ಮೋದಿ ಕೆಳಗಿಳಿಸಲು ವಿಪಕ್ಷಗಳ ಒಗ್ಗಟ್ಟು
Team Udayavani, Jun 25, 2018, 6:15 AM IST
ಬೆಂಗಳೂರು: ಬಿಜೆಪಿಯ ಬೆಳವಣಿಗೆ, ಜನಮನ್ನಣೆಯಿಂದ ಧೃತಿಗೆಟ್ಟಿರುವ ವಿರೋಧ ಪಕ್ಷಗಳು ಪ್ರಧಾನಿ ಮೋದಿಯವರನ್ನು ಅಧಿಕಾರದಿಂದ ದೂರವಿಡಬೇಕೆಂಬ ಉದ್ದೇಶದಿಂದ ಕೈಜೋಡಿಸುತ್ತಿವೆ. ಈ ಬಗ್ಗೆ ಚಿಂತಿಸುವ ಅಗತ್ಯವಿಲ್ಲ. ಜನಬಲ, ದೈವಬಲ, ಸಾಧನೆಯ ಬಲ ನಮ್ಮೊಂದಿಗಿದೆ ಎಂದು ಪ್ರತಿಪಕ್ಷ ನಾಯಕ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
ಬಿಜೆಪಿ ರಾಜ್ಯ ಕಚೇರಿಯಲ್ಲಿ ಭಾನುವಾರ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರದ ನಾಲ್ಕು ವರ್ಷದ ಸಾಧನೆ ಕುರಿತಾದ ಶುದ್ಧ ನಡೆ ಸೂಕ್ತ ವಿಕಾಸ ಕೈಪಿಡಿ ಬಿಡುಗಡೆಗೊಳಿಸಿ ಅವರು ಮಾತನಾಡಿದರು. ಸಬ್ ಕಾ ಸಾಥ್ ಸಬ್ ಕಾ ವಿಕಾಸ್‌ಎಂಬ ಧ್ಯೇಯದೊಂದಿಗೆ ವಿಕಾಸವೊಂದೇ ಜನರನ್ನು ಬೆಸೆಯುವ ಏಕೈಕ ಮಂತ್ರ ಎಂಬಂತೆ ಮೋದಿ ಸರ್ಕಾರ ಕೆಲಸ ಮಾಡುತ್ತಿದೆ. ಹಾಗಾಗಿಯೇ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದಾಗ ಆರು ರಾಜ್ಯಗಳಲ್ಲಿದ್ದ ಬಿಜೆಪಿ, ಇಂದು 20 ರಾಜ್ಯಗಳಲ್ಲಿ ಅಧಿಕಾರದ ಚುಕ್ಕಾಣಿ ಹಿಡಿದಿದೆ. ಮೋದಿ ಸರ್ಕಾರದ ಸಾಧನೆಯನ್ನು ಮನೆ, ಮನೆಗೆ ತಲುಪಿಸಬೇಕಿದೆ. ಪ್ರಜಾಪ್ರಭುತ್ವದಲ್ಲಿ ಜನರಿಗೆ ಸಾಧನೆಯನ್ನು ತಿಳಿಸುವುದು ನಮ್ಮ ಕರ್ತವ್ಯ. ಅದಕ್ಕಾಗಿಯೇ ಮೋದಿ ಸರ್ಕಾರದ ಸಾಧನೆಗಳ ಕಿರುಹೊತ್ತಿಗೆ ತರಲಾಗಿದೆ. ಕಾರ್ಯಕರ್ತರು ಇದನ್ನು ಪರಿಣಾಮಕಾರಿಯಾಗಿ ಜನರಿಗೆ ತಲುಪಿಸಲಿದ್ದಾರೆ ಎಂದು ಹೇಳಿದರು.
