ವಿಚಾರ ಕ್ರಾಂತಿಯಿಂದ ಸಮಾಜ ಪರಿವರ್ತನೆ
Team Udayavani, Jul 1, 2019, 3:05 AM IST
ಬೆಂಗಳೂರು: ಬಸವಣ್ಣನವರ ವಚನ ಸಾಹಿತ್ಯ ಮತ್ತು ವಿಚಾರಧಾರೆಗಳನ್ನು ಯುವ ಸಮುದಾಯದಲ್ಲಿ ಬಿತ್ತುವ ಮೂಲಕ ಮನುಷ್ಯ ಸಮಾಜವನ್ನು ಕಟ್ಟಬೇಕಾಗಿದೆ ಎಂದು ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್. ದೊರೆಸ್ವಾಮಿ ಅಭಿಪ್ರಾಯಪಟ್ಟರು.
ಅಖೀಲ ಭಾರತ ಶರಣ ಸಾಹಿತ್ಯ ಪರಿಷತ್ ವತಿಯಿಂದ ಭಾನುವಾರ ಜಯನಗರದ ಜೆಎಸ್‌ಎಸ್ ಚಿಂತನ ಮಂಟಪದಲ್ಲಿ ಹಮ್ಮಿಕೊಂಡಿದ್ದ ಡಾ. ಫ.ಗು.ಹಳಕಟ್ಟಿ ಜನ್ಮದಿನೋತ್ಸವದಲ್ಲಿ ಮಾತನಾಡಿದ ಅವರು, ವಿಚಾರ ಕಾಂತ್ರಿಯಿಂದ ಸಮಾಜವನ್ನು ಪರಿವರ್ತನೆಗೊಳಿಸಲು ಸಾಧ್ಯ ಎಂದು ತಿಳಿಸಿದರು.
ಇತ್ತೀಚಿನ ದಿನಗಳಲ್ಲಿ ಸ್ವಾಸ್ಥ್ಯ ಸಮಾಜದ ನಿರ್ಮಾಣದ ಬಗೆಗಿನ ಆಲೋಚನೆ ಕಡಿಮೆಯಾಗಿ ಹೋಗಿದೆ. ಮಾನವೀಯ ಮೌಲ್ಯಕ್ಕೆ ಬೆಲೆ ಇಲ್ಲದಂತಾಗಿದ್ದು , ಜಾತಿ ಧರ್ಮವನ್ನು ಬದಿಗೊತ್ತಿ ಉತ್ತಮ ಸಾಮಾಜವನ್ನು ಕಟ್ಟಬೇಕಾಗಿದೆ ಎಂದು ತಿಳಿಸಿದರು.
ವಚನ ಸಾಹಿತ್ಯದ ಸಾರವನ್ನು ಎಲ್ಲೆಡೆ ತಲುಪಿಸುವ ಕಾರ್ಯದಲ್ಲಿ ಹಲವರು ಎಲೆಮರೆ ಕಾಯಂತೆ ದುಡಿಯುತ್ತಿದ್ದಾರೆ. ಅವರನ್ನು ಹುಡುಕಿ ಗೌರವಿಸುವ ಕಾರ್ಯವನ್ನು ಅಖೀಲ ಭಾರತೀಯ ಶರಣ ಸಾಹಿತ್ಯ ಪರಿಷತ್ತು ಮತ್ತಷ್ಟು ಮಾಡಲಿ ಎಂದರು.
ವಚನ ಸಾಹಿತ್ಯ ಕ್ಷೇತ್ರಕ್ಕೆ ಡಾ.ಫ.ಗು.ಹಳಕಟ್ಟಿ ಅವರ ಕೊಡುಗೆ ಅಪಾರ. ವಚನ ಸಾಹಿತ್ಯದ ಪಿತಾಮಹ ಎನಿಸಿಕೊಂಡಿರುವ ಡಾ.ಫ.ಗು.ಹಳಹಟ್ಟಿಯವರನ್ನು ನೆನೆಯುವ ಕಾರ್ಯ ಹೀಗೆ ನಿರಂತರವಾಗಿ ನಡೆಯಲಿ ಎಂದು ಆಶಿಸಿದರು.
ಡಾ.ಫ.ಗು.ಹಳಕಟ್ಟಿಯವರ ಬಗ್ಗೆ ವಿಶೇಷ ಉಪನ್ಯಾಸ ನೀಡಿದ ನಿವೃತ್ತ ಪ್ರಾಂಶುಪಾಲ ಪ್ರೊ.ಎಂ.ಬಿ.ಶಿವಾನಂದ, ವಚನ ಸಾಹಿತ್ಯಕ್ಕೆ ಹಳಕಟ್ಟಿ ಅವರ ಕೂಡುಗೆ ಅಪಾರ.ಅವರ ಸಾಧನೆ ನಮ್ಮೆಲ್ಲರಿಗೂ ಸ್ಫೂರ್ತಿ ಎಂದರು.
ಇತ್ತೀಚಿನ ದಿನಗಳಲ್ಲಿ ಯುವ ಸಮುದಾಯದಲ್ಲಿ ಸಾಹಿತ್ಯಾಸಕ್ತಿ ಕಡಿಮೆಯಾಗಿದೆ. ಆ ಹಿನ್ನೆಲೆಯಲ್ಲಿ ನಾವು ನಮ್ಮ ಮಕ್ಕಳಿಗೆ ಸ್ವಾತಂತ್ರ್ಯಹೋರಾಟಗಾರರ ಮತ್ತು ವಚನಕಾರರ ಬಗ್ಗೆ ತಿಳಿಹೇಳ ಬೇಕಾಗಿದೆ ಎಂದು ಹೇಳಿದರು.
ಅಖೀಲ ಭಾರತ ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಅಪ್ಪರಾವ್ ಅಕ್ಕೋಣೆ, ಪ್ರಧಾನ ಕಾರ್ಯದರ್ಶಿ ಮೃತ್ಯುಂಜಯ ಎಸ್.ಕೆಂಡದಮಠ, ಬೆಂಗಳೂರು ನಗರ ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷ ಕೆ.ವಿ.ನಾಗರಾಜಮೂರ್ತಿ ಮತ್ತಿತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru ರಾತ್ರಿ 1 ಗಂಟೆವರೆಗೆ ಮಾತ್ರ ಹೊಸ ವರ್ಷಾಚರಣೆಗೆ ಅವಕಾಶ: ಪೊಲೀಸ್ ಆಯುಕ್ತ
Munirathna ವಿರುದ್ಧದ ಅತ್ಯಾಚಾರ ಆರೋಪ ರುಜುವಾತು
Bengaluru; ನಿದ್ರೆಗೆ ಜಾರಿದ ಕ್ಯಾಬ್ ಡ್ರೈವರ್: ಪ್ರಯಾಣಿಕನಿಂದಲೇ ವಾಹನ ಚಾಲನೆ!| Video
Data Theft: ಕಂಪನಿಯ ಡೇಟಾ ಕದ್ದು 12.5 ಕೋಟಿ ವಂಚನೆ ಮಾಡಿದ ಬ್ಯಾಂಕ್ ಮ್ಯಾನೇಜರ್!
Namma Metro; ಡಿಸೆಂಬರ್ 31ರಂದು ಮಧ್ಯರಾತ್ರಿ 2 ಗಂಟೆಯವರೆಗೆ ಮೆಟ್ರೋ ಸಂಚಾರ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.