ಇಂದಿನಿಂದ ಸಿರ್ಸಿ ಮೇಲ್ಸೇತುವೆ ಕಾಮಗಾರಿ

Team Udayavani, Dec 16, 2019, 11:06 AM IST

bng-tdy-2

ಬೆಂಗಳೂರು: ನಗರದ ಪ್ರಮುಖ ಸಂಚಾರ ದಟ್ಟಣೆ ಇರುವ ಮಾರ್ಗ “ಸಿರ್ಸಿ ಫ್ಲೈಓವರ್‌’ (ಬಾಲಗಂಗಾಧರನಾಥ ಸ್ವಾಮೀಜಿ ಮೇಲ್ಸೇತುವೆ)ನಲ್ಲಿ ವಾಹನ ಸಂಚಾರ ಸೋಮವಾರದಿಂದ ಸುಮಾರು ಒಂದು ತಿಂಗಳು ಭಾಗಶಃ ಸ್ಥಗಿತಗೊಳ್ಳಲಿದೆ.

2.65 ಕಿ.ಮೀ. ಉದ್ದದ ಉದ್ದೇಶಿತ ಮೇಲ್ಸೇತುವೆಯಲ್ಲಿ ಡಿ. 16ರಿಂದ ದುರಸ್ತಿ ಕಾರ್ಯ ಕೈಗೆತ್ತಿಕೊಳ್ಳಲಾಗುತ್ತಿದೆ. ಆ ಹಿನ್ನೆಲೆಯಲ್ಲಿ ಕಾಮಗಾರಿ ನಡೆಯುವ ವೇಳೆ ಮೈಸೂರು ರಸ್ತೆಯ ಮೇಲ್ಸೇತುವೆ ಮಾರ್ಗವಾಗಿ ರಾಯನ್‌ ವೃತ್ತದ ಮಾರ್ಗದಲ್ಲಿ ಎಲ್ಲ ರೀತಿಯ ವಾಹನ ಸಂಚಾರವನ್ನು ನಿಷೇಧಿಸಲಾಗಿದ್ದು, ವಾಹನಗಳಿಗೆ ಮಾರ್ಗ ಬದಲಾವಣೆ ಮಾಡಲಾಗಿದೆ. ಇದರಿಂದ ಪರ್ಯಾಯ ಮಾರ್ಗಗಳಲ್ಲಿ ವಾಹನದಟ್ಟಣೆ ಎಂದಿಗಿಂತ ಹೆಚ್ಚು ಇರಲಿದೆ. ಪುರಭವನದ ಕಡೆಯಿಂದ ಮೈಸೂರು ರಸ್ತೆ ಕಡೆಗೆ ಹೋಗುವ ಒಂದು ಮಾರ್ಗವನ್ನು ಈಗಾಗಲೇ ಐದು ಕೋಟಿ ರೂ. ವೆಚ್ಚದಲ್ಲಿ ಕಳೆದ ಮಾರ್ಚ್‌ನಲ್ಲಿ ನೂತನ ತಂತ್ರಜ್ಞಾನ ಬಳಸಿಕೊಂಡು ಡಾಂಬರೀಕರಣ ಮಾಡಲಾಗಿತ್ತು. ಇದೀಗ ಮತ್ತೂಂದು ಭಾಗದ ರಸ್ತೆಗೆ ಡಾಂಬರೀಕರಣ ಕಾಮಗಾರಿ ಪ್ರಾರಂಭಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ. 30 ದಿನಗಳೊಳಗೆ ಡಾಂಬರೀಕರಣ ಕಾಮಗಾರಿ ಪೂರ್ಣಗೊಳಿಸಲು ಗುತ್ತಿಗೆದಾರರಿಗೆ ಸೂಚನೆ ನೀಡಲಾಗಿದೆ ಎಂದು ಬಿಬಿಎಂಪಿ ಆಯುಕ್ತ ಬಿ.ಎಚ್‌. ಅನಿಲ್‌ಕುಮಾರ್‌ ತಿಳಿಸಿದ್ದಾರೆ.