ಬಿಜೆಪಿ ಪ್ರಧಾನ ಕಾರ್ಯದರ್ಶಿ ಅರವಿಂದ ಲಿಂಬಾವಳಿ, ರಾಜ್ಯ ಪ್ರಧಾನ ಕಾರ್ಯದರ್ಶಿ, ವಿಧಾನ ಪರಿಷತ್ ಸದಸ್ಯ ಎನ್.ರವಿಕುಮಾರ್, ಬಿಜೆಪಿ ಸಹ ವಕ್ತಾರ ಎ.ಎಚ್.ಆನಂದ್, ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ತಮ್ಮೇಶ್‌ಗೌಡ ಇತರರು ಉಪಸ್ಥಿತರಿದ್ದರು.
29ರಂದು ರಾಜ್ಯ ಕಾರ್ಯಕಾರಿಣಿ
ಜೂ.29ರಂದು ಬೆಂಗಳೂರಿನಲ್ಲಿ ರಾಜ್ಯ ಕಾರ್ಯಕಾರಿಣಿ ನಡೆಯಲಿದೆ. ಎಲ್ಲ ಶಾಸಕರು, ಸಂಸದರು, ಪ್ರಮುಖರು ಪಾಲ್ಗೊಳ್ಳಲಿದ್ದಾರೆ. ಮನೆ, ಮನೆಗೆ ಕಿರುಹೊತ್ತಿಗೆ ತಲುಪಿಸುವುದರ ಜತೆಗೆ ಅಧ್ಯಯನ ಮಾಡಿ ಜನರಿಗೆ ತಿಳಿಸುವಂತೆಯೂ ಕೋರಲಾಗುವುದು. ಹಾಗೆಯೇ ವಿಧಾನ ಪರಿಷತ್‌ನಲ್ಲಿ ಪ್ರತಿಪಕ್ಷ ನಾಯಕರ ಆಯ್ಕೆ ಬಗ್ಗೆಯೂ ಚರ್ಚಿಸಿ ನಿರ್ಧರಿಸಲಾಗುವುದು. ಬಿ.ಜೆ.ಪುಟ್ಟಸ್ವಾಮಿಯವರು ಸಿಟ್ಟಿನಲ್ಲಿ ಮಾತನಾಡಿದ್ದು, ಅವರನ್ನು ಕರೆಸಿ ಮಾತನಾಡುತ್ತೇನೆ ಎಂದು ಯಡಿಯೂರಪ್ಪ ಹೇಳಿದರು.
ಷರತ್ತು ವಿಧಿಸಿ ಮುಖ್ಯಮಂತ್ರಿಯಾಗಬೇಕಿತ್ತು!
ತಮ್ಮ ಪಕ್ಷದ ಪ್ರಣಾಳಿಕೆಯನ್ನು ಅನುಷ್ಠಾನಗೊಳಿಸಲು ಒಪ್ಪಿದರಷ್ಟೇ ಮುಖ್ಯಮಂತ್ರಿ ಸ್ಥಾನ ಅಲಂಕರಿಸುವುದಾಗಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸಮ್ಮಿಶ್ರ ಸರ್ಕಾರ ರಚನೆ ಸಂದರ್ಭದಲ್ಲಿ ಕಾಂಗ್ರೆಸ್‌ಗೆ ಷರತ್ತು ವಿಧಿಸಬೇಕಿತ್ತು. ಚುನಾವಣೆ ಸಂದರ್ಭದಲ್ಲಿ ಕುಮಾರಸ್ವಾಮಿಯವರು ಸಾಕಷ್ಟು ಭರವಸೆ ನೀಡಿದ್ದರು. ಅದನ್ನು ನಂಬಿ 37 ಅಭ್ಯರ್ಥಿಗಳನ್ನು ಜನ ಗೆಲ್ಲಿಸಿದ್ದಾರೆ. ರೈತರು, ಕೃಷಿ ಕಾರ್ಮಿಕರು, ದೀನ ದಲಿತರು ಹಾಗೂ ಸಾಮಾನ್ಯರಿಗೆ ನೀಡಿರುವ ಭರವಸೆಯನ್ನು