ದಾಖಲೆ ಅಲ್ಲ, ಫ‌ಲಿತಾಂಶ ತೋರಿಸಿ..!


Team Udayavani, Dec 10, 2021, 10:12 AM IST

court

ಬೆಂಗಳೂರು: ಅನಧಿಕೃತ ಕಟ್ಟಡಗಳ ತೆರವು ವಿಚಾರದಲ್ಲಿ ದಾಖಲೆ ಅಲ್ಲ; ಫ‌ಲಿತಾಂಶ ತೋರಿಸಿ ಎಂದು ಬಿಬಿಎಂಪಿಗೆ ತೀಕ್ಷ್ಣವಾಗಿ ಹೇಳಿರುವ ಹೈಕೋರ್ಟ್‌, ನ್ಯಾಯಾಲಯದ ಆದೇಶದಂತೆ ಅನಧಿಕೃತ ಕಟ್ಟಡಗಳ ತೆರವಿಗೆ ಕೈಗೊಂಡ ಕ್ರಮಗಳ ಅನುಪಾಲನಾ ವರದಿ ಸಲ್ಲಿಸಲು ಮೂರು ತಿಂಗಳು ಕಾಲಾವಕಾಶ ನೀಡಿದೆ.

ಈ ವಿಚಾರವಾಗಿ ಹೈಕೋರ್ಟ್‌ ಸ್ವಯಂಪ್ರೇರಿತವಾಗಿ ದಾಖಲಿಸಿಕೊಂಡಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯು ಮುಖ್ಯ ನ್ಯಾಯಮೂರ್ತಿ ರಿತುರಾಜ್‌ ಅವಸ್ಥಿ ಅವರ ನೇತೃತ್ವದ ವಿಭಾಗೀಯ ನ್ಯಾಯಪೀಠ ಗುರುವಾರ ವಿಚಾರಣೆ ನಡೆಸಿತು.

ನ್ಯಾಯಾಲಯದ ಆದೇಶದಂತೆ ಖುದ್ದು ವಿಚಾರಣೆಗೆ ಹಾಜರಾಗಿದ್ದ ಬಿಬಿಎಂಪಿ ಮುಖ್ಯ ಆಯುಕ್ತ ಅನಧಿಕೃತ ಕಟ್ಟಡಗಳ ತೆರವಿಗೆ ಪಾಲಿಕೆ ಈವರೆಗೆ ಕೈಗೊಂಡ ಕ್ರಮಗಳ ಪ್ರಮಾಣಪತ್ರವನ್ನು ಸಲ್ಲಿಸಿದರು. ಪ್ರಮಾಣ ಪತ್ರದಲ್ಲಿನ ಅಂಕಿ-ಅಂಶಗಳನ್ನು ಗಮನಿಸಿದ ನ್ಯಾಯ ಪೀಠ, ಕಳೆದ ಬಾರಿ ಪಾಲಿಕೆಯನ್ನು ತರಾಟೆಗೆ ತೆಗೆದು ಕೊಂಡ ಪರಿಣಾಮ ಒಂದಿಷ್ಟು ಕೆಲಸ ಪಾಲಿಕೆ ಮಾಡಿದೆ.

ಇದನ್ನೂ ಓದಿ; – ಪರಿಷತ್ ಫೈಟ್: ಮತದಾನ ಆರಂಭ, ಗೆಲುವಿನ ವಿಶ್ವಾಸದಲ್ಲಿ ಪಕ್ಷಗಳು

ಆದರೆ, ಆ ಕೆಲಸ ಕೇವಲ ಕಾಗದಗಳಲ್ಲಿ ಮಾತ್ರ ಕಾಣುತ್ತಿದೆ. ವಾಸ್ತವವಾಗಿ ತೆರವು ಕಾರ್ಯ ಇನ್ನೂ ಕೈಗೊಂಡಿಲ್ಲ. ಕೈಗೊಂಡಿರುವ ಕ್ರಮಗಳನ್ನು ಕಾಗದ ಮೇಲೆ ಕಾಣಿಸಿದರೆ ಸಾಲದು. ಏಕೆಂದರೆ, ನ್ಯಾಯಾಲಯ ಇಟ್ಟಿದ್ದ ಭರವಸೆಯನ್ನು ಬಿಬಿಎಂಪಿ ಕಳೆದುಕೊಂಡಿದೆ. ಫ‌ಲಿತಾಂಶ ತೋರಿಸಿದ ಮೇಲಷ್ಟೇ ನ್ಯಾಯಾಲಯ ಪಾಲಿಕೆಯನ್ನು ನಂಬುತ್ತದೆ ಎಂದು ತೀಕ್ಷಣವಾಗಿ ಹೇಳಿ, ಕೋರ್ಟ್‌ ಆದೇಶ ಪಾಲಿಸಿದ ವರದಿ ಸಲ್ಲಿಸಲು ಮೂರು ತಿಂಗಳ ಕಾಲಾವಕಾಶ ನೀಡಿ ವಿಚಾರಣೆ ಮುಂದೂಡಿತು.

