ಸಿದ್ಧಾರ್ಥರಂತೆ ನನಗೂ ಒತ್ತಡಗಳಿವೆ
Team Udayavani, Aug 26, 2019, 3:05 AM IST
ಬೆಂಗಳೂರು: “ಇತ್ತೀಚೆಗೆ ಆತ್ಮಹತ್ಯೆ ಮಾಡಿಕೊಂಡ ಉದ್ಯಮಿ ವಿ.ಜಿ.ಸಿದ್ಧಾರ್ಥ ಅವರಿಗೆ ಇದ್ದಂತೆಯೇ ನನಗೂ ಒತ್ತಡಗಳಿವೆ. ಆದರೆ, ಅವೆಲ್ಲವುಗಳನ್ನೂ ನಿವಾರಿಸಿಕೊಂಡು ಬದುಕುತ್ತಿದ್ದೇನೆ’ ಎಂದು ಮಾಜಿ ಸಚಿವ ಡಿ.ಕೆ. ಶಿವಕುಮಾರ್ ತಿಳಿಸಿದರು.
ಜಯನಗರದ ಚಂದ್ರಸಾಗರ ಕಲ್ಯಾಣ ಮಂಟಪದಲ್ಲಿ ಮಲೆನಾಡಿನ ಸಂಘ ಸಂಸ್ಥೆಗಳ ಒಕ್ಕೂಟ ಹಮ್ಮಿಕೊಂಡಿದ್ದ ಉದ್ಯಮಿ ವಿ.ಜಿ. ಸಿದ್ದಾರ್ಥ ಹೆಗ್ಡೆ ನುಡಿನಮನದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, “ಸಿದ್ಧಾರ್ಥ ಸಾವಿನ ಸಮಯದಲ್ಲಿ ಕೆಲ ಕಾರಣಗಳಿಗೆ ನನ್ನ ಹೆಸರನ್ನು ಬಳಸಿಕೊಂಡರು. ಆದರೆ, ನಾನು ಮಾತ್ರ ಎಷ್ಟೇ ತೊಂದರೆ ಒತ್ತಡಗಳು ಬಂದರೂ ಯಾವುದಕ್ಕೂ ಜಗ್ಗುವುದಿಲ್ಲ.
ಸಿದ್ಧಾರ್ಥನಂತೆ ನನಗೂ ಒತ್ತಡಗಳಿವೆ. ಅವುಗಳನ್ನು ನಿವಾರಿಸಿಕೊಂಡು ಬದುಕುತ್ತಿದ್ದೇನೆ’ ಎಂದು ಹೇಳಿದರು. ಕಾಫಿ ಡೇ ಸಂಸ್ಥಾಪಕ ವಿ.ಜಿ. ಸಿದ್ಧಾರ್ಥ ಹೆಗ್ಡೆ ಸಾವಿನ ನಂತರ ದೇಶದ ಅನೇಕ ಉದ್ಯಮಿಗಳು ಭಯದ ನೆರಳಲ್ಲಿ ಕೆಲಸ ಮಾಡುತ್ತಿದ್ದಾರೆ. ಉದ್ಯಮಿಗಳಿಗೆ ಮುಕ್ತ ವಾತಾವರಣ ನಿರ್ಮಾಣವಾಗಬೇಕು. ಕೇಂದ್ರದಲ್ಲಿ ಆಡಳಿತ ನಡೆಸುವವರಿಗೆ ದೇವರು ಒಳ್ಳೆಯ ಬುದ್ಧಿ ನೀಡಲಿ ಎಂದು ತೀಕ್ಷ್ಣವಾಗಿ ಹೇಳಿದರು.
ಸಿದ್ದಾರ್ಥ ಸರಳ ಹಾಗೂ ಸಜ್ಜನಿಕೆಗೆ ಹೆಸರಾಗಿದ್ದರು, ತಮ್ಮ ಉದ್ಯಮದ ಮೂಲಕ ಸಾವಿರಾರು ಜನಕ್ಕೆ ಉದ್ಯೋಗ ನೀಡುವ ಮೂಲಕ ಸರ್ಕಾರ ಮಾಡದ ಕೆಲಸವನ್ನು ಮಾಡಿದ್ದಾರೆ. ಮಲೆನಾಡಿನ ಆಸ್ತಿಯಾಗದೆ, ದೇಶದ ಆಸ್ತಿಯಾಗಿ ಅನೇಕರ ಹೃದಯ ಗೆದ್ದಿದ್ದಾರೆ. ಪ್ರಾಮಾಣಿಕ ವ್ಯಕ್ತಿಯಾಗಿದ್ದ ಅವರು ರಾಜಕೀಯವಾಗಿ ಅನೇಕ ಅವಕಾಶಗಳು ಬಂದರು ಸಹ ಅವುಗಳನ್ನು ತ್ಯಜಿಸಿದರು. ಇಂತಹ ಪ್ರಾಮಾಣಿಕ ವ್ಯಕ್ತಿಯನ್ನು ಕಳೆದುಕೊಂಡಿರುವುದು ನಮ್ಮ ದುರ್ದೈವ ಎಂದು ಕಂಬನಿ ಮಿಡಿದರು.
