ಫಲ ನೀಡಿತೇ ಸಿದ್ದು ಸಂಧಾನ?
Team Udayavani, Oct 26, 2018, 6:05 AM IST
ಮಂಡ್ಯ: ಮಾಜಿ ಮುಖ್ಯಮಂತ್ರಿ, ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಅವರು ನಡೆಸಿದ ರಾಜಕೀಯ ಸಂಧಾನ ಮಂಡ್ಯ ಲೋಕಸಭಾ ಉಪ ಚುನಾವಣೆಯಲ್ಲಿ ಫಲ ಕೊಡುವುದೇ ಎನ್ನುವುದು ಈಗ ಚರ್ಚೆಗೆ ಗ್ರಾಸವಾಗಿದೆ.
ಕಾಂಗ್ರೆಸ್-ಜೆಡಿಎಸ್ ಚುನಾವಣಾ ಮೈತ್ರಿಗೆ ಪ್ರಬಲ ವಿರೋಧ ವ್ಯಕ್ತಪಡಿಸುತ್ತಾ ಬಂದಿದ್ದ ಮಾಜಿ ಶಾಸಕರಾದ ಎನ್.ಚೆಲುವರಾಯಸ್ವಾಮಿ, ಪಿ.ಎಂ.ನರೇಂದ್ರಸ್ವಾಮಿ, ರಮೇಶ್ ಬಂಡಿಸಿದ್ದೇಗೌಡ ಮತ್ತಿತರ ಮುಖಂಡರು ಅಧಿಕೃತವಾಗಿ ಚುನಾವಣಾ ರಣರಂಗವನ್ನೇ ಪ್ರವೇಶಿಸದೆ ತಟಸ್ಥ ನಿಲುವನ್ನು ತಾಳುವುದರ ಮೂಲಕ ಮೌನ ಪ್ರತಿಭಟನೆಯನ್ನು ವ್ಯಕ್ತಪಡಿಸಿದ್ದರು. ಆದರೆ, ಬುಧವಾರದಂದು ಮಂಡ್ಯಕ್ಕೆ ಆಗಮಿಸಿದ್ದ ಸಿದ್ದರಾಮಯ್ಯ, ಜೆಡಿಎಸ್‌ನ ಪ್ರಬಲ ವಿರೋಧಿಗಳಾಗಿದ್ದ ನಾಯಕರನ್ನು ಮತ್ತು ಕಾಂಗ್ರೆಸ್‌ನ ನಿಷ್ಠಾವಂತ ಮುಖಂಡರನ್ನು ಒಂದೇ ವೇದಿಕೆಗೆ ಕರೆತರುವಲ್ಲಿ ಯಶಸ್ವಿಯಾದರು.
ಚುನಾವಣೆ ಘೋಷಣೆಯಾದ ಬಳಿಕ ನಡೆಯುತ್ತಿರುವ ಪ್ರಚಾರ ಸಮಾವೇಶದಲ್ಲಿ ಕಾಂಗ್ರೆಸ್-ಜೆಡಿಎಸ್ ಎರಡೂ ಪಕ್ಷದ ನಾಯಕರ ಭಾವಚಿತ್ರಗಳು ಆಯಾಯ ಕ್ಷೇತ್ರಗಳಲ್ಲಿ ವಿಜೃಂಭಿಸುತ್ತಿದ್ದರೂ, ಕಾಂಗ್ರೆಸ್ ನಾಯಕರು ಪ್ರಚಾರ ವೇದಿಕೆ ಹಂಚಿಕೊಳ್ಳಲು ನಿರಾಕರಿಸುತ್ತಿದ್ದಾರೆ. ಇದಕ್ಕೆ ಭವಿಷ್ಯದಲ್ಲಿ ಕಾರ್ಯಕರ್ತರ ಪ್ರಬಲ ವಿರೋಧ ಎದುರಿಸಬೇಕಾಗುತ್ತದೆ ಎಂಬ ಭಯ ಪ್ರಮುಖ ಕಾರಣವಾಗಿದೆ. ಈ ಉದ್ದೇಶದಿಂದಲೇ ಸಿದ್ದರಾಮಯ್ಯ ಬುಧವಾರ ನಡೆಸಿದ ರಹಸ್ಯ ಸಭೆಯಲ್ಲಿ ಕಾಂಗ್ರೆಸ್ಸಿಗರು ಜೆಡಿಎಸ್‌ನ ಪ್ರಚಾರ ಸಭೆಯಲ್ಲಿ ಭಾಗವಹಿಸಲೇಬೇಕೆಂಬ ಕಟ್ಟಾಜ್ಞೆ ಹೊರಡಿಸಿಲ್ಲ. ಬದಲಾಗಿ ಅವರವರ ವಿವೇಚನೆಗೆ ಬಿಡುವುದರ ಮೂಲಕ ಕಾಂಗ್ರೆಸ್ಸಿಗರು ಸ್ವತಂತ್ರವಾಗಿ ಜೆಡಿಎಸ್ ಪರವಾಗಿ ಚುನಾವಣಾ ಪ್ರಚಾರ ನಡೆಸುವಂತೆ ಸೂಚನೆ ನೀಡಿದ್ದಾರೆ.
