ಭ್ರಮಾಲೋಕದಲ್ಲಿ ಸಿದ್ದರಾಮಯ್ಯ: ಎಚ್.ಡಿ.ಕುಮಾರಸ್ವಾಮಿ ಲೇವಡಿ
Team Udayavani, Jul 6, 2017, 3:45 AM IST
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ನಾಯಕರು ಭ್ರಮಾ ಲೋಕದಲ್ಲಿದ್ದಾರೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಲೇವಡಿ ಮಾಡಿದ್ದಾರೆ.
ಸುದ್ದಿಗಾರರ ಜತೆ ಮಾತನಾಡಿದ ಅವರು, ಸಿದ್ದರಾಮಯ್ಯ ತವರು ಮೈಸೂರು ಮಹಾನಗರ ಪಾಲಿಕೆಯ ಉಪ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ಗೆದ್ದಿದ್ದು ಕಾಂಗ್ರೆಸ್ ಠೇವಣಿ ಕಳೆದುಕೊಂಡಿದೆ. ಅಷ್ಟೇ ಅಲ್ಲ ಮಂಡ್ಯ, ಕೋಲಾರದಲ್ಲಿ ಜೆಡಿಎಸ್ ಅಭ್ಯರ್ಥಿಗಳು ಗೆದ್ದಿದ್ದಾರೆ. ಜೆಡಿಎಸ್ ಎಲ್ಲಿದೆ ಎಂಬ ಸಿದ್ದರಾಮಯ್ಯ ಪ್ರಶ್ನೆಗೆ ಉತ್ತರ ಸಿಕ್ಕಿದೆ ಎಂದು ಹೇಳಿದರು.
ಮೈಸೂರಿನಲ್ಲಿ ಜೆಡಿಎಸ್ ಅಭ್ಯರ್ಥಿ ಗಳಿಸಿರುವ ಲೀಡ್ನಷ್ಟು ಮತ ಕಾಂಗ್ರೆಸ್ಗೆ ಬಂದಿದೆ. ಸಮಾವೇಶಗಳಲ್ಲಿ ಜೆಡಿಎಸ್ ಬಗ್ಗೆ ಲಘುವಾಗಿ ಮಾತನಾಡುವ ಸಿದ್ದರಾಮಯ್ಯ ಇದಕ್ಕೆ ಏನು ಹೇಳ್ತಾರೆ. ಗುಂಡ್ಲುಪೇಟೆ, ನಂಜನಗೂಡು ಉಪ ಚುನಾವಣೆಯಲ್ಲಿ ಗೆದ್ದು ಬೀಗಿದ ಅವರಿಗೆ ಮುಂದಿನ ಚುನಾವಣೆಯಲ್ಲಿ ಜನರು ಭ್ರಮೆ ಬಿಡುಸುತ್ತಾರೆ ಎಂದರು.
ನಿದ್ದೆ ಮಾಡ್ತಿದೆಯಾ?
ಸುಪ್ರೀಂಕೋರ್ಟ್ ಆದೇಶ ಪ್ರಕಾರ ರಾಷ್ಟ್ರೀಯ ಹೆದ್ದಾರಿ ವ್ಯಾಪ್ತಿಗೆ ಬರುವ ಮದ್ಯದ ಅಂಗಡಿ ಬಂದ್ ಆಗಿದೆ. ಆರು ತಿಂಗಳ ಹಿಂದೆ ನ್ಯಾಯಾಲಯ ಆದೇಶ ಕೊಟ್ಟಿದ್ದರೂ ಇದುವರೆಗೂ ಏನೂ ಮಾಡದೆ ಮಂಗಳವಾರ ಸಭೆ ಕರೆದು ಚರ್ಚಿಸಿದ್ದಾರೆ. ಇದುವರೆಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಆರ್ಥಿಕ ಇಲಾಖೆ ಅಧಿಕಾರಿಗಳು ನಿದ್ದೆ ಮಾಡುತ್ತಿದ್ದರಾ? ಎಂದು ಪ್ರಶ್ನಿಸಿದರು.
ರಾಜ್ಯ ಸರ್ಕಾರ ಅಬಕಾರಿ ಇಲಾಖೆಯಿಂದ 18 ಸಾವಿರ ಕೋಟಿ ರೂ. ಆದಾಯ ಸಂಗ್ರಹ ನಿರೀಕ್ಷೆ ಇಟ್ಟುಕೊಂಡಿದೆ. 3500 ಮದ್ಯದ ಅಂಗಡಿ ಬಂದ್ ಆಗಿರುವುದರಿಂದ ಆಗುವ ನಷ್ಟ ಯಾರು ಭರ್ತಿ ಮಾಡಿಕೊಡ್ತಾರೆ? ಎಂದರು.
