Crime News: ಸಿದ್ದಾಪುರ ಮಹೇಶ ಹಂತಕರು ನ್ಯಾಯಾಲಯಕ್ಕೆ ಶರಣು


Team Udayavani, Aug 19, 2023, 2:56 PM IST

tdy-7

ಬೆಂಗಳೂರು:  ರೌಡಿ ಸಿದ್ದಾಪುರ ಮಹೇಶ್‌ ಹತ್ಯೆ ಮಾಡಿದ್ದ ಕುಖ್ಯಾತ ರೌಡಿಶೀಟರ್‌ ವಿಲ್ಸನ್‌ ಗಾರ್ಡನ್‌ ನಾಗ, ಡಬಲ್‌ ಮೀಟರ್‌ ಮೋಹನ ಶುಕ್ರವಾರ 9ನೇ ಎಸಿಎಂಎಂ ನ್ಯಾಯಾಲಯಕ್ಕೆ ಶರಣಾಗಿದ್ದಾರೆ.

ಸಿದ್ದಾಪುರ ಮಹೇಶ್‌ ಹತ್ಯೆ ಪ್ರಕರಣದಲ್ಲಿ ರೌಡಿಗಳಾದ ವಿಲ್ಸನ್‌ ಗಾರ್ಡನ್‌ ನಾಗ, ಮೋಹನ್‌ಗಾಗಿ ಪರಪ್ಪನ ಅಗ್ರಹಾರ ಠಾಣೆ ಪೊಲೀಸರು ಶೋಧ ನಡೆಸುತ್ತಿದ್ದರು. ಈ ನಡುವೆ ಶುಕ್ರವಾರ ಇಬ್ಬರೂ ನ್ಯಾಯಾಲಯದ ಮುಂದೆ ಪ್ರತ್ಯೇಕವಾಗಿ ಶರಣಾಗಿದ್ದಾರೆ.

ಹೆಚ್ಚಿನ ವಿಚಾರಣೆಗೆ ನಡೆಸಬೇಕಾಗಿದ್ದ ಹಿನ್ನೆಲೆಯಲ್ಲಿ ವಶಕ್ಕೆ ನೀಡುವಂತೆ ಪೊಲೀಸರು ನ್ಯಾಯಾಲಯಕ್ಕೆ ಮನವಿ ಮಾಡಿದ್ದರು. ವಿಚಾರಣೆ ನಡೆಸಿದ ನ್ಯಾಯಾಲಯವು 7 ದಿನಗಳ ವರೆಗೆ ನಾಗ ಮತ್ತು ಮೋಹನ್‌ನನ್ನು ಪೊಲೀಸ್‌ ವಶಕ್ಕೆ ನೀಡಿದೆ.

ಆರೋಪಿಗಳು ತಿರುಪತಿಗೆ ತೆರಳಿ ದೇವರಿಗೆ ಕೈ ಮುಗಿದು ಬೆಂಗಳೂರು ಬಸ್‌ ಹತ್ತಿ ಕೆ.ಆರ್‌.ಪುರಕ್ಕೆ ಬಂದಿದ್ದರು. ಕೆ.ಆರ್‌.ಪುರದಿಂದ ಕ್ಯಾಬ್‌ನಲ್ಲಿ ಎಸಿಎಂಎಂ ನ್ಯಾಯಾಲಯಕ್ಕೆ ಬಂದಿದ್ದರು. ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಠಾಣೆ ಪೊಲೀಸರು ತಮಗಾಗಿ ಶೋಧ ನಡೆಸುತ್ತಿದ್ದ ಸಂಗತಿ ಅರಿತಿದ್ದ ವಿಲ್ಸನ್‌ಗಾರ್ಡ ನಾಗ ಹಾಗೂ ಆತನ ಸಹಚರರು ತಲೆಮರೆಸಿಕೊಂಡಿದ್ದರು.

ಏನಿದು ಪ್ರಕರಣ ?: 2021ರಲ್ಲಿ ವಿಲ್ಸನ್‌ ಗಾರ್ಡನ್‌ ನಾಗನ ಗೆಳೆಯನಾದ ಮದನ್‌ ಅಲಿಯಾಸ್‌ ಪಿಟೀಲ್‌ ಎಂಬಾತನನ್ನು ಸಿದ್ದಾಪುರ ಮಹೇಶ ಸಹಚರರ ಜೊತೆಗೆ ಬನಶಂಕರಿ ದೇವಾಲಯದ ಬಳಿಯಲ್ಲಿ ಅಡ್ಡಹಾಕಿ ಕೊಲೆ ಮಾಡಿದ್ದ. ಇದರಿಂದ ಮಹೇಶ್‌ ವಿರುದ್ಧ ನಾಗ ದ್ವೇಷ ಸಾಧಿಸುತ್ತಿದ್ದ. ಇದು ಮಹೇಶ್‌ ಗಮನಕ್ಕೆ ಬಂದಿತ್ತು. ಆತನಿಂದ ಪ್ರಾಣ ಬೆದರಿಕೆ ಬಂದ ಹಿನ್ನೆಲೆಯಲ್ಲಿ ಹಳೆ ಪ್ರಕರಣವೊಂದರಲ್ಲಿ ಮಹೇಶ್‌ ಮತ್ತೆ ಜೈಲು ಸೇರಿದ್ದ. ಆ.4ರಂದು ರಾತ್ರಿ ಜಾಮೀನಿನ ಮೇಲೆ ಮಹೇಶ ಜೈಲಿನಿಂದ ಹೊರ ಬಂದಿದ್ದ. ಬಳಿಕ ಸ್ನೇಹಿತನ ಜೊತೆಗೆ ಕಾರಿನಲ್ಲಿ ಮಹೇಶ ಮನೆಗೆ ಬರುತ್ತಿದ್ದಾಗಲೇ ದುಷ್ಕರ್ಮಿಗಳು ಆತನನ್ನು ಅಡ್ಡಗಟ್ಟಿ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಕೊಲೆ ಮಾಡಿದ್ದರು.