ಕಾಂಗ್ರೆಸ್ ಬೆಂಬಲಿತ ಜೆಡಿಎಸ್ ಅಭ್ಯರ್ಥಿ ಎಲ್.ಆರ್.ಶಿವರಾಮೇಗೌಡ ಅವರ ಉಪಸ್ಥಿತಿಯ ನಡುವೆ ಕಾಂಗ್ರೆಸ್ ನಾಯಕರ ಬೆಂಬಲವನ್ನು ಘೋಷಿಸುವಲ್ಲಿ ಸಫಲರಾಗಿರುವ ಸಿದ್ದರಾಮಯ್ಯ, ಮೊದಲ ಹಂತವಾಗಿ ಕಾಂಗ್ರೆಸ್ ಮುಖಂಡರ ಮನವೊಲಿಸುವ ಕಾರ್ಯವನ್ನು ಪೂರ್ಣಗೊಳಿಸಿದ್ದಾರೆ. ಆದರೆ, ಆಯಾಯ ಕ್ಷೇತ್ರದ ಮಾಜಿ ಶಾಸಕರು ಚುನಾವಣಾ ದಿನದೊಳಗೆ ಹಂತ, ಹಂತವಾಗಿ ಕಾಂಗ್ರೆಸ್ ಮನಸ್ಥಿತಿಗಳನ್ನು ಜೆಡಿಎಸ್ ಮತಗಳನ್ನಾಗಿ ಪರಿವರ್ತಿಸುವ ಪ್ರಾಮಾಣಿಕ ಪ್ರಯತ್ನವನ್ನು ನಡೆಸುವರೋ ಅಥವಾ ಮತದಾನದ ನಿಲುವನ್ನು ಕಾರ್ಯಕರ್ತರ ವಿವೇಚನೆಗೆ ಬಿಟ್ಟು ಬಿಡುತ್ತಾರೋ ಎಂಬುದನ್ನು ಕಾದು ನೋಡಬೇಕಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadag: ಡಿವೈಡರ್ ಗೆ ಕಾರು ಡಿಕ್ಕಿ: ಸ್ಥಳದಲ್ಲೇ ಇಬ್ಬರು ಯುವಕರ ಸಾವು
Congress;ಸಂಪುಟ,ಕೆಪಿಸಿಸಿ ಯಥಾಸ್ಥಿತಿ? ಬಜೆಟ್ ಅಧಿವೇಶನ, ಪಂ.ಚುನಾವಣೆ ಬಳಿಕ ಚುರುಕು?
CIDಗೆ ಹೆಬ್ಬಾಳ್ಕರ್ ಮಾಹಿತಿ: ಶೀಘ್ರ ಸಿ.ಟಿ. ರವಿ ವಿಚಾರಣೆ?
Congress; ಪರಿಷತ್ ನಾಮನಿರ್ದೇಶನಕ್ಕೆ ಆಕಾಂಕ್ಷಿಗಳಿಂದ ಲಾಬಿ
ಬೆರಳ ತುದಿಯಲ್ಲೇ ಸಿಗಲಿದೆ ಕನ್ನಡ ರಂಗಭೂಮಿ ಮಾಹಿತಿ; ಇಂದು ಜಾಲತಾಣಕ್ಕೆ ಸಿಎಂ ಚಾಲನೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Chhattisgarh: ಗುತ್ತಿಗೆದಾರನ ಭ್ರಷ್ಟಾಚಾರ ಬಯಲಿಗೆಳೆದ ಯೂಟ್ಯೂಬರ್ ಶವವಾಗಿ ಪತ್ತೆ!
Unique Achiever: ಗಡಿನಾಡಿನ ಅನನ್ಯ ಸಾಧಕ ಪ್ರೊ| ಪಿ. ಶ್ರೀಕೃಷ ಭಟ್
Sydney: ಮೈದಾನ ತೊರೆದು ಆಸ್ಪತ್ರೆಗೆ ಹೊರಟ ಬುಮ್ರಾ; ಟೀಂ ಇಂಡಿಯಾ ಪಾಳಯದಲ್ಲಿ ಆತಂಕ| Video
Groundwater Quality: ಅಂತರ್ಜಲ ಗುಣಮಟ್ಟ ವೃದ್ಧಿಗೆ ವೈಜ್ಞಾನಿಕ ಮಾರ್ಗೋಪಾಯ ಅಗತ್ಯ
Guns and Roses Review: ನೆತ್ತರ ಹಾದಿ ಪ್ರೇಮ್ ಕಹಾನಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.