ಮಾಜಿ ಸಿಎಂ ಧರ್ಮಸಿಂಗ್‌ಗೆ ಪ್ರಶ್ನಾವಳಿ ಕಳುಹಿಸಿದ ಎಸ್‌ಐಟಿ
Team Udayavani, Jul 25, 2017, 11:18 AM IST
ಬೆಂಗಳೂರು: ಜಂತಕಲ್ ಮೈನಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕುಗೊಳಿಸಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಮಾಜಿ ಮುಖ್ಯಮಂತ್ರಿ ಎನ್.ಧರ್ಮಸಿಂಗ್ ಅವರಿಗೆ ಪ್ರಶ್ನಾವಳಿಗಳನ್ನು ಕಳುಹಿಸಿಕೊಟ್ಟಿದೆ. ಜತೆಗೆ ಇದೇ ಜುಲೈ 30ರೊಳಗೆ ಪ್ರಶ್ನೆಗಳಿಗೆ ಸೂಕ್ತ ಉತ್ತರಿಸುವಂತೆ ತಿಳಿಸಿದೆ ಎಂದು ಎಸ್‌ಐಟಿಯ ಮೂಲಗಳು ತಿಳಿಸಿವೆ.
ಸುಪ್ರೀಂಕೋರ್ಟ್ ಆದೇಶದ ಮೇರೆಗೆ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್‌ಐಟಿ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎನ್ನಲಾದ ಪ್ರತಿಯೊಬ್ಬರನ್ನು ವಿಚಾರಣೆಗೊಳಪಡಿಸುತ್ತಿದೆ. ಅದೇ ರೀತಿ ಧರ್ಮಸಿಂಗ್ ಮುಖ್ಯಮಂತ್ರಿಯಾಗಿದ್ದ ವೇಳೆ ಜಂತಕಲ್ ಮೈನಿಂಗ್‌ಗೆ ಅಕ್ರಮವಾಗಿ ಅನುಮತಿ ನೀಡಿದ್ದರು ಎಂಬ ಆರೋಪ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ಲಿಖೀತವಾಗಿ ಮಾಹಿತಿ ನೀಡುವಂತೆ ಅವರಿಗೆ ಕೇಳಿಕೊಂಡಿದ್ದೇವೆ ಎಂದು ಎಸ್‌ಐಟಿ ಅಧಿಕಾರಿಗಳು ತಿಳಿಸಿದ್ದಾರೆ.
ಧರ್ಮಸಿಂಗ್ ಅನಾರೋಗ್ಯದಿಂದ ಬಳಲುತ್ತಿದ್ದು, ನಡೆದಾಡಲು ಸಾಧ್ಯವಿಲ್ಲ. ಹೀಗಾಗಿ ಎಸ್‌ಐಟಿ ಮುಂದೆ ಹಾಜರಾತಿಗೆ ವಿನಾಯಿತಿ ಕೋರಿದ್ದರು. ಈ ಹಿನ್ನೆಲೆಯಲ್ಲಿ ತನಿಖೆಗೆ ಅಗತ್ಯವಿರುವ ಪ್ರತಿಯೊಂದು ಪ್ರಶ್ನಾವಳಿಗೆ ಉತ್ತರ ನೀಡುವಂತೆ ಸೂಚಿಸಲಾಗಿದೆ. ಚಿತ್ರದುರ್ಗ ಜಿಲ್ಲೆಯ ಮೀಸಲು ಅರಣ್ಯದಲ್ಲಿ ಗಣಿಗಾರಿಕೆ ನಡೆಸಲು ವಿನೋದ್ ಗೋಯಲ್ ಮಾಲೀಕತ್ವದ ಜಂತಕಲ್ ಮೈನಿಂಗ್ ಸಂಸ್ಥೆಗೆ ಅನುಮತಿ ನೀಡಲಾಗಿತ್ತು. ಸಂಸ್ಥೆಯು ಅವ್ಯವಹಾರ ನಡೆಸಿದ್ದರಿಂದ ಕಪ್ಪುಪಟ್ಟಿಗೆ ಸೇರಿಸಲಾಗಿತ್ತು.