ರೈತರ ಸಾಲ ಮನ್ನಾ ಮಾಡಿ ಆ ಹೊರೆ ಮುಂದಿನ ಸರ್ಕಾರದ ಮೇಲೆ ಹೊರಿಸುತ್ತೀರಾ. ನಿಮಗೆ ರಾಜ್ಯದ ಅಭಿವೃದ್ಧಿಗಿಂತ ಮುಂದಿನ ಚುನಾವಣೆಗೆ ಹಣ ಸಂಗ್ರಹ ಮಾಡುವ ಬಗ್ಗೆ ಹೆಚ್ಚು ಕಾಳಜಿ ವಹಿಸುತ್ತಿದ್ದೀರಿ ಎಂದು ಆರೋಪಿಸಿದರು. 2031 ಬೆಂಗಳೂರು ಸಿಡಿಪಿ ಮೂಲಕ ಅಧಿಕಾರಿಗಳ ಮೇಲೆ ಒತ್ತಡ ಹಾಕಿ ಕಲೆಕ್ಷನ್ ಮಾಡಲು ಹೊರಟಿದ್ದೀರಿ ಎಂದು ದೂರಿದರು.
ಪ್ರತಿ ವಿಧಾನಸಭೆ ಕ್ಷೇತ್ರದಲ್ಲಿ ಐದು ವಿದ್ಯುತ್ ಮಾದರಿ ಗ್ರಾಮ ಮಾಡ್ತೇವೆ ಎಂದು ಘೋಷಿಸಿದ್ದಾರೆ. ನೋಡೋಣ ಅದು ಜಾರಿಯಾಗುವ ವೇಳೆಗೆ ಚುನಾವಣೆ ಮುಗಿದು ಬೇರೆ ಸರ್ಕಾರ ಬಂದಿರುತ್ತದೆ.
ಇಂದು ಜೆಡಿಎಸ್ ಕೋರ್ ಕಮಿಟಿ
*ಬುಧವಾರದಂದು ಜೆಡಿಎಸ್ ಕೋರ್ ಸಮಿತಿ, ಶಾಸಕರು, ಪಕ್ಷದ ಜಿಲ್ಲಾ ಅಧ್ಯಕ್ಷರ ಸಭೆ ನಡೆಯಲಿದ್ದು, ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸುವುದ ಸೇರಿ ಪಕ್ಷದ ಸಂಘಟನೆ ಬಗ್ಗೆ ಚರ್ಚೆ ಮಾಡಲಾಗುವುದು. ಯುವಘಟಕದ ಅಧ್ಯಕ್ಷ ಮಧು ಬಂಗಾರಪ್ಪ ಅವರು ಗುರುವಾರದಿಂದ ಯಾದಗಿರಿಯಿಂದ ರಾಜ್ಯಾದ್ಯಂತ ಸಂಘಟನೆ ಪ್ರವಾಸ ಮಾಡಲಿದ್ದಾರೆ. ಸೆಪ್ಟೆಂಬರ್-ಅಕ್ಟೋಬರ್ನಲ್ಲಿ ಯುವಕರ ಸಮಾವೇಶ ನಡೆಯಲಿದೆ. ಇದೇ ತಿಂಗಳು ನಿಗದಿಯಾಗಿದ್ದ ರೈತರ ಸಮಾವೇಶ ಆಗಸ್ಟ್ ಕೊನೇ ವಾರದಲ್ಲಿ ಬಿಜಾಪುರದಲ್ಲಿ ಆಯೋಜಿಸಲು ತೀರ್ಮಾನಿಸಲಾಗಿದೆ. ಹುಣಸೂರಿನಲ್ಲಿ ಜುಲೈ 31 ರಂದು ಕಾರ್ಯಕರ್ತರ ಸಮಾವೇಶ ನಿಗದಿಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ
ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು
Waqf; ದಾನದ ಆಸ್ತಿ ಬೇರೆ, ಕಂಡವರ ಆಸ್ತಿ ವಕ್ಫ್ ಬೋರ್ಡ್ ಗೆ ಬರೆಯುವುದು ಬೇರೆ: ಸಿ.ಟಿ ರವಿ
ಶಾಸಕರ ನಿವಾಸಕ್ಕೆ ಮುತ್ತಿಗೆ ಹಾಕಲು ಸಿದ್ಧತೆ.. ದಲಿತ ಮುಖಂಡರನ್ನು ವಶಕ್ಕೆ ಪಡೆದ ಪೊಲೀಸರು
Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ
Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ
Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ
Katpadi: ಹೆದ್ದಾರಿ ಅಂಚಿನಲ್ಲಿ ಅಪಾಯ!; ರಸ್ತೆ ಬದಿಯಲ್ಲಿ ಉದ್ದಕ್ಕೂ ಹೊಂಡಗುಂಡಿ
ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.