ನಮ್ಮ ಪ್ರಗತಿ ವಿಶ್ವಕ್ಕೆ ತೋರಿಸಿ; ರಾಷ್ಟ್ರಪತಿ ಪ್ರಣಬ್ ಮುಖರ್ಜಿ
Team Udayavani, Jan 10, 2017, 3:45 AM IST
ಬೆಂಗಳೂರು: ಭಾರತದ ಅಭಿವೃದ್ಧಿಯ ಪಥವನ್ನು ವಿಶ್ವ ಸಮುದಾಯಕ್ಕೆ ತಿಳಿಸುವ ರಾಯಭಾರಿಗಳಾಗಿ ಕೆಲಸ ಮಾಡಿ ಎಂದು ಪ್ರವಾಸಿ ಭಾರತೀಯ ದಿವಸಕ್ಕೆ ಆಗಮಿಸಿದ್ದ ಅನಿವಾಸಿ ಭಾರತೀಯರಿಗೆ ರಾಷ್ಟ್ರಪತಿ ಪ್ರಣವ್ ಮುಖರ್ಜಿ ಕರೆ ನೀಡಿದ್ದಾರೆ.
ಬೆಂಗಳೂರು ಅಂತಾರಾಷ್ಟ್ರೀಯ ಸಮಾವೇಶ ಕೇಂದ್ರದಲ್ಲಿ ಆಯೋಜಿಸಿದ್ದ ಮೂರು ದಿನಗಳ ಪ್ರವಾಸಿ ಭಾರತೀಯ ದಿವಸ ಸಮಾವೇಶದ ಸಮಾರೋಪ ಭಾಷಣ ಮಾಡಿದ ಅವರು, ಭಾರತ ಇಂದು ಎಲ್ಲ ರಂಗಗಳಲ್ಲೂ ಅಭಿವೃದ್ಧಿಯತ್ತ ಸಾಗುತ್ತಿದೆ. ಇಡೀ ವಿಶ್ವ ಇತ್ತ ನೋಡುವಂತಹ ಸ್ಥಿತಿ ನಿರ್ಮಾಣವಾಗಿದೆ. ಇಲ್ಲಿಯ ಪ್ರಗತಿಯ ಚಿತ್ರಣವನ್ನು ನೀವು ನೆಲೆಸಿರುವ ರಾಷ್ಟ್ರಗಳ ಮುಂದಿಡಿ ಎಂದು ಹೇಳಿದರು.
ಭಾರತದ ಅಭಿವೃದ್ಧಿಯಲ್ಲಿ ಅನಿವಾಸಿ ಭಾರ ತೀಯರ ಪಾಲುದಾರಿಕೆ ಕಡಿಮೆ ಏನಲ್ಲ. ಹಿಂದಿ ನಿಂದಲೂ ದೇಶದ ಪ್ರಗತಿಗೆ ಕೊಡುಗೆ ನೀಡುತ್ತಲೇ ಬಂದಿದ್ದಾರೆ. ಬದಲಾದ ಕಾಲಮಾನಕ್ಕೆ ತಕ್ಕಂತೆ ಅಭಿವೃದ್ಧಿಯ ದೃಷ್ಟಿಕೋನವೂ ಬದಲಾಗಿದೆ. ಮೇಕ್ ಇನ್ ಇಂಡಿಯಾ, ಡಿಜಿಟಲ್ ಇಂಡಿಯಾ, ಸ್ವತ್ಛ ಭಾರತ್, ಸ್ಟಾರ್ಟ್ ಅಪ್ ಇಂಡಿಯಾ ಕಾರ್ಯಕ್ರಮಗಳಲ್ಲೂ ನಿಮ್ಮ ಪಾಲ್ಗೊಳ್ಳುವಿಕೆ
ಬೇಕು ಎಂದು ತಿಳಿಸಿದರು.
ಭಾರತ ವಿಶ್ವದಲ್ಲೇ ಅತ್ಯಂತ ಪ್ರಬಲ ರಾಷ್ಟ್ರವಾಗಿ ಹೊರ ಹೊಮ್ಮುತ್ತಿದ್ದು, ಈ ನೆಲದಲ್ಲಿ ನಿಮ್ಮ ಬೇರು ಗಳಿವೆ. ಭಾರತದ ಅಭಿವೃದ್ಧಿಯ ಪ್ರತಿ ಹಂತದಲ್ಲೂ ನಿಮ್ಮ ಪಾಲುದಾರಿಕೆ, ಸಹಭಾಗಿತ್ವ ಅತ್ಯಗತ್ಯ ಎಂದು ಹೇಳಿದರು.
