ಮಹದೇವಪುರ ಪಾಲಿಕೆ ಕಚೇರಿಗೆ ಮುತ್ತಿಗೆ
Team Udayavani, Jul 19, 2018, 1:26 PM IST
ಮಹದೇವಪುರ: ಹಲವು ವರ್ಷಗಳಿಂದ ಬಿಬಿಎಂಪಿ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಪೌರಕಾರ್ಮಿಕರಿಗೆ ಇಎಸ್‌ಐ ಮತ್ತು ಪಿಎಫ್ ಸೌಲಭ್ಯ ಕಲ್ಪಿಸಲು ಆಗ್ರಹಿಸಿದ ಪೌರಕಾರ್ಮಿಕರು, ಸಿಐಟಿಯು ನೇತೃತ್ವದಲ್ಲಿ ಸ್ಥಳೀಯ ಪಾಲಿಕೆ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟಿಸಿದರು.
ನಗರದ ಸ್ವತ್ಛತೆಗೆ ಶ್ರಮಿಸುತ್ತಿರುವ ಪೌರ ಕಾರ್ಮಿಕರಿಗೆ ಇಎಸ್‌ಐ, ಪಿಎಫ್ ಸೇರಿ ಯಾವುದೇ ಸೌಲಭ್ಯವನ್ನೂ ಬಿಬಿಎಂಪಿ ಕಲ್ಪಿಸಿಲ್ಲ. ಉದ್ಯೋಗ ಭದ್ರತೆ ಹಾಗೂ ಕಾರ್ಮಿಕರ ಸುರಕ್ಷತೆಗೂ ಆದ್ಯತೆ ನೀಡಿಲ್ಲ. ಎಲ್ಲ ರೀತಿಯ ಮೂಲ ಸೌಲಭ್ಯ ಕಲ್ಪಿಸುವಂತೆ ನ್ಯಾಯಾಲಯದ ಸ್ವಷ್ಟ ಆದೇಶವಿದ್ದರೂ ಪಾಲಿಕೆ ಪಾಲಿಸುತ್ತಿಲ್ಲ ಎಂದು ಪ್ರತಿಭಟನಾಕಾರರು ದೂರಿದರು.
ಗುತ್ತಿಗೆದಾರರ ಜತೆ ಶಾಮೀಲಾಗಿರುವ ಬಿಬಿಎಂಪಿ ಆರೋಗ್ಯ ಅಧಿಕಾರಿಗಳು, ಪೌರಕಾರ್ಮಿಕರಿಗೆ ಸೌಲಭ್ಯಗಳು ಸಿಗದಂತೆ
ಹುನ್ನಾರ ನಡೆಸುತ್ತಿದ್ದಾರೆ. ಇದೀಗ ಉದ್ದೇಶಪೂರ್ವಕವಾಗಿ ಪೌರಕಾರ್ಮಿಕರನ್ನು ಕೆಲಸದಿಂದ ತೆಗೆಯುವುದಾಗಿ ಬೆದರಿಕೆ
ಹಾಕುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಜಂಟಿ ಆಯುಕ್ತರಾದ ವಾಂಸತಿ ಅಮರ್ ಮನವಿ ಸ್ವೀಕರಿಸಿದರು.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.