ಕಾಮಗಾರಿ ಹಿನ್ನೆಲೆಯಲ್ಲಿ ಈ ಮಾರ್ಗದಲ್ಲಿ ಸಂಚರಿಸುವ ವಾಹನಗಳಿಗೆ ಪರ್ಯಾಯ ಮಾರ್ಗ ಗುರುತಿಸಲಾಗಿದೆ. ಸಿರ್ಸಿ ಮೇಲ್ಸೇತುವೆ ದುರಸ್ತಿಯನ್ನು ಎರಡು ಹಂತದಲ್ಲಿ ಕೈಗೊಂಡಿದ್ದು, ಮೊದಲ ಹಂತದ ಕಾಮಗಾರಿಯು ಬಾಡಿ ಬಿಲ್ಡರ್‌ ಫ್ಲೈಓವರ್‌ ಅಪ್‌ ರ್‍ಯಾಂಪ್‌ ಜಂಕ್ಷನ್‌ನಿಂದ ಬ್ರಿಯಾಂಡ್‌ ವೃತ್ತದ ಮೇಲ್ಸೇತುವೆ ಮೇಲ್ಭಾಗದ ಜಂಕ್ಷನ್‌ವರೆಗೆ ಹಾಗೂ ಎರಡನೇ ಹಂತದ ಕಾಮಗಾರಿಯು ಬ್ರಿಯಾಂಡ್‌ ವೃತದ ಮೇಲ್ಸೇತುವೆಯ ಮೇಲ್ಭಾಗದ ಜಂಕ್ಷನ್‌ನಿಂದ ಎನ್‌.ಆರ್‌. ರಸ್ತೆಯ ಫ್ಲೈಓವರ್‌ನ ಕೆಳಭಾಗದ ರ್‍ಯಾಂಪ್‌ ಜಂಕ್ಷನ್‌ನವರೆಗೆ ನಡೆಯಲಿದೆ.

ಉದ್ದೇಶಿತ ಕಾಮಗಾರಿ ನಡೆಯುವಾಗ ಈ ಮಾರ್ಗದಲ್ಲಿ ಎಲ್ಲ ರೀತಿಯ ವಾಹನ ಸಂಚಾರ ನಿಷೇಧಿಸಲಾಗಿದೆ. ಇದಕ್ಕೆ ಪರ್ಯಾಯ ರಸ್ತೆಗಳಲ್ಲಿ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ. ಡಿ. 16ರಿಂದ ಮೊದಲ ಹಂತ ಪ್ರಾರಂಭವಾಗಲಿದೆ. ಸುಮನಹಳ್ಳಿ ಮೇಲ್ಸೇತುವೆಯ ದುರಸ್ತಿ ಕಾಮಗಾರಿಯೂ ಸೋಮವಾರದಿಂದ ಪ್ರಾರಂಭವಾಗಲಿದೆ. ಆದರೆ, ಈ ಮಾರ್ಗದಲ್ಲಿ ಯಾವುದೇ ಬದಲಾವಣೆ ಮಾಡಲಾಗಿಲ್ಲ ಎಂದು ಬಿಬಿಎಂಪಿಯ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

ಟಾಪ್ ನ್ಯೂಸ್

Tragedy: ಓವರ್ ಟೇಕ್ ಮಾಡಲು ಹೋಗಿ ಭೀಕರ ಅಪಘಾತ… ನವ ವಧು-ವರ ಸೇರಿ 7 ಮಂದಿ ಮೃತ್ಯು

Tragedy: ಓವರ್ ಟೇಕ್ ಮಾಡಲು ಹೋಗಿ ಭೀಕರ ಅಪಘಾತ… ನವ ವಧು-ವರ ಸೇರಿ 7 ಮಂದಿ ಮೃತ್ಯು

jamia

Jamia Millia Islamia: ಇಸ್ಲಾಂಗೆ ಮತಾಂತರಗೊಳ್ಳಿ ಅಥವಾ ಅತ್ಯಾಚಾರಕ್ಕೆ ಒಳಗಾಗಿ: ಭಾರಿ ಆರೋಪ

Belagavi: ವಿವಾಹಿತ ಮಹಿಳೆ ಮತ್ತು ತಾಯಿಯ ಸೀರೆ ಬಿಚ್ಚಿ ಹಲ್ಲೆ ನಡೆಸಿದ ನೆರೆಹೊರೆಯವರು!