ಜಗತ್ತಿನ ವಿವಿಧ ದೇಶಗಳಲ್ಲಿರುವ ಭಾರತೀಯ ಮೂಲದ ತಂತ್ರಜ್ಞರು, ವೃತ್ತಿಪರರು ಭಾರತಕ್ಕೆ ಆಗ್ಗಾಗ್ಗೆ ಬಂದು ಐಐಟಿ ಮತ್ತು ಐಐಎಂಗಳಲ್ಲಿ ಸಣ್ಣ ಫೆಲೋಶಿಪ್‌ಗ್ಳನ್ನು ಪಡೆದು ಸಂಶೋಧನೆ ಮತ್ತು ಅಭಿವೃದ್ಧಿ ಕೆಲಸಗಳಲ್ಲಿ ತೊಡಗಬೇಕು. ಈ ಮೂಲಕ ದೇಶದ ಆರ್ಥಿಕ ಮತ್ತು ವೈಜ್ಞಾnನಿಕ ಅಭಿವೃದ್ಧಿಯಲ್ಲೂ ಪಾಲುದಾರರಾಗ
ಬೇಕು ಎಂದು ತಿಳಿಸಿದರು.
ಹೊರ ದೇಶಗಳಲ್ಲಿರುವ ಭಾರತೀಯರು ತಮ್ಮದೇ ಆದ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿ, ಆ ದೇಶಕ್ಕೂ ಹಾಗೂ ಮಾತೃಭೂಮಿಗೂ ಗೌರವ ತಂದಿದ್ದಾರೆ. ಅವರ ಸಾಧನೆಯ ಬಗ್ಗೆ ಭಾರತಕ್ಕೆ ಹೆಮ್ಮೆ ಇದೆ. ಭಾರತೀಯರು ಎಲ್ಲೇ ಇದ್ದರೂ ಅಲ್ಲಿನ ಸಂಸ್ಕೃತಿ ಜೊತೆಗೆ ನಮ್ಮ ಸಂಸ್ಕೃತಿ ಯನ್ನು ಉಳಿಸಿ ಬೆಳೆಸುತ್ತಿದ್ದಾರೆ ಎಂದು ಹೇಳಿದರು.
ಕೊಲ್ಲಿ ರಾಷ್ಟ್ರಗಳು ಮತ್ತಿತರ ದೇಶಗಳಿಗೆ ತಾತ್ಕಾ ಲಿಕವಾಗಿ ಸಣ್ಣ ಸಣ್ಣ ಉದ್ಯೋಗಗಳನ್ನು ಅರಸಿ ಹೆಚ್ಚಿನ ಪ್ರಮಾಣದಲ್ಲಿ ಹೋಗುವವರಿಗೆ ಕೌಶಲ ತರಬೇತಿ ನೀಡುವ ಅಗತ್ಯವಿದೆ. ಅಂಥವರ ಪ್ರಮಾಣ ಬಹಳ ದೊಡ್ಡದಿದೆ ಎಂದು ತಿಳಿಸಿದರು.
ಹೊರದೇಶಗಳಿಗೆ ಉದ್ಯೋಗ ಅರಸಿ ಹೋಗು ವವರಿಗೆ ಅಗತ್ಯವಾದ ಕೌಶಲ ತರಬೇತಿ ನೀಡುವ ಬಗ್ಗೆಯೂ ಕೇಂದ್ರ ಸರಕಾರ ಕ್ರಮ ಕೈಗೊಳ್ಳಬೇಕು. ಕೇಂದ್ರ ಸರಕಾರ ಇ- ವಲಸೆ ಯೋಜನೆ ಸಹಿತ ಹಲವು ಕ್ರಮಗಳನ್ನು ಕೈಗೊಂಡಿದೆ. ಉದ್ಯೋಗ ಕೊಡಿಸುವ ಹೆಸರಿನಲ್ಲಿ ವಂಚಿಸುವ ಕೆಲಸ ನಡೆಯುತ್ತಿದ್ದು, ಆ ಬಗ್ಗೆ ಹೆಚ್ಚು ಗಮನಹರಿಸಬೇಕು. ಕೇಂದ್ರ ಸರಕಾರ ಆ ನಿಟ್ಟಿನಲ್ಲಿ ಸಾಕಷ್ಟು ಕ್ರಮ ಕೈಗೊಂಡಿಯಾದರೂ ಮತ್ತಷ್ಟು ಅಗತ್ಯವಿದೆ ಎಂದರು.