ಯಾರ ಪ್ರಭಾವಕ್ಕೂ ಜಗ್ಗದಿರಿ

ಅನಧಿಕೃತ ಕಟ್ಟಡಗಳ ತೆರವು ವಿಚಾರದಲ್ಲಿ ಕೋರ್ಟ್‌ ಆದೇಶದಂತೆ ಕ್ರಮ ಕೈಗೊಳ್ಳಬೇಕು. ಇದರಲ್ಲಿ ಯಾವುದೇ ಮುಲಾಜು ಬೇಡ, ಯಾರಿಗೂ ಹೆದರದಿರಿ ಮತ್ತು ಯಾವ ಪ್ರಭಾವಕ್ಕೂ ಜಗ್ಗದಿರಿ. ಕಾಗದದಲ್ಲಿ ಹೇಳಿರುವುದು ನಿಜವಾಗಿರಬಹುದು.

ಆದರೆ, ನ್ಯಾಯಾಲಯಕ್ಕೆ ಅದಕ್ಕಿಂತ ಮುಖ್ಯವಾಗಿ ಫ‌ಲಿತಾಂಶ ಬೇಕು. ಪಾಲಿಕೆ ಕೈಗೊಂಡ ಕ್ರಮಗಳು ನೆಲದ ಮೇಲೆ ಕಾಣಬೇಕು ಎಂದು ನ್ಯಾಯಪೀಠ ಹೇಳಿತು. ಅದಕ್ಕೆ ಪಾಲಿಕೆ ಪರ ವಕೀಲರು ಉತ್ತರಿಸಿ ಯಾವ ಪ್ರಭಾವಕ್ಕೂ ಪಾಲಿಕೆ ಬಗ್ಗುವುದಿಲ್ಲ, ಪ್ರಭಾವಿಗಳ ವಿರುದ್ಧವೂ ಕ್ರಮ ಕೈಗೊಳ್ಳ ಲಾಗುವುದು ಎಂದು ಭರವಸೆ ನೀಡಿದರು.

5000 ಕಟ್ಟಡಗಳಿಂದ ನಿಯಮ ಉಲ್ಲಂಘನೆ

ವಿಚಾರಣೆ ವೇಳೆ ಪಾಲಿಕೆ ಮುಖ್ಯ ಆಯುಕ್ತರ ಪ್ರಮಾಣವನ್ನು ಪತ್ರವನ್ನು ನ್ಯಾಯಪೀಠಕ್ಕೆ ಸಲ್ಲಿಸಿದ ಬಿಬಿಎಂಪಿ ಪರ ಹಿರಿಯ ನ್ಯಾಯವಾದಿ ಡಿ.ಎನ್‌. ನಂಜುಂಡರೆಡ್ಡಿ ವಾದ ಮಂಡಿಸಿ, 2021ರ ನ.30ರವರೆಗೆ 1,31,745 ಅನ ಧಿಕೃತ ಕಟ್ಟಡಗಳು (ನಕ್ಷೆ ಅನುಮೋದನೆ ಪಡೆಯದ) ಸಮೀಕ್ಷೆ ಮಾಡಲಾಗಿದ್ದು, 16,286 ಕಟ್ಟಡಗಳ ಮಾಲೀಕರಿಗೆ ದಾಖಲೆ ಸಲ್ಲಿಸಲು ಬಿಬಿಎಂಪಿ ಕಾಯ್ದೆ ಸೆಕ್ಷನ್‌ 313 ಪ್ರಕಾರ ನೋಟಿಸ್‌ ನೀಡಲಾಗಿದೆ.

