ಸಚಿವ ಎಸ್.ಟಿ.ಸೋಮಶೇಖರ್ ಗೆ ಧನ್ಯವಾದ ತಿಳಿಸಿದ ಎಸ್.ಎಂ.ಕೃಷ್ಣ
Team Udayavani, Sep 29, 2021, 7:38 PM IST
ಬೆಂಗಳೂರು: ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟಕರನ್ನಾಗಿ ರಾಜ್ಯ ಸರ್ಕಾರ ಅವಕಾಶ ನೀಡಿದ್ದಕ್ಕೆ ಸಹಕಾರ ಸಚಿವರು ಹಾಗೂ ಮೈಸೂರು-ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರಿಗೆ ಮಾಜಿ ಮುಖ್ಯಮಂತ್ರಿ ಹಾಗೂ ಹಿರಿಯ ಮುತ್ಸುದ್ಧಿ ಎಸ್.ಎಂ.ಕೃಷ್ಣ ಅವರು ಧನ್ಯವಾದ ತಿಳಿಸಿದ್ದಾರೆ.
ಎಸ್.ಟಿ. ಸೋಮಶೇಖರ್ ಅವರು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾಗಿ ಆ ಭಾಗದ ಜನರ ಜೊತೆ ಬೆರೆತು ಕಳೆದ ಒಂದೂವರೆ ವರ್ಷದಲ್ಲಿ ಹಲವು ಜನಪರ ಕೆಲಸಗಳ ಮೂಲಕ ಮನೆಮಾತಾಗಿದ್ದಾರೆ. ಕೋವಿಡ್ ಸಂಕಷ್ಟ ಸಮಯದಲ್ಲಿ ಜನರ ನೋವಿಗೆ ಸ್ಪಂದಿಸುವ ಜೊತೆಗೆ 127 ವರ್ಷದ ಮೈಸೂರು ಮೃಗಾಲಯದಲ್ಲಿ 1400ಕ್ಕೂ ಹೆಚ್ಚು ಪ್ರಾಣಿಗಳಿದ್ದು ಇವುಗಳ ಆಹಾರಕ್ಕಾಗಿ ತಾವು ಮತ್ತು ದಾನಿಗಳಿಂದ 3 ಕೋಟಿ 75 ಲಕ್ಷ ರೂ. ಸಂಗ್ರಹಿಸಿ ನೀಡಿರುವುದನ್ನು ಗಮನಿಸಿದ್ದೇನೆ. ಪ್ರಾಣಿಗಳ ರಕ್ಷಣೆ ವಿಷಯದಲ್ಲಿ ತಾವು ತೋರಿದ ಬದ್ಧತೆ ಇತಿಹಾಸದಲ್ಲಿ ದಾಖಲಾಗಿದೆ.
ಮುಖ್ಯಮಂತ್ರಿಗಳ ಕೊರೋನಾ ವೈದ್ಯಕೀಯ ಪರಿಹಾರ ನಿಧಿಗೆ ಅತಿಹೆಚ್ಚು ದೇಣಿಗೆಯನ್ನು ಸಹಕಾರ ಸಂಘ ಸಂಸ್ಥೆಗಳಿಂದ (ಸುಮಾರು 65 ಕೋಟಿ ರೂ.) ಸಂಗ್ರಹಿಸಿ ನೀಡಿರುವುದು ದಾಖಲೆಯಾಗಿ ಉಳಿದಿರುವುದನ್ನು ಮಾಧ್ಯಮಗಳ ಮೂಲಕ ನೋಡಿದ್ದೇವೆ.
ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾಗಿರುವ ಸಂದರ್ಭದಲ್ಲಿ ಇತಿಹಾಸ ಪ್ರಸಿದ್ಧ ನಾಡ ದಸರಾಗೆ ನನ್ನನ್ನು ಆಹ್ವಾನಿಸಿರುವ ತಮ್ಮ ಹೃದಯ ವೈಶಾಲ್ಯತೆಗೆ ನಾನು ಆಭಾರಿಯಾಗಿದ್ದೇನೆ. ನಾಡಿದ ದಸರಾ ಯಶಸ್ವಿಯಾಗಿ ಜರುಗಿ ಜನರ ಸಂಕಷ್ಟಗಳು ದೂರವಾಗಿ ಸಾಂಸ್ಕೃತಿಕ ಜಾತ್ರೆ ಯಶಸ್ಸು ಕಾಣಲು ತಾಯಿ ಚಾಮುಂಡೇಶ್ವರಿ ತಮಗೆ ಶಕ್ತಿ ನೀಡಲಿ ಎಂದು ಎಸ್.ಎಂ.ಕೃಷ್ಣ ಆಶಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಎಸ್.ಎಂ.ಕೃಷ್ಣ ಸಂಸ್ಮರಣಾ ವೇದಿಕೆಯಿಂದ ಪಂಚನಮನ
Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ
Gold Fraud Case: ಐಶ್ವರ್ಯಗೌಡ ದಂಪತಿಯ 3 ಐಷಾರಾಮಿ ಕಾರು ಜಪ್ತಿ
Gold Cheating Case: ಚಿನಾಭರಣ ವಂಚನೆ… ಶ್ವೇತಾಗೌಡ ವಿರುದ್ಧ ಇನ್ನೊಂದು ದೂರು
Metro: ಮೆಟ್ರೋದಲ್ಲಿ ಮಹಿಳಾ ಟೆಕಿ ಫೋಟೋ ತೆಗೆದು ಸಿಕ್ಕಿಬಿದ್ದ ಆಯುರ್ವೇದಿಕ್ ವೈದ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.