Tamil Director: ಖ್ಯಾತ ತಮಿಳು ಚಿತ್ರ ನಿರ್ದೇಶಕ ಸುರೇಶ್ ಸಂಗಯ್ಯ ನಿಧನ

Tamil Director: ಖ್ಯಾತ ತಮಿಳು ಚಿತ್ರ ನಿರ್ದೇಶಕ ಸುರೇಶ್ ಸಂಗಯ್ಯ ವಿಧಿವಶ

SMAT: ಸಯ್ಯದ್‌ ಮುಷ್ತಾಕ್‌ ಅಲಿ ಕೂಟಕ್ಕೆ ಬಲಿಷ್ಠ ಕರ್ನಾಟಕ ತಂಡ ಪ್ರಕಟ

SMAT 2024: ಸಯ್ಯದ್‌ ಮುಷ್ತಾಕ್‌ ಅಲಿ ಕೂಟಕ್ಕೆ ಬಲಿಷ್ಠ ಕರ್ನಾಟಕ ತಂಡ ಪ್ರಕಟ

2-news

ಹೆದ್ದಾರಿ ತಡೆ ನಡೆಸಿದ ಆರೋಪ; ಸುಳ್ಯ, ಬೈಂದೂರು ಶಾಸಕರ ಸಹಿತ ಹಲವರ ವಿರುದ್ಧ ಪ್ರಕರಣ

IPL Auction: Mallika Sagar will conduct the entire IPL auction

IPL Auction: ಸಂಪೂರ್ಣ ಐಪಿಎಲ್‌ ಹರಾಜು ನಡೆಸಲಿದ್ದಾರೆ ಮಲ್ಲಿಕಾ ಸಾಗರ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Organ Donation: ಸಾವಿನ ನಂತರವೂ ನೆರವಾದ ಜೀವ

Organ Donation: ಸಾವಿನ ನಂತರವೂ ನೆರವಾದ ಜೀವ

15-bng

Bengaluru: ವೈದ್ಯೆಗೆ ಲೈಂಗಿಕ ಕಿರುಕುಳ: ಪಿಎಸ್‌ಐ ವಿರುದ್ದ ಪೊಲೀಸ್‌ ಆಯುಕ್ತರಿಗೆ ದೂರು

14-bng

Bengaluru: ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯ ಜೀವ ಉಳಿಸಿದ ಸಂಚಾರ ಪೊಲೀಸರು

9-munirathna

Bengaluru: ಮುನಿರತ್ನ ವಿರುದ್ಧ ಹನಿಟ್ರ್ಯಾಪ್‌ ಕೇಸ್‌: ಪಿಐ ಸೆರೆ

8-bng

Infosys ಪ್ರಶಸ್ತಿ 2024ಕ್ಕೆ ಕರ್ನಾಟಕದವರೂ ಸೇರಿ 6 ಸಾಧಕರ ಆಯ್ಕೆ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Tragedy: ಓವರ್ ಟೇಕ್ ಮಾಡಲು ಹೋಗಿ ಭೀಕರ ಅಪಘಾತ… ನವ ವಧು-ವರ ಸೇರಿ 7 ಮಂದಿ ಮೃತ್ಯು

Tragedy: ಓವರ್ ಟೇಕ್ ಮಾಡಲು ಹೋಗಿ ಭೀಕರ ಅಪಘಾತ… ನವ ವಧು-ವರ ಸೇರಿ 7 ಮಂದಿ ಮೃತ್ಯು

jamia

Jamia Millia Islamia: ಇಸ್ಲಾಂಗೆ ಮತಾಂತರಗೊಳ್ಳಿ ಅಥವಾ ಅತ್ಯಾಚಾರಕ್ಕೆ ಒಳಗಾಗಿ: ಭಾರಿ ಆರೋಪ

Belagavi: ವಿವಾಹಿತ ಮಹಿಳೆ ಮತ್ತು ತಾಯಿಯ ಸೀರೆ ಬಿಚ್ಚಿ ಹಲ್ಲೆ ನಡೆಸಿದ ನೆರೆಹೊರೆಯವರು!

Tamil Director: ಖ್ಯಾತ ತಮಿಳು ಚಿತ್ರ ನಿರ್ದೇಶಕ ಸುರೇಶ್ ಸಂಗಯ್ಯ ನಿಧನ

Tamil Director: ಖ್ಯಾತ ತಮಿಳು ಚಿತ್ರ ನಿರ್ದೇಶಕ ಸುರೇಶ್ ಸಂಗಯ್ಯ ವಿಧಿವಶ

SMAT: ಸಯ್ಯದ್‌ ಮುಷ್ತಾಕ್‌ ಅಲಿ ಕೂಟಕ್ಕೆ ಬಲಿಷ್ಠ ಕರ್ನಾಟಕ ತಂಡ ಪ್ರಕಟ

SMAT 2024: ಸಯ್ಯದ್‌ ಮುಷ್ತಾಕ್‌ ಅಲಿ ಕೂಟಕ್ಕೆ ಬಲಿಷ್ಠ ಕರ್ನಾಟಕ ತಂಡ ಪ್ರಕಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.