ಸಿದ್ದರಾಮಯ್ಯ ಕೆಪಿಸಿಸಿ ಅಧ್ಯಕ್ಷರಾಗಲಿ: ಮಂಜು
Team Udayavani, Jun 15, 2018, 7:20 AM IST
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್‌ನಲ್ಲಿ ತೀವ್ರ ಪೈಪೋಟಿ ನಡೆಯುತ್ತಿರುವ ಬೆನ್ನಲ್ಲೇ ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ಪಕ್ಷದ ರಾಜ್ಯಾಧ್ಯಕ್ಷರನ್ನಾಗಿ ಮಾಡಬೇಕೆಂದು ಮಾಜಿ ಸಚಿವ ಎ.ಮಂಜು ಹೇಳಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾ ಡಿದ ಅವರು, ಮುಂದಿನ ವರ್ಷ ಲೋಕಸಭೆ ಚುನಾವಣೆ ಇರುವು ದರಿಂದ ಪಕ್ಷವನ್ನು
ಸಂಘಟಿಸಲು ಎಲ್ಲ ಸಮುದಾಯಗಳನ್ನೂ ಒಟ್ಟಿಗೆ ತೆಗೆದುಕೊಂಡು ಹೋಗುವ ಪ್ರಬಲ ನಾಯಕ ಕೆಪಿಸಿಸಿ
ಅಧ್ಯಕ್ಷರಾಗಬೇಕು. ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ಇರುವುದರಿಂದ ಕೇಂದ್ರದಲ್ಲಿ ಕಾಂಗ್ರೆಸ್ ನೇತೃತ್ವದ ಮೈತ್ರಿ ಕೂಟ ಬಲಗೊಳ್ಳಬೇಕೆಂದರೆ, ರಾಜ್ಯದಿಂದಲೂ ಹೆಚ್ಚಿನ ಸಂಖ್ಯೆಯಲ್ಲಿ ಸಂಸದರನ್ನು ಆಯ್ಕೆ ಮಾಡಿ ಕಳುಹಿಸಬೇಕಿದೆ.
ಕಾಂಗ್ರೆಸ್ ಶಕ್ತಿಯು ತವಾಗಿ ಉಳಿಯಬೇಕೆಂದರೆ, ಸಿದ್ದರಾಮಯ್ಯ ಅಥವಾ ಹಿರಿಯ ನಾಯಕರಾದ ಕೆ.ಎಚ್.
ಮುನಿಯಪ್ಪ, ಬಿ.ಕೆ.ಹರಿಪ್ರಸಾದ್, ಡಿ.ಕೆ.ಶಿವಕುಮಾರ್ ಅವರಲ್ಲಿ ಒಬ್ಬರಿಗೆ ಅಧ್ಯಕ್ಷ ಸ್ಥಾನ ನೀಡಬೇಕು ಎಂದರು.
ದಿನೇಶ್ ಗುಂಡೂರಾವ್ ಹೆಸರು ಕೇಳಿ ಬರುತ್ತಿರುವ ಬಗ್ಗೆ ಪ್ರತಿಕ್ರಿಯಿಸಿರುವ ಅವರು, ದಿನೇಶ್ ಗುಂಡೂವಾರ್
ಅಸಮರ್ಥರಲ್ಲ. ಆದರೆ, ಚುನಾವಣೆ ಸಂದರ್ಭದಲ್ಲಿ ಎಲ್ಲರನ್ನೂ ಒಟ್ಟಿಗೆ ತೆಗೆದುಕೊಂಡು ಹೋಗುವ ಹಿರಿಯರಿಗೆ
ಆದ್ಯತೆ ನೀಡಬೇಕೆಂದು ತಿಳಿಸಿದರು. ಪಕ್ಷದ ಅಧ್ಯಕ್ಷರ ಆಯ್ಕೆಯಲ್ಲಿ ದಕ್ಷಿಣ ಕರ್ನಾಟಕ, ಉತ್ತರ ಕರ್ನಾಟಕ ಎಂಬ
ಪ್ರಶ್ನೆ ಬರುವುದಿಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಗುರುತು ಸಿಗದ ಹಾಗೆ ಪತ್ನಿಯ ಹತ್ಯೆಗೈದ ಪತಿ ಸೇರಿ ಮೂವರ ಬಂಧನ
Waqf Issue: ಹುಬ್ಬಳ್ಳಿ, ವಿಜಯಪುರಕ್ಕೆ ನ.7ರಂದು ಜೆಪಿಸಿ ಅಧ್ಯಕ್ಷ ಜಗದಾಂಬಿಕಾ ಪಾಲ್ ಭೇಟಿ
Waqf issue: ಅಲ್ಲಾನ ಹೆಸರಲ್ಲಿ ಅಲ್ಲಾನಿಗೆ ದೋಖಾ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ
Bellary: ತುಕಾರಾಂ ಆಡಳಿತದಲ್ಲಿ ಸಂಡೂರು ಅಭಿವೃದ್ಧಿಯಾಗಿದೆ: ಡಿಕೆ ಶಿವಕುಮಾರ್
Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್: ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
Kalaburagi: ಗುರುತು ಸಿಗದ ಹಾಗೆ ಪತ್ನಿಯ ಹತ್ಯೆಗೈದ ಪತಿ ಸೇರಿ ಮೂವರ ಬಂಧನ
ಧಾರವಾಡ: ಅವಸಾನದತ್ತ ಶತಮಾನದ ಕೆಲಗೇರಿ ಕೆರೆ
Waqf Issue: ಹುಬ್ಬಳ್ಳಿ, ವಿಜಯಪುರಕ್ಕೆ ನ.7ರಂದು ಜೆಪಿಸಿ ಅಧ್ಯಕ್ಷ ಜಗದಾಂಬಿಕಾ ಪಾಲ್ ಭೇಟಿ
Udupi: ವಕ್ಫ್ ಬೋರ್ಡ್ ಭೂ ಕಬಳಿಕೆ ಖಂಡಿಸಿ ನ.6 ರಂದು ಬೃಹತ್ ಪ್ರತಿಭಟನೆ
Session:ನ.25- ಡಿ.20- ಸಂಸತ್ ಚಳಿಗಾಲದ ಅಧಿವೇಶನ;ಒಂದು ದೇಶ, ಒಂದು ಚುನಾವಣೆ ಮಸೂದೆ ಮಂಡನೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.