ಈವರೆಗೆ 1,712 ಕಟ್ಟಡಗಳ ಮಾಲೀಕರು ನೋಟಿಸ್‌ ಗೆ ಉತ್ತರ ನೀಡಿದ್ದಾರೆ. ಇನ್ನುಳಿದ ಮಾಲೀಕರ ವಿರುದ್ಧ ಕಾನೂನು ರೀತಿ ಕ್ರಮ ಜರುಗಿಸಲಾಗುವುದು ಎಂದರು. ಅಲ್ಲದೆ, 2020ರ ಜನವರಿ 1ರಿಂದ 2021ರ ಜು.30ವರೆಗೆ ಪಾಲಿಕೆ 8,496 ಕಟ್ಟಡಗಳ ನಿರ್ಮಾಣಕ್ಕೆ ನಕ್ಷೆಯನ್ನು ಮಂಜೂರಾತಿ ಮಾಡಿದೆ.

ಆ ಪೈಕಿ 7,245 ಕಟ್ಟಡಗಳ ಸರ್ವೇ ಮಾಡಲಾಗಿದ್ದು, 5,341 ಕಟ್ಟಡಗಳು ನಿಯಮ ಉಲ್ಲಂಘಿಸಿರುವುದು ಕಂಡು ಬಂದಿದ್ದು, 2,656 ಕಟ್ಟಡಗಳಿಗೆ ಸೆಕ್ಷನ್‌ 313 ಅಡಿ ನೋಟಿಸ್‌ ನೀಡಲಾಗಿದೆ, ಈವರೆಗೆ 733 ಮಾಲೀಕರು ನೋಟಿಸ್‌ಗೆ ಉತ್ತರ ನೀಡಿದ್ದಾರೆ. ಈ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಇನ್ನೂ ಕನಿಷ್ಠ ಮೂರು ತಿಂಗಳು ಕಾಲಾವಕಾಶ ನೀಡಬೇಕೆಂದರು.

ವಾರ್ಡ್‌ ಮಟ್ಟದಲ್ಲಿ ತಂಡ ರಚನೆ: ಬಿಬಿಎಂಪಿ ಅನ ಕೃತ ಕಟ್ಟಡಗಳ ತೆರವು ವಿಚಾರವನ್ನು ಗಂಭೀರವಾಗಿ ಪರಿಗಣಿಸಿದೆ, ವಾರ್ಡ್‌ ಮಟ್ಟದಲ್ಲಿ ಕಟ್ಟಡಗಳ ಸರ್ವೆ ಮಾಡಲು ಎಂಜಿನಿಯರ್‌ಗಳನ್ನು ಒಳಗೊಂಡ ತಂಡಗಳನ್ನು ರಚಿಸಲಾಗಿದೆ.

ಪ್ರತಿದಿನ ಈ ವಿಚಾರದಲ್ಲಿ ಮೇಲ್ವಿಚಾರಣೆ ನಡೆಸಲಾಗುತ್ತಿದೆ. ಕಾಲಮಿತಿಯಲ್ಲಿ ಕ್ರಮ ಕೈಗೊಳ್ಳುವ ಕ್ರಿಯಾ ಯೋಜನೆ ಹಾಕಿಕೊಳ್ಳಲಾಗಿದೆ. ಕಾನೂನು ರೀತಿಯಲ್ಲಿ ಅಂತಹ ಕಟ್ಟಡಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ಟಾಪ್ ನ್ಯೂಸ್

1-a-raga-pg

Parliament; ಪ್ರಿಯಾಂಕಾ ಗಾಂಧಿ- ರಾಹುಲ್ ಜತೆ ಸೇರಿ ಬಿಜೆಪಿ ನಿದ್ದೆಗೆಡಿಸುತ್ತಾರೆ :ಪೈಲಟ್

Sagara: ತರಗತಿ ಕೊಠಡಿ ಅವ್ಯವಸ್ಥೆ; ಎಲ್‌ಬಿ ಕಾಲೇಜಿನ ವಿದ್ಯಾರ್ಥಿಗಳ ದಿಢೀರ್ ಪ್ರತಿಭಟನೆ

Sagara: ತರಗತಿ ಕೊಠಡಿಯಲ್ಲಿ ಅವ್ಯವಸ್ಥೆ… ಕಾಲೇಜು ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ

Talk war between Minister Sharanabasappa Darshanapura and MLA Sharanagouda Kandakur in KDP meeting

Yadagiri: ಕೆಡಿಪಿ ಸಭೆಯಲ್ಲಿ ಸಚಿವರ-ಶಾಸಕರ ನಡುವೆ ವಾಕ್ ಸಮರ!