ಆದರೂ, ಅಕ್ರಮ ಗಣಿಗಾರಿಕೆಗೆ ಅನುಮತಿ ನೀಡಲಾಗಿದೆ ಎಂಬ ಆರೋಪಗಳಿದ್ದು, ಅದು ನಿಜವೇ? ಅನುಮತಿ ನೀಡಿದ್ದರೂ ಯಾವ ಕಾರಣಕ್ಕಾಗಿ ಅನುಮತಿ ನೀಡಲಾಗಿದೆ ಎಂಬಂತಹ ಪ್ರಮುಖ ಪ್ರಶ್ನೆಗಳನ್ನು ಕೇಳಲಾಗಿದೆ ಎಂದು ಎಸ್‌ಐಟಿ ಮೂಲಗಳು ತಿಳಿಸಿವೆ. ಪ್ರಕರಣ ಸಂಬಂಧ ಅಧಿಕಾರಿಗಳು ಈಗಾಗಲೇ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ.ಗಂಗಾರಾಮ್ ಬಡೇರಿಯಾ ಸೇರಿದಂತೆ ಹತ್ತಾರು ಸರ್ಕಾರಿ ಅಧಿಕಾರಿಗಳನ್ನು ವಿಚಾರಣೆ ನಡೆಸಲಾಗಿದೆ. ಅಲ್ಲದೇ ಗಂಗಾರಾಮ್ ಬಡೇರಿಯಾ ಅವರನ್ನು ಬಂಧಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಬೆಂಗಳೂರಲ್ಲಿ ಶೀಘ್ರ ಪ್ರತಿ ಕೆಜಿ ಈರುಳ್ಳಿ ಬೆಲೆ 100?
Bengaluru: ಏರ್ಪೋರ್ಟ್ ಟಿ-2ಗೆ ವರ್ಟಿಕಲ್ ಗಾರ್ಡನ್ ರಂಗು
Bengaluru: ಬೀದಿ ನಾಯಿಗೆ ಊಟ ಹಾಕಿದ ಮಹಿಳೆ ಮೇಲೆ ಹಲ್ಲೆ ಯತ್ನ
Bengaluru: 19 ಕಡೆ ಫ್ಲಿಪ್ ಕಾರ್ಟ್, ಅಮೆಜಾನ್ ವ್ಯಾಪಾರಸ್ಥರಿಗೆ ಇ.ಡಿ. ದಾಳಿ ಬಿಸಿ
Bengaluru: ಪೀಣ್ಯದಲ್ಲಿ 12 ಕೋಟಿ ರೂ. ಮೌಲ್ಯದ ಆಸ್ತಿ ವಶಕ್ಕೆ ಪಡೆದ ಅಭಿವೃದ್ಧಿ ಪ್ರಾಧಿಕಾರ
MUST WATCH
ಹೊಸ ಸೇರ್ಪಡೆ
Waqf Property: ಸಚಿವ ಜಮೀರ್ ಅಶ್ವಮೇಧ ಕುದುರೆ ತಡೆದಿದ್ದೇನೆ: ಶಾಸಕ ಯತ್ನಾಳ್
ಐತಿಹಾಸಿಕ ಮುಡಗೇರಿ ಗ್ರಾಮ ನಿರ್ಲಕ್ಷ್ಯ; ಸೋದೆ ಅರಸರ ಕೋಟೆ ಪಳೆಯುಳಿಕೆ
BGT Series: ಚೇತೇಶ್ವರ ಪೂಜಾರ ಅಂದು ತಿಂದ ಪೆಟ್ಟಿನ ನೋವು ಭಾರತೀಯರು ಮರೆಯುವುದುಂಟೇ?
Muddebihal: ವಕ್ಫ್ ಆಸ್ತಿ ವಿವಾದ: ಸಿಎಂಗೆ ಬುದ್ದಿಭ್ರಮಣೆ ಆಗಿದೆ… ನಡಹಳ್ಳಿ ವಾಗ್ದಾಳಿ
ಹಾವೇರಿ-ಸಿದ್ದರಾಮಯ್ಯ ಪಂಜರದ ಗಿಳಿ: ಕೇಂದ್ರ ಸಚಿವ ಸೋಮಣ್ಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.