ಅನಿವಾಸಿ ಭಾರತೀಯ ಕುಟುಂಬಗಳ ಜತೆ ವಿವಾಹ ಸಂಬಂಧ ಏರ್ಪಟ್ಟು ಭಾರತದಿಂದ ಮದುವೆಯಾಗಿ ವಿದೇಶಗಳಿಗೆ ತೆರಳುವ ಹೆಣ್ಣು ಮಕ್ಕಳಿಗೆ ಅಲ್ಲಿ ಸಮಸ್ಯೆಯಾದರೆ ಅವರನ್ನು ರಕ್ಷಿಸಿ ಅವರಿಗೆ ಅಗತ್ಯ ನೆರವು ಕಲ್ಪಿಸಿಕೊಡಲು ಮುಂದಾಗಬೇಕು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಇಬ್ಬರು ಕರ್ನಾಟಕ ಮೂಲದ ಅನಿವಾಸಿ ಭಾರತೀಯರು ಸೇರಿದಂತೆ 30 ಮಂದಿ ಸಾಧಕರಿಗೆ ಪ್ರವಾಸಿ ಭಾರತೀಯ ಸಮ್ಮಾನ್ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಪ್ರಶಸ್ತಿ ಪುರಸ್ಕೃತರ ಪರವಾಗಿ ನಿಶಾ ದೇಶಾಯಿ ಬಿಸ್ವಾಲ್ ಮಾತನಾಡಿದರು.
ಪುಸ್ತಕ ಬಿಡುಗಡೆ: ಇದೇ ಸಂದರ್ಭ ಪ್ರಧಾನಿ ನರೇಂದ್ರ ಮೋದಿ ಅವರು 2014 ಮತ್ತು 2015ನೇ ಸಾಲಿನಲ್ಲಿ ವಿದೇಶ ಪ್ರವಾಸ ಕೈಗೊಂಡಿದ್ದ ಸಂದರ್ಭದಲ್ಲಿ ಭಾರತದ ವಿದೇಶಾಂಗ ನೀತಿ ಕುರಿತು ಮಾಡಿದ ಭಾಷಣಗಳ ಸಂಗ್ರಹದ ಪುಸ್ತಕವನ್ನು ರಾಷ್ಟ್ರಪತಿಯವರು ಬಿಡುಗಡೆ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಗಾಂಧಿ ಭಾರತ್ ಕಾರ್ಯಕ್ರಮದ ಬಗ್ಗೆ ಶೆಟ್ಟರ್ ಅಪಸ್ವರ ತೆಗೆದಿದ್ದು ದುರ್ದೈವ – ಎಚ್ ಕೆ ಪಾಟೀಲ
Congress ಅಧಿವೇಶನದ ಶತಮಾನೋತ್ಸವ ಕಾರ್ಯಕ್ರಮ ದೇಶದ ಇತಿಹಾಸದ ಒಂದು ಐತಿಹಾಸಿಕ ಕಾರ್ಯಕ್ರಮ
Vijayapura: ಬಿಜೆಪಿಯಲ್ಲಿ ನಾಯಕತ್ವದ ಕೊರತೆಯಿಲ್ಲ; ಮೋದಿ ನಂತರ ಯೋಗಿ ಎಂದ ಯತ್ನಾಳ್
Haveri: ಕಾರುಗಳ ನಡುವೆ ಭೀಕರ ಅಪಘಾತ; ನಾಲ್ವರ ದುರ್ಮರಣ
Suspension: ಸಿ.ಟಿ. ರವಿ ಪ್ರಕರಣ; ಖಾನಾಪುರ ಸಿಪಿಐ ಅಮಾನತು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Living together; ವಿಚ್ಛೇದನ ತಡೆಯಲು ಲಿವಿಂಗ್ ಟುಗೆದರ್ ಸಹಕಾರಿಯೇ?
Uttarakhand: ಕಂದಕಕ್ಕೆ ಬಿದ್ದ ಬಸ್ ನಾಲ್ವರು ಮೃ*ತ್ಯು; 20ಕ್ಕೂ ಅಧಿಕ ಮಂದಿಗೆ ಗಾಯ
Uttar Pradesh: 16 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾ*ಚಾರ; ಇಬ್ಬರ ಬಂಧನ
ಗಾಂಧಿ ಭಾರತ್ ಕಾರ್ಯಕ್ರಮದ ಬಗ್ಗೆ ಶೆಟ್ಟರ್ ಅಪಸ್ವರ ತೆಗೆದಿದ್ದು ದುರ್ದೈವ – ಎಚ್ ಕೆ ಪಾಟೀಲ
YearEnder 2024: ಪ್ರಧಾನಿ ಮೋದಿ ಅವರ ರಾಜಕೀಯ ಜೀವನದಲ್ಲಿ 2024 ಯಾಕೆ ಮಹತ್ವದ ವರ್ಷವಾಗಿದೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.