ಕುಮಾರಸ್ವಾಮಿಯವರು 24 ಗಂಟೆಯಲ್ಲಿ ಜಾರಿಗೊಳಿಸುತ್ತಾರೆ ಎಂಬ ನಿರೀಕ್ಷೆಯಲ್ಲಿ ಜನರಿದ್ದಾರೆ. ನಾವು ಕೂಡ ಅದೇ ನಿರೀಕ್ಷೆಯಲ್ಲಿದ್ದು, 15 ದಿನಗಳಿಂದ ನಾನು ಈ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡದೆ ಕಾದು ನೋಡುತ್ತಿದ್ದೇನೆ. ನಾನು ಅನಗತ್ಯವಾಗಿ ಕಲ್ಪಿಸಿಕೊಂಡು ಮಾತನಾಡುವುದಿಲ್ಲ. ಸಚಿವ ಡಿ.ಕೆ.ಶಿವಕುಮಾರ್ ಅವರ ಬಳಿ ದಾಖಲೆಗಳಿದ್ದರೆ ಬಿಡುಗಡೆ ಮಾಡಲಿ. ಸರ್ಕಾರ ಅವರ ಕೈಯಲ್ಲೇ ಇದೆ. ಸಿಐಡಿ, ಲೋಕಾಯುಕ್ತ, ಎಸಿಬಿ ಮೂಲಕ ತನಿಖೆ ನಡೆಸಲಿ. ತಮ್ಮ ಹುಳುಕನ್ನು ಮುಚ್ಚಿಕೊಳ್ಳಲು ಕುಂಟು ನೆಪ ಹೇಳುವ ಬದಲಿಗೆ ದಾಖಲೆ ಬಿಡುಗಡೆ ಮಾಡಲಿ. ನಾನು ಸ್ವಾಗತಿಸುತ್ತೇನೆ ಎಂದು ಬಿಎಸ್‌ವೈ ಹೇಳಿದರು.
ಸರಿಯಾದ ನಿಲುವು ಕೈಗೊಳ್ಳಲಿ
ಹಿಂದಿನ ಸರ್ಕಾರ ಕಾವೇರಿ ವಿಚಾರದಲ್ಲಿ ಸರಿಯಾದ ಕ್ರಮ ಕೈಗೊಂಡಿಲ್ಲ. ಹಾಲಿ ಸರ್ಕಾರ ಎಚ್ಚರ ವಹಿಸಬೇಕು. ಸುಪ್ರೀಂಕೋರ್ಟ್ ನಿರ್ದೇಶನದಂತೆ ಕಾವೇರಿ ನಿರ್ವಹಣಾ ಮಂಡಳಿ ರಚನೆ ಕಾರ್ಯ ನಡೆದಿದೆ. ರಾಜ್ಯ ಸರ್ಕಾರದ ಪ್ರತಿನಿಧಿ ಆಯ್ಕೆ ಮಾಡುವಲ್ಲಿಯೂ ನಾವು ವಿಫಲರಾಗಿದ್ದೇವೆ. ಕಾವೇರಿ ವಿಚಾರದಲ್ಲಿ ಬಿಜೆಪಿ ಸರ್ಕಾರದ ಜತೆಗಿರಲಿದೆ. ರೈತರ ಹಿತದೃಷ್ಟಿಯಿಂದ ಸಹಕಾರ ನೀಡಲು ಸಿದ್ಧ. ಇದರಲ್ಲಿ ರಾಜಕಾರಣ ಮಾಡದೆ ಸಮಸ್ಯೆ ಬಗೆಹರಿಸಿ ರೈತರಿಗೆ ಅನ್ಯಾಯವಾಗದಂತೆ ನೋಡಿಕೊಳ್ಳುವುದು ನಮ್ಮ ಕರ್ತವ್ಯ. ಮಂಡಳಿಗೆ ರಾಜ್ಯದಿಂದ ಸೂಕ್ತ ತಜ್ಞರನ್ನು ಪ್ರತಿನಿಧಿಯನ್ನಾಗಿ ನೇಮಿಸಬೇಕಿತ್ತು. ಇನ್ನಾದರೂ ಈ ಬಗ್ಗೆ ಕ್ರಮ ಕೈಗೊಳ್ಳಬೇಕು ಎಂದು ಬಿ.ಎಸ್.ಯಡಿಯೂರಪ್ಪ ಒತ್ತಾಯಿಸಿದರು.
