ನಗರದಲ್ಲಿ ಸರಳ ಬಕ್ರೀದ್‌ ಆಚರಣೆ

Team Udayavani, Aug 2, 2020, 8:14 AM IST

ನಗರದಲ್ಲಿ ಸರಳ ಬಕ್ರೀದ್‌ ಆಚರಣೆ

ಬೆಂಗಳೂರು: ಕೋವಿಡ್‌ ಹಿನ್ನೆಲೆಯಲ್ಲಿ ರಾಜಧಾನಿಯ ಮುಸಲ್ಮಾನರು ಸರಳವಾಗಿ ಬಕ್ರೀದ್‌ ಆಚರಿಸಿದರು. ಈದ್ಗಾ ಮೈದಾನ, ಸಮುದಾಯ ಭವನ, ಶಾದಿ ಮಹಲ್‌ ಹಾಗೂ ಇನ್ನಿತರ ಬಯಲು ಪ್ರದೇಶಗಳಲ್ಲಿ ಸಾಮೂಹಿಕ ಪ್ರಾರ್ಥನೆಗೆ ನಿರ್ಬಂಧ ಹಿನ್ನೆಲೆಯಲ್ಲಿ ಮಸೀದಿಗಳಲ್ಲಿ ಹಬ್ಬದ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು.

ಸಿಟಿ ಮಾರುಕಟ್ಟೆಯ ಜಾಮೀಯಾ ಮಸೀದಿ, ಬನ್ನೇರು ಘಟ್ಟ ರಸ್ತೆಯ ಬಿಲಾಲ್‌ ಮಸೀದಿ, ಜಯನಗರ 4ನೇ ಬ್ಲಾಕ್‌ನ ಈದ್ಗಾ ಮಸೀದಿ, ಟ್ಯಾನರಿ ರಸ್ತೆಯ ಸಬೀಲುರ್ರಷಾದ್‌ ಮದರಸಾ ಮಸೀದಿ ಸೇರಿದಂತೆ ನಗರದ ಬಹುತೇಕ ಮಸೀದಿಗಳಲ್ಲಿ ಪ್ರಾರ್ಥನೆ ಸಲ್ಲಿಸಲಾಯಿತು. ಸಿಟಿ ಮಾರು ಕಟ್ಟೆ ಜಾಮೀಯಾ ಮಸೀದಿಯಲ್ಲಿ ಮೌಲಾನ ಮಕ್ಸೂದ್‌ ಇಮ್ರಾನ್‌ ರಷಾದಿ, ಸಬೀಲುರ್ರಷಾದ್‌ ಮಸೀದಿಯಲ್ಲಿ ಅಮಿರೆ ಷರಿಯತ್‌ ಮೌಲಾನ ಸಗೀರ್‌ ಅಹ್ಮದ್‌ ರಷಾದಿ ನೇತೃತ್ವದಲ್ಲಿ ಪ್ರಾರ್ಥನೆ ಸಲ್ಲಿಸಲಾಯಿತು. ಸಿಟಿ ಮಾರು ಕಟ್ಟೆಯ ಜಾಮೀಯಾ ಮಸೀದಿಯಲ್ಲಿ ನಡೆದ ಸಾಮೂಹಿಕ ಪ್ರಾರ್ಥನೆಯಲ್ಲಿ ಮಾಜಿ ಸಚಿವ ಜಮೀರ್‌ ಅಹಮದ್‌ ಪಾಲ್ಗೊಂಡಿದ್ದರು.

ಪ್ರಾರ್ಥನೆ ವೇಳೆ ಎಲ್ಲಾ ಮಸೀದಿಗಳಲ್ಲಿ ಸಾಮಾಜಿಕ ಅಂತರ ಕಾಪಾಡುವ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಲಾಗಿತ್ತು. ಪ್ರತಿಯೊಬ್ಬರು ಮಾಸ್ಕ್ ಧರಿಸಿದ್ದರು. ಪ್ರವೇಶದ್ವಾರಗಳಲ್ಲಿ ಥರ್ಮಲ್‌ ಸ್ಕ್ರೀನಿಂಗ್‌, ಸ್ಯಾನಿಟೈಸರ್‌ ವ್ಯವಸ್ಥೆಯಿತ್ತು. ಮಸೀದಿಯ ಆಡಳಿತ ಮಂಡಳಿ, ವಕ್ಫ್ ಇಲಾಖೆಗಳಿಂದ ಮಾರ್ಗಸೂಚಿ ಪಾಲಿಸುವ ವ್ಯವಸ್ಥೆ ಮಾಡಲಾಗಿತ್ತು. ಎಲ್ಲ ಮಸೀದಿ ಬಳಿ ಪೊಲೀಸ್‌ ಬಿಗಿ ಬಂದೋಬಸ್ತ್ ಮಾಡಲಾಗಿತ್ತು. ಬೆಳಗ್ಗೆ 6.20ರಿಂದ 8 ಗಂಟೆಯೊಳಗೆ ಬಹುತೇಕ ಎಲ್ಲಾ ಕಡೆ ಹಬ್ಬದ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು.

