ಅಗತ್ಯವಿರುವೆಡೆ ಸ್ಕೈವಾಕ್‌ ನಿರ್ಮಾಣ


Team Udayavani, Jan 23, 2020, 3:05 AM IST

agatyviruvede

ಬೆಂಗಳೂರು: ಸಾರ್ವಜನಿಕರು ಖಾಸಗಿ ವಾಹನ ಗಳನ್ನು ಬಳಸುವ ಬದಲು ಸಾರ್ವಜನಿಕ ಸಾರಿಗೆ ಬಳಸಿದರೆ ಸಂಚಾರ ದಟ್ಟಣೆ ಕಡಿಮೆ ಯಾಗಲಿದೆ ಎಂದು ಸಂಸದ ತೇಜಸ್ವಿ ಸೂರ್ಯ ಹೇಳಿದರು. ಬಿಬಿಎಂಪಿ ಹಾಗೂ ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಹೊಸೂರು ಮುಖ್ಯ ರಸ್ತೆಯ ಚೆಕ್‌ ಪೋಸ್ಟ್‌ ಬಳಿ (ಸರ್ಜಾಪುರ ಜಂಕ್ಷನ್‌ ಹತ್ತಿರ) ನೂತನವಾಗಿ ನಿರ್ಮಿಸಿರುವ ಪಾದಚಾರಿ ಮೇಲ್ಸೇತುವೆಯನ್ನು ಸಾರ್ವಜನಿಕರ ಬಳಕೆಗೆ ಮುಕ್ತಗೊಳಿಸಿ ಮಾತನಾಡಿದರು.

ಪಾದಚಾರಿ ಮೇಲ್ಸೇತುವೆಗಳು ನಿರ್ಮಾಣದಿಂದ ಹಿರಿಯ ನಾಗರಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಹೆಚ್ಚು ಅನುಕೂಲವಾಗಲಿದೆ. ಅಗತ್ಯವಿರುವ ಸ್ಥಳಗಳಲ್ಲಿ ಸ್ಕೈವಾಕ್‌ಗಳನ್ನು ನಿರ್ಮಿಸಿದರೆ ಪಾದಚಾರಿಗಳಿಗೆ ಹೆಚ್ಚು ಸಹಕಾರಿಗಲಿದೆ ಎಂದು ಹೇಳಿದರು. ಶಾಸಕ ರಾಮಲಿಂಗರೆಡ್ಡಿ ಮಾತನಾಡಿ, ಪಾದಚಾರಿಗಳ ಸುಗಮ ಸಂಚಾರಕ್ಕಾಗಿ ನಗರದಲ್ಲಿ ಈಗಾಗಲೇ ಸಾಕಷ್ಟು ಸ್ಕೈವಾಕ್‌ ನಿರ್ಮಾಣ ಮಾಡಲಾಗಿದೆ.

ನಿರ್ಮಾಣ ಮಾಡುವಷ್ಟೇ ಇದರ ನಿರ್ವಹಣೆಯೂ ಮುಖ್ಯವಾಗಿದೆ. ಬೇಡಿಕೆ ಇರುವ ಕಡೆ ಸ್ಕೈವಾಕ್‌ ನಿರ್ಮಿಸಬೇಕು ಎಂದರು. ಬಿಬಿಎಂಪಿ ಮೇಯರ್‌ ಗೌತಮ್‌ಕುಮಾರ್‌ ಮಾತನಾಡಿ, ಸ್ಕೈವಾಕ್‌ ನಿರ್ಮಾಣಕ್ಕೆ ಸುಮಾರು 2.50 ಕೋಟಿ ರೂ. ವೆಚ್ಚ ಮಾಡಲಾಗಿದೆ. ಹೊಸೂರು ರಸ್ತೆ-ಸರ್ಜಾಪುರ ರಸ್ತೆ ಕೂಡುವ ಸ್ಥಳದಲ್ಲಿ ಪಾದಚಾರಿ ಮೇಲ್ಸೇತುವೆ ನಿರ್ಮಿಸಲಾಗಿದೆ.

ಪಾದಚಾರಿ ಮೇಲ್ಸೇತುವೆಯು ಉದ್ದ 73 ಮೀಟರ್‌, ಅಗಲ 3.60 ಮೀಟರ್‌ ವಿದೆ. ಮೇಲ್ಸೇತುವೆಯು ರಸ್ತೆಯಿಂದ 5.50 ಮೀಟರ್‌ ಎತ್ತರವಿದೆ ಎಂದರು. ವಿನೂತನ ರೀತಿಯಲ್ಲಿ ಸ್ಕೈವಾಕ್‌ ಅನ್ನು ನಿರ್ಮಿಸಿದ್ದು, ಸಿಸಿ ಕ್ಯಾಮರಾ, ಎರಡೂ ಬದಿಯಲ್ಲಿ ಲಿಫ್ಟ್, ಸಾರ್ವಜನಿಕರು ರಾತ್ರಿ ವೇಳೆ ಸುರಕ್ಷಿತವಾಗಿ ತೆರಳಲು ಎಲ್‌ಇಡಿ ವಿದ್ಯುತ್‌ ದೀಪಗಳನ್ನು ಅಳವಡಿಸಲಾಗಿದೆ.

