಮೊಸಳೆ ಪತ್ತೆ!

ಪರೀಕ್ಷೆಯಿಂದ ತಪ್ಪಿಸಿಕೊಳ್ಳಲು 23 ಶಾಲೆಗೆ ಬಾಂಬ್ ಬೆದರಿಕೆ ಹಾಕಿದ 12ನೇ ತರಗತಿ ವಿದ್ಯಾರ್ಥಿ

ಪರೀಕ್ಷೆಯಿಂದ ತಪ್ಪಿಸಿಕೊಳ್ಳಲು 23ಶಾಲೆಗೆ ಬಾಂಬ್ ಬೆದರಿಕೆ ಹಾಕಿದ್ದ 12ನೇ ತರಗತಿ ವಿದ್ಯಾರ್ಥಿ

Delhi-NCR: ದಟ್ಟ ಮಂಜು ಕವಿದ ವಾತಾವರಣ-ವಿಮಾನ,ವಾಹನ ಸಂಚಾರಕ್ಕೆ ಎಫೆಕ್ಟ್‌, ಟ್ರಾಫಿಕ್‌ ಜಾಮ್

Delhi-NCR: ದಟ್ಟ ಮಂಜು ಕವಿದ ವಾತಾವರಣ-ವಿಮಾನ,ವಾಹನ ಸಂಚಾರಕ್ಕೆ ಎಫೆಕ್ಟ್‌, ಟ್ರಾಫಿಕ್‌ ಜಾಮ್

6-kaup-3

Uchila: ಕಾರು ಢಿಕ್ಕಿಯಾಗಿ ಪಾದಚಾರಿ ಸ್ಥಳದಲ್ಲೇ ಸಾವು

Shimoga: ರಸ್ತೆ ಬದಿಯಲ್ಲಿ ನವಜಾತ ಶಿಶು ಬಿಟ್ಟು ಹೋದ ತಾಯಿ!; ಆರೈಕೆ ಮಾಡಿದ ಸ್ಥಳೀಯರು

Shimoga: ರಸ್ತೆ ಬದಿಯಲ್ಲಿ ನವಜಾತ ಶಿಶು ಬಿಟ್ಟು ಹೋದ ತಾಯಿ!; ಆರೈಕೆ ಮಾಡಿದ ಸ್ಥಳೀಯರು

5-bng

Bengaluru: 7 ಮದುವೆ ಮುಚ್ಚಿಟ್ಟು 8ನೇ ಮದುವೆಯಾಗಿ ಪತಿಗೆ ವಂಚನೆ!

ಯಕ್ಷಗಾನ ಅಕಾಡೆಮಿ ಪ್ರಶಸ್ತಿ ಪ್ರಕಟ: ಮಾಂಬಾಡಿ ಸುಬ್ರಹ್ಮಣ್ಯ ಭಟ್ ಅವರಿಗೆ ಪಾರ್ತಿಸುಬ್ಬ ಪ್ರಶಸ್ತಿ

Udupi: 2024ನೇ ಸಾಲಿನ ಪಾರ್ತಿಸುಬ್ಬ ಪ್ರಶಸ್ತಿಗೆ ಮಾಂಬಾಡಿ ಸುಬ್ರಹ್ಮಣ್ಯ ಭಟ್ ಆಯ್ಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-aishwarya

Aishwarya Gowda ವಿರುದ್ದ ಬಲವಂತದ ಕ್ರಮ ಬೇಡ: ಪೊಲೀಸರಿಗೆ ಕೋರ್ಟ್‌ ಸೂಚನೆ

5-bng

Bengaluru: 7 ಮದುವೆ ಮುಚ್ಚಿಟ್ಟು 8ನೇ ಮದುವೆಯಾಗಿ ಪತಿಗೆ ವಂಚನೆ!

4-bng

Bengaluru: ಮಲಗಿದ ನಾಯಿ ಮೇಲೆ ಕಾರು ಹತ್ತಿಸಿದ ಚಾಲಕ!

3-dog

German Shepherd: ಕೋಳಿ ತಿಂದಿದ್ದಕ್ಕೆ ಜರ್ಮನ್‌ ಶೆಫ‌ರ್ಡ್‌ ನಾಯಿ ಕೊಂದ!

Arrested: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿಯ ಅಪಹರಿಸಿದ್ದ ಶಿಕ್ಷಕ ಸೆರೆ

Arrested: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿಯ ಅಪಹರಿಸಿದ್ದ ಶಿಕ್ಷಕ ಸೆರೆ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

1(1

Sullia: ಮುಳುಗಿದ ಅಂಗನವಾಡಿಗೆ ಹೊಸ ಜಾಗ

7-aishwarya

Aishwarya Gowda ವಿರುದ್ದ ಬಲವಂತದ ಕ್ರಮ ಬೇಡ: ಪೊಲೀಸರಿಗೆ ಕೋರ್ಟ್‌ ಸೂಚನೆ

Bhopal: ಬಿಜೆಪಿ ಮಾಜಿ ಶಾಸಕ ಸಿಂಗ್‌ ನಿವಾಸದ ಮೇಲೆ ಐಟಿ ದಾಳಿ; ನಗದು, 3 ಮೊಸಳೆ ಪತ್ತೆ!

Bhopal: ಬಿಜೆಪಿ ಮಾಜಿ ಶಾಸಕ ಸಿಂಗ್‌ ನಿವಾಸದ ಮೇಲೆ ಐಟಿ ದಾಳಿ; ನಗದು, 3 ಮೊಸಳೆ ಪತ್ತೆ!

ಪರೀಕ್ಷೆಯಿಂದ ತಪ್ಪಿಸಿಕೊಳ್ಳಲು 23 ಶಾಲೆಗೆ ಬಾಂಬ್ ಬೆದರಿಕೆ ಹಾಕಿದ 12ನೇ ತರಗತಿ ವಿದ್ಯಾರ್ಥಿ

ಪರೀಕ್ಷೆಯಿಂದ ತಪ್ಪಿಸಿಕೊಳ್ಳಲು 23ಶಾಲೆಗೆ ಬಾಂಬ್ ಬೆದರಿಕೆ ಹಾಕಿದ್ದ 12ನೇ ತರಗತಿ ವಿದ್ಯಾರ್ಥಿ

Delhi-NCR: ದಟ್ಟ ಮಂಜು ಕವಿದ ವಾತಾವರಣ-ವಿಮಾನ,ವಾಹನ ಸಂಚಾರಕ್ಕೆ ಎಫೆಕ್ಟ್‌, ಟ್ರಾಫಿಕ್‌ ಜಾಮ್

Delhi-NCR: ದಟ್ಟ ಮಂಜು ಕವಿದ ವಾತಾವರಣ-ವಿಮಾನ,ವಾಹನ ಸಂಚಾರಕ್ಕೆ ಎಫೆಕ್ಟ್‌, ಟ್ರಾಫಿಕ್‌ ಜಾಮ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.