ಪ್ರಾರ್ಥನೆ ಬಳಿಕ ಹಬ್ಬದ ಶುಭಾಶಯ ಕೋರಲು ಪರಸ್ಪರ ಕೈ ಕುಲುಕುವುದು, ಆಲಿಂಗನ ಮಾಡುವುದು ಸಂಪ್ರದಾಯ. ಆದರೆ, ಕೋವಿಡ್ ಹಿನ್ನೆಲೆ ಸಾಮಾಜಿಕ ಅಂತರ ಕಾಪಾಡಬೇಕಾದ ಕಾರಣ ದೂರದಿಂದಲೇ ಪರಸ್ಪರ ಶುಭಾಶಯ ಕೋರಿಕೊಂಡರು. ಮಸೀದಿಗಳಲ್ಲಿ ಸುರಕ್ಷತಾ ಕ್ರಮಗಳ ಬಗ್ಗೆ ಪ್ರಕಟಣೆ ಹೊರಡಿಸಲಾಗುತ್ತಿತ್ತು.

ಕುರ್ಬಾನಿ ಪ್ರಮಾಣ ಇಳಿಕೆ :  ಕೋವಿಡ್‌-19 ಹಿನ್ನೆಲೆಯಲ್ಲಿ ಆರ್ಥಿಕ ಸಂಕಷ್ಟ, ಸಾಮಾಜಿಕ ಅನಾನುಕೂಲತೆಗಳ ಹಿನ್ನೆಲೆಯಲ್ಲಿ ಕುರ್ಬಾನಿ (ಪ್ರಾಣಿ ಬಲಿ) ಪ್ರಮಾಣದಲ್ಲಿ ಇಳಿಕೆ ಕಂಡು ಬಂದಿತು. ಪ್ರತಿ ವರ್ಷದಂತೆ ಈ ವರ್ಷ ಜನ ಪ್ರಾಣಿ ಬಲಿ ಅರ್ಪಿಸಲಿಲ್ಲ. ವಿವಿಧ ಮಸೀದಿ ಸಮಿತಿಗಳು, ಸ್ವಯಂಸೇವಾ ಸಂಸ್ಥೆಗಳಿಂದ ನಿರ್ವಹಿಸಲಾಗುತ್ತಿದ್ದ ಸಾಮೂಹಿಕ ಕುರ್ಬಾನಿ ವ್ಯವಸ್ಥೆ ಈ ಬಾರಿ ಇರಲಿಲ್ಲ. ಬದಲಿಗೆ ಸ್ವಚ್ಛತೆಗೆ ಒತ್ತು ನೀಡಲಾಗಿತ್ತು. ಪೌರ ಕಾರ್ಮಿಕರು, ಪಾಲಿಕೆ ವಾಹನಗಳು ಎರಡು ಬಾರಿ ತ್ಯಾಜ್ಯ ಸಂಗ್ರಹಿಸಿದ್ದು ಕಂಡು ಬಂತು.

ಟಾಪ್ ನ್ಯೂಸ್

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

1-ullala

Mangaluru; ನೇತ್ರಾವತಿ ಸೇತುವೆ ದುರಸ್ತಿ ಆರಂಭ: ಸಂಚಾರ ಸಲಹೆ ನೀಡಿದ ಪೊಲೀಸರು

1-aaammm

Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು

CT Ravi

Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಬಂಧನ

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

dhankar (2)

Jagdeep Dhankhar; ರಾಜ್ಯಸಭಾ ಸಭಾಪತಿ ವಿರುದ್ದದ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ತಿರಸ್ಕೃತ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Adalat: ಲೋಕ್‌ ಅದಾಲತ್‌ನಲ್ಲಿ 38.8 ಲಕ್ಷ  ವ್ಯಾಜ್ಯ ಇತ್ಯರ್ಥ

Lok Adalat: ಲೋಕ್‌ ಅದಾಲತ್‌ನಲ್ಲಿ 38.8 ಲಕ್ಷ  ವ್ಯಾಜ್ಯ ಇತ್ಯರ್ಥ

5

Bengaluru: ಒಬಾಮಾ ಭೇಟಿ ವೇಳೆ ಸ್ಫೋಟ ಸಂಚು: ಡಿ.23ಕ್ಕೆ ಶಿಕ್ಷೆ ಪ್ರಕಟ

Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ

Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ

BSY: ಬಿಎಸ್‌ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್‌ಪಿಪಿ

BSY: ಬಿಎಸ್‌ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್‌ಪಿಪಿ

IPS officer D. Roopa: ಸಿಂಧೂರಿ ಮೇಲೆ ಮಾನನಷ್ಟ ಪ್ರಕರಣ ದಾಖಲಿಸಿದ ರೂಪಾ

IPS officer D. Roopa: ಸಿಂಧೂರಿ ಮೇಲೆ ಮಾನನಷ್ಟ ಪ್ರಕರಣ ದಾಖಲಿಸಿದ ರೂಪಾ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

11

Surathkal: ಅಡುಗೆ ಅನಿಲ ಸೋರಿಕೆ ಪ್ರಕರಣ; ಸುಧಾರಿಸದ ಗಾಯಾಳುಗಳ ಆರೋಗ್ಯ

1-ullala

Mangaluru; ನೇತ್ರಾವತಿ ಸೇತುವೆ ದುರಸ್ತಿ ಆರಂಭ: ಸಂಚಾರ ಸಲಹೆ ನೀಡಿದ ಪೊಲೀಸರು

accident

Kundapura: ಕಾರು ಢಿಕ್ಕಿ; ಸ್ಕೂಟರ್‌ ಸವಾರನಿಗೆ ಗಾಯ

1-aaammm

Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.