ಇದೇ ಮಾದರಿಯಲ್ಲಿ ನಗರದ ವಿವಿಧ ಸ್ಥಳಗಳಲ್ಲಿ ಸ್ಕೈವಾಕ್‌ ಗಳನ್ನು ನಿರ್ಮಾಣ ಮಾಡಲಾಗುವುದು ಎಂದು ಹೇಳಿದರು. ಈ ವೇಳೆ 150 ಪೌರಕಾರ್ಮಿಕರಿಗೆ ಹೈಜಿನಿಕ್‌ ಕಿಟ್‌ ವಿತರಣೆ ಮಾಡಲಾಯಿತು. ಉಪ ಮೇಯರ್‌ ರಾಮಮೋಹನ ರಾಜು, ಅಬ್ದುಲ್‌ವಾಜಿದ್‌, ಮಾಜಿ ಮೇಯರ್‌ ಮಂಜುನಾಥ ರೆಡ್ಡಿ,ಮುಖ್ಯಅಭಿಯಂತ ಸೋಮಶೇಖರ್‌, ಬಸವರಾಜ್‌ ಕಬಾಡೆ ಮತ್ತಿತರರು ಹಾಜರಿದ್ದರು.

ಟಾಪ್ ನ್ಯೂಸ್

Naxal–Cm

ನಕ್ಸಲರನ್ನು ಅಮಿತ್‌ ಶಾ ಸ್ವಾಗತಿಸಿದಾಗ ಏಕೆ ಬೆಚ್ಚಿ ಬಿದ್ದಿಲ್ಲ?: ಸಿಎಂ ತಿರುಗೇಟು

Naxal-encounter-Vikram-1

Naxal Package: “ಮೊದಲೇ ಪ್ಯಾಕೇಜ್‌ ನೀಡಿದ್ದರೆ ವಿಕ್ರಂಗೌಡ ಪ್ರಾಣ ಉಳಿಯುತ್ತಿತ್ತು’: ಸಹೋದರ

Birth-Certi

Belagavi: ಜೀವಂತ ವ್ಯಕ್ತಿ ಹೆಸರಿನಲ್ಲಿ ಮರಣ ಪ್ರಮಾಣ ಪತ್ರ ನೀಡಿದ ಅಧಿಕಾರಿಗಳು!

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Naxals-Meet-Cm

Naxals Surrender: ಮುಖ್ಯಮಂತ್ರಿ ಸಮ್ಮುಖ ಶಸ್ತ್ರಾಸ್ತ್ರ ತ್ಯಜಿಸಿ ಶರಣಾದ 6 ನಕ್ಸಲರು

Bengaluru: ಪಾಲುದಾರನ ಕಿರುಕುಳ: ಉದ್ಯಮಿ ಆತ್ಮಹತ್ಯೆ

Bengaluru: ಪಾಲುದಾರನ ಕಿರುಕುಳ: ಉದ್ಯಮಿ ಆತ್ಮಹತ್ಯೆ

3

Atul Subhash Case: ಮೊಮ್ಮಗನನ್ನು ಟೆಕಿ ಅತುಲ್‌ ತಾಯಿಯ ಸುಪರ್ದಿಗೆ ವಹಿಸಲು ಸುಪ್ರೀಂ ನಕಾರ

BBMP-ED

illegal Investigation: ಬಿಬಿಎಂಪಿ ಮುಖ್ಯ ಎಂಜಿನಿಯರ್‌ ಕಚೇರಿ ಮೇಲೆ ಇ.ಡಿ. ದಾಳಿ

Sangeetha Mobiles: ಜಯನಗರದಲ್ಲಿ ಸಂಗೀತಾ ಗ್ಯಾಜೆಟ್ಸ್ ನೂತನ ಮಳಿಗೆ ಲೋಕಾರ್ಪಣೆ

Sangeetha Mobiles: ಜಯನಗರದಲ್ಲಿ ಸಂಗೀತಾ ಗ್ಯಾಜೆಟ್ಸ್ ನೂತನ ಮಳಿಗೆ ಲೋಕಾರ್ಪಣೆ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Naxal–Cm

ನಕ್ಸಲರನ್ನು ಅಮಿತ್‌ ಶಾ ಸ್ವಾಗತಿಸಿದಾಗ ಏಕೆ ಬೆಚ್ಚಿ ಬಿದ್ದಿಲ್ಲ?: ಸಿಎಂ ತಿರುಗೇಟು

Naxal-encounter-Vikram-1

Naxal Package: “ಮೊದಲೇ ಪ್ಯಾಕೇಜ್‌ ನೀಡಿದ್ದರೆ ವಿಕ್ರಂಗೌಡ ಪ್ರಾಣ ಉಳಿಯುತ್ತಿತ್ತು’: ಸಹೋದರ

Birth-Certi

Belagavi: ಜೀವಂತ ವ್ಯಕ್ತಿ ಹೆಸರಿನಲ್ಲಿ ಮರಣ ಪ್ರಮಾಣ ಪತ್ರ ನೀಡಿದ ಅಧಿಕಾರಿಗಳು!

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.