ಮೈಸೂರು ವಿದ್ಯಾರ್ಥಿನಿ ಅತ್ಯಾಚಾರ: ರಾಜ್ಯ ಸರ್ಕಾರದ ವಿರುದ್ಧ ಸಿದ್ದರಾಮಯ್ಯ ಆಕ್ರೋಶ
Team Udayavani, Aug 25, 2021, 8:52 PM IST
ಬೆಂಗಳೂರು: ಮೈಸೂರಿನಲ್ಲಿ ನಡೆದಿರುವ ವಿದ್ಯಾರ್ಥಿನಿ ಮೇಲಿನ ಸಾಮೂಹಿಕ ಅತ್ಯಾಚಾರ ರಾಜ್ಯದಲ್ಲಿ ಕುಸಿದುಬಿದ್ದಿರುವ ಕಾನೂನು-ಸುವ್ಯವಸ್ಥೆಗೆ ಸಾಕ್ಷಿ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಆರೋಪಿಸಿದ್ದಾರೆ.
ಯುವತಿ ಮೇಲೆ ಅತ್ಯಾಚಾರ ನಡೆಸಿರುವುದು ದುರದೃಷ್ಟಕರ. ಸಂತ್ರಸ್ಥೆ ಹಾಗೂ ಆಕೆಯ ಕುಟುಂಬ ಪರ ನಾವು ನಿಲ್ಲುತ್ತೇವೆ ಎಂದಿರುವ ಅವರು, ಸಂಸ್ತ್ರಸ್ಥೆಗೆ ನ್ಯಾಯ ಒದಗಿಸಿಕೊಡುವಂತೆ ಗೃಹ ಸಚಿವ ಆರಗ ಜ್ಞಾನೇಂದ್ರ ಅವರಿಗೆ ಒತ್ತಾಯಿಸಿದ್ದಾರೆ.
ಮೈಸೂರಿನಲ್ಲಿ ನಡೆದಿರುವ ವಿದ್ಯಾರ್ಥಿನಿ ಮೇಲಿನ ಸಾಮೂಹಿಕ ಅತ್ಯಾಚಾರ ರಾಜ್ಯದಲ್ಲಿ ಕುಸಿದುಬಿದ್ದಿರುವ ಕಾನೂನು-ಸುವ್ಯವಸ್ಥೆಗೆ ಸಾಕ್ಷಿ.
ಪೊಲೀಸರು ತಕ್ಷಣ ದುಷ್ಕರ್ಮಿಗಳನ್ನು ಬಂಧಿಸಿ ವಿದ್ಯಾರ್ಥಿನಿಗೆ ನ್ಯಾಯ ಒದಗಿಸಿ, ಭಯಭೀತ ಜನರಲ್ಲಿ ಧೈರ್ಯ ತುಂಬಬೇಕು.@CMofKarnataka#LawlessKarnataka
1/2 pic.twitter.com/4ZWnMJFYBo— Siddaramaiah (@siddaramaiah) August 25, 2021
ಮೈಸೂರು ಮಾತ್ರವಲ್ಲ ಇಡೀ ರಾಜ್ಯದಲ್ಲಿ ಅಪರಾಧಗಳ ಸಂಖ್ಯೆ ಹೆಚ್ಚಾಗುತ್ತಿದೆ. ಮುಖ್ಯಮಂತ್ರಿಗಳು ಬಹಳಷ್ಟು ಬೇಗ ಸಂಪುಟ ವಿಸ್ತರಣೆಯ ಸಂಕಟದಿಂದ ಪಾರಾಗಿ ರಾಜ್ಯದಲ್ಲಿ ಹೆಚ್ಚುತ್ತಿರುವ ಅಪರಾಧಗಳ ನಿಯಂತ್ರಣಕ್ಕೆ ಗಮನ ಹರಿಸಬೇಕು. ಪೊಲೀಸರು ತಕ್ಷಣ ದುಷ್ಕರ್ಮಿಗಳನ್ನು ಬಂಧಿಸಿ ವಿದ್ಯಾರ್ಥಿನಿಗೆ ನ್ಯಾಯ ಒದಗಿಸಿ, ಭಯಭೀತ ಜನರಲ್ಲಿ ಧೈರ್ಯ ತುಂಬಬೇಕು ಎಂದು ಆಗ್ರಹಿಸಿದ್ದಾರೆ.
ಮೈಸೂರು ಮಾತ್ರವಲ್ಲ ಇಡೀ ರಾಜ್ಯದಲ್ಲಿ ಅಪರಾಧಗಳ ಸಂಖ್ಯೆ ಹೆಚ್ಚಾಗುತ್ತಿದೆ.@CMofKarnataka ಅವರು, ಬಹಳಷ್ಟು ಬೇಗ ಸಂಪುಟ ವಿಸ್ತರಣೆಯ ಸಂಕಟದಿಂದ ಪಾರಾಗಿ ರಾಜ್ಯದಲ್ಲಿ ಹೆಚ್ಚುತ್ತಿರುವ ಅಪರಾಧಗಳ ನಿಯಂತ್ರಣಕ್ಕೆ ಗಮನ ಹರಿಸಬೇಕು.#LawlessKarnataka
2/2— Siddaramaiah (@siddaramaiah) August 25, 2021
ಇನ್ನು ಮಂಗಳವಾರ ಸ್ನೇಹಿತನ ಜೊತೆ ಚಾಮುಂಡಿ ಬೆಟ್ಟಕ್ಕೆ ತೆರಳಿದ್ದ ವಿದ್ಯಾರ್ಥಿನಿ ಮೇಲೆ 6 ಮಂದಿ ದುಷ್ಕರ್ಮಿಗಳು ಯುವಕನಿಗೆ ಹಲ್ಲೆ ಮಾಡಿ ನಂತರ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ.
ಮೈಸೂರಿನ ಆಲನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಅತ್ಯಾಚಾರದ ಬಳಿಕ ವಿದ್ಯಾರ್ಥಿನಿ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ. ಈ ಸಂಬಂಧ ಆಲನಹಳ್ಳಿ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು ತನಿಖೆ ಕೈಗೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್
Bengaluru: ಮಹಿಳೆಯರಿಗೆ ನೌಕರಿ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ಬಳಕೆ
Driver: ಹೆಚ್ಚು ಪ್ರಯಾಣದ ದರ ನೀಡಲು ಒತ್ತಡ, ಹಲ್ಲೆಗೆ ಯತ್ನ: ಕ್ಯಾಬ್ ಚಾಲಕನ ವಿರುದ್ಧ ದೂರು
Birds: ಸಿಲಿಕಾನ್ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ
Tragic: ಗಂಡನ ಮೇಲೆ ಅನುಮಾನ: ಹೆಂಡತಿ ನೇಣಿಗೆ ಶರಣು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ
Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ
Road Mishap: ಬೈಕ್- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು
Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು
Rule; 5, 8ನೇ ತರಗತಿಯಲ್ಲಿ ಫೈಲ್ ಆದರೆ ಭಡ್ತಿ ನೀಡುವಂತಿಲ್ಲ; ಅದೇ ಕ್ಲಾಸಲ್ಲಿ ಮುಂದುವರಿಕೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.