ಧೇಯಕ ಅನುಮೋದನೆಗೆ ಸಹಿ ಸಂಗ್ರಹ ಅಭಿಯಾನ
Team Udayavani, Oct 4, 2017, 11:43 AM IST
ಬೆಂಗಳೂರು: “ಕರ್ನಾಟಕ ಭೂ ಸುಧಾರಣೆಗಳ ವಿಧೇಯಕ-2016′ ವಿಧೇಯಕ ಅನುನೋದಿಸುವಂತೆ ರಾಷ್ಟ್ರಪತಿಗಳನ್ನು ಕೋರಿ ಹಮ್ ಗೋರ್ ಕಟಮಾಳ್ಳೋ ಲಂಬಾಣಿ ಸಂಘಟನೆ ಆರಂಭಿಸಿರುವ ಸಹಿಸಂಗ್ರಹ ಅಭಿಯಾನಕ್ಕೆ ಮಂಗಳವಾರ ಚಾಲನೆ ದೊರೆಯಿತು.
ಮೈಸೂರು ಬ್ಯಾಂಕ್ ವೃತ್ತದಲ್ಲಿ ಮಾಜಿ ಸಚಿವೆ ಬಿ.ಟಿ.ಲಲಿತಾ ನಾಯಕ್ ಹಾಗೂ ಲಂಬಾಣಿ ಸಮುದಾಯದ ಮುಖಂಡರು ಸಹಿಹಾಕುವ ಮೂಲಕ ಈ ಅಭಿಯಾನಕ್ಕೆ ಚಾಲನೆ ನೀಡಿ, ಆದಷ್ಟು ಶೀಘ್ರವಾಗಿ ಈ ಮಸೂದೆ ಜಾರಿಯಾಗಬೇಕು, ಇದರಿಂದ ಲಂಬಾಣಿ ಹಾಗೂ ಶೋಷಿತ ಸಮುದಾಯಗಳ ಅಭಿವೃದ್ಧಿಗೆ ಸಹಕಾರಿಯಾಗಲಿದೆ ಎಂದು ಅಭಿಪ್ರಾಯಪಟ್ಟರು.
ಕಂದಾಯ ಗ್ರಾಮಗಳಾಗಿ ಪರಿಗಣಿತವಾಗದೇ, ಮೂಲಸೌಕರ್ಯಗಳಿಂದ ವಂಚಿತವಾಗಿರುವ ತಾಂಡಾ, ಹಾಡಿ ಸೇರಿದಂತೆ ಮತ್ತಿತರ ಕಡೆ ವಾಸಿಸುವ ಲಂಬಾಣಿ ಸೇರಿದಂತೆ ಶೋಷಿತ ಸಮುದಾಯಗಳನ್ನು ಮುಖ್ಯವಾಹಿನಿಗೆ ತರುವುದು ಹಾಗೂ ಕಂದಾಯ ಗ್ರಾಮಗಳನ್ನಾಗಿ ಪರಿವರ್ತಿಸುವ ಕರ್ನಾಟಕ ಭೂ ಸುಧಾರಣೆ ವಿಧೇಯಕ -2016ರನ್ನು ರಾಜ್ಯಸರ್ಕಾರ ರಾಷ್ಟ್ರಪತಿಗಳ ಅನುಮೋದನೆಗೆ ಕಳುಹಿಸಿಕೊಟ್ಟಿದೆ.
ಈ ನಿಟ್ಟಿನಲ್ಲಿ ಮಸೂದೆ ಅನುಮೋದಿಸುವಂತೆ ರಾಷ್ಟ್ರಪತಿಗಳಿಗೆ ಮನವಿ ನೀಡಲು ಹಮ್ ಗೋರ್ ಕಟಮಾಳ್ಳೋ ಲಂಬಾಣಿ ಸಂಘಟನೆ ಸಹಿ ಸಂಗ್ರಹ ಅಭಿಯಾನ ಆರಂಭಿಸಿದ್ದು, ಅಕ್ಟೋಬರ್ 10ರವರೆಗೆ ಆಯಾ ಜಿಲ್ಲಾಧಿಕಾರಿಗಳು ಹಾಗೂ ತಹಶೀಲ್ದಾರ್ ಕಚೇರಿಗಳ ಮುಂದೆ ಸಹಿಸಂಗ್ರಹ ಮಾಡಲಾಗುವುದು ಎಂದು ಸಂಘಟನೆಯ ಈರಪ್ಪನಾಯ್ಕ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arrested: ಮಾದಕವಸ್ತು ದಂಧೆ ಪ್ರಕರಣದಲ್ಲಿ ಭಾಗಿಯಾಗಿದ್ದ ರೌಡಿಶೀಟರ್ ಬಂಧನ
Bengaluru: ಸೆಂಟ್ರಿಂಗ್ ಮರ ಬಿದ್ದು ಬಾಲಕಿ ಸಾವು: ಎಂಜಿನಿಯರ್ ವಶಕ್ಕೆ
Actor Darshan: ಮೈಸೂರಿಗೆ ತೆರಳಲು ದರ್ಶನ್‌ಗೆ ನೀಡಿದ್ದ 2 ವಾರಗಳ ಗಡುವು ಅಂತ್ಯ
Bengaluru: ಯುವತಿ ಜೊತೆ ಅಸಭ್ಯ ವರ್ತನೆ: ಮ್ಯಾನೇಜರ್, ಮತ್ತಿಬ್ಬರ ಮೇಲೆ ಕೇಸ್
Bengaluru: 3 ತಿಂಗಳ ಹಿಂದಷ್ಟೇ ವಿವಾಹ ಆಗಿದ್ದ ಚಿನ್ನಾಭರಣ ವ್ಯಾಪಾರಿ ಆತ್ಮಹತ್ಯೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mahakumbh Mela: ಪ್ರಯಾಗ್ ರಾಜ್ ಚಲೋ-ಮಹಾಕುಂಭ ಮೇಳಕ್ಕೆ ಅಡ್ಡಿ: ಉ*ಗ್ರ ಪನ್ನು ಬೆದರಿಕೆ
HMPV: ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ ಸಿಎಂ ಸಿದ್ದರಾಮಯ್ಯ
Daskath ಮೆಚ್ಚಿದ ಪ್ರೇಕ್ಷಕರಿಗೆ ಬಿಗ್ ನ್ಯೂಸ್ ಕೊಟ್ಟ ಚಿತ್ರತಂಡ
BBK11: ಮಂಜು ನೋಡಿ ʼಥೂ..ʼ ಎಂದ ತ್ರಿವಿಕ್ರಮ್; ದೊಡ್ಮನೆಯಲ್ಲಿ ಮತ್ತೆ ಹೋಗೋ ಬಾರೋ ಗಲಾಟೆ
Chhattisgarh: ನಕ್ಸಲೀಯರ ಅಟ್ಟಹಾಸ- ಐಇಡಿ ಸ್ಫೋಟಕ್ಕೆ 9 ಯೋಧರ ದೇಹ ಛಿದ್ರ, ಛಿದ್ರ…
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.