ವಿಧಾನ ಪರಿಷತ್ತಿನ ಮಾಜಿ ಸಭಾಧ್ಯಕ್ಷ ಬಿ.ಎಲ್. ಶಂಕರ್ ಮಾತನಾಡಿ, ಸಿದ್ಧಾರ್ಥ ಆತ್ಮಹತ್ಯೆ ಮಾಡಿಕೊಂಡಿದ್ದು, ಮಾನ ಮರ್ಯಾದೆಗೆ ಅಂಜಿ ಹೊರತು, ದುಡ್ಡಿನ ಕೊರತೆಯಿಂದಲ್ಲ. ದೇಶದ ಸಂವಿಧಾನದ ಕಾನೂನುಗಳು ಒಳ್ಳೆಯವರಿಗೂ ಶಿಕ್ಷೆ ನೀಡುತ್ತಿವೆ ಎಂದು ಬೇಸರ ವ್ಯಕ್ತಪಡಿಸಿದರು.
ದ್ರೋಹ ಬಗೆದು, ದೇಶ ಬಿಟ್ಟು ಹೋದವರಿಗೆ ಈ ಕಾನೂನುಗಳು ಏನೂ ಮಾಡುತ್ತಿಲ್ಲ ಎಂದು ಭಾವುಕರಾದ ಅವರು, ಸಿದ್ಧಾರ್ಥ ಅವರ ಸಾವು ಇಡೀ ಕಾಫಿ ಉದ್ಯಮಕ್ಕೆ ಬಂದಂತಹ ಸಂಕಷ್ಟವಾಗಿದೆ. ಈ ವ್ಯವಸ್ಥೆಯಲ್ಲಿರುವ ಕಾನೂನುಗಳು ಜನರ ರಕ್ಷಣೆಗೆ ಇರಬೇಕೆ ಹೊರತು, ತೊಂದರೆ ಕೊಡಲು ಅಲ್ಲ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಶಾಸಕ ಟಿ.ಡಿ. ರಾಜೇಗೌಡ, ಮಾಜಿ ಶಾಸಕ ಹೇಮಚಂದ್ರಸಾಗರ್ ಮತ್ತಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಮನೆಯ ಮುಂದೆ ಕುಳಿತು ಮೊಬೈಲ್ ನೋಡುತ್ತಿದ್ದ ವ್ಯಕ್ತಿಗೆ ಕಾರು ಡಿಕ್ಕಿ!
Bengaluru: ಪಾರ್ಕ್‌ನಲ್ಲಿ ಮಲಗಿದ್ದಾಗ ಮರ ಬಿದ್ದು ಬಿಬಿಎಂಪಿ ಕಸದ ಲಾರಿ ಚಾಲಕ ಸಾವು
Fraud: ಸೈಟ್ ಮಾರುವುದಾಗಿ ನಂಬಿಸಿ 56 ಲಕ್ಷ ರೂ. ವಂಚನೆ
Bengaluru: ಹೋಟೆಲ್‌ನ ಬಾತ್‌ರೂಮ್‌ನಲ್ಲಿ ಕಾರ್ಪೆಂಟರ್ ನೇಣಿಗೆ ಶರಣು
Arrested: ಉಸಿರುಗಟ್ಟಿಸಿ ಪತ್ನಿಯ ಕೊಂದು ಮಗುವಿನ ಜೊತೆಗೆ ಪತಿ ಪರಾರಿ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Bengaluru: ಮನೆಯ ಮುಂದೆ ಕುಳಿತು ಮೊಬೈಲ್ ನೋಡುತ್ತಿದ್ದ ವ್ಯಕ್ತಿಗೆ ಕಾರು ಡಿಕ್ಕಿ!
Bengaluru: ಪಾರ್ಕ್‌ನಲ್ಲಿ ಮಲಗಿದ್ದಾಗ ಮರ ಬಿದ್ದು ಬಿಬಿಎಂಪಿ ಕಸದ ಲಾರಿ ಚಾಲಕ ಸಾವು
Fraud: ಸೈಟ್ ಮಾರುವುದಾಗಿ ನಂಬಿಸಿ 56 ಲಕ್ಷ ರೂ. ವಂಚನೆ
Bengaluru: ಹೋಟೆಲ್‌ನ ಬಾತ್‌ರೂಮ್‌ನಲ್ಲಿ ಕಾರ್ಪೆಂಟರ್ ನೇಣಿಗೆ ಶರಣು
Arrested: ಉಸಿರುಗಟ್ಟಿಸಿ ಪತ್ನಿಯ ಕೊಂದು ಮಗುವಿನ ಜೊತೆಗೆ ಪತಿ ಪರಾರಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.