BGT 2024: ಬುಮ್ರಾ ಬೆಂಕಿ ದಾಳಿಗೆ ನಲುಗಿದ ಆಸೀಸ್:‌ ಭಾರತದ ಹಿಡಿತದಲ್ಲಿ ಪರ್ತ್‌ ಟೆಸ್ಟ್‌

BGT 2024: ಬುಮ್ರಾ ಬೆಂಕಿ ದಾಳಿಗೆ ನಲುಗಿದ ಆಸೀಸ್:‌ ಭಾರತದ ಹಿಡಿತದಲ್ಲಿ ಪರ್ತ್‌ ಟೆಸ್ಟ್‌

15-bng

Bengaluru: ‘ಪೊಲೀಸರ ಹೆಸರಿನ ನಕಲಿ ಕರೆ ಬಗ್ಗೆ ಎಚ್ಚರ ವಹಿಸಿ’

ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ

ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ

Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಘಾತ

Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18-bng

Bengaluru: ಅನಧಿಕೃತ ಮಳಿಗೆಗಳ ತೆರವು ಕೋರಿ ಅರ್ಜಿ:ಪಾಲಿಕೆಗೆ ಹೈಕೋರ್ಟ್ ನೋಟಿಸ್‌

17-bng

Bengaluru: ವಿಶ್ವನಾಥ್‌ಗೆ ಕೊಲೆ ಬೆದರಿಕೆ: ಆರೋಪಿ ಅರ್ಜಿ ವಜಾ

16-bng

Bengaluru: ಮರಕ್ಕೆ ಬೈಕ್‌ ಡಿಕ್ಕಿ ಹೊಡೆದು ಯುವಕ ಸಾವು

15-bng

Bengaluru: ‘ಪೊಲೀಸರ ಹೆಸರಿನ ನಕಲಿ ಕರೆ ಬಗ್ಗೆ ಎಚ್ಚರ ವಹಿಸಿ’

14-bng

Bengaluru: ಬಟ್ಟೆ ಗುಣಮಟ್ಟ ದೃಢೀಕರಣಕ್ಕೂ ಬಂತು ಸೆನ್ಸರ್‌!

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

1-a-raga-pg

Parliament; ಪ್ರಿಯಾಂಕಾ ಗಾಂಧಿ- ರಾಹುಲ್ ಜತೆ ಸೇರಿ ಬಿಜೆಪಿ ನಿದ್ದೆಗೆಡಿಸುತ್ತಾರೆ :ಪೈಲಟ್

Sagara: ತರಗತಿ ಕೊಠಡಿ ಅವ್ಯವಸ್ಥೆ; ಎಲ್‌ಬಿ ಕಾಲೇಜಿನ ವಿದ್ಯಾರ್ಥಿಗಳ ದಿಢೀರ್ ಪ್ರತಿಭಟನೆ

Sagara: ತರಗತಿ ಕೊಠಡಿಯಲ್ಲಿ ಅವ್ಯವಸ್ಥೆ… ಕಾಲೇಜು ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ

Dandeli: ಅಧಿಕಾರಿಗಳಿಂದ ರೈಲು ಮಾರ್ಗದ ವಿದ್ಯುದ್ದೀಕರಣ ಪರಿಶೀಲನೆ

Dandeli: ಅಧಿಕಾರಿಗಳಿಂದ ರೈಲು ಮಾರ್ಗದ ವಿದ್ಯುದ್ದೀಕರಣ ಪರಿಶೀಲನೆ

Love Reddy movie released today

Love Reddy: ತೆರೆಗೆ ಬಂತು ʼಲವ್‌ ರೆಡ್ಡಿʼ

Talk war between Minister Sharanabasappa Darshanapura and MLA Sharanagouda Kandakur in KDP meeting

Yadagiri: ಕೆಡಿಪಿ ಸಭೆಯಲ್ಲಿ ಸಚಿವರ-ಶಾಸಕರ ನಡುವೆ ವಾಕ್ ಸಮರ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.