ಹೊಸದಾಗಿ ನಿರ್ಮಾಣವಾಗಿರುವ ಹಜ್ ಭವನಕ್ಕೆ ಟಿಪ್ಪು ಹೆಸರಿಡಲು ನಡೆದಿರುವ ಪ್ರಯತ್ನ ಖಂಡನೀಯ. ಬೇಕಿದ್ದರೆ ಮಾಜಿ ರಾಷ್ಟ್ರಪತಿ ಅಬ್ದುಲ್ ಕಲಾಂ ಅವರ ಹೆಸರಿಡಲಿ. ಅದನ್ನು ಬಿಟ್ಟು ಅನಗತ್ಯವಾಗಿ ಶಾಂತವಾಗಿರುವ ಕರ್ನಾಟಕದ ವಾತಾವರಣವನ್ನು ಕಲುಷಿತಗೊಳಿಸಲು ಪ್ರಯತ್ನ ಮಾಡಬಾರದು.
– ಬಿ.ಎಸ್.ಯಡಿಯೂರಪ್ಪ , ಪ್ರತಿಪಕ್ಷ ನಾಯಕ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಆಯ್ಕೆ ವಿಚಾರದ ಬಗ್ಗೆ ಸತೀಶ ಜಾರಕಿಹೊಳಿ ಹೇಳಿದ್ದೇನು?
Contractor Case: ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆ ಪ್ರಶ್ನೆಯೇ ಉದ್ಭವಿಸಲ್ಲ: ಸಿಎಂ
Huge Revenue: ಹೊಸ ವರ್ಷದ ಸಂಭ್ರಮ; ಅಬಕಾರಿ ಇಲಾಖೆಗೆ ಭರ್ಜರಿ ಆದಾಯ!
Arrested: ಹೊಸ ವರ್ಷಾಚರಣೆಗೆ ಮಾದಕ ವಸ್ತು ಮಾರುತ್ತಿದ್ದ 11 ಮಂದಿ ಸೆರೆ
EPF ನಿಧಿ ವಂಚನೆ: ರಾಬಿನ್ ಉತಪ್ಪ ವಿರುದ್ದದ ವಾರಂಟ್‌ಗೆ ಹೈಕೋರ್ಟ್ ತಡೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Ullala: ಆಯತಪ್ಪಿ ಪಾಳು ಬಾವಿಗೆ ಬಿದ್ದು ಸ್ಥಳೀಯ ಮೀನುಗಾರ ಮೃತ್ಯು
America: ಹೊಸ ವರ್ಷದ ಸಂಭ್ರಮಾಚರಣೆ-ಜನರ ಗುಂಪಿನ ಮೇಲೆ ನುಗ್ಗಿದ ಟ್ರಕ್-ಹಲವು ಸಾ*ವು
Belagavi: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಆಯ್ಕೆ ವಿಚಾರದ ಬಗ್ಗೆ ಸತೀಶ ಜಾರಕಿಹೊಳಿ ಹೇಳಿದ್ದೇನು?
International: Middle East ತೈಲ ಸಂಪತ್ತು…ಸಂಘರ್ಷ-ಮಧ್ಯಪ್ರಾಚ್ಯದಲ್ಲಿ ಎಷ್ಟು ದೇಶಗಳಿವೆ?
Thrissur: ಹೊಸ ವರ್ಷಕ್ಕೆ ವಿಶ್ ಮಾಡದ್ದಕ್ಕೆ ಯುವಕನಿಗೆ 24 ಬಾರಿ ಚೂರಿ ಇರಿತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.