ಟಾಪ್ ನ್ಯೂಸ್

1-lokk

Karnataka Lokayukta; ಬೆಟಗೇರಿ ನಗರಸಭೆ ಇಂಜಿನಿಯರ್ ಗೆ ಬೆಳ್ಳಂಬೆಳಗ್ಗೆ ಶಾಕ್..!

MONEY (2)

Belagavi; ಸಂಘದ ಹೆಸರಲ್ಲಿ ಮಹಿಳೆಯರಿಗೆ 19.35 ಕೋಟಿ ರೂ. ಮಹಾ ವಂಚನೆ!

1-vitla

Vitla; ನಿವೃತ್ತ ಶಿಕ್ಷಕ, ಅರ್ಥಧಾರಿ ಪಕಳಕುಂಜ ಶ್ಯಾಮ ಭಟ್ ವಿಧಿವಶ

1-donald

Trump warns; ಹಮಾಸ್ ಒತ್ತೆಯಾಳುಗಳನ್ನು ಬಿಡುಗಡೆ ಮಾಡದಿದ್ದರೆ ನರಕ…

Yakshagana

Yakshagana: ಕಾಲಮಿತಿ, ಕಾಲಗತಿಯ ಕಾಲದ ಯಕ್ಷಗಾನ-ಚಿಂತನೆ

EC-Comm-sangreshi1

ಜಿ.ಪಂ.,ತಾ.ಪಂ. ಚುನಾವಣೆ ವಿಳಂಬಕ್ಕೆ ಸರಕಾರವೇ ನೇರ ಹೊಣೆ, ನಾವು ಚುನಾವಣೆಗೆ ಸಿದ್ಧ: ಆಯೋಗ

Cong-CM-Dinner-Meet

Dinner Politics: ಡಿಸಿಎಂ ಡಿಕೆಶಿ ದೂರು; ಕಾಂಗ್ರೆಸ್‌ ಡಿನ್ನರ್‌ಗೆ ಹೈ ಕಮಾಂಡ್‌ ತಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BBMP-ED

illegal Investigation: ಬಿಬಿಎಂಪಿ ಮುಖ್ಯ ಎಂಜಿನಿಯರ್‌ ಕಚೇರಿ ಮೇಲೆ ಇ.ಡಿ. ದಾಳಿ

Sangeetha Mobiles: ಜಯನಗರದಲ್ಲಿ ಸಂಗೀತಾ ಗ್ಯಾಜೆಟ್ಸ್ ನೂತನ ಮಳಿಗೆ ಲೋಕಾರ್ಪಣೆ

Sangeetha Mobiles: ಜಯನಗರದಲ್ಲಿ ಸಂಗೀತಾ ಗ್ಯಾಜೆಟ್ಸ್ ನೂತನ ಮಳಿಗೆ ಲೋಕಾರ್ಪಣೆ

Bengaluru: ಎಂಬಿಎ ವಿದ್ಯಾರ್ಥಿ 3ನೇ ಮಹಡಿಯಿಂದ ಬಿದ್ದು ಸಾವು

Bengaluru: ಎಂಬಿಎ ವಿದ್ಯಾರ್ಥಿ 3ನೇ ಮಹಡಿಯಿಂದ ಬಿದ್ದು ಸಾವು

Fraud Case: 3.25 ಕೋಟಿ ವಂಚನೆ ಕೇಸ್‌; ಐಶ್ವರ್ಯ ದಂಪತಿ ಮತ್ತೆ ಸೆರೆ

Fraud Case: 3.25 ಕೋಟಿ ವಂಚನೆ ಕೇಸ್‌; ಐಶ್ವರ್ಯ ದಂಪತಿ ಮತ್ತೆ ಸೆರೆ

Atul Subhash Case: ಪತ್ನಿ ಮೇಲಿನ ಕೇಸ್‌ ರದ್ದತಿಗೆ ನಿರಾಕರಣೆ

Atul Subhash Case: ಪತ್ನಿ ಮೇಲಿನ ಕೇಸ್‌ ರದ್ದತಿಗೆ ನಿರಾಕರಣೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-lokk

Karnataka Lokayukta; ಬೆಟಗೇರಿ ನಗರಸಭೆ ಇಂಜಿನಿಯರ್ ಗೆ ಬೆಳ್ಳಂಬೆಳಗ್ಗೆ ಶಾಕ್..!

MONEY (2)

Belagavi; ಸಂಘದ ಹೆಸರಲ್ಲಿ ಮಹಿಳೆಯರಿಗೆ 19.35 ಕೋಟಿ ರೂ. ಮಹಾ ವಂಚನೆ!

1-vitla

Vitla; ನಿವೃತ್ತ ಶಿಕ್ಷಕ, ಅರ್ಥಧಾರಿ ಪಕಳಕುಂಜ ಶ್ಯಾಮ ಭಟ್ ವಿಧಿವಶ

1-donald

Trump warns; ಹಮಾಸ್ ಒತ್ತೆಯಾಳುಗಳನ್ನು ಬಿಡುಗಡೆ ಮಾಡದಿದ್ದರೆ ನರಕ…

Yakshagana

Yakshagana: ಕಾಲಮಿತಿ, ಕಾಲಗತಿಯ ಕಾಲದ ಯಕ್ಷಗಾನ-ಚಿಂತನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.